crime

ಕಾರಿನಲ್ಲಿ ಅಕ್ರಮ ಗೋ ಸಾಗಾಟ

(ನ್ಯೂಸ್ ಕಡಬ)newskadaba  ಮೂಡುಬಿದಿರೆ, ಜೂ . 19 . ಅಕ್ರಮವಾಗಿ  ರಿಡ್ಜ್ಸ್ ಕಾರಿನಲ್ಲಿ ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ ಮೂರು ಗೋವುಗಳನ್ನು ಬಜರಂಗದಳದ ಕಾರ್ಯಕರ್ತರು ಮತ್ತು ಮೂಡುಬಿದಿರೆ ಪೊಲೀಸರು ರಕ್ಷಿಸಿದ್ದ ಘಟನೆ ಸೋಮವಾರದಂದು ನಡೆದಿದೆ. ಗೋವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದಾರೆಂಬ ಖಚಿತ ಮಾಹಿತಿ ಪಡೆದ ಬಜರಂಗದಳದ ಕಾರ್ಯಕರ್ತರು ಮೂಡುಬಿದಿರೆ ಪೊಲೀಸರಿಗೆ ಮಾಹಿತಿ ನೀಡಿ ಜಂಟಿ ಕಾರ್ಯಚರಣೆ ನಡೆಸಿ ಕೆಲ್ಲಪುತ್ತಿಗೆ ಬಳಿಯಿಂದ ಕಾರನ್ನು ಹಿಂಬಾಲಿಸಿಕೊಂಡು ಬಂದು ಜಿ.ಕೆ.ಗಾರ್ಡನ್ ಬಳಿ ದಾಳಿ ನಡೆಸಿದ್ದಾರೆ.ಈ ಸಂದರ್ಭ ಕಾರಿನಲ್ಲಿದ್ದ ಇಬ್ಬರು ಆರೋಪಿಗಳು ಕಾರನ್ನು ಮತ್ತು ಮೊಬೈಲ್ ಗಳನ್ನು […]

ಕಾರಿನಲ್ಲಿ ಅಕ್ರಮ ಗೋ ಸಾಗಾಟ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ: ಹಾಡಹಗಲೇ ಮನೆಗೆ ನುಗ್ಗಿದ ಕಳ್ಳರು ➤ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ. 17. ತೋಟಕ್ಕೆ ಕೆಲಸಕ್ಕೆ ಹೋಗಿದ್ದ ವೇಳೆ ಬಾಗಿಲು ತೆರೆದು ಒಳನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವುಗೈದಿರುವ ಘಟನೆ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜೂ. 15ರ ಗುರುವಾರದಂದು ಮನೆಯೊಡತಿ ಗುಣವತಿ ಎಂಬವರು ಬೆಳಗ್ಗೆ 8-30 ರ ವೇಳೆಗೆ ಮನೆಯ ಹಿಂಬಾಗಿಲನ್ನು ಮುಚ್ಚಿ ಎದುರು ಬಾಗಿಲಿಗೆ ಬೀಗ ಹಾಕಿ ತೋಟದ ಕೆಲಸಕ್ಕೆ ಹೋಗಿದ್ದರು. ಕೆಲಸ ಮುಗಿಸಿ ಮಧ್ಯಾಹ್ನ ಸುಮಾರು 1-30ರ ವೇಳೆಗೆ ಊಟಕ್ಕೆಂದು ಮನೆಗೆ ಬಂದಾಗ ಹಿಂಬಾಗಿಲು

ಬಂಟ್ವಾಳ: ಹಾಡಹಗಲೇ ಮನೆಗೆ ನುಗ್ಗಿದ ಕಳ್ಳರು ➤ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು Read More »

ಕರಾವಳಿ, ಕ್ರೈಮ್ ನ್ಯೂಸ್

ಉಳ್ಳಾಲ: ನೇಣುಬಿಗಿದು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ಜೂ. 17. ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಠಾಣಾ ವ್ಯಾಪ್ತಿಯ ತಲಪಾಡಿ ಕೆ.ಸಿ.ನಗರದಲ್ಲಿ ಸಂಭವಿಸಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಮೊಹಮ್ಮದ್‌ ನೂಹ್ಮನ್‌ (19) ಎಂದು ಗುರುತಿಸಲಾಗಿದೆ. ಈತ ಮನೆಯ ಕೊಠಡಿಯೊಳಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಮನೆಮಂದಿ ಬಾಗಿಲು ಒಡೆದು ನೋಡಿದಾಗ ಇಂದು ಬೆಳಿಗ್ಗೆ ಘಟನೆ ಬೆಳಕಿಗೆ ಬಂದಿದೆ. ಘಟನೆಗೆ ಕಾರಣ ತಿಳಿದುಬಂದಿಲ್ಲ. ಈ ಕುರಿತು ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಳ್ಳಾಲ: ನೇಣುಬಿಗಿದು ಯುವಕ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ವಿಟ್ಲ: ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿ ➤ ಸವಾರರಿಗೆ ಗಾಯ

(ನ್ಯೂಸ್ ಕಡಬ) newskadaba.com ವಿಟ್ಲ, ಜೂ. 17.  ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಗಾಯಗೊಂಡ ಘಟನೆ ವಿಟ್ಲ ಸಮೀಪ ನಡೆದಿದೆ. ಗಾಯಗೊಂಡವರನ್ನು ಧ್ಯಾನ್ ಹಾಗೂ ರಮೇಶ್ ಎಂದು ಅವರಿಬ್ಬರನ್ನೂ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ವಿಟ್ಲ: ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿ ➤ ಸವಾರರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಅಪರಿಚಿತ ಮೃತದೇಹಗಳ ವಿಲೇವಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 17. ಇಲ್ಲಿನ ವೆನ್‍ಲಾಕ್ ಜಿಲ್ಲಾಸ್ಪತ್ರೆಯ ಶವಗಾರದಲ್ಲಿ ವಾರಸುದಾರರಿಲ್ಲದೇ ವಿಲೇವಾರಿಯಾಗದ 2 ಮೃತದೇಹಗಳಿವೆ. ಆ ಮೃತದೇಹಗಳ ವಾರಸುದಾರರು ಯಾರಾದರೂ ಇದ್ದಲ್ಲಿ ಗುರುತು ಚೀಟಿಯನ್ನು ಕಚೇರಿಗೆ ಸಲ್ಲಿಸಿ 7 ದಿನದೂಳಗೆ ಮೃತದೇಹಗಳನ್ನು ಪಡೆಯಬಹುದೆಂದು ವೆನ್‍ಲಾಕ್ ಜಿಲ್ಲಾ ಆಸ್ಪತ್ರೆಯ ಶಸ್ತ್ರಚಿಕಿತ್ಸಕರು ಮತ್ತು ಅಧಿಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಪರಿಚಿತ ಮೃತದೇಹಗಳ ವಿಲೇವಾರಿ Read More »

ಕರಾವಳಿ

ಮಾದಕ ದ್ರವ್ಯ ಮಾರಾಟಕ್ಕೆ ಯತ್ನ ➤ ಇಬ್ಬರು ಕಾನೂನು ವಿದ್ಯಾರ್ಥಿಗಳ ಬಂಧನ

(ನ್ಯೂಸ್ ಕಡಬ) newskadaba.com ಉಡುಪಿ, ಜೂ. 17. ನಿಷೇಧಿತ ಮಾದಕ ದ್ರವ್ಯ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಕಾನೂನು ವಿದ್ಯಾರ್ಥಿಗಳನ್ನು ಮಣಿಪಾಲ ಪೊಲೀಸರು ಹೆರ್ಗಾ ಗ್ರಾಮದ ಈಶ್ವರ ನಗರದ ವಸತಿ ಸಮುಚ್ಛಯೊಂದರ ಬಳಿ ಬಂಧಿಸಿದ ಘಟನೆ ನಡೆದಿದೆ. ಬಂಧಿತರನ್ನು ಕುಂಜಿಬೆಟ್ಟು ಕಾನೂನು ಕಾಲೇಜಿನ ವಿದ್ಯಾರ್ಥಿಗಳಾದ ಕೇರಳ ಮೂಲದ ನಿಭೀಷ್ (23) ಹಾಗೂ ಅಮಲ್ (22) ಎಂದು ಗುರುತಿಸಲಾಗಿದೆ. ಇನ್ನೋರ್ವ ಆರೋಪಿ ಅಪ್ಸಿನ್ ಎಂಬಾತ ತಲೆಮರೆಸಿಕೊಂಡಿದ್ದು, ಆತನ ಪತ್ತೆಗೆ ಬಲೆ ಬೀಸಲಾಗಿದೆ. ಬಂಧಿತರಿಂದ 35 ಸಾವಿರ ರೂ. ಮೌಲ್ಯದ 7.3

ಮಾದಕ ದ್ರವ್ಯ ಮಾರಾಟಕ್ಕೆ ಯತ್ನ ➤ ಇಬ್ಬರು ಕಾನೂನು ವಿದ್ಯಾರ್ಥಿಗಳ ಬಂಧನ Read More »

ಕರಾವಳಿ

ಮಂಗಳೂರು: ಲಿಂಕ್ ಕಳುಹಿಸಿ 2.59 ಲ.ರೂ ವಂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ . 17.  ಟೆಲಿಗ್ರಾಂ ಮೂಲಕ ಲಿಂಕ್ ಕಳುಹಿಸಿ, ಕಮಿಷನ್ ನೀಡುವುದಾಗಿ ನಂಬಿಸಿ ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಜೂ.7 ರಂದು ದೂರುದಾರರಿಗೆ ಅಪರಿಚಿತ ವ್ಯಕ್ತಿ ವಾಟ್ಸಪ್ ನಲ್ಲಿ ಸಂದೇಶ ಮತ್ತು ಟೆಲಿಗ್ರಾಂ ಮೂಲಕ ಲಿಂಕ್ ಕಳುಹಿಸಿದ್ದು ಈ ಮೂಲಕ ಟಾಸ್ಕ್ ಪೂರೈಸಿದರೆ ಕಮಿಷನ್ ನೀಡುವುದಾಗಿ ಹೇಳಿ ಇದನ್ನು ನಂಬಿದ ದೂರುದಾರರು ಹಂತಹಂತವಾಗಿ ಒಟ್ಟು 2.59 ಲ.ರೂ ಗಳನ್ನು ವರ್ಗಾಯಿಸಿದ್ದಾರೆ,ಆದರೆ ಅವರಿಗೆ ಹಣ ನೀಡದೆ ವಂಚನೆ ಮಾಡಲಾಗಿದೆ ಎಂದು ನಗರದ ಸೆನ್ ಠಾಣೆಯಲ್ಲಿ 

ಮಂಗಳೂರು: ಲಿಂಕ್ ಕಳುಹಿಸಿ 2.59 ಲ.ರೂ ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಪೆಂಡಾಲ್ ಕುಸಿದು ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಗಂಗಾವತಿ, ಜೂ. 16. ಗಂಗಾವತಿ ತಾಲೂಕಿನ ಮುಸ್ಟೂರು ಕ್ಯಾಂಪ್ ನಲ್ಲಿ ಶ್ರೀನಿವಾಸ ಕಲ್ಯಾಣ ಕಾರ್ಯಕ್ರಮಕ್ಕೆ ಆಗಮಿಸಿದ ಭಕ್ತರಿಗೆ ಅಡುಗೆ ತಯಾರಿಸುತ್ತಿದ್ದ ಮಹಿಳೆಯ ಮೇಲೆ ಪೆಂಡಾಲ್ ಬಿದ್ದು ಮೃತಪಟ್ಟ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ. ಮೃತ ಮಹಿಳೆಯನ್ನು ಅಂಜಿನಮ್ಮ( 51) ಎಂದು ಗುರುತಿಸಲಾಗಿದೆ. ಕಾರ್ಯಕ್ರಮಕ್ಕೆ ಆಗಮಿಸಿದ ಭಕ್ತರಿಗೆ ಊಟದ ವ್ಯವಸ್ಥೆ ಮಾಡಲೆಂದು ವೇದಿಕೆಯ ಪಕ್ಕದಲ್ಲಿ ನಿರ್ಮಿಸಲಾಗಿದ್ದ ಪೆಂಡಾಲ್ ಬಿರುಗಾಳಿಗೆ ಹಾರಿ ಕೆಳಗೆ ಬಿದ್ದ ಪರಿಣಾಮ ಅಡುಗೆ ಕಾರ್ಯದಲ್ಲಿ ನಿರತರಾಗಿದ್ದ ಮಹಿಳೆ ಮೃತಪಟ್ಟಿದ್ದಾರೆ. ಇನ್ನು ಶಾಮೀದಾಬೀ(48)

ಪೆಂಡಾಲ್ ಕುಸಿದು ಮಹಿಳೆ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಲೈಟ್ ಆಫ್ ವಿಚಾರದಲ್ಲಿ ಗಲಾಟೆ   ➤ಕಾರ್ಯದರ್ಶಿಗೆ ಚೂರಿ ಇರಿತ

(ನ್ಯೂಸ್ ಕಡಬ)newskadaba.com ಮಂಗಳೂರು, ಜೂ . 16 . ಲೈಟ್ ಆಫ್ ವಿಚಾರದಲ್ಲಿ ಗಲಾಟೆ ನಡೆದು ಮಸೀದಿ ಕಾರ್ಯದರ್ಶಿಗೆ ಯುವಕನೊಬ್ಬ ಚೂರಿ ಇರಿದಿರುವ ಘಟನೆ ಸುರತ್ಕಲ್ ಕಾನ ಜನತಾ  ಕಾಲೋನಿ ಮಸೀದಿ ಬಳಿ ನಡೆದಿದೆ. ಆರೋಪಿ ಸ್ಥಳೀಯ ನಿವಾಸಿ ತ್ವಾಹಿರ್ (24)) ಎಂಬಾತ ಮಸೀದಿ ಕಾರ್ಯದರ್ಶಿ ಮಹಮ್ಮದ್ ಶಾಫಿ (38) ಎಂಬವರಿಗೆ ಚೂರಿ ಇರಿದಿದ್ದು, ಈತನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಲೈಟ್ ಆಫ್ ವಿಚಾರದಲ್ಲಿ ಗಲಾಟೆ   ➤ಕಾರ್ಯದರ್ಶಿಗೆ ಚೂರಿ ಇರಿತ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಅಪ್ರಾಪ್ತ ಬಾಳಕಿಗೆ ಲೈಂಗಿಕ  ದೌರ್ಜನ್ಯ ➤ಆರೋಪಿಗಳಿಗೆ 20 ವರ್ಷ ಜೈಲು ಶಿಕ್ಷೆ ಪ್ರಕಟ

(ನ್ಯೂಸ್ ಕಡಬ)newskadaba.com ಉಡುಪಿ,  ಜೂ  . 16 .  ಎರಡು ವರ್ಷಗಳ ಹಿಂದೆ ನಡೆದ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ತಂದೆ ಹಾಗೂ ಮಗನಿಗೆ ಉಡುಪಿ ಪೋಕ್ಸೋ ನ್ಯಾಯಾಲಯ 20 ವರ್ಷಗಳ ಕಠಿನ ಜೈಲು ಶಿಕ್ಷೆ ವಿಧಿಸಿದೆ. ಶಿಕ್ಷೆಗೆ ಗುರಿಯಾದ ಆರೋಪಿಗಳನ್ನು ದಾವಣಗೆರೆಯ  ಶಿವಶಂಕರ್ ಹಾಗೂ ಆತನ ಮಗ ಸಚಿನ್ ಎಂದು ಗುರುತಿಸಲಾಗಿದೆ. ಲಾಕ್ ಡೌನ್ ಸಮಯದಲ್ಲಿ 2020ರ ಎಪ್ರಿಲ್ ನಿಂದ ಅಕ್ಟೋಬರ್ ವರೆಗೆ ಬೆಳಗಿನ ಜಾವ 5 ಗಂಟೆಗೆ ಬಾಲಕಿಯನ್ನು ಮನೆಯಲ್ಲಿ ಬಿಟ್ಟು

ಅಪ್ರಾಪ್ತ ಬಾಳಕಿಗೆ ಲೈಂಗಿಕ  ದೌರ್ಜನ್ಯ ➤ಆರೋಪಿಗಳಿಗೆ 20 ವರ್ಷ ಜೈಲು ಶಿಕ್ಷೆ ಪ್ರಕಟ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top