ಧರ್ಮಸ್ಥಳ: ಅನ್ಯಕೋಮಿನ ಜೋಡಿಯನ್ನು ಪೊಲೀಸರಿಗೆ ಒಪ್ಪಿಸಿದ ಸಂಘಪರಿವಾರದ ಕಾರ್ಯಕರ್ತರು
(ನ್ಯೂಸ್ ಕಡಬ)newskadaba.com ಧರ್ಮಸ್ಥಳ, ಜ.25. ಅನ್ಯಕೋಮಿನ ಜೋಡಿಯನ್ನು ತಂಡವೊಂದು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಧರ್ಮಸ್ಥಳ ಹೊರವಲಯದ ಕನ್ಯಾಡಿಯಲ್ಲಿ ಈ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ದಾದಾಪೀರ್ ಎಂಬಾತ ವಿವಾಹಿತ ಹಿಂದೂ ಮಹಿಳೆಯ ಜತೆಯಾಗಿ ಧರ್ಮಸ್ಥಳಕ್ಕೆ ಬಂದಿದ್ದರು. ಅವರು ಲಾಡ್ಜ್ ನಲ್ಲಿ ರೂಂ ಪಡೆಯಲೆಂದು ಕನ್ಯಾಡಿಗೆ ಬಂದಿದ್ದರು. ಈ ವೇಳೆ ರೂಂ ಕೊಟ್ಟಿಲ್ಲ. ಬಳಿಕ ಸ್ಥಳೀಯ ಸಂಘಪರಿವಾರದ ಕಾರ್ಯಕರ್ತರು ಅವರನ್ನು ತಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು ಇಬ್ಬರ ಪೋಷಕರಿಗೂ ಮಾಹಿತಿ ನೀಡಿ ಕರೆಸಿಕೊಂಡಿದ್ದಾರೆ ಎನ್ನಲಾಗಿದೆ.
ಧರ್ಮಸ್ಥಳ: ಅನ್ಯಕೋಮಿನ ಜೋಡಿಯನ್ನು ಪೊಲೀಸರಿಗೆ ಒಪ್ಪಿಸಿದ ಸಂಘಪರಿವಾರದ ಕಾರ್ಯಕರ್ತರು Read More »
ಕರಾವಳಿ




