crime

ಮಂಗಳೂರು: ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ಫೆ. 23. ನಾಪತ್ತೆಯಾಗಿದ್ದ ಯುವಕನ ಮೃತದೇಹವು ನೇತ್ರಾವತಿ ನದಿಯಲ್ಲಿ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಮೃತ ಯುವಕನನ್ನು ಉಳ್ಳಾಲ ತಾಲೂಕಿನ ಸೋಮೇಶ್ವರ ಮೂಡ ಬಡಾವಣೆ ನಿವಾಸಿ ಗೌತಮ್ ಎಮ್ ಎಂದು ಗುರುತಿಸಲಾಗಿದೆ. ಫೈನಾನ್ಸ್ ಸೀಸರ್ ಆಗಿದ್ದ ಗೌತಮ್ ಸೋಮವಾರದದು ತೊಕ್ಕೊಟ್ಟಿನಲ್ಲಿ ನಡೆದಿದ್ದ ಬಬ್ಬುಸ್ವಾಮಿ ದೈವದ ಪುನರ್ ಪ್ರತಿಷ್ಟೆ ಪ್ರಯುಕ್ತ ಕಲಶಾಭಿಶೇಕದ ಹೊರೆಕಾಣಿಕೆಯಲ್ಲಿ ಭಾಗವಹಿಸಿ ಮನೆಗೆ ತೆರಳಿದ್ದನು. ಬಳಿಕ ರಾತ್ರಿ ವೇಳೆ ಮನೆಯಿಂದ ಹೊರಹೋಗಿದ್ದ ಗೌತಮ್ ಮತ್ತೆ ವಾಪಸಾಗದ ಹಿನ್ನೆಲೆ ಮರುದಿನ ಮನೆಯವರು ಉಳ್ಳಾಲ […]

ಮಂಗಳೂರು: ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದ ಯುವಕ ಹೃದಯಾಘಾತದಿಂದ ಮೃತ್ಯು

(ನ್ಯೂಸ್ ಕಡಬ) newskadaba.com ಸುರತ್ಕಲ್, ಫೆ. 22. ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ ಯುವಕನೋರ್ವ ಮೃತಪಟ್ಟಿರುವ ಘಟನೆ ಇಡ್ಯಾ ಬೀಚ್‌ ನಲ್ಲಿ ನಡೆದಿದೆ. ಮೃತಪಟ್ಟವ ಯುವಕನನ್ನು ಮೂಲತಃ ಕುಳಾಯಿ ನಿವಾಸಿ ಸದ್ಯ ಚೊಕ್ಕಬೆಟ್ಟು 8ನೇ ಬ್ಲಾಕ್ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಚಾಯಬ್ಬ ಎಂಬವರ ಮಗ ಅಸ್ಗರ್ (32) ಎಂದು ಗುರುತಿಸಲಾಗಿದೆ. ಚಾಲಕ ವೃತ್ತಿ ಮಾಡುತ್ತಿದ್ದ ಅಸ್ಗರ್ ಬುಧವಾರದಂದು ಮಧ್ಯಾಹ್ನ ಇಡ್ಯಾ ಮಸೀದಿ ಸಮೀಪದ ಬೀಚ್‌ ನಲ್ಲಿ ಸ್ನಾನಕೆಂದು ಬಂದಿದ್ದ ವೇಳೆ ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ ಎಂದು

ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದ ಯುವಕ ಹೃದಯಾಘಾತದಿಂದ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 22. ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಗಳಿಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಬಂಧಿತ ಆರೋಪಿಗಳು ಮೊಹಮ್ಮದ್ ಅಬ್ದುಲ್ ಫಯಾನ್ (26) ಮತ್ತು ಮೊಯಿದ್ದೀನ್ ಹಾಫಿಸ್ ಅಲಿಯಾಸ್ ಅಭಿ (47) ಎಂದು ಗುರುತಿಸಲಾಗಿದೆ. ಮೊಹಮ್ಮದ್ ಅಬ್ದುಲ್ ಫಯಾನ್ ಎಂಬಾತ ಕಳ್ಳತನ, ಕೊಲೆ ಯತ್ನ ಮತ್ತು ಅಧಿಕಾರಿಗಳ ಮೇಲೆ ಹಲ್ಲೆ ಸೇರಿದಂತೆ 23 ಪ್ರಕರಣಗಳಲ್ಲಿ ಭಾಗಿಯಾಗಿರುವ ವ್ಯಕ್ತಿಯಾಗಿದ್ದು, ಜಾಮೀನಿನ ಮೇಲೆ ಬಿಡುಗಡೆಯಾಗಿ ಬಳಿಕ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ

ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಗಳ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಹರಿಯಾಣ ಗಡಿಯಲ್ಲಿ ಪ್ರತಿಭಟನಾ ನಿರತ ರೈತ ಮೃತ್ಯು!

(ನ್ಯೂಸ್ ಕಡಬ) newskadaba.com ಚಂಡೀಗಢ, ಫೆ. 22. ಹರಿಯಾಣದ ಖಾನೌರಿ ಗಡಿಯಲ್ಲಿ ಪ್ರತಿಭಟನಾ ನಿರತ ರೈತರೊಬ್ಬರು ಮೃತಪಟ್ಟಿದ್ದು, ಪೊಲೀಸರೊಂದಿಗೆ ರೈತರು ಘರ್ಷಣೆಗಿಳಿದಿದ್ದಾರೆ. ಮೃತ ರೈತನನ್ನು 23 ವರ್ಷದ ಶುಭಕರಣ್ ಸಿಂಗ್ ಎಂದು ಗುರುತಿಸಲಾಗಿದೆ. ಪೊಲೀಸರು ರೈತರನ್ನು ಚದುರಿಸಲು ಅಶ್ರುವಾಯು ಸೇರಿದಂತೆ ವಿವಿಧ ರೀತಿಯ ಕ್ರಮಗಳನ್ನು ಅನುಸರಿಸುತ್ತಿದ್ದರು, ಈ ವೇಳೆ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ರೈತರು ತಮ್ಮ ಪ್ರತಿಭಟನಾ ಮೆರವಣಿಗೆಯನ್ನು ಸ್ಥಗಿತಗೊಳಿಸಿದ್ದಾರೆ. ಖಾನೌರಿ ಗಡಿ ಪ್ರತಿಘಟನೆಯಲ್ಲಿ ಭಾಗವಹಿಸಿದ್ದ ರೈತರ ಪೈಕಿ ಮೂವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಲ್ಲಿ

ಹರಿಯಾಣ ಗಡಿಯಲ್ಲಿ ಪ್ರತಿಭಟನಾ ನಿರತ ರೈತ ಮೃತ್ಯು! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಕ್ರಮ‌ ಮರಳು ಸಾಗಾಟ – ಟಿಪ್ಪರ್ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ಫೆ. 21. ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್ ನ್ನು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ವಶಕ್ಕೆ ಪಡೆದು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಸೋಮೇಶ್ವರ ಉಚ್ಚಿಲದಲ್ಲಿ ನಡೆದಿದೆ. ಉಚ್ಚಿಲ ಬಟಪ್ಪಾಡಿಯಿಂದ ಮರಳು ತುಂಬಿಸಿ ಸಾಗಾಟ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಟಿಪ್ಪರ್ ನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ದಾಳಿಯ ವೇಳೆ ಟಿಪ್ಪರ್ ಚಾಲಕ ತಲೆಮರೆಸಿಕೊಂಡಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಅಕ್ರಮ‌ ಮರಳು ಸಾಗಾಟ – ಟಿಪ್ಪರ್ ಪೊಲೀಸ್ ವಶಕ್ಕೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸ್ಕೂಟರ್ ಗೆ ಲಾರಿ ಢಿಕ್ಕಿ – ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ ಅರುಣ್ ಕುಮಾರ್ ಪುತ್ತಿಲ

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ. 21. ಸ್ಕೂಟರ್ ಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ದರ್ಬೆ ಬೈಪಾಸ್ ವೃತ್ತದ ಬಳಿ ನಡೆದಿದೆ. ಗಾಯಗೊಂಡ ಸ್ಕೂಟರ್ ಸವಾರನನ್ನು ನೆಲ್ಲಿಕಟ್ಟೆ ಚಿಕ್ಕಪುತ್ತೂರು ನಿವಾಸಿ ದಿವಾಕರ ಮಡಿವಾಳ ಎಂದು ಗುರುತಿಸಲಾಗಿದೆ. ಸ್ಕೂಟರ್ ಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ದಿವಾಕರ ಅವರು ಗಂಭೀರ ಗಾಯಗೊಂಡಿದ್ದರು. ಈ ಸಂದರ್ಭ ಅದೇ ದಾರಿಯಾಗಿ ಹೋಗುತ್ತಿದ್ದ ಅರುಣ್ ಕುಮಾರ್ ಪುತ್ತಿಲರವರು ಗಾಯಾಳುವನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಿ ಬಳಿಕ

ಸ್ಕೂಟರ್ ಗೆ ಲಾರಿ ಢಿಕ್ಕಿ – ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ ಅರುಣ್ ಕುಮಾರ್ ಪುತ್ತಿಲ Read More »

ಕರಾವಳಿ, ಕ್ರೈಮ್ ನ್ಯೂಸ್

ಅಪ್ರಾಪ್ತ ಬಾಲಕಿಗೆ ಕಿರುಕುಳ – ಹೋಟೆಲ್ ಮಾಲಕ ಅರೆಸ್ಟ್

(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ. 21. ಹೋಟೆಲ್ ಮಾಲಕನೋರ್ವ ಅಪ್ರಾಪ್ತ ಬಾಲಕಿಗೆ ದೈಹಿಕ ಹಿಂಸೆ ನೀಡಿದ ಘಟನೆ ಸಜೀಪ ನಡು ಗ್ರಾಮದಲ್ಲಿ ನಡೆದಿದೆ.   ಆರೋಪಿಯನ್ನು ಸಜೀಪ ನಡು ಗ್ರಾಮದ ಅಬ್ದುಲ್ಲಾ ಎಂದು ಗುರುತಿಸಲಾಗಿದೆ. ಈತನಿಂದ ಅಪ್ರಾಪ್ತ ಶಾಲಾ ಬಾಲಕಿಗೆ ದೈಹಿಕ ಹಿಂಸೆ ನೀಡಿರುವ ಬಗ್ಗೆ ಬಾಲಕಿಯ ತಾಯಿ ಗ್ರಾಮಾಂತರ ಪೋಲೀಸ್ ಠಾಣೆಗೆ ದೂರು ನೀಡಿದ್ದು, ಆರೋಪಿ ವಿರುದ್ದ ಪೋಕ್ಸೋ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಎಸ್. ಐ.ಮೂರ್ತಿ ಹಾಗೂ ಸಿಬ್ಬಂದಿಗಳು ಬಂಧಿಸಿದ್ದಾರೆ.

ಅಪ್ರಾಪ್ತ ಬಾಲಕಿಗೆ ಕಿರುಕುಳ – ಹೋಟೆಲ್ ಮಾಲಕ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಅನುಮಾನಾಸ್ಪದವಾಗಿ ನಿಲ್ಲಿಸಿದ್ದ ಕಾರಿನಲ್ಲಿ ತಲವಾರು ಪತ್ತೆ-ನಾಲ್ವರು ವಶಕ್ಕೆ

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ. 20. ಅನುಮಾನಾಸ್ಪದವಾಗಿ ನಿಂತಿದ್ದ ಕಾರಿನಲ್ಲಿ ತಲವಾರು ಪತ್ತೆಯಾಗಿದ್ದು, ಕಾರಿನಲ್ಲಿದ್ದ ನಾಲ್ವರನ್ನು ಪುತ್ತೂರು ಪೊಲೀಸರು ವಶಕ್ಕೆ ಪಡೆದ ಘಟನೆ ಮುಕ್ರಂಪಾಡಿ ಜಂಕ್ಷನ್ ನಲ್ಲಿ ಸೋಮವಾರದಂದು ತಡರಾತ್ರಿ ನಡೆದಿದೆ. ಪುತ್ತೂರು ನಗರ ಪೊಲೀಸ್ ನಿರೀಕ್ಷಕ ಸತೀಶ್ ಜಿ.ಜೆ ಎಂಬವರು ಠಾಣೆಯ ಸಿಬ್ಬಂದಿಗಳೊಂದಿಗೆ ಕೆಮ್ಮಿಂಜೆ ಗ್ರಾಮದ ಮುಕ್ರಂಪಾಡಿ ಎಂಬಲ್ಲಿ ಅನುಮಾನಾಸ್ಪದವಾಗಿ ನಿಂತಿದ್ದ ಕಾರೊಂದನ್ನು ಪರಿಶೀಲಿಸಿದಾಗ ಕಾರಿನಲ್ಲಿ ತಲವಾರು ಪತ್ತೆಯಾಗಿದೆ. ಈ ಕುರಿತು ಹೆಚ್ಚಿನ ವಿಚಾರಣೆಗಾಗಿ ಕಾರಿನಲ್ಲಿದ್ದ ಕಿಶೋರ್, ಮನೋಜ್, ಆಶಿಕ್ ಹಾಗೂ ಸನತ್ ಕುಮಾರ್

ಪುತ್ತೂರು: ಅನುಮಾನಾಸ್ಪದವಾಗಿ ನಿಲ್ಲಿಸಿದ್ದ ಕಾರಿನಲ್ಲಿ ತಲವಾರು ಪತ್ತೆ-ನಾಲ್ವರು ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಅಪ್ರಾಪ್ತ ಬಾಲಕನಿಂದ ಕಾರು ಚಾಲನೆ – ಮಹಿಳೆಗೆ ಢಿಕ್ಕಿ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 20. ಅಪ್ರಾಪ್ತ ಬಾಲಕನೋರ್ವ ಚಲಾಯಿಸುತ್ತಿದ್ದ ಕಾರೊಂದು ಮಹಿಳೆಯೋರ್ವರಿಗೆ ಢಿಕ್ಕಿ ಹೊಡೆದು, ಮಹಿಳೆ ಗಂಭೀರ ಗಾಯಗೊಂಡ ಘಟನೆ ಮಂಗಳೂರು ನಗರ ಹೊರವಲಯದ ಮೂಡುಶೆಡ್ಡೆಯಲ್ಲಿ ನಡೆದಿದೆ. ಗಾಯಗೊಂಡ ಮಹಿಳೆಯನ್ನು ಮೂಡುಶೆಡ್ಡೆ ನಿವಾಸಿ ಮಮತಾ ಎಂದು ಗುರುತಿಸಲಾಗಿದೆ. ಮಮತಾ ಅವರು ಎಂದಿನಂತೆ ಕೆಲಸಕ್ಕೆ ಹೋಗಲು ಬಸ್ ಗಾಗಿ ಕಾಯುತ್ತಿದ್ದ ವೇಳೆ ಕಾರೊಂದು ಅವರಿಗೆ ಢಿಕ್ಕಿ ಹೊಡೆದಿದೆನ್ನಲಾಗಿದೆ. ಅಪಘಾತಕ್ಕೀಡಾದ ಕಾರನ್ನು 9ನೇ ತರಗತಿಯ ಬಾಲಕ ಚಾಲನೆ ಮಾಡುತ್ತಿದ್ದುದಾಗಿ ಮಾಹಿತಿ ಲಭ್ಯವಾಗಿದ್ದು, ನಿರ್ಲಕ್ಷ್ಯತನದ ಚಾಲನೆಯೇ ಅಪಘಾತಕ್ಕೆ ಕಾರಣ

ಅಪ್ರಾಪ್ತ ಬಾಲಕನಿಂದ ಕಾರು ಚಾಲನೆ – ಮಹಿಳೆಗೆ ಢಿಕ್ಕಿ Read More »

ಕರಾವಳಿ, ಕರ್ನಾಟಕ

ನಿರ್ಮಾಣ ಹಂತದ ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಬೈಂದೂರು, ಫೆ. 20. ನಿರ್ಮಾಣ ಹಂತದ ಬಾವಿಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಇಲ್ಲಿಗೆ ಸಮೀಪದ ಬಡಾಕೆರೆ ಎಂಬಲ್ಲಿ ಸೋಮವಾರದಂದು ರಾತ್ರಿ ವೇಳೆ ನಡೆದಿದೆ. ಮೃತರನ್ನು ಬಡಾಕೆರೆಯ ವಿಜಯ ಪೂಜಾರಿ(60) ಎಂದು ಗುರುತಿಸಲಾಗಿದೆ. ಇವರು ರಾತ್ರಿ ವೇಳೆ ನಿರ್ಮಾಣ ಹಂತದಲ್ಲಿದ್ದ 35 ಅಡಿ ಆಳದ ನೀರಿಲ್ಲದ ಬಾವಿಗೆ ಅಕಸ್ಮಿಕವಾಗಿ ಬಿದ್ದಿದ್ದಾರೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮಂಗಳವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದ್ದು, ಸಾಮಾಜಿಕ ಕಾರ್ಯಕರ್ತ ಸುರೇಶ್ ಖಾರ್ವಿ

ನಿರ್ಮಾಣ ಹಂತದ ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top