crime

Theft, crime, Robbery

ಮಂಗಳೂರು: ದಕ್ಕೆಯಲ್ಲಿ ಕಳ್ಳನ ಕೈ ಚಳಕ ➤ ಮೀನು ವ್ಯಾಪಾರಿಯಿಂದ 1.50 ಲಕ್ಷ ರೂ. ಕಸಿದು ಪರಾರಿ..!

(ನ್ಯೂಸ್ ಕಡಬ) newskadaba.com ಮಂಗಳೂರು, ಏ. 04. ಕಳ್ಳನೋರ್ವ ನಗರದ ದಕ್ಕೆಯಲ್ಲಿ ಮೀನು ವ್ಯಾಪಾರಿಯ 1.50 ಲಕ್ಷ ರೂ. ಕಸಿದು ಪರಾರಿಯಾದ ಘಟನೆ ವರದಿಯಾಗಿದೆ. ವ್ಯಾಪಾರಿಯು ಮೀನು ಖರೀದಿಗೆಂದು ದಕ್ಕೆಯ ಕಡೆಗೆ ತೆರಳುತ್ತಿದ್ದ ವೇಳೆ, ಅವರಲ್ಲಿ ಮೀನು ಖರೀದಿಗೆಂದು ಇಟ್ಟಿದ್ದ 1.50 ಲಕ್ಷ ರೂ. ಹಣವಿತ್ತು. ಆದರೆ, ಕಳ್ಳನು ಈ ಬ್ಯಾಗ್ ನ್ನು ಕಿತ್ತುಕೊಂಡು ಪರಾರಿಯಾಗಿದ್ದಾನೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪಾಂಡೇಶ್ವರ ಪೊಲೀಸರು ಕಳ್ಳನ ಪತ್ತೆಗೆ ಹುಡುಕಾಟ ಮುಂದುವರಿಸಿದ್ದಾರೆ.  

ಮಂಗಳೂರು: ದಕ್ಕೆಯಲ್ಲಿ ಕಳ್ಳನ ಕೈ ಚಳಕ ➤ ಮೀನು ವ್ಯಾಪಾರಿಯಿಂದ 1.50 ಲಕ್ಷ ರೂ. ಕಸಿದು ಪರಾರಿ..! Read More »

ಕರಾವಳಿ, ಕ್ರೈಮ್ ನ್ಯೂಸ್

ಹಿಟ್ & ರನ್ – ರಸ್ತೆ ಬದಿ ಮಲಗಿದ್ದ ವ್ಯಕ್ತಿ ಮೃತ್ಯು ➤ ಆರೋಪಿ ವಶಕ್ಕೆ..!

(ನ್ಯೂಸ್ ಕಡಬ) newskadaba.com ಗುಂಡ್ಯ, ಏ. 04. ರಾಷ್ಟ್ರೀಯ ಹೆದ್ದಾರಿ ಬೆಂಗಳೂರು-ಮಂಗಳೂರು ಮಧ್ಯೆ ಗುಂಡ್ಯ ಎಂಬಲ್ಲಿ ರಸ್ತೆಯ ಬದಿಯಲ್ಲಿ ಮಲಗಿದ ವ್ಯಕ್ತಿಯ ಮೇಲೆ ಲಾರಿಯೊಂದು ಚಲಾಯಿಸಿ ಸಾರಿ ಸಮೇತ ಚಾಲಕ ಪರಾರಿಯಾದ ಕೆಲವೇ ಕ್ಷಣದಲ್ಲಿ ಚಾಲಕ ಹಾಗೂ ಲಾರಿಯನ್ನು ವಶಕ್ಕೆ ಪಡೆದ ಘಟನೆ ವರದಿಯಾಗಿದೆ. ಘಟನೆಯಲ್ಲಿ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೃತಪಟ್ಟ ವ್ಯಕ್ತಿಯನ್ನು ಕೇರಳದ ಪೊನ್ನಪ್ಪನ್(50) ಎಂದು ಗುರುತಿಸಲಾಗಿದೆ. ಇವರು ಕಳೆದ 15 ವರ್ಷದಿಂದ ಗುಂಡ್ಯ ಪರಿಸರದಲ್ಲಿ ಒಬ್ಬಂಟಿಯಾಗಿ ಜೀವಿಸುತ್ತಾ, ಸಣ್ಣಪುಟ್ಟ ಕೆಲಸಗಳನ್ನು ಮಾಡಿಕೊಂಡು

ಹಿಟ್ & ರನ್ – ರಸ್ತೆ ಬದಿ ಮಲಗಿದ್ದ ವ್ಯಕ್ತಿ ಮೃತ್ಯು ➤ ಆರೋಪಿ ವಶಕ್ಕೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ವಿಟ್ಲ: ಮಹಿಳೆ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ವಿಟ್ಲ, ಏ.04. ಮಹಿಳೆಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಟ್ಲ ಎಂಬಲ್ಲಿ ನಡೆದಿದೆ. ಯಮುನಾ ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಈ ಬಗ್ಗೆ ಅವರ ಪುತ್ರ ಉಮೇಶ್ ಪೂಜಾರಿ ವಿಟ್ಲ ಪೊಲೀಸರಿಗೆ ದೂರು ನೀಡಿದ್ದು, ತನ್ನ ತಾಯಿಗೆ ಸಕ್ಕರೆ ಕಾಯಿಲೆ, ರಕ್ತದ ಒತ್ತಡವಿದ್ದು, ಔಷಧ ತೆಗೆದುಕೊಂಡರೂ ಗುಣವಾಗದ ಹಿನ್ನಲೆಯಲ್ಲಿ ಜಿಗುಪ್ಸೆಗೊಂಡು ಮನೆಯ ಊಟದ ಕೋಣೆಯ ಛಾವಣಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.

ವಿಟ್ಲ: ಮಹಿಳೆ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಅಕ್ರಮವಾಗಿ ಪಿಸ್ತೂಲ್ ಹೊಂದಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಏ.04. ಅಕ್ರಮವಾಗಿ ಪಿಸ್ತೂಲ್‌ ಹೊಂದಿದ್ದ ವ್ಯಕ್ತಿಯೋರ್ವನನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ. ನಗರದ ಕದ್ರಿ ಪೊಲೀಸ್‌ ಠಾಣಾ ವ್ಯಾಪ್ತಿಯ ಜಾರ್ಜ್‌ ಮಾರ್ಟಿಸ್‌ ರಸ್ತೆಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಶಿಶಿರ್‌ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಈತನಿಂದ ಒಂದು ಪಿಸ್ತೂಲ್‌ ಮತ್ತು ಬುಲೆಟ್‌ ವಶಪಡಿಸಿಕೊಳ್ಳಲಾಗಿದೆ ಎಂದು ವರದಿ ತಿಳಿಸಿದೆ. ತನ್ನ ಮನೆಯ ಒಂದು ಮಹಡಿಯಲ್ಲಿ ಸುಮಾರು ಐದು ತಿಂಗಳಿಂದ ಬಾಡಿಗೆ ಇದ್ದ ಶಿಶಿರ್‌ ಬಳಿ ಪಿಸ್ತೂಲ್‌ ಇರುವ ಬಗ್ಗೆ ಮನೆಯ ಮಾಲಕರು ಪೊಲೀಸರಿಗೆ ದೂರು ನೀಡಿದ್ದರು.

ಮಂಗಳೂರು: ಅಕ್ರಮವಾಗಿ ಪಿಸ್ತೂಲ್ ಹೊಂದಿದ್ದ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಚಲಿಸುತ್ತಿದ್ದ ರೈಲಿನಲ್ಲಿ ಸಹ ಪ್ರಯಾಣಿಕರಿಗೆ ಬೆಂಕಿ ➤ ಮೂವರು ಮೃತ್ಯು ಹಲವರು ಗಂಭೀರ..!

(ನ್ಯೂಸ್ ಕಡಬ)newskadaba.com ಕೇರಳ, ಏ.03. ಚಲಿಸುತ್ತಿದ್ದ ಎಕ್ಸ್ ಪ್ರೆಸ್ ರೈಲಿನಲ್ಲಿ ಅಪರಿಚಿತ ವ್ಯಕ್ತಿಯೋರ್ವ ಸಹ ಪ್ರಯಾಣಿಕರಿಗೆ ಬೆಂಕಿ ಹಚ್ಚಿರುವ ಘಟನೆ ಕೇರಳದ ರೈಲು ನಿಲ್ದಾಣದ ಬಳಿ ನಡೆದಿದೆ. ತಡರಾತ್ರಿ ಕೇರಳದ ಕಣ್ಣೂರಿಗೆ ಹೊರಟಿದ್ದ ಎಕ್ಸ್ ಪ್ರೆಸ್ ರೈಲಿನಲ್ಲಿ ಈ ಘಟನೆ ನಡೆದಿದ್ದು, ಎರಡು ವರ್ಷದ ಮಗು ಸೇರಿದಂತೆ ಮೂವರು ಪ್ರಯಾಣಿಕರು ರೈಲ್ವೆ ಹಳಿಯಲ್ಲಿ ಮೃತಪಟ್ಟಿದ್ದು, ಎಂಟು ಮಂದಿಗೆ ಸುಟ್ಟ ಗಾಯಗಳಾಗಿವೆ.  

ಚಲಿಸುತ್ತಿದ್ದ ರೈಲಿನಲ್ಲಿ ಸಹ ಪ್ರಯಾಣಿಕರಿಗೆ ಬೆಂಕಿ ➤ ಮೂವರು ಮೃತ್ಯು ಹಲವರು ಗಂಭೀರ..! Read More »

ರಾಷ್ಟ್ರೀಯ ನ್ಯೂಸ್

ಕ್ಷುಲ್ಲಕ ಕಾರಣಕ್ಕೆ ಮಗುವಿನ ತಲೆಗೆ ಕಲ್ಲಿನಿಂದ ಚಚ್ಚಿ ಹತ್ಯೆ ಮಾಡಿದ ಪಾಪಿ ತಂದೆ !

(ನ್ಯೂಸ್ ಕಡಬ)newskadaba.com ಹುಬ್ಬಳ್ಳಿ, ಏ.03. 5 ರೂಪಾಯಿ ಕೇಳಿದ್ದಕ್ಕೆ ವ್ಯಕ್ತಿಯೊಬ್ಬ ಎಂಟು ವರ್ಷದ ಮಗುವಿನ ತಲೆಗೆ ಕಲ್ಲಿನಿಂದ ಚಚ್ಚಿ ಹತ್ಯೆಗೈದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಈ ಭೀಕರ ಕೊಲೆ ಬೇಧಿಸಿದ ಪೊಲೀಸರಿಗೆ ಅಚ್ಚರಿಯಾಗಿದ್ದು, ಎಂಟು ವರ್ಷದ ನದೀಂ ಎನ್ನುವ ಬಾಲಕ ಶಾಲೆ ರಜೆ ಕೊಟ್ಟಿದ್ದರಿಂದ ಬೆಂಡಿಗೇರಿ ಪೊಲೀಸ್ ಠಾಣೆಯ ಹತ್ತಿರವಿರುವ ದೊಡ್ಮನಿ ಕಾಲೋನಿಯಲ್ಲಿನ ಅಜ್ಜಿ ಮನೆಗೆಂದು ಬಂದಿದ್ದು, ಈ ವೇಳೆ ಸೈಕೋ ಕಿಲ್ಲರ್ ರವಿ ಬಳ್ಳಾರಿ ಎಂಬ ವ್ಯಕ್ತಿ ಕೇವಲ 5 ರೂಪಾಯಿ ಕೇಳಿದ್ದಕ್ಕೆ ಮಗುವನ್ನು ಕೊಲೆ

ಕ್ಷುಲ್ಲಕ ಕಾರಣಕ್ಕೆ ಮಗುವಿನ ತಲೆಗೆ ಕಲ್ಲಿನಿಂದ ಚಚ್ಚಿ ಹತ್ಯೆ ಮಾಡಿದ ಪಾಪಿ ತಂದೆ ! Read More »

ಕರ್ನಾಟಕ, ಕ್ರೈಮ್ ನ್ಯೂಸ್
Crime

ಬೆಳ್ತಂಗಡಿ: ಹಲ್ಲೆ ನಡೆಸಿ ಗೂಗಲ್ ಪೇ ಮೂಲಕ ಹಣ ವರ್ಗಾವಣೆ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಏ.03. ಗೂಗಲ್ ಪೇ ಮೂಲಕ ಹಣ ವರ್ಗಾವಣೆ ಮಾಡಿ ಮನೆಯಂಗಳದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ಹಣ ವರ್ಗಾವಣೆ ಮಾಡಿ ನಿಲ್ಲಿಸಿದ್ದ ವಾಹನವನ್ನು ಕದ್ದು ಪರಾರಿಯಾದ ಬೆಳ್ತಂಗಡಿಯಲ್ಲಿ ನಡೆದಿದೆ. ಪಡಂಗಡಿ ಗ್ರಾಮದ ಜಾನೆಬೈಲು ಪುತ್ಯೆ ಮನೆ ಎಂಬಲ್ಲಿ ಮನೆ ಯಜಮಾನ ಜುವಾಮ್‌ ಗೋವಿಯಸ್‌ (64) ಅವರಿಗೆ ಹಲ್ಲೆ ನಡೆಸಿದ ಪರಿಚಿತರಾದ ರಿಯಾಜ್‌ ಮತ್ತು ಫೈಝಲ್‌ ಹಣ ಎಗರಿಸಿದ ಆರೋಪಿಗಳು ಎಂದು ತಿಳಿದುಬಂದಿದೆ.

ಬೆಳ್ತಂಗಡಿ: ಹಲ್ಲೆ ನಡೆಸಿ ಗೂಗಲ್ ಪೇ ಮೂಲಕ ಹಣ ವರ್ಗಾವಣೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ‘ಮೆಡಿಕಲ್‌ ಸೀಟು ಕೊಡಿಸುವುದಾಗಿ ವಂಚನೆ’ ➤ಆರೋಪಿ ಬಂಧನ

(ನ್ಯೂಸ್ ಕಡಬ)newskadaba.com ಮಂಗಳೂರು, ಏ.03. ನಗರದ ಖಾಸಗಿ ವೈದ್ಯಕೀಯ ಕಾಲೇಜಿನ ಹೆಸರಿನಲ್ಲಿ ಮೆಡಿಕಲ್‌ ಸೀಟು ಕೊಡಿಸುವುದಾಗಿ ಹೇಳಿ ಮೋಸ ಮಾಡಿದ್ದ ಪ್ರಕರಣದಲ್ಲಿ ನೋಯ್ಡಾ ಮೂಲದ ಆರೋಪಿಯನ್ನು ಮಹಾರಾಷ್ಟ್ರದ ಪೊಲೀಸರು ಮುಂಬೈನ ನೆರೋಲ್ ನಲ್ಲಿ ಬಂಧಿಸಿ ಉಳ್ಳಾಲ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ ಎಂದು ತಿಳಿದುಬಂದಿದೆ. ಬಂಧಿತನನ್ನು ಇಫ್ತಿಕರ್ ಅಹ್ಮದ್ (31) ಉತ್ತರ ಪ್ರದೇಶದ ನೋಯ್ಡಾ ನಿವಾಸಿಯೆಂದು ಗುರುತಿಸಲಾಗಿದೆ. ಬೀದರ್‌ ಮೂಲದ ವ್ಯಕ್ತಿಯೋರ್ವರು, ತಮ್ಮಿಂದ 22.5 ಲಕ್ಷ ರೂ. ಪಡೆದು ಖಾಸಗಿ ಮೆಡಿಕಲ್‌ ಕಾಲೇಜಿನಲ್ಲಿ ಸೀಟು ದೊರಕಿಸುವುದಾಗಿ ನಂಬಿಸಿ ಇಫ್ತಿಕರ್ ಅಹ್ಮದ್

ಮಂಗಳೂರು: ‘ಮೆಡಿಕಲ್‌ ಸೀಟು ಕೊಡಿಸುವುದಾಗಿ ವಂಚನೆ’ ➤ಆರೋಪಿ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಪತ್ರಕರ್ತನ ಮೇಲೆ ದಾಳಿ ಪ್ರಕರಣ..!     ➤ ಇಬ್ಬರು​ ಉಗ್ರರ ಬಂಧನ

(ನ್ಯೂಸ್ ಕಡಬ)newskadaba.com ಶ್ರೀನಗರ, ಏ.01. ಪತ್ರಕರ್ತ ವಸೀಮ್​​ ಅಹ್ಮದ್​ ವಾನಿ(27) ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ದ ರೆಸಿಸ್ಟೆಂಟ್​​​ ಫ್ರಂಟ್​ ಸಂಘಟನೆಗೆ(TRF) ಸೇರಿದ್ದ ಇಬ್ಬರು ಹೈಬ್ರಿಡ್​ ಉಗ್ರರನ್ನು ಜಮ್ಮು-ಕಾಶ್ಮೀರದ ಶೋಫಿಯಾನ್​ನಲ್ಲಿ ಪೊಲೀಸರು ಬಂಧಿಸಿದ್ದಾರೆ. ಪತ್ರಕರ್ತನ ಮೇಲಿನ ದಾಳಿಗೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ(SIT)ಅನ್ನು ರಚಿಸಲಾಗಿತ್ತು. ತಾಂತ್ರಿಕ ಸಾಕ್ಷಿಗಳ ಆಧಾರದ ಮೇಲೆ ಹಲವು ಶಂಕಿತರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು ಎಂದು ತನಿಖಾ ದಳದ ಸದಸ್ಯರೊಬ್ಬರು ತಿಳಿಸಿದ್ದಾರೆ.  

ಪತ್ರಕರ್ತನ ಮೇಲೆ ದಾಳಿ ಪ್ರಕರಣ..!     ➤ ಇಬ್ಬರು​ ಉಗ್ರರ ಬಂಧನ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

 4.50 ಕೋಟಿ ರೂ. ಮೌಲ್ಯದ ಸೀರೆ, 1.40 ಕೋಟಿ ರೂ. ಹಣ, 56 ಲೀ. ಬಿಯರ್ ವಶ

(ನ್ಯೂಸ್ ಕಡಬ)newskadaba.com ಶಿವಮೊಗ್ಗ, ಏ.01. ವಿಧಾನಸಭಾ ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆ, ಶಿವಮೊಗ್ಗದ ಹಲವು ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ದಾಳಿ ಮಾಡಿ ಅಕ್ರಮವಾಗಿ ಸಂಗ್ರಹಿಸಿದ್ದ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ವಿವಿಧ ಚೆಕ್ ಪೋಸ್ಟ್​ಗಳಲ್ಲಿ ಪರಿಶೀಲನೆ ಮುಂದುವರಿದಿದ್ದು, ದೊಡ್ಡಪೇಟೆ ಪೊಲೀಸರು 4.50 ಕೋಟಿ ರೂ. ಮೌಲ್ಯದ ಸೀರೆಯನ್ನು ವಶಕ್ಕೆ ಪಡೆದಿದ್ದಾರೆ. ಸೂಕ್ತ ದಾಖಲೆಯಿಲ್ಲದೇ, ಅನಧಿಕೃತವಾಗಿ ಸಂಗ್ರಹಿಸಿದ್ದ ಹಿನ್ನಲೆ ವಶಪಡಿಸಿಕೊಂಡಿದ್ದಾರೆ.  

 4.50 ಕೋಟಿ ರೂ. ಮೌಲ್ಯದ ಸೀರೆ, 1.40 ಕೋಟಿ ರೂ. ಹಣ, 56 ಲೀ. ಬಿಯರ್ ವಶ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top