crime

ವಾರಂಟ್ ಆರೋಪಿ ಪರಾರಿ: ಆರೋಪಿಯ ಮಾಹಿತಿ ಕೋರಿ ಪೊಲೀಸರ ಮನವಿ

(ನ್ಯೂಸ್ ಕಡಬ)newskadaba.com  ಸುಳ್ಯ, ಅ. 07. ಪ್ರಕರಣವೊಂದರ ವಾರಂಟ್ ಆರೋಪಿಯೋರ್ವ ವೈದ್ಯಕೀಯ ತಪಾಸಣೆ ಸಂದರ್ಭದಲ್ಲಿ ಆಸ್ಪತ್ರೆಯಿಂದಲೇ ಪರಾರಿಯಾಗಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪರಾರಿಯಾಗಿರುವ ಆರೋಪಿ ಎಲ್ಲಾದರೂ ಕಂಡುಬಂದಲ್ಲಿ ಪೊಲೀಸರಿಗೆ ತಕ್ಷಣ ಮಾಹಿತಿ ನೀಡುವಂತೆ ಪೊಲೀಸರು ಫೋಟೋ ಸಹಿತ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಸುಳ್ಯದ ಕಲ್ಲುಗುಂಡಿ ಎಂಬಲ್ಲಿ ಕೆಲವು ವರ್ಷಗಳ ಹಿಂದೆ ನಡೆದಿದ್ದ ಕಳ್ಳತನ ಪ್ರಕರಣದ ಆರೋಪಿಯಾಗಿದ್ದ ತಮಿಳುನಾಡಿನ ಕೋಳಿ ಕರಣ್ ಎಂಬಾತ ಕೋರ್ಟ್ ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಆತನನ್ನು ಅ. 5ರಂದು ಪೊಲೀಸರು ಬಂಧಿಸಿ ಸುಳ್ಯದ ಕೋರ್ಟ್ ಗೆ […]

ವಾರಂಟ್ ಆರೋಪಿ ಪರಾರಿ: ಆರೋಪಿಯ ಮಾಹಿತಿ ಕೋರಿ ಪೊಲೀಸರ ಮನವಿ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ದ್ವಿತೀಯ ಬಿಎಸ್ಸಿ ಪದವಿ ವಿದ್ಯಾರ್ಥಿ ಮನೋಜ್ ನಾಪತ್ತೆ- ಪೋಲಿಸರಿಗೆ ದೂರು

(ನ್ಯೂಸ್ ಕಡಬ)newskadaba.com ಪುತ್ತೂರು, ಅ. 07. ಸ್ನೇಹಿತನ ಮನೆಗೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೊರಟ ಯುವಕ ಕಾಣೆಯಾಗಿರುವುದಾಗಿ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರು ನೆಹರು ನಗರದ ಗಣೇಶ್ ಬಾಗ್ ನ ಲಕ್ಷ್ಮೀ ಪ್ರಸಾದ್ ಕಂಪೌಂಡ್ ನಿವಾಸಿ ದಿ.ಕೇಶವ ಮೂರ್ತಿ ಎಂಬುವರ ಪುತ್ರ 20 ವರ್ಷ ಪ್ರಾಯದ ಮನೋಜ್ ಕೆ. ಕಾಣೆಯಾದ ಯುವಕನಾಗಿದ್ದಾನೆ. ಪುತ್ತೂರಿನ ಸಂತ ಫಲೋಮಿನಾ ಕಾಲೇಜಿನಲ್ಲಿ 2ನೆ ವರ್ಷದ ಬಿಎಸ್ಸಿ ಪದವಿಗೆ ಕಲಿಯುತ್ತಿದ್ದ ಮನೋಜ್ ಅ.5ರಂದು ಬೆಳಿಗ್ಗೆ ಸ್ನೇಹಿತನ ಮನೆಗೆ ಹೋಗಿ

ಪುತ್ತೂರು: ದ್ವಿತೀಯ ಬಿಎಸ್ಸಿ ಪದವಿ ವಿದ್ಯಾರ್ಥಿ ಮನೋಜ್ ನಾಪತ್ತೆ- ಪೋಲಿಸರಿಗೆ ದೂರು Read More »

ಕರಾವಳಿ, ಕ್ರೈಮ್ ನ್ಯೂಸ್

ಪೊಲೀಸರ ಮೇಲೆ ಹಲ್ಲೆಗೆ ಯತ್ನ: ರೌಡಿ ಶೀಟರ್ ಕಾಲಿಗೆ ಗುಂಡೇಟು

(ನ್ಯೂಸ್ ಕಡಬ)newskadaba.com ಶಿವಮೊಗ್ಗ, ಅ. 07. ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ರೌಡಿ ಶೀಟರೊಬ್ಬನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಶಿವಮೊಗ್ಗ ನಗರದ ತುಂಗಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ನಡೆದಿದೆ. ಆರೋಪಿಯನ್ನು ಹಬೀಬುಲ್ಲಾ ಅಲಿಯಾಸ್ ಅಮ್ಮು ಎಂದು ಗುರುತಿಸಲಾಗಿದೆ. ಪ್ರಕರಣವೊಂದಕ್ಕೆ ಸಂಬಂಧಿಸಿ ಶಿವಮೊಗ್ಗ ನಗರದ ಗರುಡ ಲೇಔಟ್ ಬಳಿ ಬಂಧಿಸಲು ಹೋದಾಗ ಆರೋಪಿಯು ಜಯಪ್ಪ ಎನ್ನುವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾನೆ ಎನ್ನಲಾಗಿದೆ. ಈ ವೇಳೆ ಆತ್ಮರಕ್ಷಣೆಗಾಗಿ ತುಂಗಾ

ಪೊಲೀಸರ ಮೇಲೆ ಹಲ್ಲೆಗೆ ಯತ್ನ: ರೌಡಿ ಶೀಟರ್ ಕಾಲಿಗೆ ಗುಂಡೇಟು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಕ್ರಮ ಪಾಕ್ ಕುಟುಂಬಗಳಿಗೆ ಸಹಾಯ ಮಾಡಿದ ಪ್ರಮುಖ ಆರೋಪಿ ಬಂಧನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಅ. 07. ನಗರದ ಪ್ರಜೆಗಳ ಅಕ್ರಮ ತಂಗಿದ್ದ ಪ್ರಕರಣದಲ್ಲಿ ಜಿಗಣಿ ಪೊಲೀಸರು ಪ್ರಮುಖ ಆರೋಪಿಯನ್ನು ಶನಿವಾರ ಬಂಧಿಸಿದ್ದಾರೆ. ಆರೋಪಿಯನ್ನು ಮುಂಬೈ ಮೂಲದ ಪರ್ವೇಜ್ (57) ಎಂದು ಗುರುತಿಸಲಾಗಿದೆ. ಎರಡು ಕುಟುಂಬಗಳು ಪರ್ವೇಜ್‌ನ ವಿವರಗಳನ್ನು ಬಹಿರಂಗಪಡಿಸಿದ ನಂತರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಕಲಿ ಆಧಾರ್ ಕಾರ್ಡ್‌ಗಳು, ಭಾರತೀಯ ಪಾಸ್‌ಪೋರ್ಟ್‌ಗಳು, ಪ್ಯಾನ್ ಕಾರ್ಡ್‌ಗಳು ಮತ್ತು ಡ್ರೈವಿಂಗ್ ಲೈಸೆನ್ಸ್‌ ಗಳನ್ನು ಪಡೆಯಲು ಪಾಕಿಸ್ತಾನಿ ಪ್ರಜೆಗಳಿಗೆ ಸಹಾಯ ಮಾಡಿದ ಆರೋಪ ಭಾರತೀಯ ಪರ್ವೇಜ್ ಮೇಲಿದೆ.  

ಅಕ್ರಮ ಪಾಕ್ ಕುಟುಂಬಗಳಿಗೆ ಸಹಾಯ ಮಾಡಿದ ಪ್ರಮುಖ ಆರೋಪಿ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಮಾದಕ ವಸ್ತು ಸಾಗಾಟ: ಇಬ್ಬರು ಅರೆಸ್ಟ್..!

(ನ್ಯೂಸ್ ಕಡಬ)newskadaba.com ಮಂಗಳೂರು, ಅ. 07. ಮಾದಕ ವಸ್ತು ಎಲ್‌ಎಸ್‌ಡಿ ಮಾದಕ ವಸ್ತುಗಳ ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದ ಕೇರಳ ಮೂಲದ ಇಬ್ಬರನ್ನು ಮೂಲ್ಕಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಪ್ರಸ್ತುತ ಹಳೆಯಂಗಡಿ ಬಳಿಯ ಕೊಪ್ಪಳ ಸಮೀಪದಲ್ಲಿ ವಾಸ್ತವ್ಯವಿದ್ದ ಅದಿಲ್ ಮತ್ತು ಮಹಮ್ಮದ್ ನಿಹಾಲ್ ಎಂದು ಗುರುತಿಸಲಾಗಿದೆ. ಬಂಧಿತರು ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತು ಸಾಗಾಟ ಹಾಗೂ ಮಾರಾಟ ಮಾಡುತ್ತಿದ್ದರು. ಬಂಧಿತ ಆರೋಪಿಗಳಿಂದ ಕಾರು ಹಾಗೂ ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.  

ಮಾದಕ ವಸ್ತು ಸಾಗಾಟ: ಇಬ್ಬರು ಅರೆಸ್ಟ್..! Read More »

ಕರಾವಳಿ

ವಿಪರೀತ ಜ್ವರದಿಂದ ಯುವಕ ಮೃತ್ಯು..!

(ನ್ಯೂಸ್ ಕಡಬ)newskadaba.com ವಿಟ್ಲ, ಅ. 05. ಮಂಗಿಲಪದವು ಬನಾರಿ ನಿವಾಸಿ ಯುವಕನೊಬ್ಬ ವಿಪರೀತ ಜ್ವರದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಮೃತ ಯುವಕನನ್ನು ಅಬೂಬಕ್ಕರ್ ಸಿದ್ದೀಕ್ (30) ಎಂದು ಗುರುತಿಸಲಾಗಿದೆ. ಎರಡು, ಮೂರು ದಿನಗಳ ವಿಪರೀತ ಜ್ವರದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ವಿಟ್ಲ ಕೇಂದ್ರ ಜುಮಾ ಮಸೀದಿಯ ಜಮಾಅತ್ ಗೆ ಒಳಪಟ್ಟ ಮೂಲತಃ ವಿಟ್ಲ ಸಮೀಪದ ಮೇಗಿನಪೇಟೆ ಕಾಟ್ರಸ್ ನಿವಾಸಿಯಾಗಿದ್ದು, ಪ್ರಸ್ತುತ ವಿಟ್ಲ ಸಮೀಪದ ಮಂಗಿಲಪದವು ಬಾಬಟ್ಟ ಬನಾರಿ ಎಂಬಲ್ಲಿ ನೆಲೆಸಿದ್ದರು

ವಿಪರೀತ ಜ್ವರದಿಂದ ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಸೈನಿಕನೋರ್ವನ ನಗದು ಹಣದ ಬ್ಯಾಗ ಕಳ್ಳತನ: ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ)newskadaba.com  ಬಂಟ್ವಾಳ, ಅ. 05. ಬಿಸಿರೋಡಿನ ಎಸ್.ಬಿ.ಐ.ಬ್ಯಾಂಕ್ ನಿಂದ ಹಣ ಡ್ರಾ ಮಾಡಿದ ಗ್ರಾಹಕ ಮಾಜಿ ಸೈನಿಕನೋರ್ವನ ನಗದು ಹಣದ ಬ್ಯಾಗನ್ನು ಕಳವು ಮಾಡಿದ ಆರೋಪಿಯನ್ನು ಬಂಟ್ವಾಳ ಪೋಲೀಸರ ತಂಡ ಬಂಧಿಸಿದೆ. ಆರೋಪಿಯನ್ನು ಬೆಳ್ತಂಗಡಿ ನಿವಾಸಿ ಮಹಮ್ಮದ್ ಫಾರೂಕ್ (32) ಎಂದು ಗುರುತಿಸಲಾಗಿದೆ. ಆರೋಪಿಯ ಪತ್ತೆಗಾಗಿ ರಚಿಸಲಾಗಿದ್ದ ಬಂಟ್ವಾಳ ಉಪ-ವಿಭಾಗದ ವಿಶೇಷ ತನಿಖಾ ತಂಡವು, ಆರೋಪಿಯನ್ನು ವಶಕ್ಕೆ ಪಡೆದು, ಆರೋಪಿಯಿಂದ 80,000 ರೂ. ಹಣವನ್ನು ವಶಕ್ಕೆ ಪಡೆದಿದ್ದಾರೆ.  

ಸೈನಿಕನೋರ್ವನ ನಗದು ಹಣದ ಬ್ಯಾಗ ಕಳ್ಳತನ: ಆರೋಪಿ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ವಿದ್ಯುತ್ ಆಘಾತಕ್ಕೆ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ, ಅ. 05.  ವಿದ್ಯುತ್ ಆಘಾತಕ್ಕೊಳಗಾಗಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕೊಯಿಲ ಗ್ರಾಮದ ವಳಕಡಮದ ಕೆರಂತೇಳು ಎಂಬಲ್ಲಿ ಅ.4ರಂದು ನಡೆದಿದೆ. ಮೃತಪಟ್ಟವರನ್ನು ಬಾಬು (52) ಎಂದು ಗುರುತಿಸಲಾಗಿದೆ. ಮನೆಯಲ್ಲಿ ವಿದ್ಯುತ್ ಸ್ವಿಚ್ ಬೋರ್ಡ್‍ಗೆ ಕೈ ಹಾಕಿದಾಗ ಅದರಲ್ಲಿ ವಿದ್ಯುತ್ ಪ್ರವಹಿಸಿ, ಇವರು ವಿದ್ಯುತ್ ಆಘಾತಕ್ಕೊಳಗಾದರು. ತಕ್ಷಣವೇ ಇವರ ಸಂಬಂಧಿಕರು ಅವರನ್ನು ಉಪ್ಪಿನಂಗಡಿಯ ಸಮುದಾಯ ಆಸ್ಪತ್ರೆಗೆ ಕರೆ ತಂದಿದ್ದು, ಇಲ್ಲಿನ ಸಿಬ್ಬಂದಿ ಅವರನ್ನು ತಕ್ಷಣವೇ ಪುತ್ತೂರು ಆಸ್ಪತ್ರೆಗೆ ಸಾಗಿಸಿದ್ದು, ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು

ವಿದ್ಯುತ್ ಆಘಾತಕ್ಕೆ ವ್ಯಕ್ತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಿಸದೆ ಮೃತ್ಯು..!

(ನ್ಯೂಸ್ ಕಡಬ)newskadaba.com ಬಂಟ್ವಾಳ, ಅ. 04. ದ್ವಿಚಕ್ರಗಳೆರಡರ ಮಧ್ಯೆ ಮೆಲ್ಕಾರ್ – ಮುಡಿಪು ರಾಜ್ಯ ಹೆದ್ದಾರಿಯ ಸಜೀಪ ಮುನ್ನೂರು ಗ್ರಾಮದ ಮಾರ್ನಬೈಲು ಎಂಬಲ್ಲಿ ಅ. 2ರಂದು ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸ್ಕೂಟರ್ ಸವಾರ ಚಿಕಿತ್ಸೆ ಫಲಿಸದೆ ಅ. 3ರಂದು ಮೃತಪಟ್ಟಿದ್ದಾರೆ. ಮೃತನನ್ನು ಬರಿಮಾರು ನಿವಾಸಿ ಸರ್ಪಾಝ್ (33) ಎಂದು ಗುರುತಿಸಲಾಗಿದೆ. ಸಹ ಸವಾರಿಣಿ ವಿದ್ಯಾರ್ಥಿ ಜಾಸ್ಮೀನ್ (18) ಗಾಯಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸರ್ಪಾಝ್ ತನ್ನ ತಂಗಿಯನ್ನು ದೇರಳಕಟ್ಟೆ ಕಾಲೇಜಿಗೆ ಸ್ಕೂಟರ್ ನಲ್ಲಿ

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಿಸದೆ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ದನಗಳ ಅಕ್ರಮ ಸಾಗಾಟ: ನಾಲ್ವರ ಬಂಧನ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಅ.04.  ತಾಲೂಕಿನ ಮಲವಂತಿಗೆಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಗೋ ಸಾಗಾಟವನ್ನು ಸ್ಥಳೀಯರ ಸಹಕಾರದೊಂದಿಗೆ ಪತ್ತೆ ಹಚ್ಚಿರುವ ಬೆಳ್ತಂಗಡಿ ಪೊಲೀಸರು ನಾಲ್ವರು ಆರೋಪಿಗಳನ್ನು ಗುರುವಾರ ರಾತ್ರಿ ಬಂಧಿಸಿದ್ದಾರೆ. ಎರಡು ಪಿಕಪ್ ವಾಹನಗಳು ಹಾಗೂ ಐದು ದನಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಚಿಬಿದ್ರೆ ಗ್ರಾಮದ ಪೆರಿಯಡ್ಕ ನಿವಾಸಿ ಯತೀಂದ್ರ(24), ತೋಟತ್ತಾಡಿ ಗ್ರಾಮದ ಬೆಂದ್ರಾಳ ನಿವಾಸಿ ಅರವಿಂದ(30), ಚಾರ್ಮಾಡಿ ಗ್ರಾಮದ ನಿವಾಸಿ ಉಸ್ಮಾನ್ ( 36) ಹಾಗೂ ಚಿಬಿದ್ರೆ ಗ್ರಾಮದ ನಿವಾಸಿ ಆರಿಫ್ (27) ಎಂದು ಗುರುತಿಸಲಾಗಿದೆ. ಮಲವಂತಿಗೆ

ದನಗಳ ಅಕ್ರಮ ಸಾಗಾಟ: ನಾಲ್ವರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top