crime

ಢಿಕ್ಕಿ ಹೊಡೆದ ಕಾರನ್ನು ಒಂದು ಕಿಲೋ ಮೀಟರ್ ದೂರಕ್ಕೆ ಎಳೆದೊಯ್ದ ಲಾರಿ- ವಿಡಿಯೋ+ ಸುದ್ದಿ

(ನ್ಯೂಸ್ ಕಡಬ) newskadaba.com ಉಡುಪಿ, ಜು. 19. ಹಿಂದಿನಿಂದ ಬಂದ ಕಾರೊಂದು ಟಿಪ್ಪರ್‌ಗೆ ಢಿಕ್ಕಿ ಹೊಡೆದು ಸಿಲುಕಿಕೊಂಡ ಪರಿಣಾಮ ಸುಮಾರು ಒಂದು ಕಿಲೋ ಮೀಟರ್ ದೂರದವರೆಗೆ ಟಿಪ್ಪರ್, ಕಾರನ್ನು ಎಳೆದೊಯ್ದ ಘಟನೆ ಹೆಜಮಾಡಿಯ ಕನ್ನಂಗಾರು ಬೈಪಾಸ್ ಎದುರು ನಡೆದಿದೆ. ಉಡುಪಿ ಕಡೆಯಿಂದ ಸಾಗುತ್ತಿದ್ದ ಕಾರು ಟಿಪ್ಪರ್ ಗೆ ಹಿಂಬದಿಯಿಂದ ಹೋಗಿ ಢಿಕ್ಕಿ ಹೊಡೆದಿದೆ. ಪರಿಣಾಮ ಕಾರು ಟಿಪ್ಪರ್ ನ ಹಿಂಭಾಗದಲ್ಲಿ ಸಿಲುಕಿಕೊಂಡಿದ್ದು, ಟಿಪ್ಪರ್ ಚಾಲಕನ ಗಮನಕ್ಕೆ ಬಂದಿಲ್ಲ ಎನ್ನಲಾಗಿದೆ. ಕಾರಿನಲ್ಲಿದ್ದ ಸಾಗರ ಮೂಲದ ಜಾಫರ್ ಖಾನ್, ಶಾಹಿನ […]

ಢಿಕ್ಕಿ ಹೊಡೆದ ಕಾರನ್ನು ಒಂದು ಕಿಲೋ ಮೀಟರ್ ದೂರಕ್ಕೆ ಎಳೆದೊಯ್ದ ಲಾರಿ- ವಿಡಿಯೋ+ ಸುದ್ದಿ Read More »

ಕರಾವಳಿ

ಕೇರಳ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ವಿಧಿವಶ

(ನ್ಯೂಸ್ ಕಡಬ) newskadaba.com ಕೇರಳ, ಜು. 18. ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಉಮ್ಮನ್ ಚಾಂಡಿ (73) ನಿಧನರಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಚಿನ್ಮಯ ಆಸ್ಪ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆದರೆ ಚಿಕಿತ್ಸೆ ಫಲಿಸದೇ ಇಂದು ಬೆಳಗಿನ ಜಾವ 4.25ಕ್ಕೆಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಅವರು ಸಾವಿನ ಕುರಿತು ಪುತ್ರ ಫೇಸ್‌ಬುಕ್ ಪೋಸ್ಟ್ ಮೂಲಕ ತಿಳಿಸಿದ್ದಾರೆ. 2004-06 ಮತ್ತು 2011-16ರ ಅವಧಿಯಲ್ಲಿ ಕೇರಳದ ಮುಖ್ಯಮಂತ್ರಿಯಾಗಿದ್ದ ಉಮ್ಮನ್ ಚಾಂಡಿ ಅವರು, ಅಕ್ಟೋಬರ್ 31, 1943 ರಂದು ಜನಿಸಿದರು. ಅವರು

ಕೇರಳ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ವಿಧಿವಶ Read More »

ಕರಾವಳಿ

ಸುಳ್ಯ: ಬಾಗಿಲು ಮುರಿದು ಚಿನ್ನಾಭರಣ ದೋಚಿದ ಕಳ್ಳರು

(ನ್ಯೂಸ್ ಕಡಬ) newskadaba.com ಸುಳ್ಯ, ಜು. 17. ಮನೆಯೊಂದರ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಚಿನ್ನಾಭರಣ ಕಳವುಗೈದಿರುವ ಘಟನೆ ಕನಕಮಜಲಿನಲ್ಲಿ ರವಿವಾರದಂದು ರಾತ್ರಿ ಸಂಭವಿಸಿದ ಬಗ್ಗೆ ವರದಿಯಾಗಿದೆ. ಸುಣ್ಣಮೂಲೆಯ ಯುರೇಶ್ ಬುಡ್ಲೆಗುತ್ತು ಮತ್ತು ಅವರ ಮನೆಯವರು ಸಂಬಂಧಿಯೊಬ್ಬರು ನಿಧನರಾದ ಹಿನ್ನೆಲೆ ಅಂತ್ಯಕ್ರಿಯೆ ಕಾರ್ಯಕ್ರಮಕ್ಕೆ ತೆರಳಿದ್ದರು. ರವಿವಾರದಂದು ರಾತ್ರಿ ವೇಳೆ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭವನ್ನು ಗಮನಿಸಿದ ಕಳ್ಲರು ಮನೆಯ ಹಿಂಬಾಗಿಲನ್ನು ಮುರಿದು ಒಳನುಗ್ಗಿ ಕಳ್ಳರು ಚಿನ್ನಾಭರಣ ಕಳವುಗೈದು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಸುಳ್ಯ ಪೊಲೀಸರು ಭೇಟಿ ನೀಡಿ

ಸುಳ್ಯ: ಬಾಗಿಲು ಮುರಿದು ಚಿನ್ನಾಭರಣ ದೋಚಿದ ಕಳ್ಳರು Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಪರವಾನಗಿ ಇಲ್ಲದೇ ಜಾನುವಾರು ಸಾಗಾಟ- ವಾಹನ ವಶಕ್ಕೆ

(ನ್ಯೂಸ್ ಕಡಬ) newskadaba.com ಸುಳ್ಯ, ಜು. 15. ಪರವಾನಿಗೆ ಇಲ್ಲದೇ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆಹಚ್ಚಿದ ಪೊಲೀಸರು ವಶಕ್ಕೆ ಪಡೆದ ಘಟನೆ ಅರ್ತಾಜೆ ಎಂಬಲ್ಲಿ ನಡೆದಿದೆ. ಪಿಕಪ್ ವಾಹನದಲ್ಲಿ ಬೆಳ್ಳಾರೆಯಿಂದ ಸೋಣಂಗೇರಿ ಮಾರ್ಗವಾಗಿ ಕೇರಳಕ್ಕೆ ಜಾನುವಾರು ಸಾಗಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಪಡೆದ ಪೊಲೀಸರು ಅರ್ತಾಜೆ ಎಂಬಲ್ಲಿ ವಾಹನವನ್ನು ತಡೆದು ಪರಿಶೀಲನೆ ನಡೆಸಿದಾಗ ಎಮ್ಮೆ ಹಾಗೂ ಎರಡು ಕರುಗಳಿದ್ದವು ಎನ್ನಲಾಗಿದೆ. ಚಾಲಕನನ್ನು ವಶಕ್ಕೆ ಪಡೆದು, ಹೆಚ್ಚಿನ ವಿಚಾರಣೆ ನಡೆಸಿದಾಗ ಪರವಾನಗಿ ಇಲ್ಲದಿರುವುದು ಕಂಡುಬಂದಿದೆ.

ಪರವಾನಗಿ ಇಲ್ಲದೇ ಜಾನುವಾರು ಸಾಗಾಟ- ವಾಹನ ವಶಕ್ಕೆ Read More »

ಕರಾವಳಿ

ಚೀತಾ ದಾಳಿಗೆ ಬಾಲಕಿ ಮೃತ್ಯು- ಗಾಯಗೊಳಿಸಿ ಬಿಟ್ಟುಹೋದ ಚಿರತೆ

(ನ್ಯೂಸ್ ಕಡಬ) newskadaba.com  ಚಾಮರಾಜನಗರ, ಜು. 15. ಮನೆಯ ಮುಂದೆ ಆಟವಾಡುತ್ತಿದ್ದಾಗ ಚಿರತೆ ದಾಳಿ ನಡೆಸಿದ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಕುರಿತು ವರದಿಯಾಗಿದೆ. ಮೃತ ಬಾಲಕಿಯನ್ನು ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಗ್ಗಲಿ ಗುಂದಿ ಗ್ರಾಮದ ಸುಶೀಲ ಎಂದು ಗುರುತಿಸಲಾಗಿದೆ. ಬಾಲಕಿಯು ಮನೆಯ ಮುಂಭಾಗ ಆಟವಾಡುತ್ತಿದ್ದ ವೇಳೆ ಚಿರತೆಯೊಂದು ಬಂದು ಮಗುವನ್ನು ಎಳೆದೊಯ್ದಿದೆ. ಮಗುವಿನ ಚೀರಾಟವನ್ನು ಕೇಳಿದ ಗ್ರಾಮಸ್ಥರು ಹೊರ ಬಂದಾಗ ಚಿರತೆಯನ್ನು ಕಂಡು ಜೋರಾಗಿ ಕೂಗಾಡಿದ್ದಾರೆ. ಈ

ಚೀತಾ ದಾಳಿಗೆ ಬಾಲಕಿ ಮೃತ್ಯು- ಗಾಯಗೊಳಿಸಿ ಬಿಟ್ಟುಹೋದ ಚಿರತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪ್ರಪಾತಕ್ಕೆ ಉರುಳುತ್ತಿದ್ದ ಕಾರು ಕೂದಲೆಳೆ ಅಂತರದಲ್ಲಿ ಪಾರು- ಮೂವರು ಬಚಾವ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 15. ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಮಧ್ಯದ ಡಿವೈಡರ್ ಹಾರಿದ ಘಟನೆ ನಗರದ ಕದ್ರಿ ಸರ್ಕಿಟ್ ಹೌಸ್ ಬಳಿ ನಡೆದಿದೆ. ಘಟನೆಯಿಂದ ಅದೃಷ್ಟವಶಾತ್ ಸ್ವಲ್ಪದರಲ್ಲೇ ಪಕ್ಕದಲ್ಲಿದ್ದ ಪ್ರಪಾತಕ್ಕೆ ಉರುಳುವುದು ತಪ್ಪಿದೆ. ಈ ಮೂಲಕ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಅಲ್ಪಸ್ವಲ್ಪಗಾಯಗಳೊಂದಿಗೆ ಪವಾಡ ಸದೃಶ ಪಾರಾಗಿದ್ದಾರೆ ಎನ್ನಲಾಗಿದೆ. ಕದ್ರಿ ಸರ್ಕಿಟ್ ಹೌಸ್ ಕಡೆಯಿಂದ ಬಿಜೈ ಕಡೆಗೆ ವೇಗವಾಗಿ ಸಾಗುತ್ತಿದ್ದ ಮಾರುತಿ ಬಲೇನೋ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಗೆ ಢಿಕ್ಕಿ

ಪ್ರಪಾತಕ್ಕೆ ಉರುಳುತ್ತಿದ್ದ ಕಾರು ಕೂದಲೆಳೆ ಅಂತರದಲ್ಲಿ ಪಾರು- ಮೂವರು ಬಚಾವ್ Read More »

ಕರಾವಳಿ, ಕ್ರೈಮ್ ನ್ಯೂಸ್

ಹಳಿಬಿಟ್ಟ ಗೂಡ್ಸ್- ರೈಲು ಸಂಚಾರ ನಿಷೇಧ

(ನ್ಯೂಸ್ ಕಡಬ) newskadaba.com ಜೈಪುರ, ಜು. 15. ಜೈಪುರ-ಮದರ್ ರೈಲ್ವೆ ವಿಭಾಗದ ಅಸಲ್ಪುರ್ ಜಾಬ್ನರ್ ಮತ್ತು ಹಿರ್ನೋಡಾ ನಿಲ್ದಾಣಗಳ ನಡುವೆ ಗೂಡ್ಸ್ ರೈಲಿನ ಎರಡು ವ್ಯಾಗನ್‌ಗಳು ಶನಿವಾರದಂದು ಹಳಿತಪ್ಪಿದ ಪರಿಣಾಮ ಕನಿಷ್ಠ ಏಳು ರೈಲುಗಳನ್ನು ರದ್ದುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ. ಜೈಪುರ-ಮದರ್ ರೈಲ್ವೇ ವಿಭಾಗದ ಅಸಲ್ಪುರ್ ಜಾಬ್ನರ್ ಮತ್ತು ಹಿರ್ನೋಡಾ ನಿಲ್ದಾಣಗಳ ನಡುವಿನ ಈ ಪ್ರದೇಶವು ವಾಯುವ್ಯ ರೈಲ್ವೇಯ ಜೈಪುರ ವಿಭಾಗದ ವ್ಯಾಪ್ತಿಗೆ ಒಳಪಡುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಅಧಿಕಾರಿಗಳು ಧಾವಿಸಿ,

ಹಳಿಬಿಟ್ಟ ಗೂಡ್ಸ್- ರೈಲು ಸಂಚಾರ ನಿಷೇಧ Read More »

ರಾಷ್ಟ್ರೀಯ ನ್ಯೂಸ್
Crime

ಎರಡು ಗುಂಪುಗಳ‌ ನಡುವೆ ಹೊಡೆದಾಟ- ಪುರಸಭಾ ಸದಸ್ಯನಿಗೆ ಗಾಯ; ಲಘು ಲಾಠಿ ಪ್ರಹಾರ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು. 15. ಕ್ಯೂ ನಿಲ್ಲುವ ವಿಚಾರಕ್ಕೆ ಸಂಬಂಧಿಸಿ ರಿಕ್ಷಾ ಚಾಲಕರ ಎರಡು ಗುಂಪುಗಳ‌ ನಡುವೆ ಗಲಾಟೆ ನಡೆದಿದ್ದು, ಘಟನೆಯಿಂದ  ಪರಿಸ್ಥಿತಿ ತಿಳಿಗೊಳಿಸಲು ಬಂದಿದ್ದ ಸ್ಥಳೀಯ ಪುರಸಭಾ ಸದಸ್ಯನಿಗೆ ಗಾಯವಾಗಿದ್ದು, ಜಮಾಯಿಸಿದ್ದ ಜನರನ್ನು ‌ಚದುರಿಸಲು ಪೋಲೀಸರು ಲಘು ಲಾಠಿ ಪ್ರಹಾರ ನಡೆಸಿದ ಘಟನೆ‌ ಬಿಸಿರೋಡಿನ ಕೈಕಂಬದಲ್ಲಿ ನಡೆದಿದೆ. ಬಿಸಿರೋಡಿನ ಕೈಕಂಬದಲ್ಲಿ ರಿಕ್ಷಾ ಕ್ಯೂ ನಿಲ್ಲುವ ವಿಚಾರಕ್ಕೆ ಸಂಬಂಧಿಸಿ ರಿಕ್ಷಾ ಯೂನಿಯನ್ ಪ್ರಮುಖನ ಮೇಲೆ ಗುಂಪೊಂದು ಹಲ್ಲೆ ನಡೆಸಿದೆ. ಇದಕ್ಕೆ ಪ್ರತಿಯಾಗಿ ಹಲ್ಲೆಗೊಳಗಾದವನ ಕಡೆಯ

ಎರಡು ಗುಂಪುಗಳ‌ ನಡುವೆ ಹೊಡೆದಾಟ- ಪುರಸಭಾ ಸದಸ್ಯನಿಗೆ ಗಾಯ; ಲಘು ಲಾಠಿ ಪ್ರಹಾರ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಅವಲೋಕನ ಸಭೆ- ಉಭಯ ಬಣಗಳ ಮಧ್ಯೆ ಹಲ್ಲೆ, ಮಾರಾಮಾರಿ

(ನ್ಯೂಸ್ ಕಡಬ) newskadaba.com ಕಡಬ, ಜು. 14. ಸುಳ್ಯ ವಿಧಾನಸಭಾ ಕ್ಷೇತ್ರ ದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಪರಾಮರ್ಶೆ ಸಭೆಯಲ್ಲಿ ಕೃಷ್ಣಪ್ಪ ಜಿ. ಹಾಗೂ ನಂದಕುಮಾರ್ ಬಣದ ನಡುವೆ ಮಾರಾಮಾರಿ ನಡೆದ ಘಟನೆ ಜು.14ರಂದು ನಡೆದಿದೆ. ಸಭೆಯು ಕಡಬ ಅಂಬೇಡ್ಕರ್ ಭವನದಲ್ಲಿ ನಡೆದಿದ್ದು, ಸೋಲಿನ ಪರಾಮರ್ಶೆ ಅಭಿಪ್ರಾಯ ಸಂಗ್ರಹಿಸಲು ಕಾಂಗ್ರೆಸ್ ಸಮಿತಿಯ ಮುಖಂಡರು ಆಗಮಿಸಿದ್ದರು. ಈ ಸಭೆಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ ಎಂದು ಆರೋಪ ಹೊತ್ತಿರುವ ಉಚ್ವಾಟಿತ ಮುಖಂಡರು ಆಗಮಿಸಿದ್ದು ಕೃಷ್ಣಪ್ಪ

ಕಡಬದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಅವಲೋಕನ ಸಭೆ- ಉಭಯ ಬಣಗಳ ಮಧ್ಯೆ ಹಲ್ಲೆ, ಮಾರಾಮಾರಿ Read More »

ಕರಾವಳಿ, ಕ್ರೈಮ್ ನ್ಯೂಸ್

ಜಾಗದ ವಿವಾದ- ಅಣ್ಣನನ್ನೇ ಕೊಲೆಗೈದ ತಮ್ಮ

(ನ್ಯೂಸ್ ಕಡಬ) newskadaba.com ಸಂಪಾಜೆ, ಜು. 14. ಆಸ್ತಿಗಾಗಿ ಸಹೋದರರ ನಡುವೆ ಗಲಾಟೆ ಉಂಟಾಗಿ ತಮ್ಮನೋರ್ವ ಅಣ್ಣನನ್ನೇ ಕೊಲೆಗೈದ ಭೀಕರ ಘಟನೆ ಕೊಡಗು ಜಿಲ್ಲೆಯ ಚೆಂಬು ಗ್ರಾಮದಲ್ಲಿ ನಡೆದಿದೆ. ಕೊಲೆಯಾದವರನ್ನು ಉಸ್ಮಾನ್ ಎಂದು ಗುರುತಿಸಲಾಗಿದೆ. ಇವರು ಶುಕ್ರವಾರದಂದು ಚೆಂಬು ಗ್ರಾಮದ ಕುದ್ರೆಪಾಯದ ಸಮೀಪ ಇರುವ ಜಾಗಕ್ಕೆ ಹೋಗಿದ್ದ ವೇಳೆ ಆಸ್ತಿ ವಿಚಾರದಲ್ಲಿ ಸಹೋದರರ ನಡುವೆ ಮಾತಿಗೆ ಮಾತು ಬೆಳೆದು, ಸಿಟ್ಟಿಗೆದ್ದ ತಮ್ಮ ಅಣ್ಣ ಉಸ್ಮಾನ್ ಅವರಿಗೆ ಚೂರಿಯಿಂದ ಚುಚ್ಚಿದ್ದು, ಈ ವೇಳೆ ಗಂಭೀರ ಗಾಯಗೊಂಡ ಅವರು ಮೃತಪಟ್ಟಿದ್ದಾರೆ

ಜಾಗದ ವಿವಾದ- ಅಣ್ಣನನ್ನೇ ಕೊಲೆಗೈದ ತಮ್ಮ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top