ದ.ಕ. ಜಿಲ್ಲೆಯನ್ನು ಆಹಾರ ಸಂಸ್ಕರಣಾ ಹಬ್ ಮಾಡಿ- ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ಗೆ ಸಂಸದ ಕ್ಯಾ. ಚೌಟ ಮನವಿ
(ನ್ಯೂಸ್ ಕಡಬ) newskadaba.com ಸೆ. 25. ಅಡಿಕೆ, ತೆಂಗು ಸೇರಿ ಹೆಚ್ಚಿನ ತೋಟಗಾರಿಕಾ ಉತ್ಪನ್ನ ಬೆಳೆಯುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತ್ಯಾಧುನಿಕ ಆಹಾರ ಸಂಸ್ಕರಣಾ ತಂತ್ರಜ್ಞಾನ ಅಳವಡಿಕೆಗೆ ರಾಷ್ಟ್ರೀಯ ಆಹಾರ ತಂತ್ರಜ್ಞಾನ, ಉದ್ಯಮಶೀಲತೆ ಮತ್ತು ನಿರ್ವಹಣೆ (NIFTEM) ಸಂಸ್ಥೆಯ ಕೇಂದ್ರ ಸ್ಥಾಪಿಸಬೇಕೆಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವ ಚಿರಾಗ್ ಪಾಸ್ವಾನ್ ಅವರಲ್ಲಿ ಮನವಿ ಮಾಡಿದ್ದಾರೆ. ಸಚಿವ ಚಿರಾಗ್ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿದ ಅವರು, ದಕ್ಷಿಣ ಕನ್ನಡದಲ್ಲಿ ಆಹಾರ […]

