crime

ಐಸಿಯು ನಲ್ಲಿ ದಾಖಲಾಗಿದ್ದ ರೋಗಿಯ ಕಿವಿ, ಹಣೆ, ಕಾಲುಗಳಿಗೆ ಕಚ್ಚಿದ ಇಲಿಗಳು

(ನ್ಯೂಸ್ ಕಡಬ) newskadaba.com ಬದೌನ್, ಜು. 25. ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ದಾಖಲಾಗಿದ್ದ ರೋಗಿಯೋರ್ವರನ್ನು ಇಲಿಗಳು ಕಚ್ಚಿವೆ ಆಘಾತಕಾರಿ ಘಟನೆಯೊಂದು ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿರುವ ಕುರಿತು ವರದಿಯಾಗಿದೆ. ಇದಕ್ಕೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸಲಾಗಿದ್ದು, ಇದಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಆಸ್ಪತ್ರೆ ಆಡಳಿತ ಮಂಡಳಿ ಭರವಸೆ ನೀಡಿರುವುದಾಗಿಯೂ ವರದಿಯಾಗಿದೆ. ದಾತಗಂಜ್ ತಹಸಿಲ್ ಪ್ರದೇಶದ ಬುದ್ ಬಜಾರ್ ಪಟ್ಟಣದ ನಿವಾಸಿ ರಾಮ್ ಸೇವಕ್ ಗುಪ್ತಾ ಎಂಬವರು ಇತ್ತೀಚೆಗೆ ರಸ್ತೆ ಅಪಘಾತವೊಂದರಲ್ಲಿ ಗಂಭೀರ ಗಾಯಗೊಂಡು, ಚಿಕಿತ್ಸೆಗಾಗಿ […]

ಐಸಿಯು ನಲ್ಲಿ ದಾಖಲಾಗಿದ್ದ ರೋಗಿಯ ಕಿವಿ, ಹಣೆ, ಕಾಲುಗಳಿಗೆ ಕಚ್ಚಿದ ಇಲಿಗಳು Read More »

ರಾಷ್ಟ್ರೀಯ ನ್ಯೂಸ್

ಭಾರತೀಯ ವಿದ್ಯಾರ್ಥಿಯ ಥಳಿಸಿ ಹತ್ಯೆ…!

(ನ್ಯೂಸ್ ಕಡಬ)newskadaba.com  ಟೊರಂಟೊ, ಜು.25. ಕೆನಡಾದಲ್ಲಿ 24 ವರ್ಷದ ಭಾರತೀಯ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ ದಾಳಿಕೋರರು ಆತನನ್ನು ಹತ್ಯೆಮಾಡಿ ಆತನಲ್ಲಿದ್ದ ಹಣವನ್ನು ದರೋಡೆಮಾಡಿರುವ ಪ್ರಕರಣ ಕೆನಡಾದಲ್ಲಿ ವರದಿಯಾಗಿದೆ. ಕೆನಡಾದಲ್ಲಿ ಶಿಕ್ಷಣ ಪಡೆಯುತ್ತಿರುವ ಗುರ್ವಿಂದರ್‌ ನಾಥ್‌ ಬಿಡುವಿನ ವೇಳೆಯಲ್ಲಿ ಆಹಾರ ಪೂರೈಸುವ ಕೆಲಸವನ್ನೂ ಮಾಡುತ್ತಿದ್ದ ಎನ್ನಲಾಗಿದೆ. ಆತನ ಬಳಿ ಆಹಾರಕ್ಕೆ ಆರ್ಡರ್‌ ಮಾಡಿದ ಶಂಕಿತ ಆರೋಪಿಗಳು ಆತ ಅಲ್ಲಿಗೆ ಬರುತ್ತಿರುವಂತೆ ಮಾತಿನ ಚಕಮಕಿ ನಡೆಸಿ ಆತನ ಮೇಲೆ ಹಲ್ಲೆ ನಡೆಸಿ ಆತನಲ್ಲಿದ್ದ ಹಣ ಮತ್ತು ವಾಹನವನ್ನು ಕಿತ್ತುಕೊಳ್ಳಲು

ಭಾರತೀಯ ವಿದ್ಯಾರ್ಥಿಯ ಥಳಿಸಿ ಹತ್ಯೆ…! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾರು ಮತ್ತು ಟಿಪ್ಪರ್ ನಡುವೆ ಅಪಘಾತ ➤ ನಾಲ್ವರಿಗೆ ಗಂಭೀರ ಗಾಯ

(ನ್ಯೂಸ್ ಕಡಬ)newskadaba.com ವಿಟ್ಲ, ಜು.25. ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಮಿತ್ತೂರು ಸಮೀಪದ ಪರ್ಲೋಟ್ಟು ಎಂಬಲ್ಲಿ ಕಾರು ಮತ್ತು ಟಿಪ್ಪರ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಮುಂಬೈ ಮೂಲದ ಪ್ರಯಾಣಿಕರು ಮಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದಾಗ ಪುತ್ತೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಟಿಪ್ಪರ್ ಲಾರಿ ನಡುವೆ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಸಹಿತ ನಾಲ್ವರು ಗಾಯಗೊಂಡಿದ್ದು, ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ.

ಕಾರು ಮತ್ತು ಟಿಪ್ಪರ್ ನಡುವೆ ಅಪಘಾತ ➤ ನಾಲ್ವರಿಗೆ ಗಂಭೀರ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಮೊಬೈಲ್ ನೋಡುತ್ತಾ ಬಸ್ ಚಲಾವಣೆ ಪ್ರಕರಣ – ಲೈಸನ್ಸ್ ಕ್ಯಾನ್ಸಲ್ ಮಾಡಲು ಸೂಚನೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.25. ಮೊಬೈಲ್ ನೋಡುತ್ತಾ ಬಸ್ ಚಲಾಯಿಸಿದ ಖಾಸಗಿ ಬಸ್ ಚಾಲಕನೊಬ್ಬನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು, ಈ ಕುರಿತಂತೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ಈ ಕುರಿತು ಪ್ರತಿಕ್ರಿಯಿಸಿ, ತಪ್ಪಿತಸ್ಥ ಬಸ್ ಚಾಲಕನ ವಿರುದ್ಧ ದಕ್ಷಿಣ ಟ್ರಾಫಿಕ್ ಠಾಣೆ ಕ್ರಮ ಕೈಗೊಂಡಿದೆ ಎನ್ನಲಾಗಿದೆ. ಅಲ್ಲದೆ ಚಾಲಕನ ಡಿಎಲ್ ಅನ್ನು ರದ್ದುಗೊಳಿಸುವಂತೆ ಆರ್ ಟಿಒಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.

ಮೊಬೈಲ್ ನೋಡುತ್ತಾ ಬಸ್ ಚಲಾವಣೆ ಪ್ರಕರಣ – ಲೈಸನ್ಸ್ ಕ್ಯಾನ್ಸಲ್ ಮಾಡಲು ಸೂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಲೋಕಾಯುಕ್ತ ದಾಳಿ ಮಾಡುತ್ತಿದ್ದಂತೆ ಲಂಚದ ಹಣ ನುಂಗಿದ ಅಧಿಕಾರಿ

(ನ್ಯೂಸ್ ಕಡಬ)newskadaba.com ಮಧ್ಯಪ್ರದೇಶ, ಜು.25. ವ್ಯಕ್ತಿಯೊಬ್ಬರಿಂದ ಲಂಚ ಪಡೆಯುತ್ತಿದ್ದ ಕಂದಾಯ ಅಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿಯುವ ವೇಳೆ ಕಂದಾಯ ಅಧಿಕಾರಿಯೊಬ್ಬ ಲಂಚದ ಹಣವನ್ನೇ ನುಂಗಿ ನೀರು ಕುಡಿದ ವಿಚಿತ್ರ ಘಟನೆ ವರದಿಯಾಗಿದೆ. ಕಂದಾಯ ಅಧಿಕಾರಿಯಾಗಿರುವ ಪಟ್ಟಾರಿ ಗಜೇಂದ್ರ ಸಿಂಗ್ ವ್ಯಕ್ತಿಯೊಬ್ಬರ ಜಮೀನು ವಿವಾದವನ್ನು ಬಗೆಹರಿಸುವ ನಿಟ್ಟಿನಲ್ಲಿ ವ್ಯಕ್ತಿಯಿಂದ 5000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

ಲೋಕಾಯುಕ್ತ ದಾಳಿ ಮಾಡುತ್ತಿದ್ದಂತೆ ಲಂಚದ ಹಣ ನುಂಗಿದ ಅಧಿಕಾರಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗಮನ ಬೇರೆಡೆ ಸೆಳೆದು ಬ್ಯಾಗ್ ಕಳವುಗೈದ ಖದೀಮರು

(ನ್ಯೂಸ್ ಕಡಬ)newskadaba.com ಮಂಗಳೂರು, ಜು.25. ಗಮನ ಬೇರೆ ಕಡೆಗೆ ಸೆಳೆದು ಕಾರಿನಲ್ಲಿದ್ದ ಬ್ಯಾಗ್‌ ಕಳವು ಮಾಡಿದ ಘಟನೆ ಮಂಗಳೂರಿನಲ್ಲಿ ಸಂಭವಿಸಿದೆ. ಮಹಿಳೆಯೋರ್ವರು ಪಿವಿಎಸ್‌ ಬಳಿಯ ಲಕ್ಷ್ಮೀನಾರಾಯಣ ದೇವಸ್ಥಾನದ ಗೇಟಿನ ಮುಂಭಾಗದಲ್ಲಿ ಕಾರು ನಿಲ್ಲಿಸಿ ಕಾರು ಸರ್ವೀಸ್‌ ಸೆಂಟರ್‌ ಗೆ ಕರೆ ಮಾಡಿ ಮಾತನಾಡುತ್ತಿದ್ದರು ಎನ್ನಲಾಗಿದೆ. ಆಗ ಅಪರಿಚಿತ ವ್ಯಕ್ತಿಯೋರ್ವ ಬಂದು 10 ರೂ. ನೋಟನ್ನು ಅವರ ಕಾರಿನ ಎಡಭಾಗದಲ್ಲಿ ಹಾಕಿ ನಿಮ್ಮ ಹಣ ಬಿದ್ದಿದೆ ಎಂದು ಹೇಳಿದ್ದು, ಮಹಿಳೆ ಅದನ್ನು ಹೆಕ್ಕುತ್ತಿದ್ದಾಗ ಅಪರಿಚಿತ ವ್ಯಕ್ತಿಯು ಕಾರಿನ ಬಲಬದಿಯಲ್ಲಿಯೂ ನೋಟು

ಗಮನ ಬೇರೆಡೆ ಸೆಳೆದು ಬ್ಯಾಗ್ ಕಳವುಗೈದ ಖದೀಮರು Read More »

ಕರಾವಳಿ, ಕ್ರೈಮ್ ನ್ಯೂಸ್

ಬಸ್ ಹಾಗೂ ಕಾರು ನಡುವೆ ಅಪಘಾತ- ಕಾರು ಚಾಲಕ ಅದೃಷ್ಟವಶಾತ್ ಪಾರು

(ನ್ಯೂಸ್ ಕಡಬ) newskadaba.com ಉಳ್ಳಾಲ, ಜು. 25. ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಮುಡಿಪು ಜಂಕ್ಷನ್ ನಲ್ಲಿ ಸೋಮವಾರದಂದು ರಾತ್ರಿ ವೇಳೆ ಸಂಭವಿಸಿದೆ. ಮಂಗಳೂರಿನಿಂದ ಬಿ.ಸಿ ರೋಡಿನತ್ತ ತೆರಳುತ್ತಿದ್ದ ಎನ್.ಎಸ್ ಟ್ರಾವೆಲ್ಸ್ ಬಸ್ಸು ಮುಡಿಪು ಜಂಕ್ಷನ ನಲ್ಲಿ ತಿರುಗುವ ಸಂದರ್ಭ, ಭಾರತಿ ಶಾಲೆ ಕಡೆಯಿಂದ ಬರುತ್ತಿದ್ದ ಝೆನ್ ಕಾರಿಗೆ ಮುಖಾಮುಖಿ ಢಿಕ್ಕಿ ಹೊಡೆದಿದೆ. ಪರಿಣಾಮ ಬಸ್ಸು ಮುಂಭಾಗಕ್ಕೆ ಕಾರು ಒಳನುಗ್ಗಿದ್ದು, ಕಾರು ಚಾಲಕ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ ಎನ್ನಲಾಗಿದೆ. ಮಂಗಳೂರು ದಕ್ಷಿಣ

ಬಸ್ ಹಾಗೂ ಕಾರು ನಡುವೆ ಅಪಘಾತ- ಕಾರು ಚಾಲಕ ಅದೃಷ್ಟವಶಾತ್ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್

ಜಿಲ್ಲಾ ನೋಂದಣಾಧಿಕಾರಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಜು. 24. ಜಿಲ್ಲಾ ನೋಂದಾಣಿಧಿಕಾರಿಯೋರ್ವರು ವಾಸಸ್ಥಳದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವ ಕುರಿತು ಕಾಸರೋಡಿನಿಂದ ವರದಿಯಾಗಿದೆ. ಮೃತರನ್ನು ಟಿ .ಇ ಮುಹಮ್ಮದ್ ಅಶ್ರಫ್ (55) ಎಂದು ಗುರುತಿಸಲಾಗಿದೆ. ಮೂಲತಃ ಮಲಪ್ಪುರಂ ನಿವಾಸಿಯಾಗಿರುವ ಇವರು ಕಾಸರಗೋಡು ಜಿಲ್ಲಾ ನೋಂದಣಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ನಗರ ಹೊರವಲಯದ ಹೋಟೆಲ್ ವೊಂದರಲ್ಲಿ ರೂಂ ಪಡೆದು ವಾಸ್ತವ್ಯ ಹೂಡಿದ್ದರು.   ಬೆಳಗ್ಗೆ ಅಶ್ರಫ್ ರವರು ರೂಂ ನಿಂದ ಹೊರಬರದೇ ಇದ್ದುದರಿಂದ ಸಂಶಯಗೊಂಡು ಅವರ ಮೊಬೈಲ್ ಗೆ ಕರೆಮಾಡಿದಾಗ ತೆಗೆಯದೆ

ಜಿಲ್ಲಾ ನೋಂದಣಾಧಿಕಾರಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮುಂದುವರಿದ ನೈತಿಕ ಪೊಲೀಸ್ ಗಿರಿ- ನಾಲ್ವರು ಅರೆಸ್ಟ್

(ನ್ಯೂಸ್ ಕಡಬ) newskadaba.com ಕಾಸರಗೋಡು, ಜು. 24. ಬೇಕಲ ಕೋಟೆಗೆ ತೆರಳಿದ್ದ ಆರು ಮಂದಿಯ ತಂಡದ ಮೇಲೆ ನೈತಿಕ ಪೊಲೀಸ್ ಗಿರಿ ನಡೆಸಿದ ಘಟನೆ ಮೇಲ್ಪರಂಬ ಎಂಬಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತರನ್ನು ಅಬ್ದುಲ್ ಮನ್ಸೂರ್, ಅಬ್ದುಲ್ ಖಾದರ್ ಅಫೀಕ್, ಮುಹಮ್ಮದ್ ನಿಸಾರ್ ಮತ್ತು ಬಿ.ಕೆ ಆರಿಫ್ ಎಂದು ಗುರುತಿಸಲಾಗಿದೆ. ಆರು ಮಂದಿಯ ತಂಡದ ಪೈಕಿ ಓರ್ವನ ಹುಟ್ಟು ಹಬ್ಬದ ಹಿನ್ನಲೆಯಲ್ಲಿ ಬೇಕಲ ಕೋಟೆ ವೀಕ್ಷಿಸಿ, ಮರಳುತ್ತಿದ್ದಾಗ ಮೇಲ್ಪರಂಬ ಬಳಿ

ಮುಂದುವರಿದ ನೈತಿಕ ಪೊಲೀಸ್ ಗಿರಿ- ನಾಲ್ವರು ಅರೆಸ್ಟ್ Read More »

ರಾಷ್ಟ್ರೀಯ ನ್ಯೂಸ್

ಯೂಟ್ಯೂಬ್ ವಿಡಿಯೋ ಅನುಕರಣೆಯಿಂದ ಪ್ರಾಣ ಕಳೆದುಕೊಂಡ ಬಾಲಕ

(ನ್ಯೂಸ್ ಕಡಬ)newskadaba.com ತೆಲಂಗಾಣ, ಜು.24. 11 ವರ್ಷದ ಬಾಲಕನೊಬ್ಬ ಯೂಟ್ಯೂಬ್ ವಿಡಿಯೋವನ್ನು ಅನುಕರಣೆ ಮಾಡಲು ಹೋಗಿ ಜೀವ ಕಳೆದುಕೊಂಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಮೃತ ಬಾಲಕನನ್ನು 6ನೇ ತರಗತಿಯ ವಿದ್ಯಾರ್ಥಿ ಉದಯ್ (11) ಎಂದು ಗುರುತಿಸಲಾಗಿದೆ. ರಾತ್ರಿ ಊಟ ಮುಗಿಸಿ ತನ್ನ ಕೋಣೆಗೆ ಹೋದವನು ಬಾಗಿಲು ಚಿಲಕ ಹಾಕಿಕೊಂಡು ಮೊಬೈಲ್​ ನೋಡಲು ಪ್ರಾರಂಭಿಸಿದ್ದಾನೆ. ಉದಯ್ ಪೋಷಕರು ಎಷ್ಟೇ ಕರೆದರೂ ಉತ್ತರ ನೀಡಲಿಲ್ಲ, ಕರೆ ಮಾಡಿದರೂ ಪ್ರತಿಕ್ರಿಯಿಸಲಿಲ್ಲ, ನಂತರ ಅವರು ಬಾಗಿಲು ಒಡೆದು ನೋಡಿದಾಗ ಆತ ನೇಣುಬಿಗಿದ ಸ್ಥಿತಿಯಲ್ಲಿ

ಯೂಟ್ಯೂಬ್ ವಿಡಿಯೋ ಅನುಕರಣೆಯಿಂದ ಪ್ರಾಣ ಕಳೆದುಕೊಂಡ ಬಾಲಕ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top