crime

ಕಾರು ಡಿಕ್ಕಿ- ಪಾದಾಚಾರಿ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಕಾಪು, ನ. 23. ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದು ಹೋಗುತ್ತಿದ್ದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮೂಳೂರು ಎಂಬಲ್ಲಿ ನಡೆದಿದೆ.   ಮೃತ ಮಹಿಳೆಯನ್ನು ಮೂಳೂರು ಮಹಾಲಕ್ಷ್ಮಿ ನಗರದ ನಿವಾಸಿ ಲೀಲಾವತಿ ಸಾಲಿಯಾನ್ (65) ಎಂದು ಗುರುತಿಸಲಾಗಿದೆ. ಲೀಲಾವತಿಯವರು ಮೂಳೂರಿನ ಅಂಚೆ ಕಚೇರಿಯಿಂದ ಹಣ ಪಡೆದು ಮನೆಗೆ ಮರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಲೀಲಾವತಿ ಗಾಳಿಗೆ ಹಾರಿ ರಸ್ತೆಗೆ […]

ಕಾರು ಡಿಕ್ಕಿ- ಪಾದಾಚಾರಿ ಮಹಿಳೆ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ನಿಲ್ಲಿಸಿದ್ದ ಲಾರಿಗೆ ಆಟೋ ರಿಕ್ಷಾ ಢಿಕ್ಕಿ- ಚಾಲಕನಿಗೆ ಗಾಯ

(ನ್ಯೂಸ್ ಕಡಬ) newskadaba.com ಸುರತ್ಕಲ್‌, ನ. 23. ಮುಕ್ಕ ಚೆಕ್‌ಪೋಸ್ಟ್‌ ಬಳಿ ಹೆದ್ದಾರಿ ಬದಿ ನಿಲ್ಲಿಸಲಾಗಿದ್ದ ಲಾರಿಯೊಂದರ ಹಿಂಭಾಗಕ್ಕೆ ಆಟೋರಿಕ್ಷಾವೊಂದು ಢಿಕ್ಕಿ ಹೊಡೆದ ಪರಿಣಾಮ ಚಾಲಕ ಗಾಯಗೊಂಡ ಘಟನೆ ನಡೆದಿದೆ. ಗಾಯಗೊಂಡ ರಿಕ್ಷಾ ಚಾಲಕನನ್ನು ಮಯ್ಯದ್ದಿ ಎಂದು ಗುರುತಿಸಲಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾವುದೇ ಫಲಕ ಅಳವಡಿಸದೇ ಲಾರಿ ನಿಲ್ಲಿಸಿದ ಚಾಲಕ ಕಳಸಪ್ಪ ಎಂಬಾತನ ವಿರುದ್ದ ಪ್ರಕರಣ ದಾಖಲಾಗಿದೆ.

ನಿಲ್ಲಿಸಿದ್ದ ಲಾರಿಗೆ ಆಟೋ ರಿಕ್ಷಾ ಢಿಕ್ಕಿ- ಚಾಲಕನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ರೈಲಿಗೆ ಸಿಲುಕಿ ಸ್ಟೇಷನ್ ಮಾಸ್ಟರ್ ಮೃತ್ಯು..!

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ನ. 23. ರೈಲಿಗೆ ಸಿಲುಕಿ ರೈಲ್ವೇ ಸ್ಟೇಷನ್ ಮಾಸ್ಟರ್ ಓರ್ವರು ಮೃತಪಟ್ಟಿರುವ ಘಟನೆ ಶಿವಮೊಗ್ಗ ತಾಲ್ಲೂಕಿನ ಕುಂಸಿಯಲ್ಲಿ ನಡೆದಿದೆ. ಮೃತರನ್ನು ಬಿಹಾರ ಮೂಲದ, ಆನಂದಪುರ ರೈಲ್ವೆ ನಿಲ್ದಾಣದ ಸ್ಟೇಷನ್ ಮಾಸ್ಟರ್ ಅರುಣ್‍ಕುಮಾರ್ ಎಂದು ಗುರುತಿಸಲಾಗಿದೆ. ಬುಧವಾರ ಬೆಳಗ್ಗೆ ಬೆಂಗಳೂರಿನಿಂದ ರೈಲಿನಲ್ಲಿ ಆಗಮಿಸಿದ ಅವರು ಕುಮ್ಸಿ ನಿಲ್ದಾಣದಲ್ಲಿ ಇಳಿದಿದ್ದರು. ಈ ಸಂಬಂಧ ಶಿವಮೊಗ್ಗ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ರೈಲಿಗೆ ಸಿಲುಕಿ ಸ್ಟೇಷನ್ ಮಾಸ್ಟರ್ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಂಕಿ ಅವಘಡ- ಹೊಟೇಲ್ ರೂಂನಲ್ಲಿದ್ದ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ನ. 23. ಹೊಟೇಲ್ ರೂಂ ಒಂದರಲ್ಲಿ ತಂಗಿದ್ದ ವ್ಯಕ್ತಿಯೊಬ್ಬರು ಬೆಂಕಿಯಿಂದ ಸುಟ್ಟು ಮೃತಪಟ್ಟಿರುವ ಘಟನೆ ನಗರದ ಬೆಂದೂರ್ ವೆಲ್ ಸಮೀಪ ಬುಧವಾರ ತಡರಾತ್ರಿ ನಡೆದಿದೆ. ಮೃತರನ್ನು ಯಶ್ ರಾಜ್ ಸುವರ್ಣ (43) ಎಂದು ಗುರುತಿಸಲಾಗಿದೆ. ಇವರು ನ. 15ರಿಂದ ಹೊಟೇಲ್ ರೂಂನಲ್ಲಿ ವಾಸವಿದ್ದರು. ಬುಧವಾರದಂದು ರಾತ್ರಿ ಊಟದ ಬಳಿಕ ತಡರಾತ್ರಿ 12 ಗಂಟೆಯ ಸುಮಾರಿಗೆ ಅವರಿದ್ದ ರೂಂನ ಬಾಗಿಲೆಡೆಯಿಂದ ಹೊಗೆ ಹೊರ ಬರುತ್ತಿರುವುದನ್ನು ಲಾಡ್ಜ್ ಸಿಬ್ಬಂದಿ ಗಮನಿಸಿದ್ದಾರೆ. ತಕ್ಷಣವೇ ಮಾಹಿತಿ ಅರಿತ

ಬೆಂಕಿ ಅವಘಡ- ಹೊಟೇಲ್ ರೂಂನಲ್ಲಿದ್ದ ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಗೇಟ್‌ ಕಳಚಿ ಬಿದ್ದು 3 ವರ್ಷದ ಮಗು ಮೃತ್ಯು..!

(ನ್ಯೂಸ್ ಕಡಬ) newskadaba.com ಕೋಟ, ನ. 22. ಆಟವಾಡುತ್ತಿದ್ದ ವೇಳೆ ಗೆಸ್ಟ್ ಹೌಸ್ ನ ಗೇಟೊಂದು ಮೈಮೇಲೆ ಬಿದ್ದು ಮಗು ದಾರುಣವಾಗಿ ಮೃತಪಟ್ಟಿರುವ ಘಟನೆ ಕೋಟದ ಕೋಟತಟ್ಟು ಪಡುಕರೆಯಲ್ಲಿ ಮಂಗಳವಾರದಂದು ಸಂಜೆ ನಡೆದಿದೆ. ಮೃತ ಮಗುವನ್ನು ಸ್ಥಳೀಯ ನಿವಾಸಿಯಾಗಿರುವ ಸುಧೀರ್‌ ಮೊಗವೀರ ಹಾಗೂ ಶಾರದ ದಂಪತಿಗಳ ಅವರ ಏಕೈಕ ಪುತ್ರ, ಮೂರು ವರ್ಷದ ಸುಶಾಂತ್‌ ಎಂದು ಗುರುತಿಸಲಾಗಿದೆ. ಮನೆಯ ಸಮೀಪವಿರುವ ಗೆಸ್ಟ್‌ ಹೌಸ್‌ನ ಗೇಟಿನ ಬಳಿ ಮಗು ಆಟವಾಡುತ್ತಿದ್ದಾಗ ಸ್ಲೈಡಿಂಗ್ ಗೇಟ್‌ ಕಳಚಿ ಮೈಮೇಲೆ ಬಿದ್ದಿದೆ. ಆಸ್ಪತ್ರೆಗೆ

ಗೇಟ್‌ ಕಳಚಿ ಬಿದ್ದು 3 ವರ್ಷದ ಮಗು ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಅಕ್ರಮ ಗೋಸಾಗಾಟ; ಇಬ್ಬರ ಬಂಧನ- ಮೂವರು ಪರಾರಿ

(ನ್ಯೂಸ್ ಕಡಬ) newskadaba.com ಮೂಡುಬಿದಿರೆ, ನ. 22. ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ಘಟನೆಗೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರು ಎರಡು ಹಸು ಹಾಗೂ ಎರಡು ಕರುಗಳನ್ನು ರಕ್ಷಿಸಿದ ಘಟನೆ ಮೂಡುಬಿದಿರೆ ಮೂಡುಕೊಣಾಜೆ ಗ್ರಾಮದ ಕುಕ್ಕುದಕಟ್ಟೆಯಲ್ಲಿ ನಡೆದಿದೆ. ಬಂಧಿತರನ್ನು ಪಿಕಪ್ ವಾಹನ ಚಾಲಕ ವೇಣೂರಿನ ನಡ್ತಿಕಲ್ಲು ನಿವಾಸಿ ಹೈದರ್ ಹಾಗೂ ಪಣಪಿಲದ ಶೈಲೇಶ್ ಮಡಿವಾಳ ಎಂದು ಗುರುತಿಸಲಾಗಿದೆ. ಪೊಲೀಸ್ ಇನ್ಸ್ಪೆಕ್ಟರ್ ಸಂದೇಶ್ ಕುಮಾರ್ ನೇತೃತ್ವದ ತಂಡವು ಗಸ್ತಿನಲ್ಲಿದ್ದ ವೇಳೆ ಪಡುಕೊಣಾಜೆ ಎಂಬಲ್ಲಿ ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ ಪಿಕಪ್ ವಾಹನವನ್ನು

ಅಕ್ರಮ ಗೋಸಾಗಾಟ; ಇಬ್ಬರ ಬಂಧನ- ಮೂವರು ಪರಾರಿ Read More »

ಕರಾವಳಿ, ಕ್ರೈಮ್ ನ್ಯೂಸ್

ಯಾರೋ ಮಾಡಿದ ತಪ್ಪಿಗೆ ವಿದೇಶದ ಜೈಲಿನಲ್ಲಿದ್ದ ಕಡಬದ ಯುವಕ – ಗೆಳೆಯರ ಸಹಾಯದಿಂದ ಇಂದು ತಾಯ್ನಾಡಿಗೆ ಆಗಮನ

(ನ್ಯೂಸ್ ಕಡಬ) newskadaba.com ಕಡಬ, ನ. 20. ಸೌದಿ ಅರೇಬಿಯಾದ ರಿಯಾದ್‌ನ ಜೈಲಿನಲ್ಲಿ ಬ್ಯಾಂಕ್‌ ಖಾತೆ ಹ್ಯಾಕರ್‌ಗಳ ಸುಳಿಗೆ ಸಿಲುಕಿ ವಂಚನೆ ಆರೋಪಕ್ಕೆ ಒಳಗಾಗಿ ಕಳೆದ 11 ತಿಂಗಳಿನಿಂದ ಬಂಧಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತ್ತೂರು ಗ್ರಾಮದ ಮೂಜೂರು ನಿವಾಸಿ ಚಂದ್ರಶೇಖರ್‌ ಕೊನೆಗೂ ಬಂಧನ ಮುಕ್ತರಾಗಿ ಇಂದು ಊರಿಗೆ ಆಗಮಿಸಲಿದ್ದಾರೆ. ಸೌದಿಯ ರಿಯಾದ್‌ನಿಂದ ಅಲ್ಲಿನ ಪೊಲೀಸರು ಚಂದ್ರಶೇಖರ್‌ ಅವರನ್ನು ಇಂದು ವಿಮಾನದಲ್ಲಿ ಮುಂಬಯಿಗೆ ಕಳುಹಿಸಿಕೊಡಲಿದ್ದು, ಅಲ್ಲಿಂದ ಅವರು ಬಹುತೇಕ ಸಂಜೆ ಸುಮಾರು ಏಳು ಗಂಟೆ

ಯಾರೋ ಮಾಡಿದ ತಪ್ಪಿಗೆ ವಿದೇಶದ ಜೈಲಿನಲ್ಲಿದ್ದ ಕಡಬದ ಯುವಕ – ಗೆಳೆಯರ ಸಹಾಯದಿಂದ ಇಂದು ತಾಯ್ನಾಡಿಗೆ ಆಗಮನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಹಿಳೆಗೆ ದ್ವಿಚಕ್ರ ವಾಹನ ಢಿಕ್ಕಿ – ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ. 15. ರಸ್ತೆ ದಾಟುತ್ತಿದ್ದ ವೇಳೆ ಮಹಿಳೆಯೋರ್ವರಿಗೆ ದ್ವಿಚಕ್ರವಾಹನ ಢಿಕ್ಕಿ ಹೊಡೆದ ಪರಿಣಾಮ ಮಹಿಳೆ ಗಾಯಗೊಂಡ ಘಟನೆ ಸಂಗಬೆಟ್ಟು ಗ್ರಾಮದ ಸಿದ್ದಕಟ್ಟೆ ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಬೆಳ್ತಂಗಡಿ ತಾಲೂಕಿನ‌ ಬಜಿರೆ ಗುಂಡುರಿ ಗ್ರಾಮದ ಕೆರೆಕೋಡಿ ನಿವಾಸಿ ತಂಗಮ್ಮ ( 73) ಎಂದು ಗುರುತಿಸಲಾಗಿದೆ. ಸಿದ್ದಕಟ್ಟೆಯ ಖಾಸಗಿ ಕ್ಲಿನಿಕ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ತಂಗಮ್ಮರವರು ಚಹಾ ಕುಡಿಯಲೆಂದು ಹೋಟೆಲ್ ಗೆ ಹೋಗುತ್ತಿರುವಾಗ ಬೈಕ್ ಢಿಕ್ಕಿ ಹೊಡೆದಿದೆ. ಪರಿಣಾಮ ಗಾಯಗೊಂಡ ಮಹಿಳೆಗೆ ಮೂಡಬಿದಿರೆಯಲ್ಲಿ ಪ್ರಾಥಮಿಕ‌

ಮಹಿಳೆಗೆ ದ್ವಿಚಕ್ರ ವಾಹನ ಢಿಕ್ಕಿ – ಆಸ್ಪತ್ರೆಗೆ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಅಗರಬತ್ತಿ ತಯಾರಿಕಾ ಪ್ರದೇಶಕ್ಕೆ ಬೆಂಕಿ ತಗುಲಿ ಅಪಾರ ನಷ್ಟ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 14. ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಸ್ಫೋಟ ಸಂಭವಿಸಿ ಹಲವರು ಪ್ರಾಣ ಕಳೆದುಕೊಂಡ ಘಟನೆ ಮಾಸುವ ಬೆನ್ನಲ್ಲೇ ನಗರದಲ್ಲಿ ಇನ್ನೆರಡು ಅಗ್ನಿ ಅವಘಡಗಳು ಸಂಭವಿಸಿದ್ದು, ಓರ್ವ ವ್ಯಕ್ತಿ ಗಾಯಗೊಂಡ ಕುರಿತು ಪೈಪ್​ಲೈನ್ ರಸ್ತೆಯ ಚೋಳರಪಾಳ್ಯದ ಅಗರಬತ್ತಿ ಕಾರ್ಖಾನೆಯಲ್ಲಿ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಉಂಟಾಗಿದ್ದು, ಅಗ್ನಿ ಶಾಮಕದಳದ ಸಿಬಂದಿಗಳು ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿವೆ. ಗಾಯಗೊಂಡವರನ್ನು ರವಿಕುಮಾರ್ ಎಂದು ಗುರುತಿಸಲಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಗರಬತ್ತಿ ತಯಾರಿಕಾ ಪ್ರದೇಶಕ್ಕೆ ಬೆಂಕಿ ತಗುಲಿ ಅಪಾರ ನಷ್ಟ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸರಣಿ ಅಪಘಾತ- ಬೈಕ್ ಸವಾರನ ಮೇಲೆ ಹರಿದ ಕ್ಯಾಂಟರ್ – ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಮಡಿಕೇರಿ, ಅ. 14. ಕ್ಯಾಂಟರ್‌, ಕಾರು ಹಾಗೂ ಬೈಕ್ ನಡುವೆ ನಡೆದ ಸರಣಿ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಮಡಿಕೇರಿ- ಸುಂಟಿಕೊಪ್ಪ ಹೆದ್ದಾರಿಯಲ್ಲಿ ಶುಕ್ರವಾರದಂದು ನಡೆದಿದೆ. ಮೃತ ಸವಾರನನ್ನು ಮೈಸೂರು ಜಿಲ್ಲೆಯ ಕೆ.ಆರ್.ನಗರದ ಭೈರವ(30) ಎಂದು ಗುರುತಿಸಲಾಗಿದೆ. ಬೈರವ ಅವರು ಮಡಿಕೇರಿಯಿಂದ ಕೆ.ಆರ್.ನಗರದ ಕಡೆಗೆ ಪಲ್ಸರ್ ಬೈಕ್‌ನಲ್ಲಿ ತೆರಳುತ್ತಿದ್ದ ಸಂದರ್ಭ ಮುಂದೆ ಹೋಗುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು ಪಕ್ಕಕ್ಕೆ ಬಿದ್ದಿದ್ದಾರೆ. ಇದೇ ವೇಳೆ ಎದುರಿನಿಂದ ಬರುತ್ತಿದ್ದ ಕ್ಯಾಂಟರ್‌ನ ಹಿಂದಿನ ಚಕ್ರ ಇವರ

ಸರಣಿ ಅಪಘಾತ- ಬೈಕ್ ಸವಾರನ ಮೇಲೆ ಹರಿದ ಕ್ಯಾಂಟರ್ – ಸವಾರ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top