crime

ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ನಿಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ. 21. ಯಕ್ಷಗಾನ ಪ್ರದರ್ಶನಕ್ಕೆಂದು ಬೆಂಗಳೂರಿಗೆ ತೆರಳಿದ್ದ ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ (67) ಅವರು ಇಂದು ಮುಂಜಾನೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹಿರಿಯ ಕಲಾವಿದ ಚಂದ್ರಶೇಖರ ಧರ್ಮಸ್ಥಳ ಅವರ ನೇತೃತ್ವದ ತಂಡದಲ್ಲಿ ಇಂದಿನಿಂದ ನಡೆಯಬೇಕಿದ್ದ ಯಕ್ಷಗಾನ ಕಾರ್ಯಕ್ರಮದಲ್ಲಿ ಭಾಗವಹಿಸಲು ಭಾನುವಾರ ಬೆಳಗ್ಗೆ ಬೆಂಗಳೂರಿನ ಆರ್ ಕೆ ಭಟ್ಟರ ಮನೆಗೆ ತೆರಳಿದ್ದರು. ಇಂದು ಬೆಳಗ್ಗೆ ಅವರಿಗೆ ಹೃದಯ ಸ್ತಂಭನವಾದಾಗ ಜತೆಗಿದ್ದ ಕಲಾವಿದರು ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. […]

ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಸ್ಕೂಟರ್- ಲಾರಿ ಡಿಕ್ಕಿ: ಯುವತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 21. ಸ್ಕೂಟರ್‌ಗೆ ಟಿಪ್ಪರ್ ಲಾರಿ ಡಿಕ್ಕಿಯಾದ ಪರಿಣಾಮ ಯುವತಿಯೋರ್ವಳು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಂತೂರು ವೃತ್ತದ ಬಳಿಯ ಶಾಂತಿ ಕಿರಣ ಎದುರಿನಲ್ಲಿ ಭಾನುವಾರ ಸಂಜೆ ಸಂಭವಿಸಿದೆ. ಮೃತಪಟ್ಟ ಯುವತಿಯನ್ನು ಕೋಡಿಕಲ್ ನಿವಾಸಿ ಕ್ರಿಸ್ತಿ ಕ್ರಾಸ್ತಾ (27) ಎಂದು ಗುರುತಿಸಲಾಗಿದೆ. ಕ್ರಿಸ್ತಿ ಕ್ರಾಸ್ತಾ ಅವರು ಕೋಡಿಕಲ್ ವೆಲಂಕಣಿ ವಾರ್ಡಿನ ಸಿರಿಲ್ ಕ್ರಾಸ್ತಾ ಮತ್ತು ಸ್ಯಾಂಡ್ರಾ ಕ್ರಾಸ್ತಾ ದಂಪತಿಯ ಪುತ್ರಿ. ಕ್ರಿಸ್ತಿಯವರು ನಂತೂರು ವೃತ್ತದಿಂದ ಪಂಪೈಲ್ ಕಡೆಗೆ ಸ್ಕೂಟರಿನಲ್ಲಿ ತೆರಳುತ್ತಿದ್ದಾಗ ಹಿಂದಿನಿಂದ

ಸ್ಕೂಟರ್- ಲಾರಿ ಡಿಕ್ಕಿ: ಯುವತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಟ್ರಕ್- ಬಸ್ ಡಿಕ್ಕಿ: ಓರ್ವ ಪ್ರಯಾಣಿಕ ಮೃತ್ಯು..!

(ನ್ಯೂಸ್ ಕಡಬ) newskadaba.com ಮುಂಬೈ, ಅ. 19. ಎಕ್ಸ್‌ ಪ್ರೆಸ್‌ ವೇಯಲ್ಲಿ ಇಂದು ಮುಂಜಾನೆ ಸರ್ಕಾರಿ ಬಸ್ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಪ್ರಯಾಣಿಕ ಮೃತಪಟ್ಟಿದ್ದಾರೆ ಮತ್ತು ಕನಿಷ್ಠ ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪುಣೆ ಜೆಲ್ಲೆಯ ಲೋನಾವಾಲಾ ಬಳಿ ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಮೃತಪಟ್ಟವರನ್ನುವಿಶ್ವನಾಥ ಭಗವಾನ್ ವಾಘಮಾರೆ ಎಂದು ಗುರುತಿಸಲಾಗಿದೆ. ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಟ್ರಕ್- ಬಸ್ ಡಿಕ್ಕಿ: ಓರ್ವ ಪ್ರಯಾಣಿಕ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಕಾಲೇಜುಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಿದ್ದ ಆರೋಪಿ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 19. ಕೆಲವು ದಿನಗಳ ಹಿಂದೆ ಮೂರು ಇಂಜಿನಿಯರಿಂಗ್ ಕಾಲೇಜುಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಆರೋಪಿಯೊಬ್ಬನನ್ನು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ. ಆರೋಪಿಯನ್ನು ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಮೂಲದ ದೀಪಾಂಜನ್ ಮಿತ್ರಾ (48) ಎಂದು ಗುರುತಿಸಲಾಗಿದೆ. ಅ.4ರಂದು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಹೈಡ್ರೋಜನ್ ಆಧಾರಿತ ಸುಧಾರಿಕ ಸ್ಫೋಟಕ ಸಾಧನ (ಐಇಡಿ) ಇರಿಸಿರುವುದಾಗಿ ಬೆದರಿಕೆ ಇ-ಮೇಲ್ ಬಂದಿತ್ತು. ಈ ಸಂಬಂಧ ವಿಶ್ವೇಶ್ವರಪುರ ಮತ್ತು ಹನುಮಂತನಗರ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡು

ಕಾಲೇಜುಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಿದ್ದ ಆರೋಪಿ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಗಾಂಜಾ ಮಾರಾಟ ಮಾಡಲು ಯತ್ನ: ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಅ.18. ಹೊಸಬೆಟ್ಟು ಬಳಿಯ ಬೀಚ್ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸಿದ ಯುವಕನನ್ನು ಸುರತ್ಕಲ್ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಿಹಾರ ಮೂಲದ ಸೋನಿ (27) ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಯಿಂದ 30 ಸಾವಿರ ಮೌಲ್ಯದ 1.5 ಕೆಜಿ ಗಾಂಜಾ, ೧೫ ಸಾವಿರ ಮೌಲ್ಯದ ಮೊಬೈಲ್ ಫೋನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಆರೋಪಿಯ ವಿರುದ್ಧ ಕಲಂ 8 20(ಬಿ) (6), ಎನ್ ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಗಾಂಜಾ ಮಾರಾಟ ಮಾಡಲು ಯತ್ನ: ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್ ನಿಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಅ.18. ಅಪಘಾತವೊಂದರಲ್ಲಿ ತೀವ್ರವಾಗಿ ಗಾಯಗೊಂಡಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್(49) ಅವರು ಚಿಕಿತ್ಸೆಗೆ ಸ್ಪಂದಿಸದೆ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ. ನೇರಳಕಟ್ಟೆ ಪೆರುವಾಜೆ ಬೀರಕೋಡಿ ನಿವಾಸಿ ಭಾಸ್ಕರ್ ಅವರು ಅ.17 ರಂದು ಮಂಗಳೂರಿನಲ್ಲಿ ಬೈಕ್ ಚಲಾಯಿಸುತ್ತಿದ್ದ ವೇಳೆ ನ್ಯಾನೋ ಕಾರು ನಡುವೆ ಅಪಘಾತ ನಡೆದಿತ್ತು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಇಂದು ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.  

ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಲುವೆ ನೀರಲ್ಲಿ ಕೊಚ್ಚಿ ಹೋಗಿ ಬಾಲಕ ಮೃತ್ಯು..!

(ನ್ಯೂಸ್ ಕಡಬ) newskadaba.com  ಹಾವೇರಿ, ಅ. 17. ಭಾರೀ ಮಳೆಯ ವೇಳೆ ಬಾಲಕನೋರ್ವ ಕಾಲುವೆಗೆ ಬಿದ್ದು ಕೊಚ್ಚಿಕೊಂಡು ಹೋಗಿ ಮೃತಪಟ್ಟ ಘಟನೆ ನಗರದ ಹಳೇ ಪಿ.ಬಿ.ರಸ್ತೆಗೆ ಹೊಂದಿಕೊಂಡಿರುವ ಶಿವಾಜಿ ನಗರದ 3ನೇಕ್ರಾಸ್ ನಲ್ಲಿ ಸಂಭವಿಸಿದೆ. ಮೃತನನ್ನು ನಿವೇದನ್ ಗುಡಗೇರಿ(10) ಎಂದು ಗುರುತಿಸಲಾಗಿದೆ. ನಗರದಲ್ಲಿ ಬುಧವಾರ ರಾತ್ರಿಯಿಂದ ಇಂದು ನಸುಕಿನ ವರೆಗೆ ಭಾರೀ ಮಳೆಯಾಗಿದೆ. ಮಳೆಯಬ್ಬರಕ್ಕೆ ಕಾಲುವೆ ಹಾಗೂ ರಸ್ತೆಯಲ್ಲಿ ನೀರು ಹರಿದಿದೆ. ರಸ್ತೆ ಪಕ್ಕದಲ್ಲಿ ಆಟವಾಡುತ್ತಿದ್ದ ಬಾಲಕ ಆಕಸ್ಮಿಕವಾಗಿ ಕಾಲುವೆಗೆ ಬಿದ್ದು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದ. ಸುಮಾರು

ಕಾಲುವೆ ನೀರಲ್ಲಿ ಕೊಚ್ಚಿ ಹೋಗಿ ಬಾಲಕ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉದ್ಯಮಿ ರೆಂಜಾಳ ಲಕ್ಷ್ಮಣ ನಾರಾಯಣ ನಾಯಕ್ ನಿಧನ

(ನ್ಯೂಸ್ ಕಡಬ) newskadaba.com  ಉಡುಪಿ, ಅ. 17. ರೆಂಜಾಳ ನಾಯಕ ಮನೆತನದ ಉದ್ಯಮಿ ರೆಂಜಾಳ ಲಕ್ಷ್ಮಣ ನಾರಾಯಣ ನಾಯಕ್(76) ಅವರು ಅಕ್ಟೋಬರ್ 16 ರಂದು ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ರೆಂಜಾಳ ಲಕ್ಷ್ಮಣ ಅವರು ಗ್ರಾಮದಲ್ಲಿ ಆಸ್ಪತ್ರೆಯ ಕೊರತೆಯಿದ್ದ ಸಮಯದಲ್ಲಿ, ಅವರು ಹಿಂದುಳಿದವರಿಗೆ, ವಿಶೇಷವಾಗಿ ಕಾಮಾಲೆ ಮತ್ತು ಹಾವು ಕಡಿತದಂತಹ ಕಾಯಿಲೆಗಳಿಗೆ ಉಚಿತ ಗಿಡಮೂಲಿಕೆ ಪರಿಹಾರಗಳನ್ನು ಒದಗಿಸಿದರು. ತಮ್ಮ ನೆರೆಹೊರೆಯವರ ಕಲ್ಯಾಣಕ್ಕಾಗಿ ಅವರು ಶ್ರಮಿಸಿದ್ದಾರೆ. ರೆಂಜಾಳ ಲಕ್ಷ್ಮಣ ಅವರು ಗ್ರಾಮದಲ್ಲಿ ಶೈಕ್ಷಣಿಕ ಸೌಲಭ್ಯಗಳ ಕೊರತೆಯನ್ನು ಅರಿತು ಸರ್ಕಾರಿ ಅಂಗನವಾಡಿ ನಿರ್ಮಿಸಲು

ಉದ್ಯಮಿ ರೆಂಜಾಳ ಲಕ್ಷ್ಮಣ ನಾರಾಯಣ ನಾಯಕ್ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಬೆಳ್ಳಾರೆ: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣ- ಆರೋಪಿ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಅ. 17. ಅತ್ತಿಗೆಯ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಬೆಳ್ಳಾರೆ ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಕುರಿತು ವರದಿಯಾಗಿದೆ. ಬಂಧಿತ ಆರೋಪಿಯನ್ನು ಶಂಕರ ನಾಯಕ್ ಎಂದು ಗುರುತಿಸಲಾಗಿದೆ. ಕಳೆದ ವಾರ ಕೊಡಿಯಾಲ ಗ್ರಾಮದ ಕಲ್ಲರ್ಪೆ ಎಂಬಲ್ಲಿ ಅತ್ತಿಗೆ ಮೇಲೆ ಆರೋಪಿ ಶಂಕರ ನಾಯಕ್‌ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ್ದ ಘಟನೆ ನಡೆದಿತ್ತು. ಘಟನೆಯಿಂದ ಗಂಭೀರ ಗಾಯಗೊಂಡಿದ್ದ ಮಹಿಳೆ ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಕೊಲೆ ಮಾಡುವ ಉದ್ದೇಶದಿಂದ ಈ ಕೃತ್ಯ

ಬೆಳ್ಳಾರೆ: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣ- ಆರೋಪಿ ಪೊಲೀಸ್ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ ..!

(ನ್ಯೂಸ್ ಕಡಬ) newskadaba.com  ಕಾಸರಗೋಡು, ಅ. 17. ಎರಡು ವಾರಗಳ ಹಿಂದೆಯಷ್ಟೇ ಕೊಲ್ಲಿ ರಾಷ್ಟ್ರದಿಂದ ಊರಿಗೆ ಮರಳಿದ್ದ ಯುವಕನೊಬ್ಬನ ಮೃತದೇಹ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತಪಟ್ಟ ಯುವಕನನ್ನು ತೂಮಿನಾಡು ಕುಚ್ಚಿಕ್ಕಾಡ್‌ನ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುವ ಕೆ.ಎಚ್. ಮುಹಮ್ಮದ್ ಎಂಬವರ ಪುತ್ರ ಮುಹಮ್ಮದ್ ಅನ್ಸಾರ್ (32) ಎಂದು ಗುರುತಿಸಲಾಗಿದೆ. ಕಳೆದ ರಾತ್ರಿ 11 ರ ಸುಮಾರಿಗೆ ಕೊಠಡಿಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಮುಹಮ್ಮದ್ ಅನ್ಸಾರ್ ಪತ್ತೆಯಾಗಿದ್ದರೆನ್ನಲಾಗಿದ್ದು, ಕೂಡಲೇ ಆಸ್ಪತ್ರೆಗೆ ತಲುಪಿಸಿದರೂ ಜೀವವನ್ನು ರಕ್ಷಿಸಲಾಗಲಿಲ್ಲ ಎಂದು ತಿಳಿದು ಬಂದಿದೆ.

ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ ..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top