crime

ಅನಾರೋಗ್ಯಕ್ಕೆ ತುತ್ತಾಗಿ ಯುವ ಕಬ್ಬಡ್ಡಿ ಆಟಗಾರ ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ. 13.  ಉಜಿರೆ ಕಾಲೇಜಿನ ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿ, ಯುವ ಪ್ರತಿಭೆ ಚಿನ್ಮಯ ಗೌಡ ಪಿ.ಕೆ. (18) ಅವರು ಅನಾರೋಗ್ಯದಿಂದ ನ.12ರಂದು ಕೊನೆಯುಸಿರೆಳೆದಿದ್ದಾರೆ. ಮೂಲತಃ ಮಂಡ್ಯದವರಾದ ಚಿನ್ಮಯ ಗೌಡ ಹಾಸ್ಟೆಲ್‌ನಲ್ಲಿದ್ದು, ಉಜಿರೆ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಉತ್ತಮ ಕಬಡ್ಡಿ ಪಟುವಾಗಿದ್ದ ಅವರು ಕಾಲೇಜಿಗೆ ಹಲವಾರು ಪ್ರಶಸ್ತಿಗಳನ್ನು ಗೆದ್ದುಕೊಟ್ಟಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಡ್ಯದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ದುರಾದೃಷ್ಟವಶಾತ್ ಚಿಕಿತ್ಸೆ […]

ಅನಾರೋಗ್ಯಕ್ಕೆ ತುತ್ತಾಗಿ ಯುವ ಕಬ್ಬಡ್ಡಿ ಆಟಗಾರ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಬಾಲಕಿಯೊಂದಿಗೆ ಅನುಚಿತ ವರ್ತನೆ -ಆರೋಪಿಗೆ ಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com ನ. 13. 9 ವರ್ಷದ ಹಿಂದೆ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗೆ ಶಿಕ್ಷೆ ಹಾಗೂ ದಂಡ ವಿಧಿಸಿ ಕೋರ್ಟ್ ಆದೇಶಿಸಿದೆ. ಪುತ್ತೂರು ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸರಿತಾ ಡಿ. ಅವರ ಪೀಠ ಈ ಪ್ರಕರಣದ ವಿಚಾರಣೆ ನಡೆಸಿದ್ದು, ಆರೋಪಿಗೆ ಶಿಕ್ಷೆ, ದಂಡ ವಿಧಿಸಿ ಆದೇಶ ನೀಡಿದೆ. ಆರೋಪಿಯು 2015ರ ಡಿ. 4ರಂದು ಕಬಕ ಗ್ರಾಮದಲ್ಲಿ ನಡೆದು ಹೋಗುತ್ತಿದ್ದ ಬಾಲಕಿಯನ್ನು ಕೈ ಹಿಡಿದು ಎಳೆದು ಅನುಚಿತವಾಗಿ ವರ್ತಿಸಿದ್ದ. ಈ ವೇಳೆ

ಬಾಲಕಿಯೊಂದಿಗೆ ಅನುಚಿತ ವರ್ತನೆ -ಆರೋಪಿಗೆ ಶಿಕ್ಷೆ ಪ್ರಕಟ Read More »

ಕರಾವಳಿ, ಕ್ರೈಮ್ ನ್ಯೂಸ್

ಅಂತಾರಾಷ್ಟ್ರೀಯ ಯೋಗ ಗುರು ಹೃದಯಾಘಾತದಿಂದ ನಿಧನ

(ನ್ಯೂಸ್ ಕಡಬ) newskadaba.com ಮೈಸೂರು, ನ. 13. ಮೈಸೂರು ಮೂಲದ ಖ್ಯಾತ ಅಂತಾರಾಷ್ಟ್ರೀಯ ಯೋಗ ಗುರು ಶರತ್‌ ಜೋಯಿಸ್‌ (53) ಅವರು ಅಮೆರಿಕದಲ್ಲಿ ಕೊನೆಯುಸಿರೆಳೆದಿದ್ದಾರೆ. ಶರತ್‌ ಜೋಯಿಸ್‌ ಅವರು ಯೋಗಾಭ್ಯಾಸ ಮತ್ತು ಯೋಗಪಾಠಕ್ಕೆ ತಮ್ಮ ಬದುಕನ್ನು ಮೀಸಲಾಗಿಟ್ಟಿದ್ದರು. ಖ್ಯಾತ ಪಾಪ್‌ ಗಾಯಕಿ ಮಡೋನಾ ಸೇರಿದಂತೆ ಹಲವರಿಗೆ ಯೋಗ ಕಲಿಸಿದ ಖ್ಯಾತಿಯೂ ಅವರಿಗಿದೆ. ಅವರು ಹೆಸರಾಂತ ಯೋಗ ಗುರು ಮೈಸೂರು ಮೂಲದ ಕೆ. ಪಟ್ಟಾಭಿ ಜೋಯಿಸ್‌ ಅವರ ಮೊಮ್ಮಗರಾಗಿದ್ದಾರೆ. ಅಮೆರಿಕದಲ್ಲಿ ನೆಲೆಸಿದ್ದ ಅವರು ಯೋಗಗುರುವಾಗಿ ತಾತನ ಹಾದಿಯಲ್ಲೇ ಸಾಗಿದ್ದರು.

ಅಂತಾರಾಷ್ಟ್ರೀಯ ಯೋಗ ಗುರು ಹೃದಯಾಘಾತದಿಂದ ನಿಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ವಿಟ್ಲ, ನ. 13. ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಕಾರೊಂದು ಬ್ರೇಕ್ ಫೇಲ್ ಆಗಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಘಟನೆ ವಿಟ್ಲದ ಮುಚ್ಚಿರಪದವು ಎಂಬಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಅಪಘಾತದಲ್ಲಿ ಹಲವು ವಿದ್ಯಾರ್ಥಿಗಳು ಹಾಗೂ ಕಾರು ಚಾಲಕ ಗಾಯಗೊಂಡಿದ್ದಾರೆ. ಪೆರುವಾಯಿ ಮಿತ್ತಮೂಲೆ ಎಂಬಲ್ಲಿಂದ ವಿಟ್ಲದ ಶಾಲೆಗೆ ತೆರಳುವ ಮಕ್ಕಳನ್ನು ವಿಟ್ಲಕ್ಕೆ ಹೋಗುವ ಬಸ್ಸಿಗೆ ಹತ್ತಿಸಲು ಕರೆದೊಯ್ದುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಬ್ರೇಕ್ ವೈಫಲ್ಯಕ್ಕೀಡಾಗಿ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಪಲ್ಟಿಯಾಗಿದೆ. ಕಾರು ಚಾಲಕ

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಹಲವರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಟ್ರಾಕ್ಟರ್ – ಬೈಕ್ ಢಿಕ್ಕಿ: ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಬೀದರ್, ನ. 12. ಟ್ರಾಕ್ಟರ್ ಮತ್ತು ಬೈಕ್ ಮಧ್ಯೆ ಸಂಭವಿಸಿದ ಮುಖಾಮುಖಿ ಢಿಕ್ಕಿಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹುಮ್ನಾಬಾದ್ ತಾಲೂಕಿನ ಘಾಟಬೋರಾಳ ಹೊರವಲಯದಲ್ಲಿ ಸೋಮವಾರ ಮುಸ್ಸಂಜೆ ವೇಳೆ ನಡೆದಿದೆ. ಮೃತಪಟ್ಟವರು ಘಾಟಬೋರಳ ಗ್ರಾಮದ ನಿವಾಸಿ ಶತ್ರುಘ್ನ ಮಾರುತಿ ರಾವು ಹುಣಸನಾಳೆ (27) ಎಂದು ಗುರುತಿಸಲಾಗಿದೆ. ಶತ್ರುಘ್ನ ಸೋಮವಾರ ಸಂಜೆ ಗ್ರಾಮದಿಂದ ಹೊಲಕ್ಕೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಬರುತ್ತಿದ್ದ ಟ್ರಾಕ್ಟರ್ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಟ್ರಾಕ್ಟರ್ – ಬೈಕ್ ಢಿಕ್ಕಿ: ಸವಾರ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ನಟ ಶಾರುಖ್ ಖಾನ್‌ಗೆ ಬೆದರಿಕೆ ಹಾಕಿದ ವಕೀಲ ಫೈಜನ್‌ ಖಾನ್‌ ಅರೆಸ್ಟ್‌

(ನ್ಯೂಸ್ ಕಡಬ) newskadaba.com ರಾಯ್ ಪುರ, ನ. 12. ಬಾಲಿವುಡ್‌ ಬಾದ್‌ಶಾ ಶಾರುಖ್ ಖಾನ್‌ಗೆ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಛತ್ತೀಸ್‌ಗಢದ ರಾಯ್‌ಪುರದಲ್ಲಿ ವ್ಯಕ್ತಿಯೊಬ್ಬನನ್ನು ಮುಂಬೈ ಪೊಲೀಸರು ಇಂದು ಬಂಧಿಸಿದ್ದಾರೆ. ಬಂಧಿತನನ್ನು ವಕೀಲ ಫೈಜನ್‌ ಖಾನ್‌ ಎಂದು ಗುರುತಿಸಲಾಗಿದ್ದು, ಈತ ಕಳೆದ ವಾರ ಬಾಂದ್ರಾ ಪೊಲೀಸ್ ಠಾಣೆಗೆ ಕರೆ ಮಾಡಿ ಶಾರುಖ್ ಖಾನ್ ಅವರನ್ನು ಬೆದರಿಸಿ ₹50 ಲಕ್ಷ ಬೇಡಿಕೆ ಇಟ್ಟಿದ್ದ. ಇನ್ನು ಬಂಧಿತ ಆರೋಪಿ ಫೈಜನ್‌ ಖಾನ್‌ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್)

ನಟ ಶಾರುಖ್ ಖಾನ್‌ಗೆ ಬೆದರಿಕೆ ಹಾಕಿದ ವಕೀಲ ಫೈಜನ್‌ ಖಾನ್‌ ಅರೆಸ್ಟ್‌ Read More »

ಕ್ರೈಮ್ ನ್ಯೂಸ್

ಸಿಐಎಸ್‌ಎಫ್ ಅಧಿಕಾರಿ ಪಿಸ್ತೂಲಿನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಕಾರವಾರ, ನ. 12. ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕೈಗಾ ಅಣು ವಿದ್ಯುತ್ ಸ್ಥಾವರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬಿಹಾರ ಮೂಲದ ಸಿಐಎಸ್‌ಎಫ್ ಅಧಿಕಾರಿ ತಮ್ಮ ಪಿಸ್ತೂಲಿನಿಂದ ಶೂಟ್‌ ಮಾಡಿಕೊಂಡು ಮೃತಪಟ್ಟಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿರುವುದು ಖಾಸಗಿ ಕಾರಣದಿಂದಲೋ ಅಥವಾ ಅಧಿಕಾರಿಗಳ ಕಿರುಕುಳ ಕಾರಣದಿಂದಲೋ ಎಂಬುದು ಇನ್ನೂ ತಿಳಿದಿಲ್ಲ. ಸದ್ಯ ಯಾವುದೇ ಡೆತ್‌ ನೋಟ್‌ ದೊರೆತಿಲ್ಲ. ರಕ್ಷಣಾ ಸಿಬ್ಬಂದಿಯ ಆತ್ಮಹತ್ಯೆಯಿಂದ ಕೈಗಾದಲ್ಲಿ ಆತಂಕ‌ ಸೃಷ್ಠಿಯಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.  

ಸಿಐಎಸ್‌ಎಫ್ ಅಧಿಕಾರಿ ಪಿಸ್ತೂಲಿನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಕೊಲೆ ಯತ್ನ ಪ್ರಕರಣ: 4 ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ನ. 12. ತಲಪಾಡಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 66ರ ಕೆಸಿ ರಸ್ತೆ-ಉಚ್ಚಿಲ ಮಾರ್ಗದ ಬಳಿ ನವೆಂಬರ್ 8ರಂದು ನಡೆದಿದ್ದ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಕೇರಳದ ಕಾಸರಗೋಡು ಜಿಲ್ಲೆಯ ಬಡಾಜೆ ಕಡಂಬಾರ್ ಶಾಲೆಯ ಬಳಿಯ ಫಾತಿಮಾ ಮಂಜಿಲ್ ನಿವಾಸಿ ಇಸ್ಮಾಯಿಲ್ ಅವರ ಪುತ್ರ ಮೊಹಮ್ಮದ್ ಆಸಿಫ್ (33) ಮಂಗಳೂರಿನಿಂದ ಕೇರಳಕ್ಕೆ ಕುಟುಂಬ ಸಮೇತ ಮನೆಗೆ ತೆರಳುತ್ತಿದ್ದಾಗ ರಾತ್ರಿ 7:40 ರ ಸುಮಾರಿಗೆ ಈ ಘಟನೆ ಸಂಭವಿಸಿದೆ.

ಕೊಲೆ ಯತ್ನ ಪ್ರಕರಣ: 4 ಆರೋಪಿಗಳು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ರೈಲ್ವೇ ನಿಲ್ದಾಣದಲ್ಲಿ ಬಾಂಬ್ ಸ್ಫೋಟ: 24 ಮಂದಿ ಮೃತ್ಯು, 40ಕ್ಕೂ ಹೆಚ್ಚು ಜನರಿಗೆ ಗಾಯ..!

(ನ್ಯೂಸ್ ಕಡಬ) newskadaba.com ನ. 09. ರೈಲ್ವೇ ನಿಲ್ದಾಣದಲ್ಲಿ ಶನಿವಾರ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಕನಿಷ್ಠ 24 ಜನರು ಮೃತಪಟ್ಟಿದ್ದು, 40ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಕುರಿತು ಪಾಕಿಸ್ತಾನದ ಬಲೂಚಿಸ್ತಾನದ ಕ್ವೆಟ್ಟಾದಲ್ಲಿ ವರದಿಯಾಗಿದೆ. ಸದ್ಯ ಬಾಂಬ್ ಸ್ಫೋಟದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದು ಪಾಕಿಸ್ತಾನ ಸೇನಾ ಸೈನಿಕರನ್ನು ಗುರಿಯಾಗಿಸಿಕೊಂಡಿದೆ ಎಂದು ವರದಿಯಾಗಿದೆ. ಪಾಕಿಸ್ತಾನವು ದಕ್ಷಿಣದಲ್ಲಿ ಪ್ರತ್ಯೇಕತಾವಾದಿ ಜನಾಂಗೀಯ ಉಗ್ರಗಾಮಿಗಳು ಮತ್ತು ವಾಯುವ್ಯದಲ್ಲಿ ಇಸ್ಲಾಮಿಕ್ ಉಗ್ರಗಾಮಿಗಳ ದಾಳಿಯ ಉಲ್ಬಣವನ್ನು ಎದುರಿಸುತ್ತಿದೆ. ಸ್ಫೋಟದಲ್ಲಿ ಈವರೆಗೆ 24 ಜನರು ಮೃಪಟ್ಟಿದ್ದಾರೆ

ರೈಲ್ವೇ ನಿಲ್ದಾಣದಲ್ಲಿ ಬಾಂಬ್ ಸ್ಫೋಟ: 24 ಮಂದಿ ಮೃತ್ಯು, 40ಕ್ಕೂ ಹೆಚ್ಚು ಜನರಿಗೆ ಗಾಯ..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಸ್ಕೂಟರ್- ಕೆಎಸ್ಸಾರ್ಟಿಸಿ ಬಸ್ ನಡುವೆ ಢಿಕ್ಕಿ; ಸವಾರೆ ಮೃತ್ಯು, ಸಹಸವಾರೆ ಗಂಭೀರ

(ನ್ಯೂಸ್ ಕಡಬ) newskadaba.com ನ. 09. ಕೆಎಸ್‌ಆರ್‌ಟಿಸಿ ಬಸ್ ಹಾಗೂ ಸ್ಕೂಟಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸವಾರೆ ಮೃತಪಟ್ಟು, ಸಹಸವಾರೆ ಗಂಭೀರ ಗಾಯಗೊಂಡ ಘಟನೆ ಸುಳ್ಯದ ಪರಿವಾರಕಾನ – ಉಬರಡ್ಕ ರಸ್ತೆಯ ಸೂಂತೋಡು ಎಂಬಲ್ಲಿ ಸಂಭವಿಸಿದೆ. ಮೃತಪಟ್ಟ ಸವಾರೆಯನ್ನು ಪುತ್ತೂರು ಖಾಸಗಿ ಕಾಲೇಜೊಂದರ ದ್ವಿತೀಯ ಪದವಿ ವಿದ್ಯಾರ್ಥಿನಿ, ಉಬರಡ್ಕ ಮಿತ್ತೂರು ಗ್ರಾಮದ ನಾರಾಯಣ ಕಾಡುತೋಟ ಅವರ ಪುತ್ರಿ ರಚನಾ (20) ಎಂದು ಗುರುತಿಸಲಾಗಿದೆ. ಅವರ ಸಹೋದರಿ ಸಹ ಸವಾರೆಯಾಗಿದ್ದ ಸುಳ್ಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ

ಸ್ಕೂಟರ್- ಕೆಎಸ್ಸಾರ್ಟಿಸಿ ಬಸ್ ನಡುವೆ ಢಿಕ್ಕಿ; ಸವಾರೆ ಮೃತ್ಯು, ಸಹಸವಾರೆ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top