crime

ಹಿಂದಿ- ಆಂಗ್ಲ ಭಾಷೆಯಲ್ಲಿ ಆನ್‌ಲೈನ್ ವಂಚಕರ ವ್ಯವಹಾರ

(ನ್ಯೂಸ್ ಕಡಬ) newskadaba.com ಉಡುಪಿ, ಆ. 31.  ಆನ್‌ಲೈನ್ ವಂಚಕರು ಹಿಂದಿ, ಆಂಗ್ಲ ಭಾಷೆಯಲ್ಲಿ ವ್ಯವಹರಿಸುತ್ತಾರೆ. ಆದ್ದರಿಂದ ಅಂತಹ ಕರೆ ಬಂದರೆ ಕನ್ನಡದಲ್ಲಿ ಉತ್ತರಿಸಿದರೆ ವಂಚನೆಯಿಂದ ಪಾರಾಗಬಹುದು ಎಂದು ಹೇಳಲಾಗುತ್ತಿತ್ತು. ಆದರೆ ಆ ನಂಬಿಕೆ ಈಗ ಸುಳ್ಳಾಗಿದ್ದು, ಕಟಪಾಡಿಯ ವ್ಯಕ್ತಿಯೊಬ್ಬರಿಗೆ ಕನ್ನಡದಲ್ಲೇ ಕರೆ ಮಾಡಿದ ವ್ಯಕ್ತಿಯೊಬ್ಬ ವಂಚಿಸಲು ಯತ್ನಿಸಿದ್ದಾನೆ. ಕಟಪಾಡಿಯ ಕಟ್ಟಡ ಸಾಮಗ್ರಿ ಸಾಗಾಟ ಲಾರಿ ಟೆಂಪೋ ಮಾಲಕರ ಸಂಘದ ಅಧ್ಯಕ್ಷ ಚಂದ್ರ ಪೂಜಾರಿ ಅವರಿಗೆ ಕರೆ ಮಾಡಿದ ಅಪರಿಚಿತ ವ್ಯಕ್ತಿಯೊಬ್ಬ ವಕೀಲನೆಂದು ಪರಿಚಯಿಸಿಕೊಂಡಿದ್ದಾನೆ. ಕರೆ ಮಾಡಿದ […]

ಹಿಂದಿ- ಆಂಗ್ಲ ಭಾಷೆಯಲ್ಲಿ ಆನ್‌ಲೈನ್ ವಂಚಕರ ವ್ಯವಹಾರ Read More »

ಕರಾವಳಿ, ಕ್ರೈಮ್ ನ್ಯೂಸ್
Theft, crime, Robbery

ಮಗುವಿನ ಕತ್ತಿನಲ್ಲಿದ್ದ ಚಿನ್ನದ ಸರ ಕಳವು..!

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 31. ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಮಗುವಿನ ಚಿನ್ನದ ಸರ ಮತ್ತು ಪೆಂಡೆಂಟ್ ಕಳವಾದ ಘಟನೆ ನಗರದ ಉರ್ವದಲ್ಲಿ ನಡೆದಿದೆ. ಅಮೃತ್ ಎಂಬವರು ರಾತ್ರಿ 9:30ಕ್ಕೆ ತನ್ನ ಎರಡೂವರೆ ವರ್ಷ ಪ್ರಾಯದ ಮೊಮ್ಮಗಳೊಂದಿಗೆ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮಕ್ಕೆ ತೆರಳಿದ್ದು, ರಾತ್ರಿ 10:30ಕ್ಕೆ ವಾಪಸ್ ಮನೆಗೆ ಹಿಂತಿರುಗುವಾಗ ಮೊಮ್ಮಗಳು ಧರಿಸಿದ್ದ ಅಂದಾಜು 70,000 ರೂ. ಮೌಲ್ಯದ ಚಿನ್ನದ ಸರ ಮತ್ತು ಸಣ್ಣ ಪೆಂಡೆಂಟ್ ಕಳವಾಗಿರುವುದು ಗಮನಕ್ಕೆ ಬಂದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಮಗುವಿನ ಕತ್ತಿನಲ್ಲಿದ್ದ ಚಿನ್ನದ ಸರ ಕಳವು..! Read More »

ಕರಾವಳಿ, ಕರ್ನಾಟಕ

ಹಿರಿಯ ರಾಜಕಾರಣಿ ಮಾಜಿ ಸಚಿವ ಕೆ.ಎಚ್‌ಶ್ರೀನಿವಾಸ್‌ ನಿಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 30.  ಶಿವಮೊಗ್ಗ ಹಾಗೂ ಸಾಗರ ಕ್ಷೇತ್ರದ ಮಾಜಿ ಶಾಸಕ ಹಾಗೂ ಮಾಜಿ ಸಚಿವ, ಹಿರಿಯ ರಾಜಕಾರಣಿ ಕೆ.ಎಚ್‌ಶ್ರೀನಿವಾಸ್‌ (86) ನಿಧನರಾಗಿದ್ದಾರೆ. ಸಾಗರ ತಾಲ್ಲೂಕು ಕಾನುಗೋಡು ಗ್ರಾಮದವರಾದ ಶ್ರೀನಿವಾಸ್‌ ಜನತಾ ಪರಿವಾರದಲ್ಲಿ ಗುರುತಿಸಿಕೊಂಡಿದ್ದರು. ಆನಂತರ ಕಾಂಗ್ರೆಸ್‌ನಲ್ಲೂ ಇದ್ದರು. ಮಾಜಿ ಸಿಎಂ ರಾಮಕೃಷ್ಣ ಹೆಗಡೆ ಅವರ ಆಪ್ತರಾಗಿದ್ದ ಅವರು ಸಾಂಸ್ಕೃತಿಕ ವಲಯದಲ್ಲೂ ಗುರುತಿಸಿಕೊಂಡಿದ್ದರು. ಕವನ ಸಂಕಲನಗಳನ್ನೂ ರಚಿಸಿದ್ದ ಅವರು ಸಿನಿಮಾದಲ್ಲೂ ಅಭಿನಯಿಸಿದ್ದರು. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಕಾನುಗೋಡು ಗ್ರಾಮದಲ್ಲಿ 1938ರ ಫೆಬ್ರವರಿ

ಹಿರಿಯ ರಾಜಕಾರಣಿ ಮಾಜಿ ಸಚಿವ ಕೆ.ಎಚ್‌ಶ್ರೀನಿವಾಸ್‌ ನಿಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚಲಿಸುತ್ತಿದ್ದ ರೈಲಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ..!   ಆರೋಪಿ ಅರೆಸ್ಟ್..!           

(ನ್ಯೂಸ್ ಕಡಬ) newskadaba.com ಉಡುಪಿ, ಆ. 30.  ಬೆಂಗಳೂರಿನಿಂದ ಕಾರವಾರಕ್ಕೆ ಚಲಿಸುತ್ತಿದ್ದ ರೈಲಿನಲ್ಲಿ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲ ಭಟ್ಕಳದ ವಿದ್ಯಾರ್ಥಿಯೊಬ್ಬನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಮೊಹಮ್ಮದ್ ಶುರೈಮ್ (22) ಎಂದು ಗುರುತಿಸಲಾಗಿದೆ. ಕಳೆದ ಭಾನುವಾರ ಬೆಳಿಗ್ಗೆ ರೈಲಿನಲ್ಲಿ ಬರುತ್ತಿದ್ದಾಗ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಭಾನುವಾರ ಮುಂಜಾನೆ ರೈಲು ಸಂಚರಿಸುತ್ತಿದ್ದಾಗಲೇ ಅಸಭ್ಯ ವರ್ತನೆ ತೋರುತ್ತಿದ್ದ ಆರೋಪಿ, ಯುವತಿಯ ಖಾಸಗಿ ಅಂಗಗಳನ್ನು ಮುಟ್ಟಿ ಕಾಮಚೇಷ್ಠೆ ತೀರಿಸಿಕೊಳ್ಳುತ್ತಿದ್ದ ಎನ್ನಲಾಗಿದೆ. ಇನ್ನೇನು ಉಡುಪಿಗೆ

ಚಲಿಸುತ್ತಿದ್ದ ರೈಲಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ..!   ಆರೋಪಿ ಅರೆಸ್ಟ್..!            Read More »

ಕರಾವಳಿ, ಕ್ರೈಮ್ ನ್ಯೂಸ್

ಬಸ್-ಆಟೋ ಡಿಕ್ಕಿ  ಚಿಕಿತ್ಸೆ ಸ್ಪಂದಿಸದೆ ಆಟೋ ಚಾಲಕ ಮೃತ್ಯು..! 

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 30. ಬಸ್ ಆಟೋ ಡಿಕ್ಕಿಯಾಗಿ ಆಟೋ ಚಾಲಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಮಂಗಳೂರು ನಗರದ ಹಂಪನಕಟ್ಟೆ ಖಾಸಗಿ ಹೊಟೇಲ್ ಬಳಿ ಇಂದು ನಡೆದಿದೆ. ಅವಘಡದಲ್ಲಿ ಆಟೋ ಚಾಲಕ ದೇವರಾಜ್ ಅವರಿಗೆ ಗಂಭೀರ ಗಾಯವಾಗಿದ್ದರಿಂದ ಅವರನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ದೇವರಾಜ್ ಅವರು, ಚಿಕಿತ್ಸೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಸ್ಥಳಕ್ಕೆ ಮಂಗಳೂರು ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ ಎಂದು ವರದಿ ತಿಳಿಸಿದೆ.  

ಬಸ್-ಆಟೋ ಡಿಕ್ಕಿ  ಚಿಕಿತ್ಸೆ ಸ್ಪಂದಿಸದೆ ಆಟೋ ಚಾಲಕ ಮೃತ್ಯು..!  Read More »

ಕರಾವಳಿ, ಕ್ರೈಮ್ ನ್ಯೂಸ್

ಅತ್ಯಾಚಾರ ಆರೋಪ ಪ್ರಕರಣ – ಪ್ರಜ್ವಲ್ ರೇವಣ್ಣಗೆ ಇನ್ ಕ್ಯಾಮರಾ ವಿಚಾರಣೆ ನಡೆಸುವಂತೆ ರಾಜ್ಯ ಸರಕಾರ ಮನವಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 29. ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣದ ಜಾಮೀನು ಅರ್ಜಿಗಳ ವಿಚಾರಣೆಯನ್ನು ಮುಚ್ಚಿದ ಕೊಠಡಿಯಲ್ಲಿ ನಡೆಸಲು ರಾಜ್ಯ ಸರಕಾರ ಮನವಿ ಮಾಡಿದೆ. ಪ್ರಕರಣದ ಸಂತ್ರಸ್ತೆಯ ಗುರುತು ಮರೆಮಾಚಲು ಇನ್‌ ಕ್ಯಾಮರಾ ವಿಚಾರಣೆಗೆ ಹೈಕೋರ್ಟ್‌ ಗೆ ಎಸ್‌ ಪಿಪಿ ರವಿವರ್ಮ ಕುಮಾರ್ ಮನವಿ ಮಾಡಿದರು. ಈ ಬಗ್ಗೆ ಮುಖ್ಯ ನ್ಯಾಯಮೂರ್ತಿಗಳು ತೀರ್ಮಾನಿಸುತ್ತಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ನ್ಯಾಯಮೂರ್ತಿ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ಮುಂದೂಡಿದೆ.

ಅತ್ಯಾಚಾರ ಆರೋಪ ಪ್ರಕರಣ – ಪ್ರಜ್ವಲ್ ರೇವಣ್ಣಗೆ ಇನ್ ಕ್ಯಾಮರಾ ವಿಚಾರಣೆ ನಡೆಸುವಂತೆ ರಾಜ್ಯ ಸರಕಾರ ಮನವಿ Read More »

ಕರ್ನಾಟಕ

ಎಕ್ಸ್ ಪ್ರೆಸ್‌ ವೇನಲ್ಲಿ ಹುಚ್ಚಾಟ- ಚಾಲಕರು ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಡ್ಯ, ಆ. 29. ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್‌ ವೇನಲ್ಲಿ ಹುಚ್ಚಾಟ ನಡೆಸಿ ಖಾಸಗಿ ಬಸ್ ಚಾಲಕ ಮತ್ತು ಸಹ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಚಾಲಕ ವಿರುದ್ಧ ದಿಕ್ಕಿನಲ್ಲಿ ಬಸ್ ಓಡಿಸುತ್ತಿರುವ ವೀಡಿಯೋವನ್ನು ಪ್ರಯಾಣಿಕರೊಬ್ಬರು ಮೊಬೈಲ್‌ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಪರಿಣಾಮ, ವಿಡಿಯೋ ನೋಡಿದ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಡಿಜಿಪಿ ಅಲೋಕ್ ಕುಮಾರ್ ರನ್ನು ಟ್ಯಾಗ್ ಮಾಡಿ ತನ್ನ ಎಕ್ಸ್ ಖಾತೆ ಮೂಲಕ ಈ ವೀಡಿಯೋ ಪೋಸ್ಟ್ ಮಾಡಲಾಗಿತ್ತು. ವಿಡಿಯೋ ವೈರಲ್

ಎಕ್ಸ್ ಪ್ರೆಸ್‌ ವೇನಲ್ಲಿ ಹುಚ್ಚಾಟ- ಚಾಲಕರು ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ರೇಣುಕಾಸ್ವಾಮಿ ಕೊಲೆ ಪ್ರಕರಣ- ಮತ್ತೆ ವಿಚಾರಣೆಗೆ ಹಾಜರಾದ ನಟ ಚಿಕ್ಕಣ್ಣ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 29. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ಚಿಕ್ಕಣ್ಣ ಇಂದು ಬಸವೇಶ್ವರನಗರದಲ್ಲಿರುವ ಎಸಿಪಿ ಕಚೇರಿಗೆ ಎರಡನೇ ಬಾರಿ ವಿಚಾರಣೆಗೆ ಹಾಜರಾಗಿದ್ದಾರೆ. ಆರೋಪಿ ದರ್ಶನ್ ಭೇಟಿಗೆ ಪರಪ್ಪನ ಅಗ್ರಹಾರ ಜೈಲಿಗೆ ಹೋಗಿದ್ದಕ್ಕೆ ಮತ್ತೆ ವಿಚಾರಣೆಗೆ ಕರೆಯಲಾಗಿದೆ ಎಂದು ವರದಿ ತಿಳಿಸಿದೆ. ಈ ಕುರಿತು ವಿಚಾರಣೆಯ ಬಳಿಕ ಚಿಕ್ಕಣ್ಣ ಮಾತನಾಡಿ, ನಾನು ಒಬ್ಬ ಸಾಕ್ಷಿದಾರನಾಗಿದ್ದುಕೊಂಡು ಹೋಗಿ ದರ್ಶನ್‌ ರನ್ನು ಮಾತನಾಡಿಸಬಾರದು ಅನ್ನೋದು ನನಗೆ ಗೊತ್ತಿರಲಿಲ್ಲ. ಹಾಗಾಗಿ ನಾನು ಪರಪ್ಪನ ಅಗ್ರಹಾರಕ್ಕೆ ಹೋಗಿ ದರ್ಶನ್

ರೇಣುಕಾಸ್ವಾಮಿ ಕೊಲೆ ಪ್ರಕರಣ- ಮತ್ತೆ ವಿಚಾರಣೆಗೆ ಹಾಜರಾದ ನಟ ಚಿಕ್ಕಣ್ಣ Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಿದ್ರೆಯಲ್ಲಿದ್ದ ಪತ್ನಿಯ ಕತ್ತು ಕೊಯ್ದು ಹತ್ಯೆ..! ಆರೋಪಿ ಅರೆಸ್ಟ್..!                     

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 29.  ಮೂರು ವರ್ಷಗಳ ಹಿಂದೆಯಷ್ಟೇ ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನು ಪತಿಯೊಬ್ಬ ಕತ್ತು ಕೊಯ್ದು ಹತ್ಯೆ ಮಾಡಿರುವ ಘಟನೆ ನಗರದ ಕೆಂಗೇರಿ ಉಪನಗರದಲ್ಲಿ ನಡೆದಿದೆ. ನವ್ಯಾ (25) ಹತ್ಯೆಯಾದ ದುರ್ದೈವಿ. ಆರೋಪಿಯನ್ನು ಆಕೆಯ ಪತಿ ಕಿರಣ್ ಎಂದು ಗುರುತಿಸಲಾಗಿದೆ. ಕ್ಯಾಬ್‌ ಚಾಲಕನಾಗಿದ್ದ ಕಿರಣ್‌, ಎಸ್‌ಎಂವಿ ಲೇಔಟ್‌ನ ಒಂದನೇ ಬ್ಲಾಕ್‌ನಲ್ಲಿ ನೆಲೆಸಿದ್ದರು. ಇತ್ತೀಚೆಗೆ ದಂಪತಿ ಮಧ್ಯೆ ಕೌಟುಂಬಿಕ ಕಾರಣಕ್ಕೆ ಮನಸ್ತಾಪ ಉಂಟಾಗಿತ್ತು. ಕಿರಣ್‌ ಅತಿಯಾಗಿ ಮದ್ಯ ಸೇವಿಸುತ್ತಿದ್ದರು. ದಂಪತಿ ಮಧ್ಯೆ ನಿತ್ಯ ಗಲಾಟೆಯಾಗುತ್ತಿತ್ತು

ನಿದ್ರೆಯಲ್ಲಿದ್ದ ಪತ್ನಿಯ ಕತ್ತು ಕೊಯ್ದು ಹತ್ಯೆ..! ಆರೋಪಿ ಅರೆಸ್ಟ್..!                      Read More »

ಕರ್ನಾಟಕ, ಕ್ರೈಮ್ ನ್ಯೂಸ್

ಜಪಾನ್‌ನಲ್ಲಿ ಅಪ್ಪಳಿಸಿದ ಶಾನ್‌ಶಾನ್‌ ಚಂಡಮಾರುತ- ಮೂರು ಮಂದಿ ಸಾವು

(ನ್ಯೂಸ್ ಕಡಬ) newskadaba.com ಟೋಕಿಯೊ, ಆ. 29.  ನೈರುತ್ಯ ಜಪಾನ್‌ ಕಾಗೋ ಶಿಮಾ ಪ್ರಾಂತ್ಯಕ್ಕೆ ಶಾನ್ ಶಾನ್‌ ಚಂಡಮಾರುತ ಅಪ್ಪಳಿಸಿದ್ದು, ಮೂರು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಭಾರಿ ಮಳೆ, ಗಾಳಿಯಿಂದಾಗಿ ಅನೇಕ ಮನೆಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ನೈರುತ್ಯ ಕ್ಯುಶು ದ್ವೀಪ ಪ್ರದೇಶದಲ್ಲಿ ಗಂಟೆಗೆ 198 ಕಿ.ಮೀ . ವೇಗದಲ್ಲಿ ಚಂಡಮಾರುತ ಅಪ್ಪಳಿಸಿದೆ ಎಂದು ಹವಾಮಾನ ಇಲಾಖೆಯ ವರದಿ ಮಾಡಿದೆ.ಅತ್ಯಂತ ಪ್ರಬಲ ಚಂಡಮಾರುತದ ಎಚ್ಚರ ನೀಡಿರುವ ಅಧಿಕಾರಿಗಳು, ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಲಕ್ಷಾಂತರ ಮಂದಿಗೆ ಸೂಚನೆ

ಜಪಾನ್‌ನಲ್ಲಿ ಅಪ್ಪಳಿಸಿದ ಶಾನ್‌ಶಾನ್‌ ಚಂಡಮಾರುತ- ಮೂರು ಮಂದಿ ಸಾವು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್
Scroll to Top