crime

ಮಂಗಳೂರು: ಮನೆ ಗೋಡೆ ಕುಸಿದು ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 12. ನಗರದ ಜೈಲು‌ ರಸ್ತೆಯ ಬಳಿ ಹಳೆ ಮನೆಯೊಂದನ್ನು ಕೆಡವುತ್ತಿದ್ದ ವೇಳೆ ಗೋಡೆ ಕುಸಿದು ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಗುರುವಾರ ಬೆಳಗ್ಗೆ ನಡೆದಿದೆ. ಮೃತ ದುರ್ದೈವಿಗಳನ್ನು ಜೇಮ್ಸ್ ಸ್ಯಾಮುವೆಲ್ ಜತ್ತನ್ನ ಮತ್ತು ಅಡ್ವಿನ್ ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಜೆಸಿಬಿ ಮೂಲಕ ಮನೆಯನ್ನು ಕೆಡವುತ್ತಿದ್ದ ವೇಳೆ ಕಾಂಕ್ರೀಟ್ ಲಿಂಟೆಲ್ ಸಹಿತ ಗೋಡೆ ಮೈಮೇಲೆ ಬಿದ್ದು ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ.

ಮಂಗಳೂರು: ಮನೆ ಗೋಡೆ ಕುಸಿದು ಇಬ್ಬರು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ರೆಫ್ರಿಜರೇಟರ್ ಸ್ಪೋಟ- ಯುವತಿಯರಿಬ್ಬರು ಸ್ಥಳದಲ್ಲೇ ಮೃತ್ಯು..!

(ನ್ಯೂಸ್ ಕಡಬ) newskadaba.com ಚೆನ್ನೈ, ಸೆ. 12. ಹಾಸ್ಟೆಲ್ ನಲ್ಲಿ ಫ್ರಿಡ್ಜ್ ಸ್ಪೋಟಗೊಂಡು ಇಬ್ಬರು ಯುವತಿಯರು ಸ್ಥಳದಲ್ಲೇ ಮೃತಪಟ್ಟ ತಮಿಳುನಾಡಿನ ಮಧುರೈನಲ್ಲಿ ನಡೆದಿದೆ. ಮಧುರೈ ಜಿಲ್ಲೆಯ ಕಟ್ರಂಪಾಳ್ಯಂ ಪ್ರದೇಶದಲ್ಲಿನ ವಿಶಾಕಾ ಖಾಸಗಿ ಮಹಿಳಾ ಹಾಸ್ಟೆಲ್‌ ನಲ್ಲಿ ಇಂದು ಮುಂಜಾನೆ 4:30ರ ಸುಮಾರಿಗೆ ಫ್ರಿಡ್ಜ್ ಸ್ಫೋಟಗೊಂಡಿದ್ದು, ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡು ಉರಿಯಲಾರಂಭಿಸಿದೆ. ಘಟನೆಯಲ್ಲಿ ಮಲಗಿದ್ದ ಇಬ್ಬರು ಯುವತಿಯರು ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.

ರೆಫ್ರಿಜರೇಟರ್ ಸ್ಪೋಟ- ಯುವತಿಯರಿಬ್ಬರು ಸ್ಥಳದಲ್ಲೇ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

900 ಕೆ.ಜಿ.ಪಡಿತರ ಅಕ್ಕಿಯ ಅಕ್ರಮ ಸಾಗಾಟ: ಇಬ್ಬರು ಅರೆಸ್ಟ್..!

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಸೆ. 12.  ಅಕ್ರಮವಾಗಿ ಸಾಗಿಸುತ್ತಿದ್ದ 900 ಕೆ.ಜಿ.ಪಡಿತರ ಅಕ್ಕಿಯನ್ನು ವಶಕ್ಕೆ ಪಡೆದಿರುವ ಪಟ್ಟಣ ಠಾಣೆ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ನಗರದ ಬೈಪಾಸ್ ರಸ್ತೆಯಲ್ಲಿ ಬುಧವಾರ ರಾತ್ರಿ ನಡೆದಿದೆ. ಆರೋಪಿಗಳನ್ನು ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಹಳೇ ನರಿಪುರ ಗ್ರಾಮದ ಇಮ್ರಾನ್ ಅಲಿ(39) ಹಾಗೂ ಗರ್ಗೇಶ್ವರಿಯ ಮುಹಮ್ಮದ್ ಸಲ್ಮಾನ್ (20) ಎಂದು ಗುರುತಿಸಲಾಗಿದೆ. ಆರೋಪಿಗಳು ಚಾಮರಾಜನಗರದ ಗಾಳೀಪುರ ಕಡೆಯಿಂದ ಬೈಪಾಸ್‌ ರಸ್ತೆಯಲ್ಲಿ ಟಿ.ನರಸೀಪುರಕ್ಕೆ ಟಾಟಾ ಏಸ್ ವಾಹನದಲ್ಲಿ 19 ಪ್ಲಾಸ್ಟಿಕ್

900 ಕೆ.ಜಿ.ಪಡಿತರ ಅಕ್ಕಿಯ ಅಕ್ರಮ ಸಾಗಾಟ: ಇಬ್ಬರು ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚಿನ್ನಾಭರಣ ಕಳ್ಳತನ: ಆರೋಪಿ ಮಹಿಳೆ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಸೆ. 12.  ನಗರದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಸುಮಾರು 27 ಲಕ್ಷ ರೂ.ಗೂ ಹೆಚ್ಚು ಮೌಲ್ಯದ ಚಿನ್ನಾಭರಣವನ್ನು ದೋಚಿ ಪರಾರಿಯಾಗಿದ್ದ ಆರೋಪಿ ಮಹಿಳೆಯನ್ನು ಪತ್ತೆಹಚ್ಚಿ, 432 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ ತಿಳಿಸಿದ್ದಾರೆ. ಆರೋಪಿ ಮಹಿಳೆಯನ್ನು ತಮಿಳುನಾಡಿನ ಲಕ್ಷ್ಮೀ(43) ಎಂದು ಗುರುತಿಸಲಾಗಿದೆ. ಈಕೆಯಿಂದ 432 ಗ್ರಾಂ. ಚಿನ್ನಾಭರಣವನ್ನು ವಶಪಡಿಸಿಕೊಂಡು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದರು. ದೂರು ದಾಖಲಿಸಿಕೊಂಡ ಚಾಮರಾಜನಗರ ಪಟ್ಟಣ ಠಾಣೆಯ ಪೊಲೀಸರು, ಪೊಲೀಸ್ ವರಿಷ್ಠಾಧಿಕಾರಿ

ಚಿನ್ನಾಭರಣ ಕಳ್ಳತನ: ಆರೋಪಿ ಮಹಿಳೆ ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮನೆಯ ಶೌಚಾಲಯದಲ್ಲಿ ಕುಸಿದು ಬಿದ್ದು ನಿವೃತ್ತ ಶಿಕ್ಷಕಿ ಮೃತ್ಯು..!

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 12.  ನಿವೃತ್ತ ಶಿಕ್ಷಕಿರೊಬ್ಬರು ಮನೆಯ ಶೌಚಾಲಯದಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ನಿಟ್ಟೂರಿನಲ್ಲಿ ಇಂದು ನಡೆದಿದೆ. ಮೃತ ಶಿಕ್ಷಕಿಯನ್ನು ಹಿರಿಯ ವಕೀಲ ದಿವಂಗತ ವಿಲಿಯಂ ಪಿಂಟೋ ಅವರ ಪತ್ನಿ ರೋಸಿ ವಿಲಿಯಂ ಪಿಂಟೋ(72) ಎಂದು ಗುರುತಿಸಲಾಗಿದೆ. ನಿಟ್ಟೂರು ಶಾಲೆಯ ನಿವೃತ್ತ ಶಿಕ್ಷಕಿಯಾಗಿರುವ ಇವರು, ಮನೆಯಲ್ಲಿ ಒಂಟಿಯಾಗಿ ವಾಸ ಮಾಡುತ್ತಿದ್ದರು. ಮಕ್ಕಳು ಕರೆ ಮಾಡಿದಾಗ ಕರೆ ಎತ್ತದೇ ಇದ್ದರಿಂದ ಮನೆಗೆ ಬಂದು ನೋಡುವಾಗ ರೋಸಿ ಪಿಂಟೋ ಅವರು ಬಾತ್‌ರೂಮಿನಲ್ಲಿ ಕುಸಿದು ಬಿದ್ದು

ಮನೆಯ ಶೌಚಾಲಯದಲ್ಲಿ ಕುಸಿದು ಬಿದ್ದು ನಿವೃತ್ತ ಶಿಕ್ಷಕಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ರಿವರ್ಸ್ ತೆಗೆಯುವ ವೇಳೆ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಕಾರು..!

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 12. ಇಲ್ಲಿನ ಕಿಲ್ಲೆ ಮೈದಾನದ ಗಣೇಶೋತ್ಸವದ ಚರುಂಬುರಿ ಅಂಗಡಿಗೆ ಕಾರೊಂದು ನುಗ್ಗಿ ಇಬ್ಬರು ಗಾಯಗೊಂಡ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ರಿವರ್ಸ್ ತೆಗೆಯುವ ವೇಳೆ, ಚಾಲಕನ ನಿಯಂತ್ರಣ ತಪ್ಪಿ ಚರುಂಬುರಿ ಅಂಗಡಿಗೆ ನುಗ್ಗಿದೆ ಎಂದು ತಿಳಿದುಬಂದಿದೆ.    

ರಿವರ್ಸ್ ತೆಗೆಯುವ ವೇಳೆ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಕಾರು..! Read More »

ಕರಾವಳಿ

ರಸ್ತೆ ಅಪಘಾತ: ಮೂವರು ವಿದ್ಯಾರ್ಥಿಗಳು ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಂಗಳೂರು , ಸೆ. 12.  ನಗರದ ಕೆಂಪೇಗೌಡ ವಿಮಾನ ನಿಲ್ದಾಣದ ರಸ್ತೆಯಲ್ಲಿ ಸೆ. 11 -12ರ ನಡುವಿನ ರಾತ್ರಿ ಸುಮಾರು 1.30 ಸುಮಾರಿಗೆ ಬೈಕ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಬೈಕ್ ನಲ್ಲಿದ್ದ ಮೂವರು ವಿದ್ಯಾರ್ಥಿಗಳು ಸಾವಿಗೀಡಾಗಿದ್ದಾರೆ. ಅವರನ್ನು ರೋಹಿತ್ (22), ಸುಚಿತ್ (22), ಹರ್ಷ (22) ಎಂದು ಗುರುತಿಸಲಾಗಿದೆ. ಈ ಮೂವರೂ ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದಲ್ಲಿ (ಜಿಕೆವಿಕೆ) ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದರೆಂದು ಹೇಳಲಾಗಿದೆ. ಅತ್ಯಂತ ವೇಗವಾಗಿ ಬಂದ ಬೈಕ್

ರಸ್ತೆ ಅಪಘಾತ: ಮೂವರು ವಿದ್ಯಾರ್ಥಿಗಳು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಶಾಲಾ ವಾಹನ ಹರಿದು 4 ವರ್ಷದ ಮಗು ಮೃತ್ಯು..!

(ನ್ಯೂಸ್ ಕಡಬ) newskadaba.com ಕಲಬುರಗಿ, ಸೆ. 12.  ಶಾಲಾ ವಾಹನ ಹರಿದು ನಾಲ್ಕು ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಅಫಜಲಪುರ ಪೊಲೀಸ್ ಠಾಣೆ ವ್ಯಾಪ್ತಿಯ ಶಿವಪುರ ಗ್ರಾಮದಲ್ಲಿ ಬುಧವಾರ ನಡೆದಿದೆ. ಮೃತ ಮಗು ಶಿವಪುರ ಗ್ರಾಮದ ರಾಜಶೇಖರ್ ಎಂಬವರ ಪುತ್ರಿ ಖುಷಿ ಬನ್ನಟ್ಟಿ (4) ಎಂದು ಗುರುತಿಸಲಾಗಿದೆ. ಶಾಲಾ ವಾಹನ ಚಾಲಕ ಶ್ರೀಶೈಲ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಶಾಲಾ ವಾಹನದಲ್ಲಿ ಬಂದಿಳಿದ ಮಗು ತನ್ನ ತಂದೆಯನ್ನು ಕಂಡು ವಾಹನದ ಹಿಂಬದಿಯಾಗಿ ಓಡಿತ್ತು. ಇದನ್ನು ಗಮನಿಸದ ಚಾಲಕ

ಶಾಲಾ ವಾಹನ ಹರಿದು 4 ವರ್ಷದ ಮಗು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಪಟಾಕಿ ಸಿಡಿದು ಯುವಕನ ಸ್ಥಿತಿ ಗಂಭೀರ..!

(ನ್ಯೂಸ್ ಕಡಬ) newskadaba.com ಕೊಪ್ಪಳ, ಸೆ. 12.  ಪಟ್ಟಣದಲ್ಲಿ ಬುಧವಾರ ರಾತ್ರಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಪಟಾಕಿ ಸಿಡಿದು ಮಾರುತಿ ನಗರದ ನಿವಾಸಿ ಕಲ್ಲೇಶ ಸುಲೇಕಿ (25) ಎಂಬ ಯುವಕ ತೀವ್ರವಾಗಿ ಗಾಯಗೊಂಡಿದ್ದಾನೆ. ಪಟಾಕಿ ಸಿಡಿದಿದ್ದರಿಂದ ಯುವಕನ ಒಂದು ಕಣ್ಣುಗೆ ತೀವ್ರ ಗಾಯವಾಗಿದ್ದು, ತಲೆಗೆ ಗಾಯವಾಗಿ ರಕ್ತಸ್ರಾವವಾಗಿದೆ. ತಕ್ಷಣ ಯುವಕನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಆದರೆ ವ್ಯಕ್ತಿಯ ಸ್ಥಿತಿ ಗಂಭೀರವಾಗಿದ್ದರಿಂದ ತುರ್ತು ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಂದು ತಿಳಿದು

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಪಟಾಕಿ ಸಿಡಿದು ಯುವಕನ ಸ್ಥಿತಿ ಗಂಭೀರ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

6ನೇ ತರಗತಿ ವಿದ್ಯಾರ್ಥಿನಿಗೆ ಟೈಪ್ 1 ಡಯಾಬಿಟಿಸ್ ಪತ್ತೆ..!  ಚಿಕಿತ್ಸೆಗಾಗಿ ಹಣ ಸಹಾಯ ಕೋರಿದ ಕುಟುಂಬ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 11.  ಶಾಲೆಗೆ ಹೋಗಿ ಚೆನ್ನಾಗಿ ಓದುತ್ತಾ, ತನ್ನ ಸ್ನೇಹಿತರೊಂದಿಗೆ ಆಟವಾಡಿಕೊಂಡು ಇರಬೇಕಾದ 6ನೇ ತರಗತಿ ವಿದ್ಯಾರ್ಥಿನಿ ಫಿಯೋನಾ ಜೀವಿತಾ ಮಸ್ಕರೇನಸ್ ಅವರಿಗೆ ಟೈಪ್ 1 ಡಯಾಬಿಟಿಸ್ ನಿಂದ ಬಳಳುತ್ತಿದ್ದಾರೆ. ಆಕೆಯ ಚಿಕಿತ್ಸೆಗಾಗಿ ಕುಟುಂಬವು ಹಣಸಹಾಯ ಕೋರಿದೆ. ಎಂಟು ತಿಂಗಳ ಹಿಂದೆ ಫಿಯೋನಾಗೆ ಟೈಪ್ 1 ಡಯಾಬಿಟಿಸ್ ಮೆಲ್ಲಿಟಸ್ ಇರುವುದು ಪತ್ತೆಯಾಗಿದೆ. ಸದ್ಯ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಫಿಯೋನಾ ಅವರ ತಂದೆ ಫ್ರಾನ್ಸಿಸ್ ಮಸ್ಕರೇನಸ್ ಆಟೋ ಚಾಲಕರಾಗಿದ್ದು, ಅವರು

6ನೇ ತರಗತಿ ವಿದ್ಯಾರ್ಥಿನಿಗೆ ಟೈಪ್ 1 ಡಯಾಬಿಟಿಸ್ ಪತ್ತೆ..!  ಚಿಕಿತ್ಸೆಗಾಗಿ ಹಣ ಸಹಾಯ ಕೋರಿದ ಕುಟುಂಬ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top