crime

ಅಕ್ರಮ ಗೋ ಸಾಗಾಟ ➤ ಆರೋಪಿ ಸಹಿತ ವಾಹನ ಪೊಲೀಸ್‌ ವಶಕ್ಕೆ

(ನ್ಯೂಸ್ ಕಡಬ)newskadaba.com  ಬಂಟ್ವಾಳ, ಮಾ.28. ಪರವಾನಿಗೆ ಇಲ್ಲದೆ ಹಿಂಸಾತ್ಮಕವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ವೇಳೆ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ದಾಳಿ ನಡೆಸಿ ಆರೋಪಿ ಸಹಿತ ವಾಹನದಲ್ಲಿದ್ದ ದನಗಳನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ. ಚಾಲಕ ಪ್ರವೀಣ್ ಪ್ರದೀಪ್ ಪೆರ್ನಾಂಡಿಸ್ ಬಂಧಿತ ಆರೋಪಿಯಾಗಿದ್ದು, ಉಳಿದ ಇಬ್ಬರು ಆರೋಪಿಗಳು ವಾಹನದಿಂದ ಜಿಗಿದು ಪರಾರಿಯಾಗಿದ್ದಾರೆ.

ಅಕ್ರಮ ಗೋ ಸಾಗಾಟ ➤ ಆರೋಪಿ ಸಹಿತ ವಾಹನ ಪೊಲೀಸ್‌ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ದಾಖಲಾತಿ ಇಲ್ಲದೆ ಹಣ ಸಾಗಾಟ ➤ ಕಾರು ಸಹಿತ ನಗದು ವಶಕ್ಕೆ

(ನ್ಯೂಸ್ ಕಡಬ)newskadaba.com  ಬಂಟ್ವಾಳ, ಮಾ.28. ಕಾರಿನಲ್ಲಿ ಯಾವುದೇ ದಾಖಲಾತಿ ಇಲ್ಲದ ಲಕ್ಷಾಂತರ ರೂಪಾಯಿ ನಗದು ಹಣ ಪತ್ತೆಯಾಗಿದ್ದು, ವಿಟ್ಲ ಪೊಲೀಸರ ಕಾರ್ಯಾಚರಣೆ ವೇಳೆ ನಗದು ಸಹಿತ ಕಾರನ್ನು ವಶಕ್ಕೆ ಪಡೆದುಕೊಂಡ ಘಟನೆ ಸಾಲೆತ್ತೂರು ಗ್ರಾಮದ ಮೆದು ಎಂಬಲ್ಲಿ ನಡೆದಿದೆ. ಕರ್ನಾಟಕ ರಾಜ್ಯ ಚುನಾವಣೆ ಪ್ರಯುಕ್ತ ಅಂತರರಾಜ್ಯ ಚೆಕ್‌ ಪೋಸ್ಟ್‌ನಲ್ಲಿ ವಿಟ್ಲ ಎಸ್.ಐ.ಸಂದೀಪ್ ಶೆಟ್ಟಿ ಸಿಬ್ಬಂದಿಗಳ ಜೊತೆ ಕರ್ತವ್ಯದಲ್ಲಿರುವ ವೇಳೆ ವಾಹನ ತಪಾಸಣೆ ನಡೆಸುತ್ತಿರುವಾಗ ಸಾಲೆತ್ತೂರು ಕಡೆಯಿಂದ ಬಾಕ್ರಬೈಲು ಕಡೆಗೆ ಹೋಗುತ್ತಿದ್ದ ಕಾರನ್ನು ನಿಲ್ಲಿಸಿ ತಪಾಸಣೆ ನಡೆಸುತ್ತಿದ್ದಾಗ ಗಮನಕ್ಕೆ

ಬಂಟ್ವಾಳ: ದಾಖಲಾತಿ ಇಲ್ಲದೆ ಹಣ ಸಾಗಾಟ ➤ ಕಾರು ಸಹಿತ ನಗದು ವಶಕ್ಕೆ Read More »

ಕರಾವಳಿ

ಕಾರ್ಕಳ: ಅನಾರೋಗ್ಯದಿಂದ ಪುತ್ರ ಮೃತ್ಯು ➤ ನೊಂದು ತಾಯಿ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com  ಕಾರ್ಕಳ, ಮಾ.28. ಮಗನನ್ನು ಕಳೆದುಕೊಂಡ ನೋವಿನಲ್ಲಿ ತಾಯಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಕೆರ್ವಾಶೆ ಗ್ರಾಮದ ಬಂಗ್ಲೆಗುಡ್ಡೆಯಲ್ಲಿ ನಡೆದಿದೆ. ರತ್ನಾವತಿ ನಾಯಕ್ (85) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಇದೇ ನೋವಿನಿಂದ ರತ್ನಾವತಿ ನಾಯಕ್ ಅವರು ಮನೆಯ ಸಮೀಪದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಿರಿಮಗ ಚಂದ್ರಶೇಖರ್ ನಾಯಕ್ ನೀಡಿದ ದೂರಿನಂತೆ ಅಜೆಕಾರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ    

ಕಾರ್ಕಳ: ಅನಾರೋಗ್ಯದಿಂದ ಪುತ್ರ ಮೃತ್ಯು ➤ ನೊಂದು ತಾಯಿ ಆತ್ಮಹತ್ಯೆ Read More »

ಕರಾವಳಿ

ಉಪ್ಪಿನಂಗಡಿ: ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿ ➤ ಯುವಕ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ, ಮಾ.28. ಬೈಕ್‌ ಗಳೆರಡು ಮುಖಾಮುಖಿ ಢಿಕ್ಕಿಯಾಗಿ ಅಪಘಾತ ಸಂಭವಿಸಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿಯ ಕಕ್ಕೆಪದವಿನಲ್ಲಿ ನಡೆದಿದೆ. ಮೃತ ಯುವಕನನ್ನು ಮಡಂತ್ಯಾರು ಸಮೀಪದ ಬಂಗೇರುಕಟ್ಟೆ ನಿವಾಸಿ ಫಯಾಝ್ (22) ಎಂದು ಗುರುತಿಸಲಾಗಿದೆ. ಫಯಾಝ್ ಕೆಲಸಕ್ಕೆ ಹೋಗಿ ಮನೆಗೆ ಹಿಂತಿರುಗುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಅಪಘಾತದ ರಭಸಕ್ಕೆ ಫಯಾಝ್ ರಸ್ತೆಗೆ ಎಸೆಯಲ್ಪಟ್ಟಿದ್ದು, ತಲೆಯ ಭಾಗಕ್ಕೆ ಗಂಭೀರ ಗಾಯಗೊಂಡು ಮೃತಪಟ್ಟಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.      

ಉಪ್ಪಿನಂಗಡಿ: ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿ ➤ ಯುವಕ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಜೈಲಿನಿಂದ ತಪ್ಪಿಸಿಕೊಂಡ ಪೋಕ್ಸೋ ಪ್ರಕರಣದ ಆರೋಪಿ ➤ ಪತ್ತೆಗೆ ಸಹಕರಿಸುವಂತೆ ಮನವಿ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಮಾ.28. ಕುಕ್ಕೇಡಿ ಗ್ರಾಮದ ಉಳ್ತೂರು ಮನೆ ನಿವಾಸಿಯಾಗಿರುವ, ಪೋಕ್ಸೋ ಪ್ರಕರಣದಲ್ಲಿ ಆರೋಪಿ ಅಸೀಂ(29) ತಲೆ ಮರೆಸಿಕೊಂಡಿದ್ದು, ಈತನ ಪತ್ತೆ ಹಚ್ಚುಲು ಸಹಕರಿಸುವಂತೆ ಪೊಲೀಸ್ ಇಲಾಖೆ ಪ್ರಕಟನೆ ಹೊರಡಿಸಿದೆ. ಆರೋಪಿ ಅಸೀಂ ಪೋಕ್ಸೋ ಪ್ರಕರಣದಲ್ಲಿ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿದ್ದ ಎನ್ನಲಾಗಿದೆ. ಈ ವೇಳೆ ಜೈಲಿನಲ್ಲಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ಜೈಲಿನಿಂದ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದ. ಮಂಗಳೂರಿನ ಪೋಕ್ಸೊ ನ್ಯಾಯಾಲಯವು ಅಸೀಮ್ ವಿರುದ್ಧ ವಾರೆಂಟ್ ಜಾರಿ ಮಾಡಿದೆ.    

ಬೆಳ್ತಂಗಡಿ: ಜೈಲಿನಿಂದ ತಪ್ಪಿಸಿಕೊಂಡ ಪೋಕ್ಸೋ ಪ್ರಕರಣದ ಆರೋಪಿ ➤ ಪತ್ತೆಗೆ ಸಹಕರಿಸುವಂತೆ ಮನವಿ Read More »

ಕರಾವಳಿ, ಕ್ರೈಮ್ ನ್ಯೂಸ್

ಮಡಿಕೇರಿ: ಕಾಲುಜಾರಿ ಬಿದ್ದು ಎನ್‍ಸಿಸಿ ಅಧಿಕಾರಿ ಮೃತ್ಯು

(ನ್ಯೂಸ್ ಕಡಬ)newskadaba.com ಮಡಿಕೇರಿ, ಮಾ.27. ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ವಿರಾಜಪೇಟೆ ತಾಲ್ಲೂಕಿನ ಕಡಂಗದ ಮರೂರು ಗ್ರಾಮದಲ್ಲಿ ನಡೆದಿದೆ. ಅಲ್ಲಿನ ನಿವಾಸಿ, ಗೋಣಿಕೊಪ್ಪಲು ಕಾವೇರಿ ಕಾಲೇಜಿನಲ್ಲಿ ಎನ್‍ಸಿಸಿ ಅಧಿಕಾರಿಯಾಗಿದ್ದ ಡಾ. ಬಲ್ಯಂಡ ಬೀನಾ (52) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಡಾ. ಬಲ್ಯಂಡ ಬೀನಾ ಅವರು ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಕಾಲುಜಾರಿ ಬಿದ್ದಿದ್ದರು. ಪರಿಣಾಮ ತಲೆಯ ಭಾಗಕ್ಕೆ ಗಂಭೀರ ಸ್ವರೂಪದ ಗಾಯಗಳಾಗಿತ್ತು. ಈ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ

ಮಡಿಕೇರಿ: ಕಾಲುಜಾರಿ ಬಿದ್ದು ಎನ್‍ಸಿಸಿ ಅಧಿಕಾರಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಬಟ್ಟೆ ಅಂಗಡಿಗೆ ಬೆಂಕಿ ➤ ದಂಪತಿ ಸಜೀವ ದಹನ

(ನ್ಯೂಸ್ ಕಡಬ)newskadaba.com ಯಾದಗಿರಿ, ಮಾ.27. ವಿದ್ಯುತ್ ಶಾರ್ಟ್ ಸರ್ಕ್ಯೂಟ್‍ನಿಂದ ಬೆಂಕಿ ಹೊತ್ತಿಕೊಂಡು ದಂಪತಿ ಸಜೀವ ದಹನವಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಸೈದಾಪುರದಲ್ಲಿ ನಡೆದಿದೆ. ಸೈದಾಪುರ ಪಟ್ಟಣದ ಖ್ಯಾತ ಬಟ್ಟೆ ಉದ್ಯಮಿ ರಾಘವೇಂದ್ರ(39) ಮತ್ತು ಅವರ ಪತ್ನಿ ಶಿಲ್ಪಾ(35) ಎಂದು ಗುರುತಿಸಲಾಗಿದೆ. 3 ಮಹಡಿಯ ಮನೆಯ ಕೆಳಮಹಡಿಯಲ್ಲಿ ಮೃತ ದಂಪತಿ ವಾಸಿಸುತ್ತಿದ್ದರು. ಮೇಲಿನ 2 ಮಹಡಿಗಳಲ್ಲಿ ಬಟ್ಟೆ ವ್ಯಾಪಾರ ನಡೆಸುತ್ತಿದ್ದರು. ಸುಮಾರು 3 ಕೋಟಿ ರೂ. ಮೌಲ್ಯದ ಬಟ್ಟೆಗಳು ಇದ್ದವು. ವ್ಯಾಪಾರ ಮುಗಿಸಿ ದಂಪತಿ ಮೇಲಿನ ಮಹಡಿಯಲ್ಲಿಯೇ ಮಲಗಿದ್ದರಂತೆ.

ಬಟ್ಟೆ ಅಂಗಡಿಗೆ ಬೆಂಕಿ ➤ ದಂಪತಿ ಸಜೀವ ದಹನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಲಾರಿಗೆ ಸರಕು ವಾಹನ ಢಿಕ್ಕಿ ➤ ಇಬ್ಬರು ಮೃತ್ಯು

(ನ್ಯೂಸ್ ಕಡಬ)newskadaba.com ಮೊಳಕಾಲ್ಮುರು, ಮಾ.27, ಬೆಳಗಿವ ಜಾವ ಸರಕು ವಾಹನವೊಂದು ಲಾರಿಗೆ ಢಿಕ್ಕಿ ಹೊಡೆದು ಇಬ್ಬರು ರೈತರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸೀಮಾಂಧ್ರದ ರಾಯದುರ್ಗ ತಾಲ್ಲೂಕು ಬೊಮ್ಮನಾಳ್ ಮಂಡಲ ಗೋವಿಂದವಾಡ ಗ್ರಾಮದ ದಾಸರಿ ಕೇಶಪ್ಪ (30) ಮತ್ತು ಯ ವಂಡ್ರಪ್ಪ (64) ಮೃತಪಟ್ಟವರು. ಕುಮ್ಮರಿ ಸೋಮಣ್ಣ ಗಾಯಗೊಂಡಿದ್ದಾರೆ. ಅವರು ಸರಕು ವಾಹನದಲ್ಲಿ ತಮ್ಮ ಜಮೀನಿನಲ್ಲಿ ಬೆಳೆದಿದ್ದ ಮೆಣಸಿನಕಾಯಿಯನ್ನು ಮಾರಾಟ ಮಾಡಲು ಹಾವೇರಿ ಜಿಲ್ಲೆ ಬ್ಯಾಡಗಿ ಮಾರುಕಟ್ಟೆಗೆ ಹೋಗುತ್ತಿದ್ದರು.    

ಲಾರಿಗೆ ಸರಕು ವಾಹನ ಢಿಕ್ಕಿ ➤ ಇಬ್ಬರು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಳ್ಳಾಲ: ನೇತ್ರಾವತಿ ನದಿಗೆ ಕಾಲುಜಾರಿ ಬಿದ್ದು ಮೃತ್ಯು

(ನ್ಯೂಸ್ ಕಡಬ)newskadaba.com ಉಳ್ಳಾಲ, ಮಾ.27. ನೇತ್ರಾವತಿ ನದಿಗೆ ಕಾಲುಜಾರಿ ಬಿದ್ದು ಹರೇಕಳ ಬೈತಾರ್ ನಿವಾಸಿ ಪ್ರಕಾಶ್ ಗಟ್ಟಿ (46) ಎಂಬವರು ಸಾವನ್ನಪ್ಪಿರುವ ಘಟನೆ ಉಳ್ಳಾಲದಲ್ಲಿ ನಡೆದಿದೆ. ಹರೇಕಳದ ಉಳಿದೊಟ್ಟು ಬಳಿಯ ಕೊಡಮಣಿತ್ತಾಯ ದೈವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ನಡೆಯುತ್ತಿದ್ದು, ಅದಕ್ಕಾಗಿ ಪ್ರಕಾಶ್ ಅವರು ಸ್ನೇಹಿತರು ಹಾಗೂ ಸಂಬಂಧಿಕರನ್ನು ಮನೆಗೆ ಕರೆದಿದ್ದರು. ಸುಮಾರು 20ರಷ್ಟು ನೆಂಟರು ಸ್ನೇಹಿತರನ್ನು ಕರೆದುಕೊಂಡು ಪ್ರಕಾಶ್ ಅವರು ತಮ್ಮ ತೋಟದ ಬಳಿಯಿರುವ ನೇತ್ರಾವತಿ ನದಿ ತೀರಕ್ಕೆ ತೆರಳಿದ್ದರು. ಅಲ್ಲಿ ನದಿ ನೀರಿಗೆ ಅಡಿಕೆ ಮರವನ್ನು ಅಡ್ಡವಾಗಿ

ಉಳ್ಳಾಲ: ನೇತ್ರಾವತಿ ನದಿಗೆ ಕಾಲುಜಾರಿ ಬಿದ್ದು ಮೃತ್ಯು Read More »

ಕರಾವಳಿ

ಮಂಗಳೂರು: ಜೂಜು ಅಡ್ಡೆಗೆ ದಾಳಿ 14 ಮಂದಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.27. ನಗರದ ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ಜೂಜು ಅಡ್ಡೆಗೆ ದಾಳಿ ನಡೆಸಿದ ಪೊಲೀಸರು 14 ಮಂದಿಯನ್ನು ಬಂಧಿಸಿದ್ದಾರೆ. ಅಕ್ರಮವಾಗಿ ಜೂಜು ಅಡ್ಡೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಜೂಜಿನಲ್ಲಿ ನಿರತರಾಗಿದ್ದ 14ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ ಬಂಧಿತರಿಂದ 78,810 ರೂ. ನಗದು, 2 ಬೈಕ್ ಗಳು ಹಾಗೂ 11 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಣಂಬೂರು

ಮಂಗಳೂರು: ಜೂಜು ಅಡ್ಡೆಗೆ ದಾಳಿ 14 ಮಂದಿ ಅರೆಸ್ಟ್ Read More »

ಕರಾವಳಿ
Scroll to Top