crime

ಬಿಸಿ ರೋಡ್: ಭೀಕರ ರಸ್ತೆ ಅಪಘಾತ – ಪತ್ನಿ ಮೃತ್ಯು, ಪತಿ ಗಂಭೀರ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 07. ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್ ಹಾರಿ ಕೆಎಸ್ಸಾರ್ಟಿಸಿ ಬಸ್ ಗೆ ಢಿಕ್ಕಿ ಹೊಡೆದ ಪರಿಣಾಮ ಪತ್ನಿ ಮೃತಪಟ್ಟು, ಪತಿ ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ರಸ್ತೆಯ ಬಂಟ್ವಾಳದ ತಲಪಾಡಿ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ ಎಂಬವರ ಪತ್ನಿ ಮಾನಸ ಎಂದು ಗುರುತಿಸಲಾಗಿದೆ. ಘಟನೆಯಿಂದ ಗಂಭೀರವಾಗಿ ಗಾಯಗೊಂಡ ಅನಿಶ್ ಕೃಷ್ಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. […]

ಬಿಸಿ ರೋಡ್: ಭೀಕರ ರಸ್ತೆ ಅಪಘಾತ – ಪತ್ನಿ ಮೃತ್ಯು, ಪತಿ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಟಾಟಾ ಏಸ್ ಪಲ್ಟಿ – ಯುವಕರಿಬ್ಬರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಸೆ. 07. ಗಣಪತಿ ತರಲು ಹೋಗುತ್ತಿದ್ದ ಸಂದರ್ಭ ಟಾಟಾ ಏಸ್ ಪಲ್ಟಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಭೈರಾಪುರ ಗೇಟ್ ಬಳಿ ನಡೆದಿದೆ.    ಮೃತಪಟ್ಟವರನ್ನು 20 ವರ್ಷದ ಧನುಷ್ ಹಾಗೂ ಶ್ರೀಧರ್ ಎಂದು ಗುರುತಿಸಲಾಗಿದೆ. ಲಿಂಗನಹಳ್ಳಿ ಪಟ್ಟಣದ 9 ಜನ ಯುವಕರು ಗಣಪತಿ ತರಲೆಂದು 15 ಕಿ.ಮೀ. ದೂರದ ತರೀಕೆರೆ ಪಟ್ಟಣಕ್ಕೆ ಟಾಟಾ ಏಸ್ ಲಾಗೇಜ್ ಆಟೋದಲ್ಲಿ ಹೋಗುತ್ತಿದ್ದಾಗ ಭೈರಾಪುರ ಗೇಟ್ ಬಳಿ ಚಾಲಕನ

ಟಾಟಾ ಏಸ್ ಪಲ್ಟಿ – ಯುವಕರಿಬ್ಬರು ಸ್ಥಳದಲ್ಲೇ ಮೃತ್ಯು Read More »

ಕರಾವಳಿ
Theft, crime, Robbery

ಮನೆ ಕೆಲಸಕ್ಕೆ ಬಂದವರಿಂದ ಕಳ್ಳತನ – ಯುವತಿಯರಿಬ್ಬರು ಅರೆಸ್ಟ್

(ನ್ಯೂಸ್ ಕಡಬ) newskadaba.com ಕಾಸರಗೊಡು, ಸೆ. 07. ಮನೆಕೆಲಸಕ್ಕೆ ಬಂದಿದ್ದ ಯುವತಿಯರಿಬ್ಬರು ಚಿನ್ನಾಭರಣ, ಐ ಫೋನ್ ಹಾಗೂ ಸ್ಮಾರ್ಟ್ ವಾಚ್ ಗಳನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಮನೆಯವರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಕುಂಬಳೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಂಧಿತರನ್ನು ಪತ್ತನಂತ್ತಿಟ್ಟ ಮೂಲದ ಬ್ಲೆಸಿ (23) ಮತ್ತು ಜಿನ್ಸಿ (22) ಎಂದು ಗುರುತಿಸಲಾಗಿದೆ. ಕಯ್ಯಾರಿನಲ್ಲಿ ವಾಸ್ತವ್ಯ ಹೂಡಿ ಮನೆ ಕೆಲಸಕ್ಕೆ ತೆರಳುತ್ತಿದ್ದ ಇವರು ಒಂದು ತಿಂಗಳ ಹಿಂದೆ ಕುಬಣೂರಿನ ಸೈನುದ್ದೀನ್ ಎಂಬವರ ಮನೆಗೆ ಕೆಲಸಕ್ಕೆ ತೆರಳಿದ್ದ

ಮನೆ ಕೆಲಸಕ್ಕೆ ಬಂದವರಿಂದ ಕಳ್ಳತನ – ಯುವತಿಯರಿಬ್ಬರು ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಸ್ತೆ ಅಪಘಾತ- ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 07. ಲಾರಿ ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಮಂಜನಾಡಿಯ ಮಂಗಳಾಂತಿ ಮಸೀದಿ ಬಳಿ ನಡೆದಿದೆ.   ಮೃತರನ್ನು ಮಂಜೇಶ್ವರದ ಪೈವಳಿಕೆ ಕಲ್ಲೇಕರುಗುತ್ತು ನಿವಾಸಿ ಚಂದ್ರಹಾಸ್ ಶೆಟ್ಟಿ (67) ಎಂದು ಗುರುತಿಸಲಾಗಿದೆ. ಮೃತ ಚಂದ್ರಹಾಸ ಶೆಟ್ಟಿಯವರು ಹರೇಕಲ್ ದೆಬ್ಬೇಲಿಯಲ್ಲಿರುವ ತಮ್ಮ ಪತ್ನಿಯ ಮನೆಯಿಂದ ಕಲ್ಲೇಕರುಗುತ್ತು ಕಡೆಗೆ ಹೋಗುತ್ತಿದ್ದಾಗ ಅವರ ಸ್ಕೂಟರ್‌ಗೆ ಲಾರಿ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ. ಈ ಕುರಿತು ಮಂಗಳೂರು

ರಸ್ತೆ ಅಪಘಾತ- ವ್ಯಕ್ತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಕಡಬ: ಅಕ್ರಮ ಕಸಾಯಿಖಾನೆಗೆ ದಾಳಿ- ಇಬ್ಬರು ವಶಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 06. ಮನೆಯೊಂದರ ಹಿಂಭಾಗದಲ್ಲಿ ನಡೆಯುತ್ತಿದ್ದ ಅಕ್ರಮ ಕಸಾಯಿಖಾನೆಗೆ ನಡೆಸಿದ ಕಡಬ ಪೋಲಿಸರು ಮಾಂಸ ಸಹಿತ ಇಬ್ಬರನ್ನು ಬಂಧಿಸಿದ ಘಟನೆ ತಾಲೂಕಿನ ಕುಟ್ರುಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾರ್ಕಳ ಎಂಬಲ್ಲಿ ನಡೆದಿದೆ. ಬಂಧಿತರನ್ನು ಬಿನೋಯ್ ಹಾಗೂ ಕುಟ್ಟಪ್ಪನ್ ಎಂದು ಗುರುತಿಸಲಾಗಿದೆ. ಕುಟ್ರುಪ್ಪಾಡಿಯ ಮನೆಯೊಂದರಲ್ಲಿ ಜಾನುವಾರು ವಧೆ ಮಾಡುತ್ತಿರುವ ಕುರಿತು ಬಜರಂಗದಳಕ್ಕೆ ಮಾಹಿತಿಯ ಮೇರೆಗೆ ಕಡಬ ಠಾಣಾ ಎಸ್.ಐ ನೇತೃತ್ವದ ಪೊಲೀಸರು ದಿಢೀರ್ ದಾಳಿ ಮಾಡಿದ್ದು, ಈ ಸಂದರ್ಭ ಸ್ಥಳದಲ್ಲಿ ಗೋವಧೆ ಮಾಡಲು

ಕಡಬ: ಅಕ್ರಮ ಕಸಾಯಿಖಾನೆಗೆ ದಾಳಿ- ಇಬ್ಬರು ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರಿನಲ್ಲಿ ರಸ್ತೆ ಅಪಘಾತ – ಕಡಬದ ಯುವಕರಿಬ್ಬರು ಮೃತ್ಯು…!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 06. ನಿಯಂತ್ರಣ ತಪ್ಪಿದ ಬೈಕೊಂದು ಬಿದ್ದ ಪರಿಣಾಮ ಯುವಕರಿಬ್ಬರು ಮೃತಪಟ್ಟ ಘಟನೆ ಯೆಯ್ಯಾಡಿ ಸಮೀಪದ ಹರಿಪದವು ಎಂಬಲ್ಲಿ ನಡೆದಿದೆ. ಮೃತ ಯುವಕರನ್ನು ರಾಮಕುಂಜ ಗ್ರಾಮದ ಪಾದೆ ನಿವಾಸಿ ಚೆನ್ನಪ್ಪ ಕುಲಾಲ್ ಅವರ ಪುತ್ರ ಚೇತನ್(24) ಹಾಗೂ ಕೋಡಿಕಲ್ ನಿವಾಸಿ ಕಾಶೀನಾಥ್(17) ಎಂದು ಗುರುತಿಸಲಾಗಿದೆ. ಮೃತ ಸವಾರ ಚೇತನ್ ಲಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ಬೈಕ್‌ ಉರುಳಿಬಿದ್ದಿದೆ. ಇದರಿಂದ ಅವರಿಬ್ಬರು ರಸ್ತೆಗೆ ಎಸೆಯಲ್ಪಟ್ಟಿದ್ದು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

ಮಂಗಳೂರಿನಲ್ಲಿ ರಸ್ತೆ ಅಪಘಾತ – ಕಡಬದ ಯುವಕರಿಬ್ಬರು ಮೃತ್ಯು…! Read More »

ಕರಾವಳಿ, ಕ್ರೈಮ್ ನ್ಯೂಸ್

ವಸತಿ ಶಾಲೆಯಲ್ಲಿ ಅಗ್ನಿ ಅವಘಡ 17 ಮಕ್ಕಳು ಸಾವು- 14 ಮಂದಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com  ನೈರೋಬಿ, ಸೆ. 6. ಕೀನ್ಯಾದ ವಸತಿ ಶಾಲೆಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿ 17 ಮಕ್ಕಳು ಸಾವನ್ನಪ್ಪಿ, 14 ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ನಡೆದಿದೆ. ಪ್ರಾಥಮಿಕ ಶಾಲೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದು. ನಾವು ಘಟನೆಯ ಕಾರಣವನ್ನು ತನಿಖೆ ಮಾಡುತ್ತಿದ್ದೇವೆ. ಜೊತೆಗೆ ಅಗತ್ಯ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಪೊಲೀಸರು ಅಧಿಕಾರಿಗಳು ತಿಳಿಸಿದ್ದಾರೆ. 2017 ರಲ್ಲಿ, ಇದೇ ರೀತಿಯ ಅವಘಡವು ನೈರೋಬಿಯಲ್ಲಿ ನಡೆದಿದ್ದು, ಅದರಲ್ಲಿ 10 ವಿದ್ಯಾರ್ಥಿಗಳು ಸಾವನ್ನಪ್ಪಿದ್ದರು.

ವಸತಿ ಶಾಲೆಯಲ್ಲಿ ಅಗ್ನಿ ಅವಘಡ 17 ಮಕ್ಕಳು ಸಾವು- 14 ಮಂದಿಗೆ ಗಂಭೀರ ಗಾಯ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಸಿನಿಮಾ ಶೂಟಿಂಗ್ ಸೆಟ್ ನಲ್ಲಿ 30 ಅಡಿ ಎತ್ತರದಿಂದ ಬಿದ್ದು ಲೈಟ್ ಮ್ಯಾನ್ ಮೃತ್ಯು ನಿರ್ದೇಶಕ ಯೋಗರಾಜ್ ಭಟ್ ವಿರುದ್ಧ ಎಫ್ಐಆರ್ ದಾಖಲು

(ನ್ಯೂಸ್ ಕಡಬ) newskadaba.com  ಬೆಂಗಳೂರು, ಸೆ. 6. 30 ಅಡಿ ಎತ್ತರದಿಂದ ಬಿದ್ದು ಲೈಟ್ ಮ್ಯಾನ್ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಮೃತರನ್ನು ಲೈಟ್ ಮ್ಯಾನ್ ಮೋಹನ್ ಕುಮಾರ್ ಎಂದು ಗುರುತಿಸಲಾಗಿದೆ. ಯೋಗರಾಜ್ ಭಟ್ ನಿರ್ದೇಶನದ ಸಿನಿಮಾವೊಂದರ ಶೂಟಿಂಗ್ ಸೆಟ್‌ ನಲ್ಲಿ ಲೈಟ್ ಬಿಚ್ಚುವಾಗ ಆಯಾ ತಪ್ಪಿ ಮೋಹನ್ ಕುಮಾರ್ 30 ಅಡಿ ಎತ್ತರದಿಂದ ಬಿದ್ದಿದ್ದರು. ಕೆಳಗೆ ಬಿದ್ದ ರಭಸಕ್ಕೆ ಅವರ ತಲೆಗೆ ಗಂಭೀರ ಪೆಟ್ಟಾಗಿ ರಕ್ತಸ್ರಾವವಾಗಿತ್ತು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೂ ಚಿಕಿತ್ಸೆ

ಸಿನಿಮಾ ಶೂಟಿಂಗ್ ಸೆಟ್ ನಲ್ಲಿ 30 ಅಡಿ ಎತ್ತರದಿಂದ ಬಿದ್ದು ಲೈಟ್ ಮ್ಯಾನ್ ಮೃತ್ಯು ನಿರ್ದೇಶಕ ಯೋಗರಾಜ್ ಭಟ್ ವಿರುದ್ಧ ಎಫ್ಐಆರ್ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹಳಿದಾಟುತ್ತಿದ್ದ ವೇಳೆ ರೈಲು ಢಿಕ್ಕಿ- ಪೊಲೀಸ್ ಮೃತ್ಯು…!

(ನ್ಯೂಸ್ ಕಡಬ) newskadaba.com ಉತ್ತರಪ್ರದೇಶ, ಸೆ. 06. ಇಯರ್‌ಫೋನ್‌ ಹಾಕಿಕೊಂಡು ಹಳಿದಾಟುತ್ತಿದ್ದ ಪೊಲೀಸ್ ಸಿಬ್ಬಂದಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ಆತ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತಪಟ್ಟವರನ್ನು ಶಾಮ್ಲಿ ಜಿಲ್ಲೆಯ ನಿವಾಸಿ ಅಕ್ಷಯ್‌ವೀರ್‌ ಸಿಂಗ್‌ ಎಂದು ಗುರುತಿಸಲಾಗಿದೆ. ಇವರು ಶಹಜಹಾನ್‌ ಪುರದ ಇಂದಿರಾನಗರ ರೈಲ್ವೇ ಕ್ರಾಸಿಂಗ್‌ನಲ್ಲಿ ಇಬ್ಬರು ಪುರುಷರೊಂದಿಗೆ ರೈಲ್ವೆ ಹಳಿ ದಾಟುತ್ತಿದ್ದ ಸಂದರ್ಭ ಇಯರ್‌ಫೋನ್‌ ಹಾಕಿಕೊಂಡಿದ್ದರಿಂದ ರೈಲು ಬರುವುದು ತಿಳಿಯದೇ ರೈಲು ಢಿಕ್ಕಿಹೊಡೆದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಹಳಿದಾಟುತ್ತಿದ್ದ ವೇಳೆ ರೈಲು ಢಿಕ್ಕಿ- ಪೊಲೀಸ್ ಮೃತ್ಯು…! Read More »

ಕರಾವಳಿ
Scroll to Top