crime

ಒಂದೇ ಬೈಕ್‌ ನಲ್ಲಿ 6 ಮಂದಿ ತೆರಳುತ್ತಿದ್ದಾಗ ಢಿಕ್ಕಿ ಹೊಡೆದ ಟೆಂಪೋ !       ➤ ನಾಲ್ವರು ದುರ್ಮರಣ

(ನ್ಯೂಸ್ ಕಡಬ)newskadaba.com ಮಹಾರಾಷ್ಟ್ರ, ಮಾ.06. ಟೆಂಪೋ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಲಾತೂರ್‌ನಲ್ಲಿ ನಡೆದಿದೆ. ಎಲ್ಲಾ ಆರು ಜನರು ಒಂದೇ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ, ಎದುರಿನಿಂದ ವೇಗವಾಗಿ ಬಂದ ಟೆಂಪೋ ಬೈಕ್‌ ಗೆ ಡಿಕ್ಕಿ ಹೊಡೆದಿದೆ. ಅಪಘಾತದ ವೇಳೆ ಟೆಂಪೋ ಕೂಡ ಪಲ್ಟಿಯಾಗಿದ್ದು, ಒಂಬತ್ತು ಕುರಿಗಳು ಸಾವನ್ನಪ್ಪಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.  

ಒಂದೇ ಬೈಕ್‌ ನಲ್ಲಿ 6 ಮಂದಿ ತೆರಳುತ್ತಿದ್ದಾಗ ಢಿಕ್ಕಿ ಹೊಡೆದ ಟೆಂಪೋ !       ➤ ನಾಲ್ವರು ದುರ್ಮರಣ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶಸ್ತ್ರಚಿಕಿತ್ಸೆಗೆ ದಾಖಲಾಗಿದ್ದ ರೋಗಿಯ ಶಿಶ್ನವನ್ನು ಕತ್ತರಿಸಿ ಎಡವಟ್ಟು ಮಾಡಿದ ವೈದ್ಯರು !

(ನ್ಯೂಸ್ ಕಡಬ)newskadaba.com ನವದೆಹಲಿ, ಮಾ.06. ಶಿಶ್ನದಲ್ಲಿ ಗೆಡ್ಡೆ ಇದೆ ಎಂದು ವೈದ್ಯರು ರೋಗಿಯೊಬ್ಬನ ಶಿಶ್ನವನ್ನು ಕತ್ತರಿಸಿರುವ ಘಟನೆ ವರದಿಯಾಗಿದೆ. ಅರೆಝೋದಲ್ಲಿನ ಸ್ಯಾನ್ ಡೊನಾಟೊ ಆಸ್ಪತ್ರೆಯಲ್ಲಿ 60 ವರ್ಷದ ರೋಗಿಯ ಶಿಶ್ನವನ್ನು ವೈದ್ಯರು ಗೆಡ್ಡೆ ಇದೆ ಎಂದು ತಪ್ಪಾಗಿ ಗ್ರಹಿಸಿ ಕತ್ತರಿಸಿದ್ದಾರೆ. ಬಳಿಕ ತಪ್ಪಿನ ಅರಿವಾಗಿ ಪುನಃ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ರೋಗಿಯ ಜೀವಕ್ಕೆ ಅಪಾಯ ಇಲ್ಲವಾದರೂ ಜೀವನ ಪೂರ್ತಿ ನೋವಿನಲ್ಲಿಯೇ ಇರುವ ಸ್ಥಿತಿ ಉಂಟಾಗಿದೆ.  

ಶಸ್ತ್ರಚಿಕಿತ್ಸೆಗೆ ದಾಖಲಾಗಿದ್ದ ರೋಗಿಯ ಶಿಶ್ನವನ್ನು ಕತ್ತರಿಸಿ ಎಡವಟ್ಟು ಮಾಡಿದ ವೈದ್ಯರು ! Read More »

ರಾಷ್ಟ್ರೀಯ ನ್ಯೂಸ್

60 ವರ್ಷದ ಮಹಿಳೆ ಮೇಲೆ ಅತ್ಯಾಚಾರ !          ➤ ಇಬ್ಬರು ಯುವಕರ ಬಂಧನ

(ನ್ಯೂಸ್ ಕಡಬ)newskadaba.com ವಿಜಯಪುರ, ಮಾ.04. ವಿಜಯಪುರ ಜಿಲ್ಲೆಯಲ್ಲಿ 60 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಇಬ್ಬರು ಯುವಕರನ್ನು ಬಂಧಿಸಲಾಗಿದೆ. ಬಂಧಿತರನ್ನು ಸದ್ದಾ ಶೇಕ್ ಮತ್ತು ರವಿ ಎಂದು ಗುರುತಿಸಲಾಗಿದ್ದು, ಇವರು ರದ್ದಿ ಅಂಗಡಿಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದಾರೆ. ಜಿಲ್ಲಾಸ್ಪತ್ರೆಗೆ ದಾಖಲಾಗಿರುವ ಸಂತ್ರಸ್ತೆಯ ಸ್ಥಿತಿ ಗಂಭೀರವಾಗಿದೆ. ಸಂತ್ರಸ್ತೆ ಜೋರಾಪುರ ಪೇಟೆಯ ದೇವಸ್ಥಾನದಲ್ಲಿ ಭಕ್ತರು ನೀಡುವ ಭಿಕ್ಷೆಯಿಂದ ಜೀವನ ಸಾಗಿಸುತ್ತಿದ್ದರು.

60 ವರ್ಷದ ಮಹಿಳೆ ಮೇಲೆ ಅತ್ಯಾಚಾರ !          ➤ ಇಬ್ಬರು ಯುವಕರ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ರೈಲುಗಳ ಮುಖಾಮುಖಿ ಢಿಕ್ಕಿ; 26 ಮಂದಿ ದುರ್ಮರಣ

(ನ್ಯೂಸ್ ಕಡಬ)newskadaba.com ಅಥೆನ್ಸ್, ಮಾ.04. ರೈಲುಗಳೆರಡರ ನಡುವೆ ಪರಸ್ಪರ ಢಿಕ್ಕಿ ಸಂಭವಿಸಿ ಕನಿಷ್ಠ 26 ಮಂದಿ ಸಾವನ್ನಪ್ಪಿದ ಘಟನೆ ಗ್ರೀಸ್‌‌ನಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. ಘಟನೆಯಲ್ಲಿ 85ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಅಥೆನ್ಸ್‌ನ ಉತ್ತರ ನಗರ ಥೆಸಲೋನಿಕಿಗೆ ಪ್ರಯಾಣಿಸುತ್ತಿದ್ದ ಪ್ಯಾಸೆಂಜರ್‌ ರೈಲು ಮತ್ತು ಮಧ್ಯ ಗ್ರೀಸ್‌ನ ಲಾರಿಸ್ಸಾ ನಗರದಿಂದ ಬರುತ್ತಿದ್ದ ಸರಕು ತುಂಬಿದ (ಕಾರ್ಗೋ) ರೈಲು ನಡುವೆ ಢಿಕ್ಕಿ ಸಂಭವಿಸಿದೆ.

ರೈಲುಗಳ ಮುಖಾಮುಖಿ ಢಿಕ್ಕಿ; 26 ಮಂದಿ ದುರ್ಮರಣ Read More »

ರಾಷ್ಟ್ರೀಯ ನ್ಯೂಸ್

ಸುಳ್ಯ: ಮನೆಗೆ ನುಗ್ಗಿ ಮಹಿಳೆಯ ಹತ್ಯೆಗೆ ಯತ್ನ ➤ ಕೆಲಸಕ್ಕೆ ಬಂದ ಕಾರ್ಮಿಕರಿಂದ ಕೃತ್ಯ

(ನ್ಯೂಸ್ ಕಡಬ)newskadaba.com ಸುಳ್ಯ, ಮಾ.04. ಕೆಲಸಕ್ಕೆ ಬಂದಿದ್ದ ಕಾರ್ಮಿಕರು ಮನೆಯಲ್ಲಿದ್ದವರನ್ನು ಹತ್ಯೆಗೈಯಲು ಯತ್ನಿಸಿದ ಘಟನೆ ತಾಲೂಕಿನ ಪಂಬೆತ್ತಾಡಿ ಗ್ರಾಮದ ಕರಿಕ್ಕಳ ಎಂಬಲ್ಲಿ ವರದಿಯಾಗಿದೆ. ಕರಿಕ್ಕಳ ವಿಶ್ವನಾಥ ಮತ್ತು ಗಾಯತ್ರಿ ದಂಪತಿ ಮನೆಗೆ ಕೆಲಸಕ್ಕೆ ಬಂದವರು ಆಕ್ರಮಣ ನಡೆಸಿ ಹತ್ಯೆಗೆ ಯತ್ನಿಸಿದ್ದಾರೆ. ಈ ವೇಳೆ ಮನೆಯವರು ಬೊಬ್ಬೆ ಹೊಡೆದ ಪರಿಣಾಮ ಅಕ್ಕಪಕ್ಕದ ಮನೆಯವರು ಬಂದ ಕಾರಣ ಅಪಾಯ ಉಂಟಾಗಲಿಲ್ಲ.    

ಸುಳ್ಯ: ಮನೆಗೆ ನುಗ್ಗಿ ಮಹಿಳೆಯ ಹತ್ಯೆಗೆ ಯತ್ನ ➤ ಕೆಲಸಕ್ಕೆ ಬಂದ ಕಾರ್ಮಿಕರಿಂದ ಕೃತ್ಯ Read More »

ಕರಾವಳಿ, ಕ್ರೈಮ್ ನ್ಯೂಸ್

ಲಂಚ ಸ್ವೀಕರಿಸುವಾಗ ಬೆಸ್ಕಾಂ ಎಂಜಿನಿಯರ್‌ ವಿದ್ಯಾ ಬಂಧನ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.03. ಮನೆಯ ಆವರಣದಲ್ಲಿದ್ದ ವಿದ್ಯುತ್‌ ಕಂಬ ತೆರವುಗೊಳಿಸಲು 25 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಬೆಸ್ಕಾಂ ಸಹಾಯಕ ಎಂಜಿನಿಯರ್‌ ಲೋಕಾ ಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಬೆನ್ನಿಗಾನಹಳ್ಳಿ ಕಸ್ತೂರಿನಗರ ಬೆಸ್ಕಾಂ ಸಬ್‌ ಡಿವಿಷನ್‌ ಕಚೇರಿಯ ಸಹಾಯಕ ಎಂಜಿನಿಯರ್‌ ವಿದ್ಯಾ ಬಂಧಿತ ಆರೋಪಿ ಎನ್ನಲಾಗಿದೆ.  

ಲಂಚ ಸ್ವೀಕರಿಸುವಾಗ ಬೆಸ್ಕಾಂ ಎಂಜಿನಿಯರ್‌ ವಿದ್ಯಾ ಬಂಧನ Read More »

ಕರ್ನಾಟಕ

ಹತ್ರಾಸ್‌ ದಲಿತ ಯುವತಿಯ ಮೇಲೆ ಗ್ಯಾಂಗ್‌ರೇಪ್‌ ಪ್ರಕರಣ ➤ ಪ್ರಮುಖ ಆರೋಪಿಗೆ ಜೀವಾವಧಿ

(ನ್ಯೂಸ್ ಕಡಬ)newskadaba.com ಉತ್ತರ ಪ್ರದೇಶ, ಮಾ.03. 2020ರಲ್ಲಿ ಉತ್ತರಪ್ರದೇಶದ ಹತ್ರಾಸ್‌ನಲ್ಲಿ ನಡೆದ ದಲಿತ ಯುವತಿಯ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ನ್ಯಾಯಾಲಯ ತೀರ್ಪು ಪ್ರಕಟಿಸಿದ್ದು, ಪ್ರಮುಖ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿ ಉಳಿದ ಮೂವರು ಆರೋಪಿಗಳನ್ನು ಖುಲಾಸೆಗೊಳಿಸಿದೆ. ಪ್ರಮುಖ ಆರೋಪಿ ಸಂದೀಪ್‌(20) ವಿರುದ್ಧ ಅತ್ಯಾಚಾರ ಮತ್ತು ಕೊಲೆ ಆರೋಪ ಸಾಬೀತಾಗಿಲ್ಲ ಎಂದು ಆತನ ಪರ ವಕೀಲ ಮುನ್ನಾ ಸಿಂಗ್‌ ಹೇಳಿದ್ದಾರೆ. ಉದ್ದೇಶ ಪೂರ್ವಕವಲ್ಲದ ಕೊಲೆ ಆರೋಪದ ಮೇರೆಗೆ ಆತನಿಗೆ ಜೀವಾವಧಿ ಶಿಕ್ಷೆ ಮತ್ತು

ಹತ್ರಾಸ್‌ ದಲಿತ ಯುವತಿಯ ಮೇಲೆ ಗ್ಯಾಂಗ್‌ರೇಪ್‌ ಪ್ರಕರಣ ➤ ಪ್ರಮುಖ ಆರೋಪಿಗೆ ಜೀವಾವಧಿ Read More »

ಕ್ರೈಮ್ ನ್ಯೂಸ್

ಟೆಂಪೊ ಮತ್ತು ಸ್ಕೂಟರ್ ನಡುವೆ ಅಪಘಾತ..! ➤ ಓರ್ವ ಮೃತ್ಯು

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.03. 407 ಟೆಂಪೊ ಹಾಗೂ ಸ್ಕೂಟರ್ ನಡುವಿನ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ಕರಾವಳಿ ಬೈಪಸ್ ನಲ್ಲಿ ವರದಿಯಾಗಿದೆ. ಗಣಪತಿ ಪೈ ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಗಣಪತಿಯವರು ಕರಾವಳಿ ಬೈಪಸ್ ನಿಂದ ಸಂತೆಕಟ್ಟೆಯತ್ತ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ. ಸ್ಕೂಟರ್ ನಿಯಂತ್ರಣ ಕಳೆದುಕೊಂಡು ಟೆಂಪೋಗೆ ಡೀಕ್ಕಿಯಾಗಿದೆ ಎಂದು ತಿಳಿದುಬಂದಿದೆ. ಈ ಕುರಿತಂತೆ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟೆಂಪೊ ಮತ್ತು ಸ್ಕೂಟರ್ ನಡುವೆ ಅಪಘಾತ..! ➤ ಓರ್ವ ಮೃತ್ಯು Read More »

ಕರಾವಳಿ

ಅಕ್ರಮ ಮದ್ಯ ಮಾರಾಟ..! ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಬಂಟ್ವಾಳ, ಮಾ.03. ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇಲೆ ದಾಳಿ ನಡೆಸಿದ ಬಂಟ್ವಾಳ ನಗರ ಠಾಣಾ ಎಸ್. ಐ.ರಾಮಕೃಷ್ಣ ಅವರು ಆರೋಪಿ ಸಹಿತ ಮದ್ಯವನ್ನು ವಶಕ್ಕೆ ಪಡೆದುಕೊಂಡ ಘಟನೆ ಬ್ರಹ್ಮರಕೋಟ್ಲು ಎಂಬಲ್ಲಿ ನಡೆದಿದೆ. ಕಳ್ಳಿಗೆ ಗ್ರಾಮದ ಜಾರಂದಗುಡ್ಡೆ ನಿವಾಸಿ ಅಶೋಕ ಬಂಧಿತ ಆರೋಪಿ. ಈತನಿಂದ 2217 ರೂ ಮೌಲ್ಯದ 90 ಎಂ.ಎಲ್.ನ ಮೈಸೂರು ಲ್ಯಾನ್ಸರ್ ವಿಸ್ಕಿ ಎಂಬ ಹೆಸರಿನ 10 ಮದ್ಯದ ಸ್ಯಾಚೇಟ್ ಹಾಗೂ 500 ರೂ ನಗದನ್ನು

ಅಕ್ರಮ ಮದ್ಯ ಮಾರಾಟ..! ➤ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಲೆಕ್ಕಾಧಿಕಾರಿ..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.03. ಲಂಚ ಸ್ವೀಕರಿಸುತ್ತಿದ್ದ ವೇಳೆ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಲೋಕಾಯುಕ್ತ ಬಲೆಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದಿದ್ದಾರೆ. ಟೆಂಡರ್ ಕೊಡಿಸುವ ವಿಚಾರದಲ್ಲಿ 80 ಲಕ್ಷಕ್ಕೂ ಹೆಚ್ಚು ಹಣಕ್ಕೆ ಡಿಮ್ಯಾಂಡ್ ಮಾಡಿದ್ದು, ಮುಂಗಡವಾಗಿ 40 ಲಕ್ಷಕ್ಕೂ ಹೆಚ್ಚು ಹಣ ಪಡೆದುಕೊಳ್ಳುವ ಸಂದರ್ಭದಲ್ಲಿ ಲೋಕಾಯುಕ್ತ ಬಲೆಗೆ ಬಿದಿದ್ದಾರೆ. ಶಾಸಕರ ಪುತ್ರ ಪ್ರಶಾಂತ್‌ BWSSB ಮುಖ್ಯ ಲೆಕ್ಕಾಧಿಕಾರಿಯಾಗಿದ್ದಾರೆ. KSDL ಕಚ್ಚಾ ವಸ್ತುಗಳ ಪೂರೈಕೆ ಟೆಂಡರ್ ನೀಡಲು ಲಂಚಕ್ಕೆ ಬೇಡಿಯಿಟ್ಟಿದ್ದರು ಎನ್ನಲಾಗುತ್ತಿದೆ.

ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಲೆಕ್ಕಾಧಿಕಾರಿ..! Read More »

ಕರ್ನಾಟಕ
Scroll to Top