crime

ಗ್ರಾಹಕರ ಸೋಗಿನಲ್ಲಿ ಬಂದು 1.98ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಂಚನೆ

(ನ್ಯೂಸ್ ಕಡಬ) newskadaba.com ಉಡುಪಿ, ಫೆ. 20. ಗ್ರಾಹಕರ ಸೋಗಿನಲ್ಲಿ ಚಿನ್ನದಂಗಡಿಗೆ ಬಂದ ಮಹಿಳೆಯರು ನಕಲಿ ಚಿನ್ನಾಭರಣ ಕೊಟ್ಟು ಲಕ್ಷಾಂತರ ರೂ. ಮೌಲ್ಯದ ಅಸಲಿ ಚಿನ್ನಾಭರಣ ಪಡೆದುಕೊಂಡು ಹೋಗಿ ವಂಚಿಸಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ ಕನಕದಾಸ ರಸ್ತೆಯಲ್ಲಿರುವ ನಿತ್ಯಾನಂದ ಎಂಬವರ ಅಂಗಡಿಗೆ ಗ್ರಾಹಕರ ಸೋಗಿನಲ್ಲಿ ಬಂದ ಅಂದಾಜು 35ರಿಂದ 45ವರ್ಷ ಪ್ರಾಯದ ಮೂವರು ಬುರ್ಖಧಾರಿ ಮಹಿಳೆಯರು, 15,800 ಗ್ರಾಂ. ತೂಕದ ಒಂದು ಚಿನ್ನದ ಚೈನ್ ಮತ್ತು 10.150 ಗ್ರಾಂ ತೂಕದ ಚಿನ್ನದ ಬ್ರಾಸ್ಲೆಟ್ ಖರೀದಿಸಿ, ಇದಕ್ಕೆ […]

ಗ್ರಾಹಕರ ಸೋಗಿನಲ್ಲಿ ಬಂದು 1.98ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

ನೆಲ್ಯಾಡಿ: ಮರದಿಂದ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಫೆ. 20. ಮರದಿಂದ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಯಾಡಿ ಹೊಸಮಜಲು ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಬಲ್ಯ ಗ್ರಾಮದ ಹೊಸಮನೆ ನಿವಾಸಿ ರಮೇಶ ಎಂದು ಗುರುತಿಸಲಾಗಿದೆ. ರಮೇಶ್ ಅವರು ಬೆಂಗಳೂರಿನಲ್ಲಿ ಲಾರಿ ಚಾಲಕರಾಗಿದ್ದು ಪತ್ನಿ ಹಾಗೂ ಮಕ್ಕಳೊಂದಿಗೆ ಹೊಸಮಜಲು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ರಜೆಯ ನಿಮಿತ್ತ ಊರಿಗೆ ಬಂದಿದ್ದ ಅವರು ಫೆ. 18ರಂದು ಸಂಜೆ ಹೊಸಮಜಲುನಲ್ಲಿ ಮನೆ ಸಮೀಪದ ಮಾವಿನ ಮರಕ್ಕೆ ಮಾವಿನ ಮಿಡಿ

ನೆಲ್ಯಾಡಿ: ಮರದಿಂದ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ

ಬೀದಿ ನಾಯಿಗಳ ದಾಳಿ- ಬಾಲಕ ಗಂಭೀರ

(ನ್ಯೂಸ್ ಕಡಬ) newskadaba.com ಬಾಗಲಕೋಟೆ, ಫೆ. 20. ನಾಲ್ಕು ವರ್ಷದ ಬಾಲಕನ ಮೇಲೆ ಬೀದಿನಾಯಿಗಳ ಗುಂಪು ದಾಳಿ ನಡೆಸಿದ ಪರಿಣಾಮ ಬಾಲಕ ಗಂಭೀರ ಗಾಯಗೊಂಡ ಘಟನೆ ಜಿಲ್ಲೆಯ ಜಮಖಂಡಿ ತಾಲೂಕಿನಲ್ಲಿ ನಡೆದಿದೆ. ಗಾಯಗೊಂಡ ಬಾಲಕನನ್ನು ನಾಲ್ಕು ವರ್ಷದ ಉಮರ್ ಯಾಸಿನ್ ಎಂದು ಗುರುತಿಸಲಾಗಿದೆ. ಬೀದಿ ನಾಯಿಗಳು ಬಾಲಕನ ಮೂಗು, ಬಾಯಿ, ತೊಡೆಗೆ ಕಚ್ಚಿದ್ದರಿಂದ ಗಂಭೀರ ಗಾಯಗೊಂಡ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯನ್ನು ಖಂಡಿಸಿದ ಸ್ಥಳೀಯರು ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಿಸುವಂತೆ ಆಗ್ರಹಿಸಿದ್ದಾರೆ.

ಬೀದಿ ನಾಯಿಗಳ ದಾಳಿ- ಬಾಲಕ ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಬೈಕ್ ಹಾಗೂ ಬಸ್ ನಡುವೆ ಅಪಘಾತ- ಸವಾರ ಮೃತ್ಯು..!

(ನ್ಯೂಸ್ ಕಡಬ) newskadaba.com ಕಡಬ, ಫೆ. 19. ಬೈಕ್ ಗೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಮೃತಪಟ್ಟ ಘಟನೆ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಿಳಿನೆಲೆ ಎಂಬಲ್ಲಿ ಸೋಮವಾರದಂದು ನಡೆದಿದೆ. ಮೃತ ಬೈಕ್ ಸವಾರನನ್ನು ಕೊಂಬಾರು ಮಣಿಭಾಂಡ ತೇರೆಬೀದಿ ನಿವಾಸಿ ನೆಟ್ಟಣದಲ್ಲಿ ಮೆಕ್ಯಾನಿಕ್ ಆಗಿದ್ದ ವಾಸುದೇವ ಗೌಡ ಎಂದು ಗುರುತಿಸಲಾಗಿದೆ. ಕೆಎಸ್ಸಾರ್ಟಿಸಿ ಬಸ್ ಓವರ್ ಟೇಕ್ ಮಾಡುವ ಭರದಲ್ಲಿ ಎದುರುನಿಂದ ಬಂದ ಬೈಕ್ ಗೆ ಢಿಕ್ಕಿ ಹೊಡೆದಿದ್ದು, ಗಂಭೀರ ಗಾಯಗೊಂಡ ವಾಸುದೇವರನ್ನು

ಕಡಬ: ಬೈಕ್ ಹಾಗೂ ಬಸ್ ನಡುವೆ ಅಪಘಾತ- ಸವಾರ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಯುವರಾಜ್ ಸಿಂಗ್​ ತಾಯಿ ಮನೆಯಲ್ಲಿದ್ದ ಹಣ, ಚಿನ್ನಾಭರಣ ಕಳ್ಳತನ

(ನ್ಯೂಸ್‌ ಕಡಬ)newskadaba.com ಹರಿಯಾಣ, ಫೆ.18: ಕ್ರಿಕೆಟರ್ ಯುವರಾಜ್ ಸಿಂಗ್​ ಅವರ ಅಮ್ಮ ವಾಸವಿರುವ ಹರಿಯಾಣದ ಪಂಚಕುಲದಲ್ಲಿರುವ ನಿವಾಸದಲ್ಲಿ ಕಳ್ಳತನವಾಗಿದೆ. ಮನೆಯ ಕಬೋರ್ಡ್​ನಲ್ಲಿ ಸುಮಾರು 75,000 ರೂ. ನಗದು ಮತ್ತು ಆಭರಣ ಕಳವು ಮಾಡಲಾಗಿದೆ ಎಂದು ಯುವಿ ತಾಯಿ ಶಭ್​ನಮ್ ಸಿಂಗ್ ಹೇಳಿದ್ದಾರೆ. ಯುವಿ ಮನೆಯಲ್ಲಿ ಕೆಲಸ ಮಾಡುವ ಕೆಲವು ಕೆಲಸಗಾರರ ಮೇಲೆ ಅನುಮಾನ ವ್ಯಕ್ತಪಡಿಸಲಾಗಿದೆ. ಮನೆಯ ಸಹಾಯಕಿ ಲಲಿತಾ ದೇವಿ, ಅಡುಗೆ ಸಿಬ್ಬಂದಿ ಸಿಲ್ದರ್ ಪಾಲ್ ಮೇಲೆ ಅನುಮಾನ ಇದೆ ಎನ್ನಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ

ಯುವರಾಜ್ ಸಿಂಗ್​ ತಾಯಿ ಮನೆಯಲ್ಲಿದ್ದ ಹಣ, ಚಿನ್ನಾಭರಣ ಕಳ್ಳತನ Read More »

ಕ್ರೈಮ್ ನ್ಯೂಸ್

ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ: ಮೂವರು ಕಾರ್ಮಿಕರು ಸಜೀವದಹನ

(ನ್ಯೂಸ್‌ ಕಡಬ)newskadaba.com ಬೆಂಗಳೂರು,ಫೆ.18: ಪರ್ಫ್ಯೂಮ್ ಫ್ಯಾಕ್ಟರಿ ಅಗ್ನಿ ಅವಘಡದಲ್ಲಿ ಮೂವರು ಕಾರ್ಮಿಕರು ದುರ್ಮರಣ ಹೊಂದಿರುವಂತಹ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ರಾಮಸಂದ್ರದಲ್ಲಿ ದುರಂತ ಸಂಭವಿಸಿದೆ. ಬೆಂಕಿಯಲ್ಲಿ ಸಿಲುಕಿ ಮೂವರು ಕಾರ್ಮಿಕರು ಸಜೀವದಹನವಾಗಿದ್ದು, ಇನ್ನೂ ಕೆಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಪರ್ಫ್ಯೂಮ್ ಕೆಮಿಕಲ್‌ ಸ್ಫೋಟಗೊಂಡ ಪರಿಣಾಮ ಆಕಸ್ಮಿಕ ಬೆಂಕಿಯಿಂದ ಪರ್ಫ್ಯೂಮ್ ಫ್ಯಾಕ್ಟರಿ ಹೊತ್ತಿ ಉರಿಯುತ್ತಿದೆ. ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸುತ್ತಿದ್ದಾರೆ. ಈ ಘಟನೆಯಲ್ಲಿ ಗಂಭೀರ ಗಾಯಗೊಂಡ ಅಲ್ಲಾಭಕ್ಷ, ಅಫ್ರೋಜ್, ರಿಯಾಜ್, ಸಾಧಿಕ್,

ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ: ಮೂವರು ಕಾರ್ಮಿಕರು ಸಜೀವದಹನ Read More »

ಕರ್ನಾಟಕ

ದೇವಸ್ಥಾನದ ಕೆರೆಯಲ್ಲಿ ಯುವಕನ ಮೃತದೇಹ ಪತ್ತೆ…!

(ನ್ಯೂಸ್ ಕಡಬ) newskadaba.com ಉಡುಪಿ, ಫೆ. 16. ದೇವಸ್ಥಾನದ ಕೆರೆಯೊಂದರಲ್ಲಿ ಯುವಕನೋರ್ವನ ಮೃತದೇಹ ಪತ್ತೆಯಾಗಿರುವ ಕುರಿತು ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಇನ್ನಂಜೆ ಗ್ರಾಮದ ಉಂಡಾರು ಎಂಲ್ಲಿಂದ ವರದಿಯಾಗಿದೆ. ಮೃತ ಯುವಕನನ್ನು ಪಡುಬಿದ್ರಿ ನಿವಾಸಿ ವಿನಯ್ ರಾವ್  (26) ಎಂದು ಗುರುತಿಸಲಾಗಿದೆ. ಈತ ಗುರುವಾರದಂದು ರಾತ್ರಿ 12 ಗಂಟೆ ವೇಳೆಗೆ ದೇವಸ್ಥಾನದ ಬಳಿ ತಿರುಗಾಡುತ್ತಿರುವ ದೃಶ್ಯ ಸಿಸಿ ಕ್ಯಾಮರದಲ್ಲಿ ಪತ್ತೆಯಾದ ಹಿನ್ನೆಲೆ ಈತ ದೇವಸ್ಥಾನದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಕಾಪು

ದೇವಸ್ಥಾನದ ಕೆರೆಯಲ್ಲಿ ಯುವಕನ ಮೃತದೇಹ ಪತ್ತೆ…! Read More »

ಕರಾವಳಿ, ಕ್ರೈಮ್ ನ್ಯೂಸ್

‘ಕರಿಮಣಿ ಮಾಲಿಕ ನೀನಲ್ಲ’ ರೀಲ್ಸ್ ಎಫೆಕ್ಟ್ – ಪತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಫೆ. 16. ʼಕರಿಮಣಿ ಮಾಲಿಕ ನೀನಲ್ಲʼ ಎಂಬ ಹಾಡಿಗೆ ಪತ್ನಿ ಮಾಡಿದ ರೀಲ್ಸ್ನಿಂದ ನೊಂದ ಪತಿಯೊಬ್ಬ ಜಮೀನಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಪಿ.ಜಿ.ಪಾಳ್ಯ ಗ್ರಾಮದ ಕುಮಾರ್ (33) ಎಂದು ಗುರುತಿಸಲಾಗಿದೆ. ಮೃತ ಕುಮಾರ್ ಪತ್ನಿ ರೂಪಾ ಎಂಬಾಕೆ, ಸೋದರ ಮಾವ ಹಾಗೂ ಸಹೋದರನ ಜೊತೆ ಸೇರಿ ಕರಿಮಣಿ ಮಾಲಿಕ ನೀನಲ್ಲ ಎಂಬ ಹಾಡಿಗೆ ರೀಲ್ಸ್ ಮಾಡಿ

‘ಕರಿಮಣಿ ಮಾಲಿಕ ನೀನಲ್ಲ’ ರೀಲ್ಸ್ ಎಫೆಕ್ಟ್ – ಪತಿ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ತಂಡದಿಂದ ಯುವಕನ ಮೇಲೆ ಹಲ್ಲೆ

(ನ್ಯೂಸ್ ಕಡಬ) newskadaba.com ಸುಳ್ಯ, ಫೆ. 15. ಯುವಕನೋರ್ವ ರಿಕ್ಷಾದಲ್ಲಿ ಬರುತ್ತಿದ್ದ ಸಂದರ್ಭ ತಂಡವೊಂದು ಹಲ್ಲೆ ನಡೆಸಿದ ಘಟನೆ ತಾಲೂಕಿನ ಅಜ್ಜಾವರ ಗ್ರಾಮದ ಕಾಟಿಪಳ್ಳ ಎಂಬಲ್ಲಿ ನಡೆದಿದೆ. ಹಲ್ಲೆಗೊಳಗಾದ ಯುವಕ ಅಜಿತ್‌ ಎಂಬಾತನನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದ್ದು, ಯುವಕನಿಗೆ ಹಲ್ಲೆ ನಡೆಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ ಎನ್ನಲಾಗಿದೆ.

ಸುಳ್ಯ: ತಂಡದಿಂದ ಯುವಕನ ಮೇಲೆ ಹಲ್ಲೆ Read More »

ಕರಾವಳಿ, ಕ್ರೈಮ್ ನ್ಯೂಸ್

ವಾಹನಗಳ ಬ್ಯಾಟರಿ ಕಳವು ಪ್ರಕರಣ- ಸೊತ್ತು ಸಹಿತ ಆರೋಪಿ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 15. ವಾಹನಗಳ ಬ್ಯಾಟರಿ ಕಳವು ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೋರ್ವನನ್ನು ಬಂಧಿಸಿರುವ ಕೊಣಾಜೆ ಪೊಲೀಸರು 3.90 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿರುವ ಕುರಿತು ವರದಿಯಾಗಿದೆ. ಬಂಧಿತ ಆರೋಪಿಯನ್ನು ರಿಯಾಝ್ ಎಂದು ಗುರುತಿಸಲಾಗಿದೆ. ಆರೋಪಿಯಿಂದ ಒಟ್ಟು 3,90,000 ರೂ. ಮೌಲ್ಯದ ಕಳವುಗೈದ ಬ್ಯಾಟರಿಗಳು ಹಾಗೂ ಕೃತ್ಯಕ್ಕೆ ಬಳಸಿದ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಾಹನಗಳ ಬ್ಯಾಟರಿ ಕಳವು ಪ್ರಕರಣ- ಸೊತ್ತು ಸಹಿತ ಆರೋಪಿ ವಶಕ್ಕೆ Read More »

ಕರಾವಳಿ, ಕರ್ನಾಟಕ
Scroll to Top