crime

ಖಾಸಗಿ ಆಯುರ್ವೇದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 23. ದೊಡ್ಡನಗುಡ್ಡೆ ಬಬ್ಬುಸ್ವಾಮಿ ದೇವಸ್ಥಾನದ ಬಳಿ ಇರುವ ಖಾಸಗಿ ಆಯುರ್ವೇದ ಆಸ್ಪತ್ರೆಯಲ್ಲಿ ಇಂದು ಬೆಂಕಿ ಕಾಣಿಸಿಕೊಂಡಿದ್ದು, ಸದ್ಯ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ. ದಿನನಿತ್ಯದ ಕೆಲಸಕ್ಕಾಗಿ ಪ್ರತಿದಿನ ಬೆಳಗ್ಗೆ ಬರುವ ಕುಸುಮಾ ಬೆಂಕಿಯನ್ನು ಪತ್ತೆ ಹಚ್ಚಿದರು. ಹೊರಗೆ ಕಾಲಿಟ್ಟಾಗ ಬೆಂಕಿ ಕಾಣಿಸಿಕೊಂಡು ತಕ್ಷಣ ವೈದ್ಯರಿಗೆ ಮಾಹಿತಿ ನೀಡಿದ್ದು, ಬಳಿಕ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿ ಸ್ಥಳಕ್ಕೆ ಧಾವಿಸಿದ್ದಾರೆ. ಘಟನೆಯ ವೇಳೆ ಮೊದಲ ಮಹಡಿಯಲ್ಲಿದ್ದ ಇಬ್ಬರು ಕಾರ್ಮಿಕರು ಕಟ್ಟಡವನ್ನು […]

ಖಾಸಗಿ ಆಯುರ್ವೇದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ Read More »

ಕರಾವಳಿ, ಕ್ರೈಮ್ ನ್ಯೂಸ್

ರೀಲ್ಸ್ ಮಾಡಲು ಕೆರೆಗೆ ಹಾರಿದ ಯುವಕ ನಾಪತ್ತೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 23. ರೀಲ್ಸ್ ಮಾಡಲು ಕೆರೆಗೆ ಹಾರಿದ ಯುವಕ ನಾಪತ್ತೆಯಾದ ಘಟನೆ ನಗರದ ಮಾರತಹಳ್ಳಿಯ ಪಣತ್ತೂರು ಕೆರೆಯಲ್ಲಿ ರವಿವಾರ ವರದಿಯಾಗಿದೆ. ಸೆ.22ರ ಸಂಜೆ 4.20ರ ಸುಮಾರಿಗೆ ಘಟನೆ ನಡೆದಿದ್ದು, ರೀಲ್ಸ್ ಮಾಡುವ ಸಲುವಾಗಿ ಮೂರು ಜನ ಸ್ನೇಹಿತರು ಪಣತ್ತೂರು ಕೆರೆಯ ಬಳಿ ಬಂದಿದ್ದು, ಒಬ್ಬನಿಗೆ ವಿಡಿಯೋ ಮಾಡಲು ಹೇಳಿ ಇಬ್ಬರು ಕೆರೆಗೆ ಹಾರಿದ್ದಾರೆ. ಈ ವೇಳೆ ಇಬ್ಬರಲ್ಲಿ ಓರ್ವ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದಾನೆ. ಘಟನೆಯ ಸ್ಥಳಕ್ಕೆ ಸ್ಥಳೀಯ ಪೊಲೀಸರು, ಅಗ್ನಿಶಾಮಕ ದಳ

ರೀಲ್ಸ್ ಮಾಡಲು ಕೆರೆಗೆ ಹಾರಿದ ಯುವಕ ನಾಪತ್ತೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸೆಕ್ಯೂರಿಟಿ ಸಿಬ್ಬಂದಿ ಹಲ್ಲೆ: ಯುವಕ ಅರೆಸ್ಟ್..!

(ನ್ಯೂಸ್ ಕಡಬ) newskadaba.com ರಾಮನಗರ, ಸೆ.21. ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಬಂಧಿ ಎಂದು ಹೇಳಿದ ಯುವಕನೋರ್ವ ಅಪಾರ್ಟ್​ಮೆಂಟ್​ ಸೆಕ್ಯೂರಿಟಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವ ಘಟನೆಯೊಂದು ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕುಂಬಳಗೋಡು ಬಳಿಯ ದೊಡ್ಡಬೆಲೆಯಲ್ಲಿರುವ ಪ್ರಾವಿಡೆಂಟ್ ಸನ್ ವರ್ತ್‌ ಅಪಾರ್ಟ್‌ಮೆಂಟ್‌ನಲ್ಲಿ ಘಟನೆ ನಡೆದಿದ್ದು, ಹಲ್ಲೆಗೊಳಗಾದ ಸಿಬ್ಬಂದಿಯನ್ನು ಪುನೀತ್ ಎಂದು ಗುರುತಿಸಲಾಗಿದೆ. ಆರೋಪಿಯನ್ನು ವರುಣ್ ಎಂದು ಗುರುತಿಸಲಾಗಿದೆ. ಘಟನೆ ಸಂಬಂಧ ಪುನೀತ್ ನೀಡಿದ ದೂರಿನ ಮೇರೆಗೆ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಎನ್‌.ಸಿ ಮಾಡಿಕೊಳ್ಳಲಾಗಿದೆ. ಅಲ್ಲದೆ,

ಸೆಕ್ಯೂರಿಟಿ ಸಿಬ್ಬಂದಿ ಹಲ್ಲೆ: ಯುವಕ ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅತ್ಯಾಚಾರ ಪ್ರಕರಣ: ಶಾಸಕ ಮುನಿರತ್ನಗೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.21. ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಬಿಜೆಪಿ ಶಾಸಕ ಮುನಿರತ್ನಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಇಂದು ಆದೇಶ ನೀಡಿದೆ. ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಮತ್ತು ಜಾತಿ ನಿಂದನೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿ ಜೈಲು ಪಾಲಾಗಿದ್ದ ಅವರು ಗುರುವಾರವಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಇದರ ಬೆನ್ನಲ್ಲೇ ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನಕ್ಕೊಳಗಾಗಿದ್ದಾರೆ. ಇಂದು ಮುನಿರತ್ನ ಅವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಹಾಜರುಪಡಿಸಲಾಗಿದ್ದು, ವಿಚಾರಣೆ ನಡೆಸಿದ ಕೋರ್ಟ್ ಮುನಿರತ್ನಗೆ

ಅತ್ಯಾಚಾರ ಪ್ರಕರಣ: ಶಾಸಕ ಮುನಿರತ್ನಗೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೊಲೆ ಪ್ರಕರಣ: ಆರೋಪಿಯನ್ನು ಗುಂಡಿಕ್ಕಿ ಬಂಧನ..!

(ನ್ಯೂಸ್ ಕಡಬ) newskadaba.com ಕಲಬುರಗಿ, ಸೆ.21. ಗ್ರಾಮ ಪಂಚಾಯತ್ ಮಾಜಿ ಸದಸ್ಯ ವಿಶ್ವನಾಥ ಜಮಾದಾರ್ ಕೊಲೆ ಪ್ರಕರಣದ ಆರೋಪಿಯನ್ನು ಇಂದು ಮುಂಜಾನೆ ಕಾಲಿಗೆ ಗುಂಡಿಕ್ಕಿ ಬಂಧಿಸಿರುವ ಘಟನೆ ಆಳಂದ ತಾಲೂಕಿನ ಮಾಡಿಯಾಳ ಗ್ರಾಮದಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಲಕ್ಷ್ಮಣ ಪೂಜಾರಿ ಹಿತ್ತಲಸೀರೂರು (45) ಎಂದು ಗುರುತಿಸಲಾಗಿದೆ. ವಿಶ್ವನಾಥ ಜಮಾದಾರ್ ಅವರನ್ನು ಕಳೆದ ಶುಕ್ರವಾರ ಆಳಂದ ತಾಲೂಕಿನ ಜಿಡಗಾ ಕ್ರಾಸ್ ಬಳಿ ಗುಂಡಿಕ್ಕಿ ಕೊಲೆ ಮಾಡಲಾಗಿತ್ತು. ಈ ಹತ್ಯೆ ಪ್ರಕರಣದ ಆರೋಪಿ ಲಕ್ಷ್ಮಣ ಪೂಜಾರಿ ಹಿತ್ತಲಸೀರೂರು ಎಂಬಾತ ಆಳಂದ

ಕೊಲೆ ಪ್ರಕರಣ: ಆರೋಪಿಯನ್ನು ಗುಂಡಿಕ್ಕಿ ಬಂಧನ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹೃದಯಘಾತದಿಂದ ಬಾಲಕ ಮೃತ್ಯು..!

(ನ್ಯೂಸ್ ಕಡಬ) newskadaba.com ಹಾಸನ, ಸೆ.21. ಎಂಟನೇ ತರಗತಿ ಓದುತ್ತಿದ್ದ ಸಚಿನ್(11)  ಹೃದಯಘಾತದಿಂದ ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಚನ್ನಾಪುರ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಬಾಲಕನನ್ನು ಸಚಿನ್ ಎಂದು ಗುರುತಿಸಲಾಗಿದೆ. ಶುಕ್ರವಾರ ಘಟನೆ ನಡೆದಿದ್ದು, ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿದೆ. ಟಿವಿ ನೋಡುತ್ತಲೇ ಕುಸಿದು ಬಿದ್ದ ಮಗನನ್ನು ಮಾತನಾಡಿಸಲು ಮನೆಯವರು ಪ್ರಯತ್ನಿಸಿದ್ದು, ಏನು ಮಾತನಾಡದೆ ಇರೋದನ್ನು ಗಮನಿಸಿ ಪೋಷಕರು ಕೂಡಲೇ ಆಸ್ಪತ್ರೆಗೆ ದಾಖಲಿಸುವ ಕೆಲಸ ಮಾಡಿದ್ದಾರೆ. ಆದರೆ ಆಲೂಕು ಸರ್ಕಾರಿ ಆಸ್ಪತ್ರೆಗೆ ಕರೆತರುವ ಮುನ್ನವೇ ಬಾಲಕ

ಹೃದಯಘಾತದಿಂದ ಬಾಲಕ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಕ್ರಮ ಮರಳು ಸಾಗಾಟ- ಲಾರಿ ವಶಕ್ಕೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ಸೆ. 20. ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ವಾಹನವನ್ನು ಗಸ್ತು ನಿರತ ಪೊಲೀಸರು ವಶಪಡಿಸಿಕೊಂಡ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕೋಟೆಕಾರ್ ಬಳಿ ನಡೆದಿದೆ.   ಕಲ್ಲಾಪು ಪಟ್ಲ ಎಂಬಲ್ಲಿ ನದಿ ಕಿನಾರೆಯಿಂದ ಮರಳನ್ನು ಕಳ್ಳತನ ಮಾಡಿ ಈಚರ್ ಲಾರಿಯಲ್ಲಿ ತುಂಬಿಸಿಕೊಂಡು ಸಾಗಾಟ ಮಾಡುತ್ತಿದ್ದ ಸಂದರ್ಭ ಕೋಟೆಕಾರ್ ನಲ್ಲಿ ಕರ್ತವ್ಯದಲ್ಲಿದ್ದ ಉಳ್ಳಾಲ ಠಾಣಾ ಹೆಡ್ ಕಾನ್ಸ್ಟೇಬಲ್ ಸುರೇಶ್ ವೈ ಮತ್ತು ಸಿಬ್ಬಂದಿ ಟಿಪ್ಪರ್ ಲಾರಿಯನ್ನು ನಿಲ್ಲಿಸಲು ಸೂಚನೆ ನೀಡಿದ್ದಾರೆ. ಈ ವೇಳೆ

ಅಕ್ರಮ ಮರಳು ಸಾಗಾಟ- ಲಾರಿ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮದ್ಯಪಾನ ಸೇವಿಸಿ ಬಸ್ ಚಲಾಯಿಸಿದ ಚಾಲಕನ ವಿರುದ್ದ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 20.  ಮದ್ಯಪಾನ ಮಾಡಿ ನಿರ್ಲಕ್ಷ್ಯತನದಿಂದ ಬಸ್ ಚಲಾಯಿಸಿದ ಚಾಲಕನ ವಿರುದ್ದ ಉಡುಪಿ ಸಂಚಾರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎನ್ನಲಾಗಿದೆ. ಉಡುಪಿ ಸಂಚಾರ ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ಸುದರ್ಶನ ದೊಡ್ಡಮನಿ ಅವರು ಗುರುವಾರ ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಬಳಿ ವಾಹನ ತಪಾಸಣೆ ಮಾಡುತ್ತಿದ್ದ ವೇಳೆ ಖಾಸಗಿ ಬಸ್ಸೊಂದರ ಚಾಲಕ ಪ್ರಿನ್ಸ್ ಬೆನ್ನಿ ಎಂಬಾತ ಸಾರ್ವಜನಿಕ ರಸ್ತೆಯಲ್ಲಿ ಮಾನವ ಜೀವಕ್ಕೆ ಅಪಾಯಕರ ರೀತಿಯಲ್ಲಿ ದುಡುಕುತನದಿಂದ ಬಸ್ಸು ಚಲಾಯಿಸಿದ್ದು ಆತನನ್ನು ತಪಾಸಣೆ

ಮದ್ಯಪಾನ ಸೇವಿಸಿ ಬಸ್ ಚಲಾಯಿಸಿದ ಚಾಲಕನ ವಿರುದ್ದ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಲಂಚಕ್ಕೆ ಬೇಡಿಕೆ- ಪಟ್ಟಣ ಪಂಚಾಯತ್ ಇಂಜಿನಿಯರ್, ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 20. ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿ ಕಿನ್ನಿಗೋಳಿ ಪಟ್ಟಣ ಪಂಚಾಯತ್‌ನ ಜೂನಿಯರ್ ಇಂಜಿನಿಯರ್ ಎಂ.ಆರ್ ಸ್ವಾಮಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಕುರಿತು ವರದಿಯಾಗಿದೆ. ದೂರಿನ ಪ್ರಕಾರ, ಪಿಡಬ್ಲ್ಯೂಡಿ ಕ್ಲಾಸ್-1 ಗುತ್ತಿಗೆದಾರರೋರ್ವರು 2022-23ನೇ ಸಾಲಿನ 5ನೇ ಹಣಕಾಸು ಯೋಜನೆಯಲ್ಲಿ ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕೋಡಿ ಸರಕಾರಿ ಕೆರೆ ಅಭಿವೃದ್ಧಿಪಡಿಸುವ ಕಾಮಗಾರಿಯ ಕಾಂಟ್ರಾಕ್ಟ್ ಕೆಲಸವನ್ನು ನಿರ್ವಹಿಸಿದ್ದರು. ಕಾಮಗಾರಿಯ ಒಟ್ಟು 9,77,154 ರೂ. ಮೊತ್ತದ ಬಿಲ್ ಮಂಜೂರಾತಿಯ ಬಗ್ಗೆ ಕಿನ್ನಿಗೊಳಿ ಪಟ್ಟಣ ಪಂಚಾಯತ್‌ನ

ಲಂಚಕ್ಕೆ ಬೇಡಿಕೆ- ಪಟ್ಟಣ ಪಂಚಾಯತ್ ಇಂಜಿನಿಯರ್, ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಸೆ. 20. ವ್ಯಕ್ತಿಯೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಲ್ಯಾಡಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಸಿರಿಬಾಗಿಲು ಗ್ರಾಮದ ಪುಲ್ಯೊಟ್ಟೆ ಸ್ವರ್ಣಪ್ಪನ್ ಎಂಬವರ ಪುತ್ರ ಲೋಹಿತ್ ಕುಮಾರ್ ಎಂದು ಗುರುತಿಸಲಾಗಿದೆ. ರಬ್ಬರ್ ಟ್ಯಾಪಿಂಗ್ ಕೆಲಸ ಮಾಡಿಕೊಂಡಿದ್ದ ಇವರು, ವಿಪರೀತ ಮದ್ಯದ ಚಟ ಹೊಂದಿದ್ದರು ಎನ್ನಲಾಗಿದೆ. ಇದೇ ಕಾರಣಕ್ಕೆ ಪತ್ನಿ ಕೆಲ ದಿನದ ಹಿಂದೆ ಆಕೆಯ ತಾಯಿ ಮನೆಗೆ ಹೋಗಿದ್ದರು. ಸೆ. 18ರಂದು ಸಂಜೆ ಗುಂಡ್ಯಕ್ಕೆ ಹೋಗಿ ರಾತ್ರಿ 8 ಗಂಟೆ ವೇಳೆಗೆ ಮನೆಗೆ

ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top