crime

 ಕೌಟುಂಬಿಕ ಕಲಹ      ಯುವಕನ ಬರ್ಬರ ಹತ್ಯೆ   

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.01. ಕೌಟುಂಬಿಕ ಕಲಹ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಿ-ಸಂಧಾನಕ್ಕೆಂದು ಸ್ನೇಹಿತನೊಂದಿಗೆ ಹೋಗಿದ್ದ ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆಯೊಂದು ರಾಮನಗರ ಟೌನ್ ನಲ್ಲಿ ನಡೆದಿದೆ. ರಾಮನಗರದ ರೆಹಮಾನಿಯಾ ನಗರದ ನಿವಾಸಿ ಸೈಯದ್ ಅಫ್ಸಾನ್ (28) ಎಂದು ಗುರುತಿಸಲಾಗಿದೆ.    

 ಕೌಟುಂಬಿಕ ಕಲಹ      ಯುವಕನ ಬರ್ಬರ ಹತ್ಯೆ    Read More »

ಕರ್ನಾಟಕ, ಕ್ರೈಮ್ ನ್ಯೂಸ್

 ಮಂಗಳೂರು: ವಿಚಾರಣಾಧೀನ ಕೈದಿಗಳು ಡ್ರಗ್ಸ್ ಸೇವಿಸಿರುವುದು ದೃಢ     ಮಂಗಳೂರು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ ವಾಲ್‌            

(ನ್ಯೂಸ್ ಕಡಬ)newskadaba.com ಮಂಗಳೂರು, ಆ.01. ಜಿಲ್ಲಾ ಕಾರಾಗೃಹದ 40 ಮಂದಿ ವಿಚಾರಣಾಧೀನ ಕೈದಿಗಳು ಡ್ರಗ್ಸ್ ಸೇವನೆ ಮಾಡಿರುವುದು ಪರೀಕ್ಷೆ ವೇಳೆ ಗೊತ್ತಾಗಿದೆ ಎಂದು ಮಂಗಳೂರು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ ವಾಲ್‌ ತಿಳಿಸಿದ್ದಾರೆ ಎಂದು ವರದಿ ತಿಳಿಸಿದೆ. ಇತ್ತೀಚೆಗೆ ಜೈಲಿಗೆ ದಾಳಿ ನಡೆಸಿದಾಗ 25 ಮೊಬೈಲ್‌, ಗಾಂಜಾ ಸ್ಯಾಚೆಟ್‌ಗಳು ಪತ್ತೆಯಾಗಿದ್ದವು. ಈ ಹಿನ್ನೆಲೆಯಲ್ಲಿ ಕಾರಾಗೃಹದಲ್ಲಿರುವ 389 ವಿಚಾರಣಾಧೀನ ಕೈದಿಗಳ ಪೈಕಿ 110 ಮಂದಿಯನ್ನು ಡ್ರಗ್ಸ್‌ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದರಲ್ಲಿ 40 ಮಂದಿಯಲ್ಲಿ ಪಾಸಿಟಿವ್‌ ಬಂದಿದೆ ಎಂದು ತಿಳಿಸಿದ್ದಾರೆ.

 ಮಂಗಳೂರು: ವಿಚಾರಣಾಧೀನ ಕೈದಿಗಳು ಡ್ರಗ್ಸ್ ಸೇವಿಸಿರುವುದು ದೃಢ     ಮಂಗಳೂರು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ ವಾಲ್‌             Read More »

ಕರಾವಳಿ, ಕ್ರೈಮ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ

(ನ್ಯೂಸ್ ಕಡಬ)newskadaba.com ಕಾರ್ಕಳ, ಜು.31. ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ಡಿಕ್ಕಿ ಹೊಡೆದು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ಕಾರ್ಕಳದಲ್ಲಿ ನಡೆದಿದೆ. ಇಳಿಜಾರು ತಿರುವು ರಸ್ತೆಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಬಲ ಭಾಗದಲ್ಲಿದ್ದ ವಿದ್ಯುತ್ ಟ್ರಾನ್ಸ್ ಫಾರ್ಮರ್ ಕಂಬಕ್ಕೆ ಡಿಕ್ಕಿಯಾಗಿ ಹೆದ್ದಾರಿ ಬದಿಗೆ ಅಳವಡಿಸಿದ ಕಬ್ಬಿಣದ ತಡೆಬೇಲಿಯ ಮೇಲೇರಿದೆ. ಘಟನೆಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬಗಳು ಹೆದ್ದಾರಿಗೆ ಬಿದ್ದು ವಾಹನ ಸಂಚಾರಕ್ಕೆ ಕೆಲ ಹೊತ್ತು

ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ Read More »

ಕರಾವಳಿ, ಕ್ರೈಮ್ ನ್ಯೂಸ್

ವಯನಾಡು ಭೂಕುಸಿತ ; ಅನೇಕ ಮಂದಿ ಮೃತ್ಯು…!     ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗಬಹುದು -ಕೇರಳ ಸಿಎಂ ಪಿಣರಾಯಿ    

(ನ್ಯೂಸ್ ಕಡಬ)newskadaba.com ಕೇರಳ, ಜು.31. ವಯನಾಡಿನಲ್ಲಿ ನಡೆದ ಭೂಕುಸಿತ ದುರಂತದಲ್ಲಿ ಈವರೆಗೆ ಅನೇಕ ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇದೇ ಅಂತಿಮ ಅಂಕಿ-ಅಂಶವಲ್ಲ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗಬಹುದು ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಆತಂಕ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಯನಾಡಲ್ಲಿ ಪ್ರಕೃತಿ ಪ್ರಕೋಪ ಆಗಿದ್ದು, ನಸುಕಿನ ಜಾವ 2 ಗಂಟೆ ಸುಮಾರಿಗೆ ಮೊದಲ ಜಲ ಸ್ಫೋಟ ಸಂಭವಿಸಿತ್ತು. 4.10ಕ್ಕೆ ಎರಡನೇ ಸ್ಫೋಟ ಉಂಟಾಗಿತ್ತು. ಐವರು ಸಚಿವರು ಸತತವಾಗಿ ಕೆಲಸ ಮಾಡುತ್ತಿದ್ದಾರೆ. 18 ಮೃತದೇಹಗಳನ್ನು ಕುಟುಂಬದವರಿಗೆ

ವಯನಾಡು ಭೂಕುಸಿತ ; ಅನೇಕ ಮಂದಿ ಮೃತ್ಯು…!     ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗಬಹುದು -ಕೇರಳ ಸಿಎಂ ಪಿಣರಾಯಿ     Read More »

ಕರಾವಳಿ

ಸಮುದ್ರ ತೀರದಲ್ಲಿ ಅಪರಿಚಿತ ಮೃತದೇಹ ಪತ್ತೆ…!

(ನ್ಯೂಸ್ ಕಡಬ)newskadaba.com ಬೀಜಾಡಿ, ಜು.31. ಸಮುದ್ರ ತೀರದಲ್ಲಿ ಅಪರಿಚಿತ ಮೃತದೇಹವೊಂದು ಪತ್ತೆಯಾಗಿದ್ದು, ಈ ಕುರಿತು ಪೋಲಿಸ್ ಇಲಾಖೆಗೆ ಇನ್ನೂ ಮಾಹಿತಿ ನೀಡಿಲ್ಲ ಎಂದು ವರದಿ ತಿಳಿಸಿದೆ. ಸ್ಥಳೀಯರು ಈ ವಿಚಾರವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಮೃತದೇಹದ ಗುರುತು ಪತ್ತೆ ಹಚ್ಚಲು ಅಧಿಕಾರಿಗಳು ಹಾಗೂ ಸಾರ್ವಜನಿಕರು ಮುಂದಾಗಬೇಕೆಂದು ಕೋರಲಾಗಿದೆ. ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದ್ದು, ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ.

ಸಮುದ್ರ ತೀರದಲ್ಲಿ ಅಪರಿಚಿತ ಮೃತದೇಹ ಪತ್ತೆ…! Read More »

ಕ್ರೈಮ್ ನ್ಯೂಸ್

ಖಾಸಗಿ ಬಸ್ ಗಳ ನಡುವೆ ಅಪಘಾತ…! ಹಲವಾರು ಪ್ರಯಾಣಿಕರಿಗೆ ಗಾಯ

(ನ್ಯೂಸ್ ಕಡಬ)newskadaba.com ಉಡುಪಿ, ಜು.31. ಎರಡು ಖಾಸಗಿ ಬಸ್‌ ಗಳ ನಡುವೆ ಅಪಘಾತ ಸಂಭವಿಸಿ ಹಲವು ಮಂದಿ ಗಾಯಗೊಂಡ ಘಟನೆ ಉಡುಪಿಯಲ್ಲಿ ವರದಿಯಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ದುರ್ಗಾಂಬಾ ಬಸ್, ಅಂಬಾಜಿ ಬಸ್‌ ನ ಹಿಂಬದಿಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ದುರ್ಗಾಂಬ ಬಸ್‌ ನ ಚಾಲಕ ಮತ್ತು ಹಲವಾರು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದ್ದು, ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಖಾಸಗಿ ಬಸ್ ಗಳ ನಡುವೆ ಅಪಘಾತ…! ಹಲವಾರು ಪ್ರಯಾಣಿಕರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ವಿದ್ಯುತ್ ಸ್ಪರ್ಶಿಸಿ 6 ಜಾನುವಾರುಗಳು ಬಲಿ…!

(ನ್ಯೂಸ್ ಕಡಬ)newskadaba.com ಕೊಡಗು, ಜು.30. ವಿದ್ಯುತ್ ತಂತಿ ತುಂಡಾಗಿ ಬಿದ್ದು ವಿದ್ಯುತ್ ಹರಿದು 6 ಜಾನುವಾರು (ಹಸು, ಕರುಗಳು ) ಬಲಿ ಯಾಗಿರುವ ಘಟನೆ ಕೊಡಗಿನಲ್ಲಿ ವರದಿಯಾಗಿದೆ. ಜಾನುವಾರುಗಳು ಕೊಟ್ಟಿಗೆಗೆ ಬರುತ್ತಿದ್ದ ವೇಳೆ 11 ಕೆವಿ ವಿದ್ಯುತ್ ತಂತಿ ತುಂಡಾಗಿ ಬಿದ್ದು ಈ ದುರ್ಘಟನೆ ಸಂಭವಿಸಿದೆ. ಮೇಯಲು ಬಿಟ್ಟಿದ್ದ ಜಾನುವಾರುಗಳು ಸಂಜೆ 7 ಗಂಟೆಯಾದರೂ ಮನೆಗೆ ಹಿಂತಿರುಗದಿದ್ದಾಗ ಮಾಲೀಕರು ಜಾನುವಾರುಗಳು ಹುಡುಕಿಕೊಂಡು ಹೋಗಿದ್ದಾರೆ. ಈ ವೇಳೆ ಘಟನೆ ಬೆಳಕಿಗೆ ಬಂದಿದೆ. ಬಳಿಕ ಚಾಮುಂಡೇಶ್ವರಿ ವಿದ್ಯುಚ್ಛಕ್ತಿ ಸರಬರಾಜು ನಿಗಮದ

ವಿದ್ಯುತ್ ಸ್ಪರ್ಶಿಸಿ 6 ಜಾನುವಾರುಗಳು ಬಲಿ…! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಳ್ಳಾಲ: ಮರಳು ಮಾಫಿಯಾ ಪ್ರಕರಣ…!    ತನಿಖಾ ಸಮಿತಿಯಿಂದ ತಿಂಗಳಾದರೂ ಸಲ್ಲಿಕೆಯಾಗದ ವರದಿ

(ನ್ಯೂಸ್ ಕಡಬ)newskadaba.com ಉಳ್ಳಾಲ, ಜು.30. ಅರ್ಧದಷ್ಟು ದ್ವೀಪವನ್ನೇ ನುಂಗಿರುವ ಪಾವೂರು- ಉಳಿಯ ಅಕ್ರಮ ಮರಳುಗಾರಿಕೆ ಕುರಿತು ವರದಿ ಮಾಡಿದ ಬೆನ್ನಲ್ಲೇ ಜಿಲ್ಲಾಡಳಿತ ಮಂಗಳೂರು ಉಪ ವಿಭಾಗ ದಂಡಾಧಿಕಾರಿ ನೇತೃತ್ವದಲ್ಲಿ ಪೊಲೀಸ್‌ ಇಲಾಖೆ ಹಾಗೂ ಏಳು ಸದಸ್ಯರನ್ನು ಒಳಗೊಂಡ ಸಮಿತಿಗೆ ವಾರದೊಳಗೆ ಸರಕಾರಕ್ಕೆ ವರದಿ ಸಲ್ಲಿಸಲು ಆದೇಶ ನೀಡಿದ್ದರೂ, ವಾರ ಕಳೆದು ತಿಂಗಳಾದರೂ ಸಮಿತಿಯ ವರದಿ ಮಾತ್ರ ಜಿಲ್ಲಾಡಳಿತ ಕೈಸೇರಿಲ್ಲ ಎನ್ನಲಾಗಿದೆ. ಪತ್ರಿಕೆಗಳು ಹಾಗೂ ದೃಶ್ಯ ಮಾಧ್ಯಮಗಳು ಜನಗಾಗೃತಿ ಹಿನ್ನೆಲೆಯಲ್ಲಿ ನಿರಂತರವಾಗಿ ವರದಿ ಪ್ರಕಟಿಸಿದ ಪರಿಣಾಮವಾಗಿ ತನಿಖೆಗೆ ಒತ್ತಾಯಿಸಿದ್ದ

ಉಳ್ಳಾಲ: ಮರಳು ಮಾಫಿಯಾ ಪ್ರಕರಣ…!    ತನಿಖಾ ಸಮಿತಿಯಿಂದ ತಿಂಗಳಾದರೂ ಸಲ್ಲಿಕೆಯಾಗದ ವರದಿ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಯುವಕನ ಮೇಲೆ ಪೊಲೀಸರಿಂದ ಹಲ್ಲೆ ಆರೋಪ…! ಗಾಯಾಳು ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ)newskadaba.com ಪುತ್ತೂರು, ಜು.30. ಪೊಲೀಸರು ಮನೆಗೆ ನುಗ್ಗಿ ವಿನಾಕಾರಣ ಯುವಕನೋರ್ವನ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದ್ದು, ಗಾಯಾಳು ಆಸ್ಪತ್ರೆಗೆ ದಾಖಲಾಗಿದ್ದ ಘಟನೆ ಈಶ್ವರಮಂಗಲ ಪಂಚೋಡಿಯಲ್ಲಿ ನಡೆದಿದೆ. ಎಸಿ ಟೆಕ್ನಿಷಿಯನ್ ಆಗಿರುವ ಭ್ರಮೀಷ್ ಅವರ ಮೇಲೆ ಪೊಲೀಸರು ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ ಎನ್ನಲಾಗಿದೆ. ರಾತ್ರಿ 11 ಗಂಟೆ ಸುಮಾರಿಗೆ ತಾನು ಮನೆಯಲ್ಲಿ ಮಲಗಿದ್ದಾಗ ಬಾಗಿಲು ತಟ್ಟುವ ಶಬ್ದ ಕೇಳಿಸಿತು. ಬಾಗಿಲು ತೆರೆದಾಗ ನಾಲ್ವರು ಪೊಲೀಸರು ಮನೆಯಲ್ಲಿ ಬೇರೆ ಯಾರಾದರೂ ಇದ್ದಾರೆಯೇ ಎಂದು ಕೇಳಿದರು.

ಪುತ್ತೂರು: ಯುವಕನ ಮೇಲೆ ಪೊಲೀಸರಿಂದ ಹಲ್ಲೆ ಆರೋಪ…! ಗಾಯಾಳು ಆಸ್ಪತ್ರೆಗೆ ದಾಖಲು Read More »

ಕರಾವಳಿ

ಹಳಿತಪ್ಪಿದ ಹೌರಾ-ಸಿಎಸ್‌ಎಂಟಿ ಎಕ್ಸ್‌ ಪ್ರೆಸ್‌     ಇಬ್ಬರು ಮೃತ್ಯು, 20 ಮಂದಿಗೆ ಗಾಯ    

(ನ್ಯೂಸ್ ಕಡಬ)newskadaba.com  ನವದೆಹಲಿ, ಜು.30. ಇಂದು ಮುಂಜಾನೆ ಜಾರ್ಖಂಡ್‌ ನ ಚಕ್ರಧರಪುರ ಜಿಲ್ಲೆಯ ರಾಜ್‌ಖರ್ಸಾವನ್ ಮತ್ತು ಬಡಬಾಂಬೋ ನಡುವೆ 12810 ಹೌರಾ-ಸಿಎಸ್‌ಎಂಟಿ ಎಕ್ಸ್‌ ಪ್ರೆಸ್‌ ನ 18 ಬೋಗಿಗಳು ಹಳಿತಪ್ಪಿ ಇಬ್ಬರು ಮೃತಪಟ್ಟು 20 ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಆಗ್ನೇಯ ರೈಲ್ವೆಯ (SER) ಚಕ್ರಧರಪುರ ವಿಭಾಗದ ಅಡಿಯಲ್ಲಿ ಜಮ್ಶೆಡ್‌ಪುರದಿಂದ 80 ಕಿಮೀ ದೂರದಲ್ಲಿರುವ ಬಾರಾಬಾಂಬೂ ಬಳಿ ಇಂದು ನಸುಕಿನ ಜಾವ 3.45ಕ್ಕೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ.  

ಹಳಿತಪ್ಪಿದ ಹೌರಾ-ಸಿಎಸ್‌ಎಂಟಿ ಎಕ್ಸ್‌ ಪ್ರೆಸ್‌     ಇಬ್ಬರು ಮೃತ್ಯು, 20 ಮಂದಿಗೆ ಗಾಯ     Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top