crime

ಜಮ್ಮು ಸೇನಾ ನೆಲೆಯ ಬಳಿ ಭಯೋತ್ಪಾದಕರ ದೂರದಿಂದ ಗುಂಡಿನ ದಾಳಿ ಒಬ್ಬ ಸೇನಾ ಯೋಧನಿಗೆ ಗಾಯ  

(ನ್ಯೂಸ್ ಕಡಬ) newskadaba.com ಜಮ್ಮು, ಸೆ. 02.  ಅತಿದೊಡ್ಡ ಜಮ್ಮು ಸೇನಾ ನೆಲೆಯ ಬಳಿ ಭಯೋತ್ಪಾದಕರು ಸ್ಟ್ಯಾಂಡ್-ಆಫ್ ದೂರದಿಂದ ಗುಂಡಿನ ದಾಳಿ ನಡೆಸಿದ್ದರಿಂದ ಒಬ್ಬ ಸೇನಾ ಯೋಧ ಗಾಯಗೊಂಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಗುಂಡಿನ ಚಕಮಕಿಯಲ್ಲಿ ಮೂವರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ ಕೆಲವು ದಿನಗಳ ನಂತರ ಈ ಘಟನೆ ನಡೆದಿದೆ. ಮಚ್ಚಲ್‌ ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದರೆ, ತಂಗ್ ಧರ್ ಸೆಕ್ಟರ್‌ ನಲ್ಲಿ ಮತ್ತೊಬ್ಬರು ಹತರಾಗಿದ್ದಾರೆ. ಏತನ್ಮಧ್ಯೆ, ನೆರೆಯ ಜಮ್ಮುವಿನಲ್ಲಿ, […]

ಜಮ್ಮು ಸೇನಾ ನೆಲೆಯ ಬಳಿ ಭಯೋತ್ಪಾದಕರ ದೂರದಿಂದ ಗುಂಡಿನ ದಾಳಿ ಒಬ್ಬ ಸೇನಾ ಯೋಧನಿಗೆ ಗಾಯ   Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಮಳೆ, ತೀವ್ರ ಪ್ರವಾಹ 19 ಜನರ ಸಾವು- 140 ರೈಲುಗಳು ರದ್ದು    

(ನ್ಯೂಸ್ ಕಡಬ) newskadaba.com ಅಮರಾವತಿ, ಸೆ. 02.  ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ನಿರಂತರ ಮಳೆಯಿಂದಾಗಿ ತೀವ್ರ ಪ್ರವಾಹ, ಆಸ್ತಿ ಹಾನಿ ಮತ್ತು ಜೀವಹಾನಿ ಉಂಟಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಎರಡೂ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ ಅವರಿಗೆ ಸಂಪೂರ್ಣ ಬೆಂಬಲದ ಭರವಸೆ ನೀಡಿದ್ದಾರೆ. ಭಾರೀ ಮಳೆಯಿಂದಾಗಿ 19 ಜನರು ಸಾವನ್ನಪ್ಪಿದ್ದಾರೆ ಮತ್ತು ಆಂಧ್ರಪ್ರದೇಶ ಮತ್ತು ತೆಲಂಗಾಣದ ವಿವಿಧ ಭಾಗಗಳಿಂದ 17,000 ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ, ನಿರಂತರ ಮಳೆಯು ರಾಜ್ಯಗಳಾದ್ಯಂತ ವಿನಾಶವನ್ನು ಉಂಟುಮಾಡುತ್ತಿದೆ, ಇದು ವ್ಯಾಪಕವಾದ ಪ್ರವಾಹಕ್ಕೆ

ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಮಳೆ, ತೀವ್ರ ಪ್ರವಾಹ 19 ಜನರ ಸಾವು- 140 ರೈಲುಗಳು ರದ್ದು     Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
crime, arrest, suspected

ಕಡವೆ ಬೇಟೆ- ನಾಲ್ವರ ಬಂಧನ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಸೆ. 02. ಕಡವೆಯನ್ನು ಬೇಟೆಯಾಡಿದ ಅರೋಪದಡಿ ನಾಲ್ವರು ಆರೋಪಿಗಳನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಬಂಧಿಸಿರುವ ಘಟನೆ ಭದ್ರಾವತಿಯಲ್ಲಿ ನಡೆದಿದೆ. ಬಂಧಿತರನ್ನು ಭದ್ರಾವತಿ ತಾಲೂಕಿನ ಗೋಂದಿ ಗ್ರಾಮದ ನಿವಾಸಿ ಶಿವ ಬಿನ್ ರಾಜಪ್ಪ, ವೆಂಕಟೇಶ ಬಿನ್ ಮುನಿಯಪ್ಪ, ಚಿಕ್ಕಮಗಳೂರು ಚೌಡಿಕಟ್ಟೆ ಭೈರಾಪುರ ಗ್ರಾಮ ವಾಸಿಗಳಾದ ಮಂಜಪ್ಪ ಬಿನ್ ನಾಗಪ್ಪ ಹಾಗೂ ವಿನೋದ ಬಿನ್ ಮಂಜಪ್ಪ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳು ಭದ್ರಾವತಿ ತಾಲೂಕು ಉಂಬ್ಳೆಬೈಲು ರೇಂಜ್‌ ನ ಚೌಡಿಕಟ್ಟೆಯ ಬಳಿ ಕಡವೆಯನ್ನು ಬೇಟೆಯಾಡಿ

ಕಡವೆ ಬೇಟೆ- ನಾಲ್ವರ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪ್ರೀತಿಸುವಂತೆ ನಾಲ್ವರು ಬಾಲಕರ ನಿರಂತರ ಕಿರುಕುಳ..!   ಬಾಲಕಿ ಆತ್ಮಹತ್ಯೆಗೆ ಶರಣು..!

(ನ್ಯೂಸ್ ಕಡಬ) newskadaba.com ಮಂಡ್ಯ, ಸೆ. 02.  ಪ್ರೀತಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಬಾಲಕರಿಂದ ನಿರಂತರ ಕಿರುಕುಳ ತಾಳಲಾರದೆ ಬಾಲಕಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯದ ಹನಕೆರೆ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕಿ ಇಂಪನಾ (14) ಎಂದು ಗುರುತಿಸಲಾಗಿದೆ. ಮಂಡ್ಯದ ವಿವೇಕ ವಿದ್ಯಾಸಂಸ್ಥೆಯ 9ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿದ್ದ ಬಾಲಕಿಗೆ ಪ್ರೀತಿಸುವಂತೆ ನಾಲ್ವರು ಬಾಲಕರು ನಿರಂತರ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಇದರಿಂದ ಮನನೊಂದು ಬಾಲಕಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಪೋಷಕರು ಆರೋಪಿಸಿದ್ದಾರೆ ಎಂದು ವರದಿ ತಿಳಿದುಬಂದಿದೆ.  

ಪ್ರೀತಿಸುವಂತೆ ನಾಲ್ವರು ಬಾಲಕರ ನಿರಂತರ ಕಿರುಕುಳ..!   ಬಾಲಕಿ ಆತ್ಮಹತ್ಯೆಗೆ ಶರಣು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ರೇಣುಕಾಸ್ವಾಮಿ ಹತ್ಯೆ ಪ್ರಕರಣ..! 10ನೇ ಆರೋಪಿ ವಿಜಯಪುರ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್

(ನ್ಯೂಸ್ ಕಡಬ) newskadaba.com ವಿಜಯಪುರ, ಸೆ. 02.  ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ 10ನೇ ಆರೋಪಿ ವಿನಯ್ ನನ್ನು ವಿಜಯಪುರ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ. ಕಾರಾಗೃಹದ ಸೆಲ್ ನಂಬರ್ 1 ರಲ್ಲಿ ಆರೋಪಿ ವಿನಯ್ ನನ್ನು ಇರಿಸಲಾಗಿದೆ. 14433 ವಿಚಾರಣಾಧೀನ ಕೈದಿ ಸಂಖ್ಯೆ ನೀಡಲಾಗಿದೆ. ಸೆಲ್‌ನಲ್ಲಿ ಶೌಚಾಲಯ ಸೌಲಭ್ಯ ಇದ್ದು, ಸಿಸಿಟಿವಿ ಕಣ್ಗಾವಲು ಇದೆ. ಜೊತೆಗೆ ಇಬ್ಬರು ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ ಎಂದು ತಿಳಿದುಬಂದಿದೆ. ವಾರದಲ್ಲಿ ಒಂದು ಬಾರಿ ಮಾತ್ರ ಕುಟುಂಬಸ್ಥರಿಗೆ ಹಾಗೂ ಅವರ ಪರ ವಕೀಲರಿಗೆ

ರೇಣುಕಾಸ್ವಾಮಿ ಹತ್ಯೆ ಪ್ರಕರಣ..! 10ನೇ ಆರೋಪಿ ವಿಜಯಪುರ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹೆದ್ದಾರಿಯಲ್ಲಿ ದರೋಡೆ ಮಾಡುತ್ತಿದ್ದ ರೌಡಿ ಶೀಟರ್ ಕಾಲಿಗೆ ಗುಂಡೇಟು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 02.  ಬೆಂಗಳೂರು ಗ್ರಾಮಾಂತರ ಪ್ರದೇಶದಲ್ಲಿ ಹೆದ್ದಾರಿಯಲ್ಲಿ ದರೋಡೆ ಮಾಡುತ್ತಿದ್ದ ರೌಡಿ ಶೀಟರ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ನೆಲಮಂಗಲ ತಾಲೂಕಿನ ದಾಬಸ್‌ ಪೇಟೆಯಲ್ಲಿ ನಡೆದಿದೆ. ಆರೋಪಿಯನ್ನು ಜಯಂತ್ ಅಲಿಯಾಸ್ ಬ್ಯಾಟರಿ ಜಯಂತ್ ಎಂದು ಗುರುತಿಸಲಾಗಿದೆ. ಈತ ಕುದೂರಿನ ನಿವಾಸಿಯಾಗಿದ್ದು, ಈತನ ವಿರುದ್ಧ ಬೆಂಗಳೂರು ನಗರ, ಬೆಂಗಳೂರು ಜಿಲ್ಲೆ, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಒಟ್ಟು 51 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಹೆದ್ದಾರಿಯಲ್ಲಿ ದರೋಡೆ ನಡೆಸುತ್ತಿರುವ ಕುರಿತು ಖಚಿತ ಮಾಹಿತಿ

ಹೆದ್ದಾರಿಯಲ್ಲಿ ದರೋಡೆ ಮಾಡುತ್ತಿದ್ದ ರೌಡಿ ಶೀಟರ್ ಕಾಲಿಗೆ ಗುಂಡೇಟು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಟ್ರಕ್ ಹಾಗೂ ಕಾರು ನಡುವೆ ಢಿಕ್ಕಿ – ಓರ್ವ ಗಂಭೀರ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ. 31. ಟ್ರಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಗಂಭೀರ ಗಾಯಗೊಂಡಿರುವ ಘಟನೆ ಪಾಣೆಮಂಗಳೂರು ಸಮೀಪದ ಮಾರ್ನಬೈಲು ಎಂಬಲ್ಲಿ ಶನಿವಾರದಂದು ನಡೆದಿದೆ. ಗಾಯಗೊಂಡವರನ್ನು ಪಾಣೆಮಂಗಳೂರು ಸಮೀಪದ ಬೋಳಂಗಡಿ ನಿವಾಸಿ ಸಾಮಾಜಿಕ ಕಾರ್ಯಕರ್ತ ಎಂ.ಹೆಚ್. ಮುಸ್ತಫಾ ಎಂದು ಗುರುತಿಸಲಾಗಿದೆ. ಗಾಯಾಳುವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೆಲ್ಕಾರ್ ನಿಂದ ದೇರಳಕಟ್ಟೆ ಕಡೆಗೆ ಹೋಗುತ್ತಿದ್ದ ಟ್ರಕ್, ಎದುರಿನಿಂದ ಬರುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದಿದ್ದು ಕಾರು ಸಂಪೂರ್ಣ ಜಖಂಗೊಂಡಿದೆ. ಹೆಚ್ಚಿನ

ಟ್ರಕ್ ಹಾಗೂ ಕಾರು ನಡುವೆ ಢಿಕ್ಕಿ – ಓರ್ವ ಗಂಭೀರ Read More »

ಕರಾವಳಿ

ಎನ್ಐಎ ದಾಳಿ- ಶಂಕಿತ ಉಗ್ರ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 31. ಇಲ್ಲಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ದಾಳಿ ನಡೆಸಿದ ಎನ್ಐಎ ಅಧಿಕಾರಿಗಳು ಓರ್ವ ಶಂಕಿತ ಉಗ್ರನನ್ನು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತ ಶಂಕಿತ ಉಗ್ರನನ್ನು ಅಝೀಝ್ ಅಹ್ಮದ್ ಎಂದು ಗುರುತಿಸಲಾಗಿದೆ. ವಿಮಾನ ನಿಲ್ದಾಣದ ಎಮಿಗ್ರೇಷನ್ ಅಧಿಕಾರಿಗಳು ನೀಡಿದ ಮಾಹಿತಿಯ ಮೇರೆಗೆ ಶಂಕಿತ ಉಗ್ರನನ್ನು ಎನ್ ಐಎ ಅಧಿಕಾರಿಗಳು ಬಂಧಿಸಿರುವುದಾಗಿ ತಿಳಿದುಬಂದಿದೆ.

ಎನ್ಐಎ ದಾಳಿ- ಶಂಕಿತ ಉಗ್ರ ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮನೆ ಕುಸಿತ- ಓರ್ವ ಮಹಿಳೆ ಮೃತ್ಯು ಇಬ್ಬರು ನಾಪತ್ತೆ..!            

(ನ್ಯೂಸ್ ಕಡಬ) newskadaba.com ಆಂಧ್ರಪ್ರದೇಶ, ಆ. 31.  ವಿಜಯವಾಡದ ಮೊಗಲ್‌ರಾಜಪುರಂ ಪ್ರದೇಶದಲ್ಲಿ ಮನೆ ಕುಸಿದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದು, ಇಬ್ಬರು ಆಸ್ಪತ್ರೆಗೆ ದಾಖಲಾಗಿದ್ದು, ಮತ್ತಿಬ್ಬರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಭಾರೀ ಮಳೆಯ ನಡುವೆ ಬೆಟ್ಟದ ಮೇಲಿನಿಂದ ಬಂಡೆ ಬಿದ್ದು ಮನೆ ಕುಸಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಬ್ಬರು ನಾಪತ್ತೆಯಾಗಿದ್ದು, ಅವಶೇಷಗಳು ಮಣ್ಣಿನ ಅಡಿಯಲ್ಲಿ ಹುದುಗಿರುವ ಶಂಕೆ ವ್ಯಕ್ತವಾಗಿದೆ. ಕಾರ್ಯಾಚರಣೆ ನಡೆಯುತ್ತಿದೆ ಎನ್ನಲಾಗಿದೆ.  

ಮನೆ ಕುಸಿತ- ಓರ್ವ ಮಹಿಳೆ ಮೃತ್ಯು ಇಬ್ಬರು ನಾಪತ್ತೆ..!             Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೆಂಪೇಗೌಡ ಅಂತರಾಷ್ಟೀಯ ವಿಮಾನ ನಿಲ್ದಾಣದಲ್ಲಿ ಉಗ್ರನನ್ನು ಬಂಧಿಸಿದ ಎನ್‌ಐಎ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 31.  ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶಂಕಿತ ಉಗ್ರನನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ ಘಟನೆ ನಡೆದಿದೆ. ಆರೋಪಿಯನ್ನು ಅಜೀಜ್ ಅಹ್ಮದ್ ಎಂದು ಗುರುತಿಸಲಾಗಿದೆ. ಶಂಕಿತ ಉಗ್ರ ಶುಕ್ರವಾರ ಬೆಂಗಳೂರು ವಿಮಾನ ನಿಲ್ದಾಣದಿಂದ ಸೌದಿಯ ಜಿದ್ದಾಗೆ ಹೊರಟಿದ್ದು, ಇಮಿಗ್ರೇಷನ್ ಅಧಿಕಾರಿಗಳು ನೀಡಿದ ಮಾಹಿತಿ ಮೆರೆಗೆ ಎನ್‌ಐಎ ಅಧಿಕಾರಿಗಳು ಶಂಕಿತನನ್ನು ಬಂಧಿಸಿದ್ದಾರೆ. ಈತ ತಮಿಳುನಾಡಿನ ಹಿಜ್ಬ್-ಉತ್-ತಹ್ರೀರ್ ಪ್ರಕರಣದ ಆರೋಪಿ ಎನ್ನಲಾಗಿದೆ.  

ಕೆಂಪೇಗೌಡ ಅಂತರಾಷ್ಟೀಯ ವಿಮಾನ ನಿಲ್ದಾಣದಲ್ಲಿ ಉಗ್ರನನ್ನು ಬಂಧಿಸಿದ ಎನ್‌ಐಎ..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top