ಆಳ್ವಾಸ್ ವಿದ್ಯಾರ್ಥಿನಿ ಕಾವ್ಯ ಆತ್ಮಹತ್ಯೆಯ ಸುತ್ತ ಸಂಶಯದ ಹುತ್ತ ► ಕಾವ್ಯಳನ್ನು ಕೊಲೆ ಮಾಡಲಾಗಿದೆಯೆಂದು ಆರೋಪಿಸಿದ ಪೋಷಕರು
(ನ್ಯೂಸ್ ಕಡಬ) newskadaba.com ಮೂಡಬಿದಿರೆ, ಜು.27. ನ್ಯಾಶನಲ್ ಲೆವಲ್ ಬ್ಯಾಡ್ಮಿಂಟನ್ ಚಾಂಪಿಯನ್ ವಿದ್ಯಾರ್ಥಿನಿಯೊಬ್ಬಳು ವಾರದ ಹಿಂದೆ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಮೃತಪಟ್ಟಿರುವುದು ಹೊಸ ತಿರುವನ್ನು ಪಡೆದುಕೊಂಡಿದೆ. ಇದು ಆತ್ಮಹತ್ಯೆಯಲ್ಲ ಇದು ಒಂದು ಕೊಲೆ ಎಂದು ವಿದ್ಯಾರ್ಥಿನಿಯ ಪೋಷಕರು ಆರೋಪಿಸಿದ್ದಾರೆ. ಮೂಡಬಿದಿರೆಯ ಪ್ರತಿಷ್ಠಿತ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿನಿಯಾಗಿದ್ದ ಕಾವ್ಯ(15) ಜುಲೈ 20ರಂದು ಹಾಸ್ಟೆಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಗಳೆ ಎಂದು ಶಾಲೆಯಿಂದ ಮನೆಯವರಿಗೆ ತಿಳಿಸಲಾಗಿತ್ತು. ಆದರೆ ಹೆತ್ತವರು ಅಲ್ಲಿಗೆ ತೆರಳುವಷ್ಟರಲ್ಲಿ ವಿದ್ಯಾರ್ಥಿನಿಯ ಶವವನ್ನು ಆಳ್ವಾಸ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿತ್ತು. ಇದೀಗ ಹೆತ್ತವರು ಕಾವ್ಯ […]









