crime

ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ದಾಸ್ತಾನು – ಓರ್ವ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 20. ನಗರದ ಅಳಕೆ ನ್ಯೂಚಿತ್ರಾ ಸಮೀಪದ ಜನನಿಬಿಡ ವಸತಿ ಸಂಕೀರ್ಣದ ಬಳಿ ಅಕ್ರಮವಾಗಿ ಗ್ಯಾಸ್ ಸಿಲಿಂಡರನ್ನು ದಾಸ್ತಾನಿರಿಸಿದ ಪ್ರಕರಣಕ್ಕೆ ಸಂಬಂಧಿಸಿ ವ್ಯಕ್ತಿಯೋರ್ವನನ್ನು ಕದ್ರಿ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಶೇಖ್ ಅಶಫ್ ಉದ್ದೀನ್ (59) ಎಂದು ಗುರುತಿಸಲಾಗಿದೆ. ಈತ ಮಂಗಳೂರು ಗ್ಯಾಸ್ ಲೈಟ್ ಆ್ಯಂಡ್ ಸರ್ವೀಸ್ ಸೆಂಟರ್ ಅಂಗಡಿಯ ಪಕ್ಕದ ಸಣ್ಣ ಕೊಠಡಿಯಲ್ಲಿ ಪರವಾನಿಗೆ ಇಲ್ಲದೆ ಗ್ಯಾಸ್ ಸಿಲಿಂಡರ್‌ಗಳನ್ನು ಅಕ್ರಮವಾಗಿ ದಾಸ್ತಾನಿರಿಸಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿ […]

ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ದಾಸ್ತಾನು – ಓರ್ವ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ- ಪಂಜ ಕೆನರಾ ಬ್ಯಾಂಕ್ ಮಾಜಿ ಉದ್ಯೋಗಿ ಮೃತ್ಯು

(ನ್ಯೂಸ್ ಕಡಬ) newskadaba.com ವಿರಾಜಪೇಟೆ, ಆ. 19. ದ್ವಿಚಕೃ ವಾಹನಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಬ್ಯಾಂಕ್ ಉದ್ಯೋಗಿಯೋರ್ವರು ಮೃತಪಟ್ಟ ಘಟನೆ ವಿರಾಜಪೇಟೆ ಅಮ್ಮತ್ತಿ ರಸ್ತೆಯ ಸುಂಕದಕಟ್ಟೆ ಬಳಿ ನಡೆದಿದೆ. ಮೃತರನ್ನು ಮೂಲತಃ ಕೇರಳ ರಾಜ್ಯದ ತ್ರಿಶೂರ್ ಜಿಲ್ಲೆಯ ಪ್ರಸ್ತುತ ಅಮ್ಮತ್ತಿಯ ಕೆನರಾ ಬ್ಯಾಂಕ್ ಉದ್ಯೋಗಿ ಅಮೃತ(24) ಎಂದು ಗುರುತಿಸಲಾಗಿದೆ. ಇವರು ಈ ಹಿಂದೆ ಕಡಬ ತಾಲೂಕಿನ ಪಂಜ ಕೆನರಾ ಬ್ಯಾಂಕ್ ನಲ್ಲಿ ಕಾರ್ಯ ನಿರ್ವಹಿಸಿದ್ದರು. ಅಮೃತ ಅವರು ಎಂದಿನಂತೆ ಕೆಲಸಕ್ಕೆ ಹೋಗುತ್ತಿದ್ದ ವೇಳೆ ದ್ವಿಚಕ್ರ

ರಸ್ತೆ ಅಪಘಾತ- ಪಂಜ ಕೆನರಾ ಬ್ಯಾಂಕ್ ಮಾಜಿ ಉದ್ಯೋಗಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಕ್ರಮ ಮರಳು ದಾಸ್ತಾನು ಪತ್ತೆ- ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ. 19. ಅಕ್ರಮ ಮರಳು ದಾಸ್ತಾನು ಮಾಡಿರುವ ಘಟನೆ ಇಲ್ಲಿನ ಫರಂಗಿಪೇಟೆ ಸಮೀಪದ ಅಮ್ಮೆಮಾರ್‌ ರೈಲ್ವೇ ಹಳಿಯ ಬಳಿ ಪತ್ತೆಯಾಗಿದೆ. ಘಟನೆಯ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯ ಪತ್ತೆಗೆ ತನಿಖೆ ನಡೆಸುತ್ತಿದ್ದಾರೆ. ಆದರೆ ಮರಳು ಯಾರಿಗೆ ಸೇರಿದ್ದು ಎಂಬುದು ತಿಳಿದು ಬಂದಿಲ್ಲ.

ಅಕ್ರಮ ಮರಳು ದಾಸ್ತಾನು ಪತ್ತೆ- ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಬಾಣಂತಿಯ ಆರೋಗ್ಯ ತಪಾಸಣೆಗೆ ಬಂದಿದ್ದ ಸಿಬ್ಬಂದಿಯ ಮೇಲೆ ಸಾಕುನಾಯಿ ದಾಳಿ – ಮಾಲೀಕನ ವಿರುದ್ದ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಕೊಡಗು, ಆ. 18. ಬಾಣಂತಿಯನ್ನು ವಿಚಾರಿಸಲು ಹೋಗಿದ್ದ ಆರೋಗ್ಯ ಇಲಾಖೆ ಸಿಬ್ಬಂದಿ ಮೇಲೆ ನಾಯಿಯೊಂದು ಏಕಾಏಕಿ ದಾಳಿ ನಡೆಸಿದ ಘಟನೆ ಜಿಲ್ಲೆಯ ಮಡಿಕೇರಿ ತಾಲೂಕಿನ ಪಾರಾಣೆ ಗ್ರಾಮದಲ್ಲಿ ನಡೆದಿದೆ. ಇತ್ತೀಚೆಗಷ್ಟೇ ಹೆರಿಗೆಯಾಗಿದ್ದ ತಾಯಿ ಮತ್ತು ಮಗುವಿನ ಆರೋಗ್ಯ ತಪಾಸಣೆಗೆ ಪಾರಾಣೆ ಕಮ್ಯುನಿಟಿ ಹೆಲ್ತ್ ಆಫೀಸರ್ ಕೆ‌.ಕೆ ಭವ್ಯ ಅವರು ತೆರಳಿದ್ದರು. ಬಾಣಂತಿಯ ಆರೋಗ್ಯ ವಿಚಾರಿಸಿ ಹಿಂತಿರುಗುತ್ತಿದ್ದ ಸಂದರ್ಭ ಭವ್ಯ ಅವರ ಮೇಲೆ ಏಕಾಏಕಿ ನಾಯಿ ದಾಳಿ ನಡೆಸಿದ್ದು, ಭವ್ಯ ಅವರ ದೇಹದ ಹಲವು

ಬಾಣಂತಿಯ ಆರೋಗ್ಯ ತಪಾಸಣೆಗೆ ಬಂದಿದ್ದ ಸಿಬ್ಬಂದಿಯ ಮೇಲೆ ಸಾಕುನಾಯಿ ದಾಳಿ – ಮಾಲೀಕನ ವಿರುದ್ದ ಪ್ರಕರಣ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಎಳನೀರು ಕಳ್ಳತನ – ವಾಹನದ ನಂಬರ್ ಪ್ಲೇಟ್ ಗೆ ಮಸಿ ಬಳಿದು ಕೃತ್ಯವೆಸಗಿದ ಕಿಡಿಗೇಡಿಗಳು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 18. ರಾತ್ರೋರಾತ್ರಿ ಟಾಟಾ ಏಸ್ ವಾಹನದಲ್ಲಿ ಬಂದ ಖದೀಮರು ರಸ್ತೆ ಬದಿಯಲ್ಲಿಟ್ಟಿದ್ದ ಬರೋಬ್ಬರಿ 1,500 ಎಳನೀರನ್ನು ಕದ್ದೊಯ್ದಿರುವ ಘಟನೆ ಜಯನಗರ ರಾಷ್ಟ್ರೀಯ ವಿದ್ಯಾಲಯ ಮೆಟ್ರೋ ನಿಲ್ದಾಣದ ಬಳಿ ನಡೆದಿದೆ. ಕಳ್ಳರು ಕೃತ್ಯಕ್ಕೆ ಬಳಸಿದ್ದ ವಾಹನದ ನಂಬರ್ ಪ್ಲೇಟ್‌ಗೆ ಮಸಿ ಬಳಿದಿದ್ದರು ಎನ್ನಲಾಗಿದೆ. ಈ ಬಗ್ಗೆ ಜಯನಗರ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಎಳನೀರು ಕಳ್ಳತನ – ವಾಹನದ ನಂಬರ್ ಪ್ಲೇಟ್ ಗೆ ಮಸಿ ಬಳಿದು ಕೃತ್ಯವೆಸಗಿದ ಕಿಡಿಗೇಡಿಗಳು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹೃದಯಾಘಾತ- ಯುವನಟ ವಿಧಿವಶ

(ನ್ಯೂಸ್ ಕಡಬ) newskadaba.com ಮಂಡ್ಯ, ಆ. 18. ಹೃದಯಾಘಾತದಿಂದಾಗಿ 24 ವರ್ಷ ಯುವ ನಟನೋರ್ವ ನಿಧನರಾದ ಘಟನೆ ಮಂಡ್ಯದಿಂದ ವರದಿಯಾಗಿದೆ. ಮೃತ ನಟನನ್ನು ಪವನ್ ಎಂದು ಗುರುತಿಸಲಾಗಿದೆ. ಮೂಲತಃ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಹರಿಹರಪುರ ಗ್ರಾಮದವರಾದ ಇವರು, ಪ್ರಸ್ತುತ ತಂದೆ-ತಾಯಿಯೊಂದಿಗೆ ಮುಂಬೈನಲ್ಲಿ ನೆಲೆಸಿದ್ದರು.

ಹೃದಯಾಘಾತ- ಯುವನಟ ವಿಧಿವಶ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮೇಯಲು ಬಿಟ್ಟಿದ್ದ ದನ ಕರುಗಳ ಕಳವು – ಪ್ರಕರಣ ದಾಖಲು

(ನ್ಯೂಸ್ ಕಡಬ)newskadaba.com ಮಂಗಳೂರು, ಆ.17. ಮೇಯಲು ಬಿಟ್ಟಿದ್ದ ಎರಡು ದನ ಮತ್ತು ಒಂದು ಕರುವನ್ನು ಕಳವು ಮಾಡಿದ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಈ ಬಗ್ಗೆ ಬಜಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕರು ಮತ್ತು ಎರಡು ದನಗಳು ಕಳವಾಗಿದ್ದು, ಮೇಯಲು ಹೋಗಿದ್ದ ದನ ಕರುಗಳ ಪೈಕಿ 2 ದನಗಳು ಮನೆಗೆ ಮರಳಿದ್ದು, ಒಂದು ಕರು ವಾಪಸಾಗಿಲ್ಲ. ಈ ಕುರಿತು ಹುಡುಕಾಟ ನಡೆಸುತ್ತಿದ್ದಾಗ ವ್ಯಕ್ತಿಯೊಬ್ಬರು ಸಮೀಪದಲ್ಲಿರುವ ಅಂಗಡಿಯ ಸಿಸಿ ಕ್ಯಾಮೆರಾ ಪರಿಶೀಲಿಸುವಂತೆ ತಿಳಿಸಿದ್ದರು. ಅದರಂತೆ ಸಿಸಿ ಕ್ಯಾಮರಾ ಪರಿಶೀಲಿಸಿದಾಗ

ಮೇಯಲು ಬಿಟ್ಟಿದ್ದ ದನ ಕರುಗಳ ಕಳವು – ಪ್ರಕರಣ ದಾಖಲು Read More »

ಕರಾವಳಿ

ಬಿಬಿಎಂಪಿ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ – ಅಧಿಕಾರಿ ನಾಪತ್ತೆ – ದಾಖಲೆ ಪರಿಶೀಲನೆ

(ನ್ಯೂಸ್ ಕಡಬ)newskadaba. com ರಾಮನಗರ, ಆ.17. ಬೆಳ್ಳಂಬೆಳಗ್ಗೆ ರಾಜ್ಯಾದ್ಯಂತ 25ಕ್ಕೂ ಹೆಚ್ಚು ಸ್ಥಳಗಳಲ್ಲಿ ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕನಕಪುರದಲ್ಲಿರುವ ಬಿಬಿಎಂಪಿ ಅಧಿಕಾರಿ ನಟರಾಜ್ ಅವರ ಮನೆ ಹಾಗೂ ಫಾರಂ ಹೌಸ್‌ ಗೆ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ರಾಮನಗರ ಲೋಕಾಯುಕ್ತ ಎಸ್ಪಿ ನೇತೃತ್ವದ ತಂಡ ಅಪಾರ ಪ್ರಮಾಣದ ಅಕ್ರಮ‌ ಆಸ್ತಿ ಸಂಪಾದನೆ ಆರೋಪ‌‌ ಹಿನ್ನೆಲೆ ಮನೆ ಜೊತೆಗೆ ಫಾರಂ ಹೌಸ್ ಮೇಲೂ ದಾಳಿ ಮಾಡಿದ್ದು, ಬಳಿಕ ಅಧಿಕಾರಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಬಿಬಿಎಂಪಿ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ – ಅಧಿಕಾರಿ ನಾಪತ್ತೆ – ದಾಖಲೆ ಪರಿಶೀಲನೆ Read More »

ಕರ್ನಾಟಕ

ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ BMTC ಬಸ್ – ಬಾಲಕಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.17. BMTC ಬಸ್ ಹರಿದು 4ರ ಹರೆಯದ ಬಾಲಕಿ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಮೃತ ಬಾಲಕಿಯನ್ನು ಪೂರ್ವಿ ರಾವ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಘಟನೆ ಸಂಬಂಧ ಕುಮಾರಸ್ವಾಮಿ ಲೇಔಟ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಗಳನ್ನು ಶಾಲೆಗೆ ಬಿಡಲೆಂದು ತಂದೆ ಪ್ರಸನ್ನ ದ್ವಿಚಕ್ರ ವಾಹನದಲ್ಲಿ ಕರೆದೊಯ್ಯುತ್ತಿದ್ದಾಗ ಮುಖ್ಯರಸ್ತೆಯ ಬಳಿ ವೇಗವಾಗಿ ಬಂದ ಬಿಎಂಟಿಸಿ ಬಸ್ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದ್ದು, ಈ ವೇಳೆ ಪ್ರಸನ್ನ ಅವರು ಎಡಬದಿಗೆ

ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ BMTC ಬಸ್ – ಬಾಲಕಿ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಏರ್ ಪೋರ್ಟ್ ನಲ್ಲಿ ಅಕ್ರಮ ಚಿನ್ನ ಸಾಗಾಟ – 600 ಗ್ರಾಂ. ತೂಕದ 30 ಚಿನ್ನದ ಬಿಸ್ಕೆಟ್ ವಶ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಆ. 16. ಅಕ್ರಮವಾಗಿ ಚಿನ್ನದ ಬಿಸ್ಕಟ್ ಸಾಗಿಸುತ್ತಿದ್ದ ವ್ಯಕ್ತಿಯೋರ್ವನನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದ ಘಟನೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವರದಿಯಾಗಿದೆ. ಆರೋಪಿತ ವ್ಯಕ್ತಿಯೊಬ್ಬ ಕೋಲ್ಕತ್ತಾದಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಒಟ್ಟು 36 ಲಕ್ಷ ರೂಪಾಯಿ ಮೌಲ್ಯದ 600 ಗ್ರಾಂ ತೂಕದ 30 ಚಿನ್ನದ ಬಿಸ್ಕೆಟ್​​ಗಳನ್ನು ವಶಕ್ಕೆ ಪಡೆಯಲಾಗಿದೆ. ಚಿನ್ನದ ಮಾಲಿನೊಂದಿಗೆ ಆಗಮಿಸಿದ್ದ ಪ್ರಯಾಣಿಕ ಕೋಲ್ಕತ್ತಾದಿಂದ ಏರ್​​ಪೋರ್ಟ್​ಗೆ ಬಂದಿಳಿದಿದ್ದು, ಈ ವೇಳೆ ಅನುಮಾನಗೊಂಡು ತಪಾಸಣೆ ನಡೆಸಿದಾಗ ಚಿನ್ನ ಪತ್ತೆಯಾಗಿದೆನ್ನಲಾಗಿದೆ.  

ಏರ್ ಪೋರ್ಟ್ ನಲ್ಲಿ ಅಕ್ರಮ ಚಿನ್ನ ಸಾಗಾಟ – 600 ಗ್ರಾಂ. ತೂಕದ 30 ಚಿನ್ನದ ಬಿಸ್ಕೆಟ್ ವಶ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top