crime

ನಮ್ಮ ಹೋರಾಟ ನ್ಯಾಯಾಲಯಕ್ಕೆ ಸ್ಥಳಾಂತರ ➤ ಪ್ರತಿಭಟನೆ ಹಿಂಪಡೆದ ಕುಸ್ತಿಪಟು

(ನ್ಯೂಸ್ ಕಡಬ) newskadaba.com ನವದೆಹಲಿ, ಜೂ. 26. ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪದಡಿ ಕಳೆದ ಐದು ತಿಂಗಳಿಂದ ಮಹಿಳಾ ಕುಸ್ತಿಪಟುಗಳು ನಡೆಸುತ್ತಿದ್ದ ಪ್ರತಿಭಟನೆಯನ್ನು ಹಿಂಪಡೆದುಕೊಳ್ಳುವುದಾಗಿ ಕುಸ್ತಿಪಟುಗಳು ತಿಳಿಸಿದ್ದಾರೆ. ಇನ್ನುಮುಂದೆ ನಾವು ರಸ್ತೆಯಲ್ಲಿ ಪ್ರತಿಭಟನೆ ಮಾಡುವುದಿಲ್ಲ, ಪ್ರತಿಭಟನೆಯನ್ನು ನ್ಯಾಯಾಲಯಕ್ಕೆ ಸ್ಥಳಾಂತರಿಸಿ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರಿಯಲಿದೆ. ಸರಕಾರವು ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಆರೋಪ ಸಲ್ಲಿಸುವ ಭರವಸೆಯನ್ನು ಈಡೇರಿಸಿದೆ ಎಂದು ವಿನೇಶ್ ಫೋಗಟ್, ಸಾಕ್ಷಿ ಮಲಿಕ್ […]

ನಮ್ಮ ಹೋರಾಟ ನ್ಯಾಯಾಲಯಕ್ಕೆ ಸ್ಥಳಾಂತರ ➤ ಪ್ರತಿಭಟನೆ ಹಿಂಪಡೆದ ಕುಸ್ತಿಪಟು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಳ್ಳಾರೆ: ಅಪ್ರಾಪ್ತೆಯ ಅತ್ಯಾಚಾರ ಪ್ರಕರಣ ➤ ಮತ್ತಿಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜೂ. 25. ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ಹೇಳಿಕೆಯ ಮೇರೆಗೆ ಇನ್ನಿಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತರನ್ನು ಕೊಡಿಯಾಲದ ಚೇತನ್ ಕಾಯರ್ತಡ್ಕ ಹಾಗೂ ದರ್ಶನ್ ಕಾಯರ್ತಡ್ಕ ಎಂದು ಗುರುತಿಸಲಾಗಿದೆ. ಕೊಡಿಯಾಲ ಗ್ರಾಮದ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ನಡೆಸಲಾಗಿದೆ ಎಂದು ಬಾಲಕಿಯ ತಂದೆ ಬೆಳ್ಳಾರೆ ಠಾಣೆಗೆ ದೂರು ನೀಡಿದ್ದರು. ಅದರಂತೆ ತನಿಖೆ ನಡೆಸಿದ ಪೊಲೀಸರು ಕಲ್ಮಡ್ಕದ ಚಿದಾನಂದ ಎಂಬಾತನನ್ನು ಬಂಧಿಸಿದ್ದರು. ಇದೀಗ ವಿಚಾರಣೆ ಮುಂದುವರಿಸಿದ ಪೊಲೀಸರು ಬಾಲಕಿಯಿಂದ ಹೇಳಿಕೆ

ಬೆಳ್ಳಾರೆ: ಅಪ್ರಾಪ್ತೆಯ ಅತ್ಯಾಚಾರ ಪ್ರಕರಣ ➤ ಮತ್ತಿಬ್ಬರು ಆರೋಪಿಗಳ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ವಿಚಾರಣೆಯ ವೇಳೆ ವಿಷಸೇವಿಸಿ ಕೈದಿ ಮೃತ್ಯು ➤ ಐವರು ಪೊಲೀಸರ ಅಮಾನತು

(ನ್ಯೂಸ್ ಕಡಬ) newskadaba.com ಉತ್ತರ ಕನ್ನಡ, ಜೂ. 25. ವಿಚಾರಣೆಗೆಂದು ಕರೆತಂದಿದ್ದ ಆರೋಪಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಹೊನ್ನಾವರ ಠಾಣೆಯ ಪಿಐ, ಪಿಎಸ್​ಐ ಸಹಿತ ಐವರನ್ನು ಅಮಾನತು ಮಾಡಲಾಗಿರುವ ಕುರಿತು ವರದಿಯಾಗಿದೆ. ಬಿಹಾರ ಮೂಲದ ಕೈದಿಯೋರ್ವ ಠಾಣೆಯಲ್ಲಿ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇದಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಠಾಣೆಯ ಪಿಐ ಮಂಜುನಾಥ್, ಠಾಣೆಯ ಕ್ರೈಂ ಪಿಎಸ್​ಐ ಮಂಜೇಶ್ವರ್ ಚಂದಾವರ, ಸಿಬ್ಬಂದಿಗಳಾದ ಮಹಾವೀರ, ರಮೇಶ್ ಮತ್ತು ಸಂತೋಷ್ ಎಂಬವರನ್ನು ಅಮಾನತುಗೊಳಿಸಲಾಗಿದೆ. ಆರೋಪಿ ಪಾಲೀಷ್ ಮಾಡುವ ನೆಪದಲ್ಲಿ ಬಂಗಾರ ಕದಿಯುತ್ತಿದ್ದ

ವಿಚಾರಣೆಯ ವೇಳೆ ವಿಷಸೇವಿಸಿ ಕೈದಿ ಮೃತ್ಯು ➤ ಐವರು ಪೊಲೀಸರ ಅಮಾನತು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಟ್ರ್ಯಾಕ್ಟರ್ ಗೆ ಢಿಕ್ಕಿ ಹೊಡೆದು ಹಳಿತಪ್ಪಿದ ಗೂಡ್ಸ್ ರೈಲು ➤ 6 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಉತ್ತರಪ್ರದೇಶ, ಜೂ. 24. ಟ್ರ್ಯಾಕ್ಟರ್​ಗೆ ಗೂಡ್ಸ್ ರೈಲು ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಗಾಯಗೊಂಡ ಘಟನೆ ಉತ್ತರ ಪ್ರದೇಶದ ಆಗ್ರಾ ಬಳಿ ಶನಿವಾರ ನಡೆದಿದೆ. ಇಂದು ಬೆಳಗ್ಗೆ ಬಂಸಿಪಹಾರ್‌ಪುರ-ರೂಪ್ ಬಾಸ್ ರೈಲು ವಿಭಾಗದಲ್ಲಿ ಗೂಡ್ಸ್ ರೈಲೊಂದು ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದು, ಗೂಡ್ಸ್ ರೈಲು ಹಳಿ ತಪ್ಪಿದ್ದರಿಂದ ಆರು ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತದಿಂದ ಹೆಚ್ಚಿನ ಹಾನಿಯಾಗಿಲ್ಲ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಟ್ರ್ಯಾಕ್ಟರ್ ಗೆ ಢಿಕ್ಕಿ ಹೊಡೆದು ಹಳಿತಪ್ಪಿದ ಗೂಡ್ಸ್ ರೈಲು ➤ 6 ಮಂದಿಗೆ ಗಾಯ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಡಬ: ಕುಮಾರಧಾರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ➤ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಜೂ.24. ಕೋಡಿಂಬಾಳ ಸಮೀಪದ ನೆಕ್ಕಿಲಾಡಿ ಗ್ರಾಮದ ಕೋರಿಯರ್ ಎಂಬಲ್ಲಿ ಕುಮಾರಾಧಾರ ನದಿಗೆ ವ್ಯಕ್ತಿಯೋರ್ವರು ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ರಬ್ಬರ್ ಕಟ್ಟಿಂಗ್ ಕೆಲಸಕ್ಕೆಂದು ಸಕಲೇಶಪುರದಿಂದ ಕೋಡಿಂಬಾಳಕ್ಕೆ ಬಂದಿದ್ದ ಸಕಲೇಶಪುರ ಬಾಲಗದ್ದೆ ನಿವಾಸಿ ಧರ್ಮಯ್ಯ (40) ಎಂದು ಗುರುತಿಸಲಾಗಿದೆ. ಧರ್ಮಯ್ಯ ತನ್ನ ಶೂವನ್ನು ನದಿಯ ಬದಿಯಲ್ಲಿಟ್ಟು ನದಿಗೆ ಹಾರಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಕಡಬ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಸಾರ್ವಜನಿಕರ ಸಹಕಾರದಿಂದ ಶೌರ್ಯ ತಂಡದ

ಕಡಬ: ಕುಮಾರಧಾರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ➤ ಮೃತದೇಹ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ದ್ವಿಚಕ್ರ ವಾಹನ ಕಳವು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜೂ. 24. ಇಲ್ಲಿನ ಪೃಥ್ವಿ ಕಾಂಪ್ಲೆಕ್ಸ್ ಕಟ್ಟಡದ ಪಾರ್ಕಿಂಗ್ ಸ್ಥಳದಿಂದ ದ್ವಿಚಕ್ರ ವಾಹನವೊಂದು ಕಳವಾದ ಘಟನೆ ಜೂ. 19ರಂದು ನಡೆದಿದೆ. ಅಬ್ದುಲ್ ರಹಿಮಾನ್ ಎಂಬವರು ಇಲ್ಲಿನ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿದ್ದ ಕೆಎ 21 ಇಎ 1042 ನೋಂದಣಿಯ ಹೋಂಡಾ ಆಕ್ಟೀವಾ 5ಜಿ ದ್ವಿಚಕ್ರವನ್ನು ಜೂ. 19ರಂದು ಮಧ್ಯಾಹ್ನ 2.30ರಿಂದ 3.30ರ ನಡುವೆ ಕದ್ದೊಯ್ಯಲಾಗಿದೆ. ದ್ವಿಚಕ್ರ ವಾಹನದ ಮೌಲ್ಯವನ್ನು 60 ಸಾವಿರವೆಂದು ಅಂದಾಜಿಸಲಾಗಿದೆ. ಈ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಪ್ಪಿನಂಗಡಿ: ದ್ವಿಚಕ್ರ ವಾಹನ ಕಳವು Read More »

ಕರಾವಳಿ

ಉಳ್ಳಾಲ: ಏಕಾಏಕಿ ಹಿಂದಕ್ಕೆ ಚಲಿಸಿದ ಲಾರಿ ➤ ಚಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಉಳ್ಳಾಲ, ಜೂ. 23. ಎರಡು ಕಂಟೈನರ್ ಲಾರಿಗಳ ನಡುವೆ ಸಿಲುಕಿ ಲಾರಿ ಚಾಲಕ ದಾರುಣವಾಗಿ ಮೃತಪಟ್ಟಿರುವ ಘಟನೆ ರಾ.ಹೆ. 66ರ ತಲಪಾಡಿ ಟೋಲ್ ಗೇಟ್ ಸಮೀಪ ಗುರುವಾರ ತಡರಾತ್ರಿ ಸಂಭವಿಸಿದೆ. ಮೃತ ಚಾಲಕನನ್ನು ಹರ್ಯಾಣ ಮೂಲದ ಶಮೀಮ್ (38) ಎಂದು ಗುರುತಿಸಲಾಗಿದೆ. ಒಂದೇ ಸಂಸ್ಥೆಗೆ ಸೇರಿದ , ಸಂಬಂಧಿ ಚಾಲಕರು ಎರಡು ಕಂಟೈನರ್ ಲಾರಿಗಳಲ್ಲಿ ಹರಿಯಾಣದಿಂದ ಕೇರಳ ಕಡೆಗೆ ಸರಕು ಸಾಗಾಟ ಮಾಡುತ್ತಿದ್ದರು. ತಲಪಾಡಿ ಟೋಲ್ ಸಮೀಪ ಚಹಾ ಕುಡಿಯಲೆಂದು ಚಾಲಕ ಶಮೀಮ್

ಉಳ್ಳಾಲ: ಏಕಾಏಕಿ ಹಿಂದಕ್ಕೆ ಚಲಿಸಿದ ಲಾರಿ ➤ ಚಾಲಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ನಾಯಿಯನ್ನು ತಪ್ಪಿಸುವ ಭರದಲ್ಲಿ ನಿಯಂತ್ರಣ ಕಳೆದುಕೊಂಡ ಸ್ಕೂಟರ್ ➤ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 23. ನಾಯಿಯೊಂದು ರಸ್ತೆಗೆ ಅಡ್ಡ ಬಂದ ಪರಿಣಾಮ ನಿಯಂತ್ರಣ ತಪ್ಪಿದ ಸ್ಕೂಟರ್ ಡಿವೈಡರ್ ಗೆ ಢಿಕ್ಕಿ ಹೊಡೆದು, ಗಂಭೀರ ಗಾಯಗೊಂಡ ಸವಾರ ಮೃತಪಟ್ಟ ಘಟನೆ ಯೆಯ್ಯಾಡಿ ಸಮೀಪದ ಶರ್ಬತ್ ಕಟ್ಟೆ ಎಂಬಲ್ಲಿ ಇಂದು ನಡೆದಿದೆ.   ಮೃತರನ್ನು ಮರೋಳಿ ಬಜ್ಜೋಡಿ ನಿವಾಸಿ ನರಸಿಂಹ ಗಟ್ಟಿ (67) ಎಂದು ಗುರುತಿಸಲಾಗಿದೆ. ಇವರು ಇಂದು ಬೆಳಗ್ಗೆ ಮನೆಯಿಂದ ಯೆಯ್ಯಾಡಿ ಕಡೆಗೆ ಸ್ಕೂಟರಿನಲ್ಲಿ ತೆರಳುತ್ತಿದ್ದ ಸಂದರ್ಭ ನಾಯಿಯೊಂದು ಅಡ್ಡದಾಟಿದ ಪರಿಣಾಮ ನಿಯಂತ್ರಣ ತಪ್ಪಿದ ಸ್ಕೂಟರ್

ನಾಯಿಯನ್ನು ತಪ್ಪಿಸುವ ಭರದಲ್ಲಿ ನಿಯಂತ್ರಣ ಕಳೆದುಕೊಂಡ ಸ್ಕೂಟರ್ ➤ ಸವಾರ ಮೃತ್ಯು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಒಂದೇ ಕುಟುಂಬದ ಮೂವರು ನೇಣಿಗೆ ಶರಣು

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಜೂ. 23. ಒಂದೇ ಮನೆಯ ಮೂವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಬೇಡರಪುರ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಮಹಾದೇವಪ್ಪ, ಆತನ ಪತ್ನಿ ಸವಿತಾ ಹಾಗೂ ಮಗಳು ಸಿಂಚನಾ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಚಾಮರಾಜನಗರ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಒಂದೇ ಕುಟುಂಬದ ಮೂವರು ನೇಣಿಗೆ ಶರಣು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುಬ್ರಹ್ಮಣ್ಯ: ಗೂಡ್ಸ್ ರೈಲಿನಡಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜೂ. 23. ರೈಲ್ವೇ ಹಳಿಗೆ ತಲೆಕೊಟ್ಟು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಡಬ ತಾಲೂಕಿನ ನೆಟ್ಟಣದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಕಡಬ ತಾಲೂಕಿನ ಐನೆಕಿದು ಗ್ರಾಮದ ಪೈಲಾಜೆ ನಿವಾಸಿ ಧರ್ಮರಾಜ ಮುತ್ಲಾಜೆ (45) ಎಂದು ಗುರುತಿಸಲಾಗಿದೆ. ಎಲಿಮಲೆಯ ರಬ್ಬರ್ ಪ್ಯಾಕ್ಟರಿಯೊಂದರಲ್ಲಿ ಕೆಲಸಕ್ಕಿದ್ದ ಅವರು ಕೆಲ ಸಮಯದಿಂದ ಕೆಲಸಕ್ಕೆ ಗೈರು ಹಾಜರಾಗುತ್ತಿದ್ದರು ಎಂದೆನ್ನಲಾಗಿದ್ದು, ಇದೀಗ ಗೂಡ್ಸ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಸುಬ್ರಹ್ಮಣ್ಯ: ಗೂಡ್ಸ್ ರೈಲಿನಡಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top