crime

ಪೈಶಾಚಿಕ ಕೃತ್ಯ- 2 ವರ್ಷದ ಮಗುವಿನ ಮೇಲೆ ಅತ್ಯಾಚಾರ..!

(ನ್ಯೂಸ್ ಕಡಬ) newskadaba.com ಕೊಡಗು, ಫೆ. 15. 2 ವರ್ಷದ ಮಗುವಿನ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗಿರುವ ಬೀಭತ್ಸ ಘಟನೆ ಕೊಡಗು ಜಿಲ್ಲೆಯ ಸಿದ್ದಾಪುರ ಪೊಲೀಸ್‌ ಠಾಣಾ ವ್ಯಾಪ್ತಿಯ ಎಸ್ಟೇಟ್ ನಲ್ಲಿ ನಡೆದಿದೆ. ಕುಡಿದ ಮತ್ತಿನಲ್ಲಿ ಕಾಮುಕ ಮಣಿ ಎಂಬಾತ ಮಗುವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಸದ್ಯ ಮಗುವನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಪೈಶಾಚಿಕ ಕೃತ್ಯ- 2 ವರ್ಷದ ಮಗುವಿನ ಮೇಲೆ ಅತ್ಯಾಚಾರ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ. 15. ಚಲಿಸುತ್ತಿದ್ದ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ತುಮಕೂರಿನ  ಮಹಿಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರದಂದು ಬೆಳಿಗ್ಗೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ತುಮಕೂರು ಜಿಲ್ಲೆಯ ನಯನ ಎಂ.ಜಿ. ಎಂದು ಆಕೆಯ ಬ್ಯಾಗ್ ನಲ್ಲಿ ಸಿಕ್ಕಿರುವ ಆಧಾರ್ ಕಾರ್ಡ್ ನ ಮಾಹಿತಿಯಂತೆ ರೈಲ್ವೇ ಪೋಲೀಸರು ಬಂಟ್ವಾಳ ನಗರ ಠಾಣಾ ಪೋಲೀಸರಿಗೆ ನೀಡಿದ್ದಾರೆ. ಕಣ್ಣೂರು-ಬೆಂಗಳೂರು-ಮಂಗಳೂರು ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಬಿಸಿರೋಡಿನ ನೇತ್ರಾವತಿ ನದಿಯ ರೈಲ್ವೆ ಓವರ್ ಬ್ರಿಡ್ಜ್ ನಲ್ಲಿ ರೈಲಿನಿಂದ ಹಾರಿ ಆತ್ಮಹತ್ಯೆ

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ Read More »

ಕರಾವಳಿ

ಬಂಟ್ವಾಳ: ಲಾರಿ ಮತ್ತು ರಿಕ್ಷಾ ನಡುವೆ ಅಪಘಾತ- ಚಾಲಕನಿಗೆ ಗಾಯ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ. 12. ಲಾರಿ ಮತ್ತು ರಿಕ್ಷಾದ ನಡುವೆ ನಡೆದ ಅಪಘಾತ ಸಂಭವಿಸಿ, ರಿಕ್ಷಾ ಚಾಲಕನೋರ್ವ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಇಲ್ಲಿನ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ. ಗಾಯಗೊಂಡ ರಿಕ್ಷಾ ಚಾಲಕನನ್ನು ಚೇತನ್ ಎಂದು ಗುರುತಿಸಲಾಗಿದೆ. ಢಿಕ್ಕಿಯ ರಭಸಕ್ಕೆ ಆಟೋ ರಿಕ್ಷಾ ಸಂಪೂರ್ಣ ಜಖಂಗೊಂಡಿದೆ. ಆದರೆ ಚಾಲಕ ಚೇತನ್ ಅವರ ಕಾಲಿಗೆ ಸ್ವಲ್ಪ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಪೋಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಬಂಟ್ವಾಳ: ಲಾರಿ ಮತ್ತು ರಿಕ್ಷಾ ನಡುವೆ ಅಪಘಾತ- ಚಾಲಕನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ಕಾರಿಗೆ ಬೈಕ್‌ ಡಿಕ್ಕಿ- ಸವಾರರಿಗೆ ಗಾಯ

(ನ್ಯೂಸ್ ಕಡಬ) newskadaba.com ಸುಳ್ಯ, ಫೆ. 12. ಕಾರಿನ ಹಿಂಭಾಗಕ್ಕೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ರಸ್ತೆಗೆಸೆಯಲ್ಪಟ್ಟು, ಗಾಯಗೊಂಡ ಘಟನೆ ಅರಂತೋಡಿನ ಹೈಸ್ಕೂಲ್ ಬಳಿ ಇಂದು ಬೆಳಿಗ್ಗೆ ನಡೆದಿದೆ. ಸುಳ್ಯದ ಶೋ ರೂಮ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕರು, ಅರಂತೋಡಿನಿಂದ ಸುಳ್ಯದ ಕಡೆ ತೆರಳುತ್ತಿದ್ದ ವೇಳೆ, ಮುಂಭಾಗದಿಂದ ತೆರಳುತ್ತಿದ್ದ ಕಾರಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ರಸ್ತೆಗೆಸೆಯಲ್ಪಟ್ಟ ಸವಾರರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಸುಳ್ಯ: ಕಾರಿಗೆ ಬೈಕ್‌ ಡಿಕ್ಕಿ- ಸವಾರರಿಗೆ ಗಾಯ Read More »

ಕರಾವಳಿ, ಕರ್ನಾಟಕ

ಉಳ್ಳಾಲ: ಸೋಮೇಶ್ವರ ಸಮುದ್ರತೀರದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ಫೆ. 12. ಸೋಮೇಶ್ವರ ಸಮುದ್ರತೀರದಲ್ಲಿ ಅಪರಿಚಿತ ಮೃತದೇಹವೊಂದು ಇಂದು ಮಧ್ಯಾಹ್ನದ ವೇಳೆ ಪತ್ತೆಯಾಗಿರುವ ಕುರಿತು ವರದಿಯಾಗಿದೆ. ಮೃತರು ಬಿಳಿ ಅಂಗಿ ಕಪ್ಪು ಪ್ಯಾಂಟ್ ಧರಿಸಿದ್ದು, ಇಂದು ಬೆಳಗ್ಗೆ ಸಮುದ್ರ ತೀರದ ರುದ್ರಪಾದೆಯಿಂದ ವ್ಯಕ್ತಿಯೋರ್ವರು ಸಮುದ್ರಕ್ಕೆ ಹಾರಿರುವುದನ್ನು ದೇವಸ್ಥಾನದ ಅರ್ಚಕರೊಬ್ಬರು ಕಂಡಿದ್ದರು ಎನ್ನಲಾಗಿದೆ. ಸ್ಥಳಕ್ಕಾಗಮಿಸಿದ ಉಳ್ಳಾಲ ಪೊಲೀಸರು ವ್ಯಕ್ತಿಯ ಗುರುತು ಪತ್ತೆ ಹಚ್ಚುವಿಕೆಗೆ ಕ್ರಮಕೈಗೊಂಡಿದ್ದಾರೆ.

ಉಳ್ಳಾಲ: ಸೋಮೇಶ್ವರ ಸಮುದ್ರತೀರದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬಸ್ ಢಿಕ್ಕಿ- ದ್ವಿಚಕ್ರ ವಾಹನ ಸವಾರ ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 12. ಕೆಎಸ್ಸಾರ್ಟಿಸಿ ಬಸ್‌ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರನೋರ್ವ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಅಡ್ಯಾರ್‌ ಸಮೀಪದ ಅರ್ಕುಳ ದ್ವಾರದ ಬಳಿ ಸಂಭವಿಸಿದೆ. ಮೃತ ಸವಾರನನ್ನು ಸ್ಥಳೀಯ ನಿವಾಸಿ ಚರಣ್‌ ರಾಜ್‌ ಎಂದು ಗುರುತಿಸಲಾಗಿದೆ. ಇವರು ಒಳರಸ್ತೆಯಿಂದ ಹೆದ್ದಾರಿಗೆ ಪ್ರವೇಶಿಸುತ್ತಿದ್ದ ಸಂದರ್ಭ ಬಸ್‌ ಢಿಕ್ಕಿಯಾಗಿದೆ ಎನ್ನಲಾಗಿದೆ. ಅವೈಜ್ಞಾನಿಕ ಕಾಮಗಾರಿಯಿಂದಾಗಿ ಪದೇ ಪದೇ ಅಪಘಾತಗಳು ಸಂಭವಿಸುತ್ತಿದ್ದ, ಇದಕ್ಕೆ ಹೆದ್ದಾರಿ ಪ್ರಾಧಿಕಾರದ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಸ್ ಢಿಕ್ಕಿ- ದ್ವಿಚಕ್ರ ವಾಹನ ಸವಾರ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಡೆಕಲ್ಲಿಗೆ ದೋಣಿ ಬಡಿದು ಮೀನುಗಾರನ ದಾರುಣ ಅಂತ್ಯ

(ನ್ಯೂಸ್ ಕಡಬ) newskadaba.com ಉಳ್ಳಾಲ, ಜ. 13.  ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದರ ಹಗ್ಗ ತುಂಡಾದ ಪರಿಣಾಮ ಸಮುದ್ರದ ನಡುವೆ ಕಲ್ಲೊಂದಕ್ಕೆ ಬಡಿದು ಮೀನುಗಾರರೊಬ್ಬರು ಮೃತಪಟ್ಟ ಘಟನೆ ಮೊಗವೀರಪಟ್ಣ ಸಮೀಪದ ಆಳ ಸಮುದ್ರದಲ್ಲಿ ನಡೆದಿದೆ. ಮೃತ ಮೀನುಗಾರನನ್ನು ತಿರುವನಂತಪುರ ನಿವಾಸಿ ಮೊಗವೀರಪಟ್ಣದಲ್ಲಿ ನೆಲೆಸಿದ್ದ ಮೈಕಲ್ (60) ಎಂದು ಗುರುತಿಸಲಾಗಿದೆ. ಮೃತರು, ಮಹಮ್ಮದ ಕಲಂದರ್ ಷಾ ಮಾಲಕತ್ವದ ನಾಡದೋಣಿಯಲ್ಲಿ ಮೈಕಲ್ ಸೇರಿದಂತೆ ಮೀನುಗಾರಿಕೆಗೆ ತೆರಳಿ, ಸಮುದ್ರದ ಮದ್ಯದಲ್ಲಿ ಬಂಡೆಯೊಂದರ ಸಮೀಪ ಮೀನು ಹಿಡಿಯಲು ಬಲೆ ಬೀಸಿ ದೋಣಿಯಲ್ಲಿ ಕುಳಿತಿದ್ದರು. ಈ ಸಂದರ್ಭದಲ್ಲಿ

ಬಂಡೆಕಲ್ಲಿಗೆ ದೋಣಿ ಬಡಿದು ಮೀನುಗಾರನ ದಾರುಣ ಅಂತ್ಯ Read More »

ಕರಾವಳಿ, ಕ್ರೈಮ್ ನ್ಯೂಸ್

ಮತ್ತೆ ಸೇನಾ ವಾಹನದ ಮೇಲೆ ಉಗ್ರರ ದಾಳಿ..!

(ನ್ಯೂಸ್ ಕಡಬ) newskadaba.com ಶ್ರೀನಗರ, ಜ. 13. ಜಮ್ಮು-ಕಾಶ್ಮೀರದ ಪೂಂಛ್ ಪ್ರದೇಶದಲ್ಲಿ ಉಗ್ರಗಾಮಿಗಳು ಸಿಎಒ ಸೇನಾ ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ಸೇನಾ ಪಡೆಗಳು ಪ್ರತಿದಾಳಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಕುರಿತು ಸೇನಾಪಡೆ ಟ್ವೀಟ್ ಮಾಡಿರುವ ಮಾಹಿತಿ ಪ್ರಕಾರ, ಪೂಂಛ್ ನ ಕೃಷ್ಣ ಘಾಟಿ ಪ್ರದೇಶದ ಬಳಿ ಇರುವ ಬೆಟ್ಟದ ಮೇಲಿಂದ ಉಗ್ರರು ದಾಳಿ ನಡೆಸಿದ್ದಾರೆ. ಪ್ರತಿಯಾಗಿ ಸೈನಿಕರು ಪ್ರತಿದಾಳಿ ನಡೆಸಿದ್ದಾರೆ. ಇನ್ನು ಪ್ರತಿದಾಳಿ ನಡೆಸಿದ ಸಂದರ್ಭ ಭಯೋತ್ಪಾದಕರು ಕಾಡಿನೊಳಗೆ

ಮತ್ತೆ ಸೇನಾ ವಾಹನದ ಮೇಲೆ ಉಗ್ರರ ದಾಳಿ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೀನಿನ ಬಲೆ ಎಳೆಯುವಾಗ ದುರಂತ – ಆಯತಪ್ಪಿ ಸಮುದ್ರಕ್ಕೆ ಬಿದ್ದು ಮೀನುಗಾರ ಮೃತ್ಯು

(ನ್ಯೂಸ್ ಕಡಬ) newskadaba.com ಉಳ್ಳಾಲ, ಜ. 13.  ಮೀನುಗಾರಿಕೆಯ ವೇಳೆ ಮೀನಿಗೆ ಹಾಕಿದ್ದ ಬಲೆ ಎಳೆಯುವ ಸಂದರ್ಭ ಸಮುದ್ರಕ್ಕೆ ಜಾರಿ ಬಿದ್ದು, ಮೀನುಗಾರರೊಬ್ಬರು ಮೃತಪಟ್ಟ ಘಟನೆ ಉಳ್ಳಾಲ ಸಮುದ್ರದಿಂದ ಕೆಲವು ಮಾರು ದೂರದಲ್ಲಿ ನಡೆದಿದೆ. ಮೃತ ಮೀನುಗಾರನನ್ನು ಮೊಗವೀರಪಟ್ಣ ನಿವಾಸಿ ತುಳಸೀರಾಮ್ (62) ಎಂದು ಗುರುತಿಸಲಾಗಿದೆ. ಮೊಗವೀರಪಟ್ಣ ನಿವಾಸಿ ಕಿರನ್ ಪುತ್ರನ್ ಎಂಬವರಿಗೆ ಸೇರಿದ್ದ ‘ವಾಸವಿ’ ಪರ್ಸಿನ್ ಎಂಬ ಬೋಟ್‍ನಲ್ಲಿ ತುಳಸಿರಾಮ್ ಸೇರಿದಂತೆ 30 ಜನ ಮೀನುಗಾರರು ಮೀನುಗಾರಿಕೆಗೆ ತೆರಳಿದ್ದರು. ಸಮುದ್ರ ಮದ್ಯದಲ್ಲಿ ಬಲೆ ಹಾಕಿ ಮಲಗಿದ್ದ ಮೀನುಗಾರರು

ಮೀನಿನ ಬಲೆ ಎಳೆಯುವಾಗ ದುರಂತ – ಆಯತಪ್ಪಿ ಸಮುದ್ರಕ್ಕೆ ಬಿದ್ದು ಮೀನುಗಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮಹಿಳೆಯ ಬ್ಯಾಗ್ ನಿಂದ ನಗದು ಕಳವು-ದೂರು ದಾಖಲು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 12. ಮಹಿಳೆಯೋರ್ವರ ಬ್ಯಾಗ್ ನಿಂದ ನಗದು ಕಳವು ಮಾಡಿರುವ  ಘಟನೆ ಬಿಸಿರೋಡು ಬಸ್ ನಿಲ್ದಣದಲ್ಲಿ  ನಡೆದಿದೆ.   ಪ್ರೇಮ ಎಂಬವರು  ಬೊಳಿಯಾರಿನಿಂದ ಧರ್ಮಸ್ಥಳ ಕಡೆಗೆ ಹೊರಟು, ಬಿಸಿರೋಡಿಗೆ ಬಂದಿಳಿದು ಬಳಿಕ ಮಗುವನ್ನು ಕೈಯಲ್ಲಿ ಹಿಡಿದುಕೊಂಡು ಧರ್ಮಸ್ಥಳ ಬಸ್ ಗೆ ಹತ್ತುವ ವೇಳೆ ಬ್ಯಾಗ್ ನಿಂದ ಹಣವನ್ನು ಕಳವು ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು ಈ ಬಗ್ಗೆ ಬಂಟ್ವಾಳ ನಗರ ಪೋಲಿಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.      

ಮಹಿಳೆಯ ಬ್ಯಾಗ್ ನಿಂದ ನಗದು ಕಳವು-ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top