crime

ಪ್ರಿಯಕರನೊಂದಿಗೆ ಸೇರಿ 3 ವರ್ಷದ ಮಗಳನ್ನು ಕೊಂದ ಪಾಪಿ ತಾಯಿ !

(ನ್ಯೂಸ್ ಕಡಬ)newskadaba.com  ಜೈಪುರ, ಜ.20. ರಾಜಸ್ಥಾನದ ಶ್ರೀಗಂಗಾನಗರ ಜಿಲ್ಲೆಯಲ್ಲಿ ಮೂರು ವರ್ಷದ ಬಾಲಕಿಯನ್ನು ಕೊಂದು ಚಲಿಸುವ ರೈಲಿನಿಂದ ಶವ ಎಸೆದ ಆರೋಪದ ಮೇಲೆ ವಿವಾಹಿತ ಮಹಿಳೆ ಮತ್ತು ಆಕೆಯ ಪ್ರಿಯಕರನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳನ್ನು ಸುನೀತಾ ಮತ್ತು ಸನ್ನಿ ಅಲಿಯಾಸ್ ಮಾಲ್ಟಾ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಸುನೀತಾ ತನ್ನ ಮಗಳು ಕಿರಣ್‌ನನ್ನು ಕತ್ತು ಹಿಸುಕಿ ಸನ್ನಿ ಸಹಾಯದಿಂದ ಬೆಡ್‌ಶೀಟ್‌ನಲ್ಲಿ ಶವವನ್ನು ಸುತ್ತಿಕೊಂಡು ಶ್ರೀಗಂಗಾನಗರ ರೈಲು ನಿಲ್ದಾಣದಿಂದ ರೈಲು ಹತ್ತಿದ್ದಾರೆ. ರೈಲ್ವೆ ನಿಲ್ದಾಣ ತಲುಪುವ […]

ಪ್ರಿಯಕರನೊಂದಿಗೆ ಸೇರಿ 3 ವರ್ಷದ ಮಗಳನ್ನು ಕೊಂದ ಪಾಪಿ ತಾಯಿ ! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
crime, arrest, suspected

ಚಪಾತಿ ಹಿಟ್ಟಿಗೆ ಉಗುಳಿ ಅಡುಗೆ ತಯಾರಿ ! ➤  ವ್ಯಕ್ತಿ ಅರೆಸ್ಟ್

(ನ್ಯೂಸ್ ಕಡಬ)newskadaba.com  ಗಜಯಾಬಾದ್, ಜ.20. ರಸ್ತೆ ಬದಿಯ ಉಪಾಹಾರ ಗೃಹದಲ್ಲಿ ಚಪಾತಿಗೆಂದು ಕಲಸಿಟ್ಟ ಹಿಟ್ಟಿಗೆ ಉಗುಳಿ ಚಪಾತಿ ಮಾಡುತ್ತಿದ್ದ ಅಡುಗೆ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದಾರೆ. ಕಿಶನ್ ಗಂಜ್ ಬಿಹಾರದ ನಾಸಿರುದ್ದೀನ್ ಬಂಧಿತ ಆರೋಪಿ. ಮೋಹನ್ ನಗರ ವಜೀರಾಬಾದ್ (ದೆಹಲಿ) ರಸ್ತೆಯಲ್ಲಿರುವ ಪಸೋಂಡಾ ಗ್ರಾಮದಲ್ಲಿ ರಸ್ತೆ ಬದಿಯಲ್ಲಿರುವ ಉಪಾಹಾರ ಗೃಹದಲ್ಲಿ ಈತ ಅಡುಗೆ ಸಿಬಂದಿಯಾಗಿದ್ದ. ಇಲ್ಲಿ ಚಪಾತಿ ಮಾಡಲೆಂದು ಕಲಸಿಟ್ಟ ಹಿಟ್ಟಿಗೆ ಈತ ಉಗುಳಿದ್ದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ವೀಡಿಯೋ ವೈರಲ್

ಚಪಾತಿ ಹಿಟ್ಟಿಗೆ ಉಗುಳಿ ಅಡುಗೆ ತಯಾರಿ ! ➤  ವ್ಯಕ್ತಿ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿಟ್ಲ: ಜಾತ್ರೆಯಲ್ಲಿ ವ್ಯಾಪಾರಿ ಮೇಲೆ ಹಲ್ಲೆ ಪ್ರಕರಣ ➤ ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ವಿಟ್ಲ, ಜ.20. ಪ್ರಸಿದ್ಧ ವಿಟ್ಲ ಜಾತ್ರೆ ಸಂತೆಯಲ್ಲಿ ವ್ಯಾಪಾರ ನಡೆಸುತ್ತಿದ್ದ ವ್ಯಾಪಾರಿಯ ಮೇಲೆ ಹಲ್ಲೆ ನಡೆಸಿದ ಆರು ಮಂದಿ ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಾದ ಗಣೇಶ್‌ ಕಡಂಬು, ಮಂಜುನಾಥ ಸೇರಿ ಇತರ ನಾಲ್ವರನ್ನು ಬಂಧಿಸಿರುವ ಬಗ್ಗೆ ವರದಿಯಾಗಿದೆ. ವಿಟ್ಲ ಶ್ರೀ ಪಂಚಲಿಗೇಶ್ವರ ದೇವಸ್ಥಾನದ ಜಾತ್ರೆಯ ಸಂದರ್ಭ ದೇವಸ್ಥಾನದ ಅನುಮತಿಯಂತೆ ಫ್ಯಾನ್ಸಿ ಮಳಿಗೆ ಇಟ್ಟು ವ್ಯಾಪಾರ ಮಾಡಿಕೊಂಡಿದ್ದ ಸುರೇಶ್‌ ದಾಸ್‌ ಎಂಬವರಿಗೆ ತಡರಾತ್ರಿ ಅಂಗಡಿ ಬಂದ್ ಮಾಡುವುದೇಕೆ ಎಂದು ಪ್ರಶ್ನಿಸಿ ಆರು ಮಂದಿ ಆರೋಪಿಗಳು

ವಿಟ್ಲ: ಜಾತ್ರೆಯಲ್ಲಿ ವ್ಯಾಪಾರಿ ಮೇಲೆ ಹಲ್ಲೆ ಪ್ರಕರಣ ➤ ಆರೋಪಿಗಳು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ಕೂಲಿ ಕೆಲಸಕ್ಕೆ ತೆರಳಿದ್ದ ವ್ಯಕ್ತಿಯ ಮೃತದೇಹ ಬಾವಿಯಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com ಸುಳ್ಯ, ಜ.20. ಕೆಲ ದಿನಗಳ ಹಿಂದೆ ಮನೆಯಿಂದ ಕೂಲಿ ಕೆಲಸಕ್ಕೆಂದು ಹೋಗಿದ್ದ ವ್ಯಕ್ತಿಯ ಶವ ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ಪಂಜ ಸಮೀಪದಲ್ಲಿ ಬೆಳಕಿಗೆ ಬಂದಿದೆ.  ಸುಳ್ಯ ತಾಲೂಕಿನ ಪಂಬೆತ್ತಾಡಿ ಗ್ರಾಮದ ಪೆರ್ಮಾಜೆ ನಾರಾಯಣ ನಾಯ್ಕ(70) ಶವವಾಗಿ ಪತ್ತೆಯಾದ ವ್ಯಕ್ತಿ. ಎಂದಿನಂತೆ ಕೂಲಿ ಕೆಲಸಕ್ಕೆಂದು ಮನೆಯಿಂದ ತೆರಳಿದ್ದರು. ಬಳಿಕ ಅವರು ಮನೆಗೆ ಬಾರದೇ ಇದ್ದುದರಿಂದ ಮನೆಯವರು ಹುಟುಕಾಟ ವಿವಿಧೆಡೆ ಹುಡುಕಾಟ ನಡೆಸಿದ್ದರು. ಬಾವಿಯಲ್ಲಿ ಅವರ ಶವ ಪತ್ತೆಯಾಗಿದೆ. ಮನೆಯವರು ಸ್ಥಳಕ್ಕೆ ಆಗಮಿಸಿ ಮೃತ ದೇಹ ಖಚಿತ

ಸುಳ್ಯ: ಕೂಲಿ ಕೆಲಸಕ್ಕೆ ತೆರಳಿದ್ದ ವ್ಯಕ್ತಿಯ ಮೃತದೇಹ ಬಾವಿಯಲ್ಲಿ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಫುಟ್​ಪಾತ್​ ಮೇಲೆ ಮಗುವಿಗೆ ಜನ್ಮ ನೀಡಿ ರಸ್ತೆಯಲ್ಲೇ ಎಸೆದು ಹೋದ ಪಾಪಿ ತಾಯಿ..!! 

(ನ್ಯೂಸ್ ಕಡಬ)newskadaba.com ಚಿಕ್ಕಬಳ್ಳಾಪುರ, ಜ.20. ಮಗ ಕೆಟ್ಟವನಾದರೂ ತಾಯಿ ಕೆಟ್ಟವಳಾಗುವುದಿಲ್ಲ ಎನ್ನುವ ಮಾತಿದೆ. ಆದರೆ ಇಲ್ಲಿ ಮಾತ್ರ ತಾಯಿ, ತನ್ನ ಮಗುವಿಗೆ ಜನ್ಮ ನೀಡಿ ಮಗು ಬೇಡ ಎಂದು ಅಲ್ಲಿಂದ ಕಾಲ್ಕಿತ್ತಿದ್ದಾಳೆ. ಅದರ ಪರಿಣಾಮವಾಗಿ ಈಗ ಮಗು ಮೃತಪಟ್ಟಿದೆ. ನಡುರಸ್ತೆಯಲ್ಲೇ ಪುಟ್ಬಾತ್ ಮೇಲೆ ಮಗುವಿಗೆ ಹೆಣ್ಣು ಜನ್ಮ ನೀಡಿದ ತಾಯಿ ನಂತರ ಆಕೆ ನಾಪತ್ತೆಯಾಗಿದ್ದಾಳೆ. ಈ ರೀತಿಯ ಪ್ರಕರಣಗಳು ದೇಶಾದ್ಯಂತ ಹೆಚ್ಚಾಗುತ್ತಿವೆ. ಹುಟ್ಟಿಸಿದ ಮಗು ತನಗೆ ಬೇಡ ಎಂದು ಅನೇಕ ತಾಯಂದಿರು ಮಗುವನ್ನು ತ್ಯಜಿಸುವುದು ಈಗ ಸಾಮಾನ್ಯವಾಗಿದೆ.

ಫುಟ್​ಪಾತ್​ ಮೇಲೆ ಮಗುವಿಗೆ ಜನ್ಮ ನೀಡಿ ರಸ್ತೆಯಲ್ಲೇ ಎಸೆದು ಹೋದ ಪಾಪಿ ತಾಯಿ..!!  Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಪ್ರವೀಣ್ ‌ನೆಟ್ಟಾರು ಹತ್ಯೆ ಪ್ರಕರಣ ➤ ಮತ್ತಿಬ್ಬರ ಪತ್ತೆಗೆ NIA ಬಹುಮಾನ ಘೋಷಣೆ..!

(ನ್ಯೂಸ್ ಕಡಬ)newskadaba.com ಮಂಗಳೂರು, ಜ.20. ಬಿಜೆಪಿ ಯುವ ಮುಖಂಡ ಪ್ರವೀಣ್ ‌ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ತಲೆಮರೆಸಿಕೊಂಡಿರುವ ಮತ್ತಿಬ್ಬರು‌ ಆರೋಪಿಗಳ ಪತ್ತೆಗೆ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಮುಂದಾಗಿದ್ದು ಆರೋಪಿಗಳ ಕುರಿತು ಸುಳಿವು ನೀಡಿದವರಿಗೆ ಐದು ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಿಸಿದೆ. ನಿಷೇಧಿತ ಪಿಎಫ್ಐ ಸಂಘಟನೆ ಕಾರ್ಯಕಾರಿ ಸಮಿತಿ ಸದಸ್ಯ ಬಂಟ್ವಾಳ ತಾಲೂಕಿನ ಕೊಡಾಜೆಯ ಮಹಮ್ಮದ್ ಶರೀಪ್ (48) ಹಾಗೂ ನೆಕ್ಕಿಲಾಡಿಯ ಮಸೂದ್ ಪತ್ತೆಗೆ ಎನ್ಐಎ 5ಲಕ್ಷ ರೂ ಬಹುಮಾನ ಘೋಷಣೆ ಮಾಡಿದೆ. ಸುಳಿವು ನೀಡಿದವರ

ಮಂಗಳೂರು: ಪ್ರವೀಣ್ ‌ನೆಟ್ಟಾರು ಹತ್ಯೆ ಪ್ರಕರಣ ➤ ಮತ್ತಿಬ್ಬರ ಪತ್ತೆಗೆ NIA ಬಹುಮಾನ ಘೋಷಣೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಬಿಲ್‌ ಕಟ್ಟದೇ ಯುಎಇ ವ್ಯಕ್ತಿ ಪರಾರಿ !  ➤   23 ಲಕ್ಷ ರೂ. ವಂಚನೆ

(ನ್ಯೂಸ್ ಕಡಬ)newskadab.com  ಹೊಸದಿಲ್ಲಿ, ಜ.18. ಅಬುದಾಬಿ ರಾಜ ಮನೆತನದ ಸಿಬ್ಬಂದಿ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬ ದಿಲ್ಲಿಯ ಪ್ರತಿಷ್ಠಿತ ಲೀಲಾ ಪ್ಯಾಲೇಸ್‌ ಹೋಟೆಲ್‌ಗೆ 23 ಲಕ್ಷ ರೂ. ಬಿಲ್‌ ಪಾವತಿಸದೇ ವಂಚಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ ಯುಎಇ ಸುಲ್ತಾನ ಶೇಖ್‌ ಫಲ್ಹಾ ಬಿನ್‌ ಜಾಯೇದ್‌ ಅಲ್‌ ನಹ್ಯಾನ್‌ ಅವರ ಕಚೇರಿಯ ಅಧಿಕಾರಿ ಎಂದು ಹೇಳಿಕೊಂಡು ಮೊಹಮ್ಮದ್‌ ಷರೀಫ್‌ ಹೋಟೆಲ್‌ನ 427 ರೂಮ್‌ಗೆ ಚೆಕ್‌ ಇನ್‌ ಆಗಿದ್ದ. ಎಲ್ಲಾ ಐಷಾರಾಮಿ ಸವಲತ್ತುಗಳ ಮಜಾ ಉಡಾಯಿಸಿ ಬಿಲ್‌ ಕಟ್ಟದೇ ಮಂಗಮಾಯವಾಗಿದ್ದಾನೆ

ಬಿಲ್‌ ಕಟ್ಟದೇ ಯುಎಇ ವ್ಯಕ್ತಿ ಪರಾರಿ !  ➤   23 ಲಕ್ಷ ರೂ. ವಂಚನೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

9 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಹತ್ಯೆ ➤   ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ)newskadab.com  ಗುಜರಾತ್‌, ಜ.18. ವ್ಯಕ್ತಿಯೊಬ್ಬ ಒಂಬತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಭಗವಾನ್‌ಪಾರಾ ಪ್ರದೇಶದ ನಿರ್ಜನ ಸ್ಥಳದಲ್ಲಿ ಶವವನ್ನು ಎಸೆದಿರುವುದು ಕಂಡುಬಂದಿದೆ. ನಂತರ ಸ್ಥಳೀಯರು ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ನಡೆಸಿದರು ಮತ್ತು ತಪ್ಪಿತಸ್ಥರನ್ನು ತಕ್ಷಣ ಬಂಧಿಸುವಂತೆ ಒತ್ತಾಯಿಸಿ ರಸ್ತೆಗಳನ್ನು ತಡೆದರು ಎಂದು ಅವರು ಹೇಳಿದರು. ಡೈಮಂಡ್ ಪಾಲಿಷರ್ ಆಗಿ ಕೆಲಸ ಮಾಡುತ್ತಿದ್ದ 39 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತೆಯ ಮೃತದೇಹವನ್ನು ಮರಣೋತ್ತರ

9 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಹತ್ಯೆ ➤   ಆರೋಪಿ ಅರೆಸ್ಟ್..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

17 ಕಿ.ಮೀ ನಡೆದು ವಾರ್ಡನ್‌ ವಿರುದ್ಧ ದೂರು ನೀಡಿದ ವಿದ್ಯಾರ್ಥಿನಿಯರು

(ನ್ಯೂಸ್ ಕಡಬ)newskadab.com ಜಾರ್ಖಂಡ್, ಜ.18. ಹಾಸ್ಟೆಲ್‌ ವಾರ್ಡನ್‌ ನೀಡುವ ದೌರ್ಜನ್ಯ ಸಹಿಸದೇ 60ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಹಾಸ್ಟೆಲ್‌ನಿಂದ ರಾತ್ರಿ ವೇಳೆ 17 ಕಿ.ಮೀ ದೂರ ನಡೆದು ಹೋಗಿ ಜಿಲ್ಲಾಧಿಕಾರಿಗೆ ದೂರು ನೀಡಿದ ಪ್ರಸಂಗ ಜಾರ್ಖಂಡ್‌ನ ಪಶ್ಚಿಮ ಸಿಂಗಭೂಮ್ ಜಿಲ್ಲೆಯಲ್ಲಿ ನಡೆದಿದೆ. ಖುಂತ್‌ಪಾನಿ ಕಸ್ತೂರಬಾ ಗಾಂಧಿ ವಸತಿ ನಿಲಯದ 11ನೇ ತರಗತಿ ವಿದ್ಯಾರ್ಥಿನಿಯರು, ಚೈಬಾಸಾದಲ್ಲಿರುವ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಡಿಸಿ ಅನನ್ಯಾ ಮಿತ್ತಲ್‌ ಅವರಿಗೆ ದೂರು ಸಲ್ಲಿಸಿದರು. ಡಿಸಿ ನೀಡಿದ ನಿರ್ದೇಶನದ ಮೇರೆಗೆ ಜಿಲ್ಲಾ ಶಿಕ್ಷಣಾಧಿಕಾರಿ (ಡಿಎಸ್‌ಇ) ಅಭಯಕುಮಾರ್‌

17 ಕಿ.ಮೀ ನಡೆದು ವಾರ್ಡನ್‌ ವಿರುದ್ಧ ದೂರು ನೀಡಿದ ವಿದ್ಯಾರ್ಥಿನಿಯರು Read More »

ರಾಷ್ಟ್ರೀಯ ನ್ಯೂಸ್

ಕುಂದಾಪುರ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ 20 ಲಕ್ಷ ರೂ. ಚಿನ್ನಾಭರಣ ಕಳವು

(ನ್ಯೂಸ್ ಕಡಬ)newskadab.com  ಕುಂದಾಪುರ, ಜ.18. ಗೋವಾದ ಪಣಜಿಯಿಂದ ಸಾಸ್ತಾನದ ಐರೋಡಿಗೆ ಬಸ್ಸಿನಲ್ಲಿ ತೆರಳುತ್ತಿದ್ದ ಮಹಿಳೆಯೊಬ್ಬರು 20 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳೆದುಕೊಂಡಿದ್ದು, ವಸ್ತುಗಳನ್ನು ಹಿಂದಿ ಮಾತನಾಡುವ ತಂಡ ಕದ್ದೊಯ್ದಿರುವ ಶಂಕೆ ವ್ಯಕ್ತವಾಗಿದೆ. ಐರೋಡಿ ನಿವಾಸಿ ಸಂಗೀತಾ ಭಟ್ ಚಿನ್ನಾಭರಣ ಕಳೆದುಕೊಂಡ ಮಹಿಳೆಯಾಗಿದ್ದು, ಆಕೆಯು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪಣಜಿಯಿಂದ ಪುತ್ತೂರಿಗೆ ತೆರಳುತ್ತಿದ್ದರು. ಸಂಗೀತಾ ತನ್ನ ಬಟ್ಟೆ ಮತ್ತು ಚಿನ್ನಾಭರಣಗಳಿರುವ ಚಿಕ್ಕ ಕಾಟನ್ ಬ್ಯಾಗ್ ಅನ್ನು ಟ್ರಾಲಿ ಬ್ಯಾಗ್‌ನಲ್ಲಿ ಇಟ್ಟುಕೊಂಡು ಅದನ್ನು ಲಾಕ್ ಮಾಡಿ ತಾನು ಕುಳಿತಿದ್ದ ಸೀಟಿನ

ಕುಂದಾಪುರ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ 20 ಲಕ್ಷ ರೂ. ಚಿನ್ನಾಭರಣ ಕಳವು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top