crime

crime, arrest, suspected

ಅಂಬರ್ ಗ್ರೀಸ್ ಎಂದು ನಂಬಿಸಿ ಹಳದಿ ಬಣ್ನದ ವಸ್ತು ಮಾರಾಟಕ್ಕೆ ಯತ್ನ- ಮೂವರು ಅಂದರ್

(ನ್ಯೂಸ್ ಕಡಬ) newskadaba.com ಬೈಂದೂರು, ಜು. 14. ತಿಮಿಂಗಿಲದ ವಾಂತಿ (ಅಂಬರ್ ಗ್ರೀಸ್) ಎಂದು ನಂಬಿಸಿ ಹಳದಿ ಬಣ್ಣದ ವಸ್ತುವನ್ನು ಮಾರಾಟ ಮಾಡಿ ವಂಚಿಸಲು ಯತ್ನಿಸುತ್ತಿದ್ದ ಮೂವರನ್ನು ಬೈಂದೂರು ಪೋಲಿಸರು ಬಂಧಿಸಿರುವ ಕುರಿತು ವರದಿಯಾಗಿದೆ. ಬಂಧಿತರನ್ನು ಶಿವಮೊಗ್ಗದ ನಿರಂಜನ್ ಎಸ್, ಮಿಲನ್ ಮೋನಿಶ್ ಶೆಟ್ಟಿ ಹಾಗೂ ಪೃಥ್ವಿ ಡಾಮ್ಮಿಕ್ ಎಂದು ಗುರುತಿಸಲಾಗಿದೆ. ಆರೋಪಿಗಳು ಬೈಂದೂರು ತಾಲೂಕು ಯಡ್ತರೆ ಗ್ರಾಮದ ಹೊಸ ಬಸ್ ನಿಲ್ದಾಣದಲ್ಲಿ ಹಳದಿ ಬಣ್ಣದ ಮೇಣದಂತಹ ವಸ್ತುವನ್ನು ತಿಮಿಂಗಲದ ಅಂಬರ್ ಗ್ರೀಸ್ ಎಂದು ಹೇಳಿ 10 ಲಕ್ಷ […]

ಅಂಬರ್ ಗ್ರೀಸ್ ಎಂದು ನಂಬಿಸಿ ಹಳದಿ ಬಣ್ನದ ವಸ್ತು ಮಾರಾಟಕ್ಕೆ ಯತ್ನ- ಮೂವರು ಅಂದರ್ Read More »

ಕರಾವಳಿ, ಕ್ರೈಮ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಮನೆಯ ಮೇಲೆ ಬಿದ್ದ ಕೋಳಿ ಸಾಗಾಟದ ಪಿಕಪ್ – ಮನೆಯೊಳಗೆ ಮಲಗಿದ್ದ ಮಹಿಳೆ ಗಂಭೀರ

(ನ್ಯೂಸ್ ಕಡಬ) newskadaba.com ವಿಟ್ಲ, ಜು.14. ಕೋಳಿ ಸಾಗಾಟದ ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಇಳಿಜಾರಿನಲ್ಲಿದ್ದ ಮನೆಯ ಮೇಲೆ ಬಿದ್ದ ಪರಿಣಾಮ ಮನೆಯಲ್ಲಿದ್ದ ಮಹಿಳೆಯೋರ್ವರು ಗಂಭೀರ ಗಾಯಗೊಂಡ ಘಟನೆ ಶುಕ್ರವಾರ ಬೆಳಗಿನ ಜಾವ ವಿಟ್ಲದಲ್ಲಿ ನಡೆದಿದೆ. ಪೆರಿಯಲ್ತಡ್ಕ – ಸಾರಡ್ಕ ರಸ್ತೆಯ ವಿಟ್ಲ ಸಮೀಪದ ಕೂರೇಲು ಎಂಬಲ್ಲಿ ಪಿಕಪ್ ವಾಹನವು ಚಾಲಕನ ನಿಯಂತ್ರಣ ತಪ್ಪಿದ್ದು, ರಸ್ತೆಯ ಕೆಳಗಿನ ಪ್ರದೇಶದಲ್ಲಿದ್ದ ಹಂಚಿನ ಮನೆಯ ಮೇಲ್ಛಾವಣಿಗೆ ಬಿದ್ದಿದೆ ಎನ್ನಲಾಗಿದೆ. ಘಟನೆಯಲ್ಲಿ ಮನೆಯೊಳಗೆ ಮಲಗಿದ್ದ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಹೊರಬರಲಾರದೆ

ಚಾಲಕನ ನಿಯಂತ್ರಣ ತಪ್ಪಿ ಮನೆಯ ಮೇಲೆ ಬಿದ್ದ ಕೋಳಿ ಸಾಗಾಟದ ಪಿಕಪ್ – ಮನೆಯೊಳಗೆ ಮಲಗಿದ್ದ ಮಹಿಳೆ ಗಂಭೀರ Read More »

ಕರಾವಳಿ, ಕರ್ನಾಟಕ

ಬಾಲಕಿಯ ಅಪಹರಣಕ್ಕೆ ಯತ್ನಿಸಿದ ಭೂಪ ಅರೆಸ್ಟ್- ಕಿಡ್ನಾಪ್ ಕಾರಣ ಕೇಳಿದ್ರೆ ಅಚ್ಚರಿಪಡೋದಂತು ಗ್ಯಾರಂಟಿ

(ನ್ಯೂಸ್ ಕಡಬ) newskadaba.com ಬೆಳಗಾವಿ, ಜು. 13. ಹಾಡಹಗಲೇ ಟ್ಯೂಷನ್‌ಗೆ ಹೊರಟಿದ್ದ ಬಾಲಕಿಯನ್ನು ಅಪಹರಣಕ್ಕೆ ಯತ್ನಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಾದ 24 ಗಂಟೆಯಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಬೆಳಗಾವಿಯ ಮಾರುತಿ ನಗರದ ಗಜಾನನ್ ಪಾಟೀಲ್ (40) ಎಂದು ಗುರುತಿಸಲಾಗಿದೆ. ಈತ ಟ್ಯೂಷನ್‌ಗೆಂದು ಹೊರಟಿದ್ದ ಬಾಲಕಿಯೋರ್ವಳನ್ನು ಹೆಗಲ ಮೇಲೆ ಹೊತ್ತೊಯ್ಯುತ್ತಿದ್ದನು. ಬಾಲಕಿಯ ಚೀರಾಟ ಕೇಳಿ ಸ್ಥಳೀಯ ‌ನಿವಾಸಿಗಳು ಆರೋಪಿಯನ್ನು ಬೆನ್ನತ್ತಿದ್ದಾಗ ಆರೋಪಿಯು ಬಾಲಕಿಯನ್ನು ಸ್ಥಳದಲ್ಲೇ ಬಿಟ್ಟು ಓಡಿ ಹೋಗಿ ತಪ್ಪಿಸಿಕೊಂಡಿದ್ದನು. ಘಟನೆಗೆ ಸಂಬಂಧಿಸಿ ದೂರು

ಬಾಲಕಿಯ ಅಪಹರಣಕ್ಕೆ ಯತ್ನಿಸಿದ ಭೂಪ ಅರೆಸ್ಟ್- ಕಿಡ್ನಾಪ್ ಕಾರಣ ಕೇಳಿದ್ರೆ ಅಚ್ಚರಿಪಡೋದಂತು ಗ್ಯಾರಂಟಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹಿಂಸಾತ್ಮಕವಾಗಿ ಅಕ್ರಮ ಜಾನುವಾರು ಸಾಗಾಟ- ಬಿಜೆಪಿ ಕಾರ್ಯಕರ್ತರ ಸಹಿತ ನಾಲ್ವರ ಬಂಧನ| 2 ಕರುಗಳ ಸಹಿತ ಎಂಟು ಜಾನುವಾರುಗಳು ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು. 13. ಮೂರು ವಾಹನಗಳಲ್ಲಿ ಹಿಂಸಾತ್ಮಕವಾಗಿ ದನ-ಕರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆ ಹಚ್ಚಿದ ಧರ್ಮಸ್ಥಳ ಪೊಲೀಸರು, ನಾಲ್ವರು ಆರೋಪಿಗಳನ್ನು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತರನ್ನು ಬಿಜೆಪಿ ಕಾರ್ಯಕರ್ತರೆನ್ನಲಾದ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಮೋರ್ತಾಜೆ ನಿವಾಸಿ ಪ್ರಮೋದ್ ಸಾಲ್ಯಾನ್, ಒಳಗದ್ದೆ ನಿವಾಸಿ ಪುಷ್ಪರಾಜ್ ಹಾಗೂ ಹಾಸನ ಜಿಲ್ಲೆಯ ಕಸಬಾ ಹೋಬಳಿ, ಅರಕಲಗೂಡು ನಿವಾಸಿ ಚೆನ್ನಕೇಶವ ಮತ್ತು ಹೊಳೆನರಸೀಪುರ ನಿವಾಸಿ ಸಂದೀಪ್ ಹಿರೇಬೆಳಗುಳಿ ಎಂದು ಗುರುತಿಸಲಾಗಿದೆ. ಬಂಧಿತರಿಂದ ಸಾಗಾಟಕ್ಕೆ ಬಳಸಿದ

ಹಿಂಸಾತ್ಮಕವಾಗಿ ಅಕ್ರಮ ಜಾನುವಾರು ಸಾಗಾಟ- ಬಿಜೆಪಿ ಕಾರ್ಯಕರ್ತರ ಸಹಿತ ನಾಲ್ವರ ಬಂಧನ| 2 ಕರುಗಳ ಸಹಿತ ಎಂಟು ಜಾನುವಾರುಗಳು ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ತಂದೆಯಿಂದಲೇ ಲೈಂಗಿಕ ಕಿರುಕುಳಕ್ಕೆ ಒಳಗಾದ ಪುತ್ರಿ- ವಶಕ್ಕೆ ಪಡೆದ ಖಾಕಿಪಡೆ

(ನ್ಯೂಸ್ ಕಡಬ) newskadaba.com ಕುಂದಾಪುರ, ಜು. 13. ಹೊರರಾಜ್ಯದ ಮಹಿಳೆಯನ್ನು ಪ್ರೀತಿಸಿ ಮದುವೆಯಾಗಿ ಕುಂದಾಪುರ ನಗರ ಠಾಣಾ ವ್ಯಾಪ್ತಿಯಲ್ಲಿ ವಾಸವಿದ್ದ ವ್ಯಕ್ತಿಯೋರ್ವ ಪತ್ನಿಯ ಅಪ್ರಾಪ್ತ ಮಗಳ ಮೇಲೆ ನಿರಂತರ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಆರೊಪಿಯನ್ನು ಬೈಂದೂರು ನಿವಾಸಿ ಸೊಹೇಲ್ ಎಂದು ಗುರುತಿಸಲಾಗಿದೆ. ದೂರು ದಾಖಲಾದ ಹಿನ್ನೆಲೆ ಪ್ರಕರಣ ತನಿಖೆ ಚುರುಕುಗೊಳಿಸಿದ ಕುಂದಾಪುರ ಪೊಲೀಸರ ತಂಡ ಆರೋಪಿಯನ್ನು ಬಂಧಿಸಿ, ಆರೋಪಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಮೊದಲ ಪತಿಯನ್ನು ತ್ಯಜಿಸಿದ್ದ ಹೊರರಾಜ್ಯದ ಮಹಿಳೆಯೋರ್ವಳು ಆರೋಪಿ

ತಂದೆಯಿಂದಲೇ ಲೈಂಗಿಕ ಕಿರುಕುಳಕ್ಕೆ ಒಳಗಾದ ಪುತ್ರಿ- ವಶಕ್ಕೆ ಪಡೆದ ಖಾಕಿಪಡೆ Read More »

ಕ್ರೈಮ್ ನ್ಯೂಸ್
crime, arrest, suspected

ಮಟ್ಕಾ ಆಡುತ್ತಿದ್ದ ವೇಳೆ ಪೊಲೀಸ್ ದಾಳಿ| ನಾಲ್ವರು ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು.13. ಮಟ್ಕಾ ಆಟವಾಡುತ್ತಿದ್ದ ಸಂದರ್ಭ ದಾಳಿ ನಡೆಸಿದ ಬರ್ಕೆ ಪೊಲೀಸರು ನಾಲ್ಕು ಮಂದಿಯನ್ನು ಬಂಧಿಸಿದ ಘಟನೆ ನಗರದ ಬರ್ಕೆ ಕಂಬಳದ ಬಳಿ ನಡೆದಿದೆ. ಬಂಧಿತರನ್ನು ಮಣ್ಣಗುಡ್ಡದ ಪ್ರಶಾಂತ್, ಅಶೋಕನಗರದ ದಿನೇಶ್ ಕುಮಾರ್, ಉರ್ವ ಹೊಯ್ಗೆಬೈಲ್‌ನ ಅನಿಲ್ ಹಾಗೂ ಮಡಿಕೇರಿಯ ಉದಯ್ (35) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಮಟ್ಕಾ ಚೀಟಿಗಳು ಸಹಿತ 12,480 ರೂಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಮಟ್ಕಾ ಆಡುತ್ತಿದ್ದ ವೇಳೆ ಪೊಲೀಸ್ ದಾಳಿ| ನಾಲ್ವರು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಟೊಮ್ಯಾಟೊ ತಂದಿಟ್ಟ ದಾಂಪತ್ಯ ಕಲಹ ಪತ್ನಿಯನ್ನು ಕೇಳದೇ ಟೊಮ್ಯಾಟೊ ಬಳಸಿದ ಪತಿ – ಮನೆಯಿಂದ ಹೊರನಡೆದ ಪತ್ನಿ

(ನ್ಯೂಸ್ ಕಡಬ) newskadaba.com ಮಧ್ಯಪ್ರದೇಶ, ಜು. 13. ದಿನದಿಂದ ದಿನಕ್ಕೆ ಟೊಮ್ಯಾಟೋ ಬೆಲೆ ಗಗನಕ್ಕೇರುತ್ತಿದ್ದು, ಇದರಿಂದಾಗಿ ಅನೇಕ ಜನರ ಆರ್ಥಿಕತೆಯ ಮೇಲೆ ಹೊಡೆತಬಿದ್ದಿದೆ. ಅಲ್ಲದೇ ಅಡುಗೆಗೆ ಟೊಮ್ಯಾಟೋ ಹಾಕಬೇಕೋ ಬೇಡವೋ ಎಂದು ಯೋಚಿಸುವ ಮಟ್ಟಕ್ಕೆ ತಲುಪಿದೆ. ಅಷ್ಟೇ ಯಾಕೆ ಇತ್ತೀಚೆಗೆ ಖ್ಯಾತ ಮ್ಯಾಕ್ ಡೊನಾಲ್ಡ್ಸ್ ಕಂಪನಿಯು ತನ್ನ ಬರ್ಗರ್ ನಲ್ಲಿ ಟೊಮ್ಯಾಟೊ ಬಳಸುವುದಿಲ್ಲ ಎಂದು ಪ್ರಕಟಣೆಯನ್ನೇ ಹೊರಡಿಸಿತ್ತು. ಅಷ್ಟರ ಮಟ್ಟಿಗೆ ಈ ಟೋಮೆಟೋ ಜನರಿಗೆ ಭಾರವಾಗಿದೆ. ಆದರೆ, ಇತ್ತ ಬೆಲೆ ಏರಿಕೆಯಾದ ಟೊಮ್ಯಾಟೋ ಗಂಡ ಮತ್ತು ಹೆಂಡತಿಯ

ಟೊಮ್ಯಾಟೊ ತಂದಿಟ್ಟ ದಾಂಪತ್ಯ ಕಲಹ ಪತ್ನಿಯನ್ನು ಕೇಳದೇ ಟೊಮ್ಯಾಟೊ ಬಳಸಿದ ಪತಿ – ಮನೆಯಿಂದ ಹೊರನಡೆದ ಪತ್ನಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
crime, arrest, suspected

ಕೊರಗಜ್ಜನ ಗುಡಿಗೆ ಬೆಂಕಿಯಿಟ್ಟ ಪ್ರಕರಣ- ಓರ್ವ ಅಂದರ್

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು. 13. ಹಿಂದಿನಿಂದಲೂ ಆಚರಿಸಿಕೊಂಡು ಬರುತ್ತಿದ್ದ ಕೊರಗಜ್ಜನ ಗುಡಿಗೆ ಕಿಡಿಗೇಡಿಗಳು ಬೆಂಕಿಯಿಟ್ಟಿರುವ ಘಟನೆ ಬೆಳ್ತಂಗಡಿ ತಾಲೂಕಿನ ಬಜಿರೆ ಗ್ರಾಮದ ಬಾಡಾರು ಕೊರಂಗಲ್ಲುವಿನಲ್ಲಿ ನಡೆದಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಹರೀಶ್ ಪೂಜಾರಿ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಈತ ಕೊರಗಕಲ್ಲು ಸ್ವಾಮಿ ಕೊರಗಜ್ಜ ಚಪ್ಪರಕ್ಕೆ ಬೆಂಕಿಯಿಟ್ಟು ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡಿದ ಆರೋಪದಲ್ಲಿ ವೇಣೂರು ಪೊಲೀಸರು ಐವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಓರ್ವನನ್ನು ಬಂಧಿಸಿದ್ದಾರೆ. ಕೊರಗಕಲ್ಲು

ಕೊರಗಜ್ಜನ ಗುಡಿಗೆ ಬೆಂಕಿಯಿಟ್ಟ ಪ್ರಕರಣ- ಓರ್ವ ಅಂದರ್ Read More »

ಕರಾವಳಿ, ಕ್ರೈಮ್ ನ್ಯೂಸ್

ಬಾಲಕಿಗೆ ಲೈಂಗಿಕ ಕಿರುಕುಳ- ಆರೋಪ ಸಾಬೀತು- ಅಪರಾಧಿಗೆ ಜೈಲುಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 13. ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣದ ಆರೋಪ ಸಾಬೀತಾದ ಹಿನ್ನೆಲೆ ಅಪರಾಧಿಗೆ 3 ವರ್ಷಗಳ ಜೈಲು ಶಿಕ್ಷೆ ಮತ್ತು 10 ಸಾವಿರ ರೂ.ದಂಡ ವಿಧಿಸಿ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತೀರ್ಪು ನೀಡಿದೆ. ಶಿಕ್ಷೆಗೊಳಗಾದ ಆರೋಪಿಯನ್ನಿ ಬಂಟ್ವಾಳ ತಾಲೂಕಿನ ಗೋಳ್ತಮಜಲುವಿನ ಸತೀಶ್ ಕುಲಾಲ್ ಎಂದು ಗುರುತಿಸಲಾಗಿದೆ. ಈತ 2019ರ ಆ. 30ರಂದು ಸಂಜೆ ಬಾಲಕಿಯು ವಿಟ್ಲದಿಂದ ಬಸ್‌ನಲ್ಲಿ ತೆರಳಿ ಕೆದುವಾರು ಬಸ್ ತಂಗುದಾಣದ ಬಳಿ ಇಳಿದು

ಬಾಲಕಿಗೆ ಲೈಂಗಿಕ ಕಿರುಕುಳ- ಆರೋಪ ಸಾಬೀತು- ಅಪರಾಧಿಗೆ ಜೈಲುಶಿಕ್ಷೆ ಪ್ರಕಟ Read More »

ಕರಾವಳಿ, ಕ್ರೈಮ್ ನ್ಯೂಸ್
Death, deadbody, Waterfall

ನಾಪತ್ತೆಯಾಗಿದ್ದ ಯುವಕನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆ..!

(ನ್ಯೂಸ್ ಕಡಬ) newskadaba.com ಕುಂಬಳೆ, ಜು. 13. ಸಾಯುವುದಾಗಿ ಗೆಳೆಯರಿಗೆ ಹೇಳಿ ಬಳಿಕ ಮೊಬೈಲ್ ಸ್ವಿಚ್ಢ್ ಆಫ್ ಮಾಡಿದ್ದ ಬಂಬ್ರಾಣ ನಿವಾಸಿ ಯುವಕ‌ನ ಮೃತದೇಹ ಮಂಗಳೂರಿನ‌ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಮೃತರನ್ನು ಬಂಬ್ರಾಣ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ರಾಜೇಶ್‌ ಕುಮಾರ್‌(28) ಎಂದು ಗುರುತಿಸಲಾಗಿದೆ. ಮೃತದೇಹವನ್ನು ಮಂಗಳೂರಿನ ವೆನ್‌ಲಾಕ್‌ ಆಸ್ಪತ್ರೆಗೆ ಸಾಗಿಸಲಾಗಿದೆ. ಮನೆಯವರು ಆಸ್ಪತ್ರೆಗೆ ತೆರಳಿ ಗುರುತು ಪತ್ತೆ ಹಚ್ಚಿದ್ದಾರೆ ಎನ್ನಲಾಗಿದೆ. ಅತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ‌. ಮೃತರು ತಂದೆ, ತಾಯಿ ಮತ್ತು ಓರ್ವ ಸಹೋದರನನ್ನು ಅಗಲಿದ್ದಾರೆ.

ನಾಪತ್ತೆಯಾಗಿದ್ದ ಯುವಕನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top