dakshina kannada

ಸುಳ್ಯ: ತಂಡದಿಂದ ಯುವಕನ ಮೇಲೆ ಹಲ್ಲೆ

(ನ್ಯೂಸ್ ಕಡಬ) newskadaba.com ಸುಳ್ಯ, ಫೆ. 15. ಯುವಕನೋರ್ವ ರಿಕ್ಷಾದಲ್ಲಿ ಬರುತ್ತಿದ್ದ ಸಂದರ್ಭ ತಂಡವೊಂದು ಹಲ್ಲೆ ನಡೆಸಿದ ಘಟನೆ ತಾಲೂಕಿನ ಅಜ್ಜಾವರ ಗ್ರಾಮದ ಕಾಟಿಪಳ್ಳ ಎಂಬಲ್ಲಿ ನಡೆದಿದೆ. ಹಲ್ಲೆಗೊಳಗಾದ ಯುವಕ ಅಜಿತ್‌ ಎಂಬಾತನನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದ್ದು, ಯುವಕನಿಗೆ ಹಲ್ಲೆ ನಡೆಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ ಎನ್ನಲಾಗಿದೆ.

ಸುಳ್ಯ: ತಂಡದಿಂದ ಯುವಕನ ಮೇಲೆ ಹಲ್ಲೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ಅಕ್ರಮ ಮರಳು ಸಾಗಾಟ – ಆರೋಪಿಗಳ ಸಹಿತ 2 ಟಿಪ್ಪರ್ ಮತ್ತು ಮರಳು ವಶಕ್ಕೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ. 13. ಲೈಸೆನ್ಸ್ ಇಲ್ಲದೇ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಆರೋಪದಡಿಯಲ್ಲಿ ಎಂಟು ಮಂದಿಯನ್ನು ವಶಕ್ಕೆ ಪಡೆದಿರುವ ಬಂಟ್ವಾಳ ನಗರ ಠಾಣಾ ಪೊಲೀಸರು ಎರಡು ಟಿಪ್ಪರ್ ಲಾರಿ ಮತ್ತು ಮರಳನ್ನು ಜಪ್ತಿ ಮಾಡಿರುವ ಕುರಿತು ವರದಿಯಾಗಿದೆ. ವಾಹನ ತಪಾಸಣಾ ನಿರತ ಪೊಲೀಸರು ಸೋಮವಾರದಂದು ರಾತ್ರಿ ತಲಪಾಡಿ ಕಡೆಯಿಂದ ಬರುತ್ತಿದ್ದ ಮೂರು ಟಿಪ್ಪರ್ ಲಾರಿಗಳನ್ನು ತಡೆದು ನಿಲ್ಲಿಸಿ ಚಾಲಕರನ್ನು ವಿಚಾರಿಸಿದಾಗ ಯಾವುದೇ ಪರವಾನಿಗೆ ಇಲ್ಲದೇ ವಳಚ್ಚಿಲ್ ಎಂಬಲ್ಲಿಂದ ಅಕ್ರಮವಾಗಿ ಮರಳು ತುಂಬಿಸಿ ಸಾಗಾಟ

ಬಂಟ್ವಾಳ: ಅಕ್ರಮ ಮರಳು ಸಾಗಾಟ – ಆರೋಪಿಗಳ ಸಹಿತ 2 ಟಿಪ್ಪರ್ ಮತ್ತು ಮರಳು ವಶಕ್ಕೆ Read More »

ಕರಾವಳಿ, ಕರ್ನಾಟಕ

ಸುಳ್ಯ: ಆಸ್ಪತ್ರೆಯ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ. 07. ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ತಿಂಗಳಾಡಿ ಮೂಲದ ವ್ಯಕ್ತಿಯೊಬ್ಬರು ಆಸ್ಪತ್ರೆಯ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಗ್ಗೆ ನಡೆದಿದೆ. ಮೃತರನ್ನು ತಿಂಗಳಾಡಿ ಮೂಲದ ವಸಂತ ಎಂದು ಗುರುತಿಸಲಾಗಿದೆ. ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ವಸಂತರವರು ಪಿಟ್ಸ್ ಕಾಯಿಲೆಯಿಂದ ಬಳಲುತ್ತಿದ್ದು, ಮೂರು ದಿನಗಳ ಹಿಂದೆ ಚಿಕಿತ್ಸೆಗಾಗಿ ಸುಳ್ಯ ಕೆವಿಜಿ ಆಯುರ್ವೇದಿಕ್ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಮುಂಜಾನೆ ಆರು ಗಂಟೆ ಸುಮಾರಿಗೆ ಆಸ್ಪತ್ರೆಯ ಕಟ್ಟಡದ ಮಹಡಿಯಿಂದ ಜಿಗಿದು ಆತ್ಮಹತ್ಯೆ

ಸುಳ್ಯ: ಆಸ್ಪತ್ರೆಯ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಪತನದ ಅಂಚಿನಲ್ಲಿ ಖಾಸಗಿ ಬಸ್ ಸೇವಾ ವ್ಯವಸ್ಥೆ – ದ.ಕ. ಜಿಲ್ಲಾ ಖಾಸಗಿ ಬಸ್ ಮಾಲಕರ ಸಂಘ ಆತಂಕ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 07. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ಸುಗಳು ಅತ್ಯುತ್ತಮ ಸೇವೆ ನೀಡುತ್ತಿದ್ದರೂ ಸರ್ಕಾರದ ಕೆಲವು ಧೋರಣೆಯಿಂದ ಬಸ್ ಮಾಲೀಕರು ಸಂಕಷ್ಟ ಅನುಭವಿಸುತ್ತಿದ್ದಾರೆ. ಸರ್ಕಾರವು ಬಸ್ ಮಾಲೀಕರ ಸಮಸ್ಯೆಗಳಿಗೆ ಪೂರಕವಾಗಿ ಸ್ಪಂದಿಸದಿದ್ದಲ್ಲಿ 110 ವರ್ಷಗಳ ಇತಿಹಾಸ ಹೊಂದಿರುವ ಖಾಸಗಿ ಬಸ್ಸಿನ ಸೇವಾ ವ್ಯವಸ್ಥೆ ಪತನಗೊಳ್ಳಲಿದೆ ಎಂದು ದ.ಕ. ಜಿಲ್ಲಾ ಖಾಸಗಿ ಬಸ್ ಮಾಲಕರ ಸಂಘ ಆತಂಕ ವ್ಯಕ್ತಪಡಿಸಿದೆ. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ಬುಧವಾರದಂದು ದ.ಕ.

ಪತನದ ಅಂಚಿನಲ್ಲಿ ಖಾಸಗಿ ಬಸ್ ಸೇವಾ ವ್ಯವಸ್ಥೆ – ದ.ಕ. ಜಿಲ್ಲಾ ಖಾಸಗಿ ಬಸ್ ಮಾಲಕರ ಸಂಘ ಆತಂಕ Read More »

ಕರಾವಳಿ, ಕರ್ನಾಟಕ

ಪರಿಪೂರ್ಣ ವ್ಯಕ್ತಿತ್ವದ ಡಾ.ಲಕ್ಷ್ಮಣ್ ಪ್ರಭುಗಳ ಅಗಲಿಕೆಯಿಂದ ಶೂನ್ಯತೆ ಸೃಷ್ಟಿಯಾಗಿದೆ – ಭುವನೇಶ್ವರಿ ಹೆಗಡೆ

(ನ್ಯೂಸ್ ಕಡಬ) newskadaba.com  ಮಂಗಳೂರು, ನ. 22. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕದ ವತಿಯಿಂದ ಇತ್ತೀಚೆಗೆ ನಮ್ಮನ್ನೆಲ್ಲ ಅಗಲಿದ ಕವಿ ಹೃದಯದ ಹಿರಿಯ ಖ್ಯಾತ ವೈದ್ಯ ಡಾ.ಜಿ.ಜಿ.ಲಕ್ಷ್ಮಣ ಪ್ರಭು ಅವರಿಗೆ ಮಂಗಳೂರಿನ ಹೋಟೆಲ್ ವುಡ್‌ಲ್ಯಾಂಡ್ಸ್ ನಲ್ಲಿ ಶೃದ್ಧಾಂಜಲಿ ಸಭೆ ಏರ್ಪಡಿಸಲಾಗಿತ್ತು. ಕ.ಸಾ.ಪ. ಮಂಗಳೂರು ತಾಲೂಕು ಘಟಕದ ಅಧ್ಯಕ್ಷ ಶ್ರೀ.ಮಂಜುನಾಥ್ ಎಸ್. ರೇವಣಕರ್ ರವರು ಅಧ್ಯಕ್ಷತೆ  ವಹಿಸಿದ್ದರು. ನುಡಿನಮನ ಸಲ್ಲಿಸಿ ಮಾತನಾಡಿದ ಶ್ರೀಮತಿ ಭುವನೇಶ್ವರಿ ಹೆಗ್ಗಡೆಯವರು ಡಾ.ಜಿ.ಜಿ.ಲಕ್ಷ್ಮಣ ಪ್ರಭುಗಳ ವ್ಯಕ್ತಿತ್ವ, ಹಾಸ್ಯಪ್ರಿಯತೆ ಮತ್ತು ಕರ್ತವ್ಯ

ಪರಿಪೂರ್ಣ ವ್ಯಕ್ತಿತ್ವದ ಡಾ.ಲಕ್ಷ್ಮಣ್ ಪ್ರಭುಗಳ ಅಗಲಿಕೆಯಿಂದ ಶೂನ್ಯತೆ ಸೃಷ್ಟಿಯಾಗಿದೆ – ಭುವನೇಶ್ವರಿ ಹೆಗಡೆ Read More »

ಕರಾವಳಿ, ಕರ್ನಾಟಕ

ಅಕ್ರಮ ಗೋಸಾಗಾಟ; ಇಬ್ಬರ ಬಂಧನ- ಮೂವರು ಪರಾರಿ

(ನ್ಯೂಸ್ ಕಡಬ) newskadaba.com ಮೂಡುಬಿದಿರೆ, ನ. 22. ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ಘಟನೆಗೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರು ಎರಡು ಹಸು ಹಾಗೂ ಎರಡು ಕರುಗಳನ್ನು ರಕ್ಷಿಸಿದ ಘಟನೆ ಮೂಡುಬಿದಿರೆ ಮೂಡುಕೊಣಾಜೆ ಗ್ರಾಮದ ಕುಕ್ಕುದಕಟ್ಟೆಯಲ್ಲಿ ನಡೆದಿದೆ. ಬಂಧಿತರನ್ನು ಪಿಕಪ್ ವಾಹನ ಚಾಲಕ ವೇಣೂರಿನ ನಡ್ತಿಕಲ್ಲು ನಿವಾಸಿ ಹೈದರ್ ಹಾಗೂ ಪಣಪಿಲದ ಶೈಲೇಶ್ ಮಡಿವಾಳ ಎಂದು ಗುರುತಿಸಲಾಗಿದೆ. ಪೊಲೀಸ್ ಇನ್ಸ್ಪೆಕ್ಟರ್ ಸಂದೇಶ್ ಕುಮಾರ್ ನೇತೃತ್ವದ ತಂಡವು ಗಸ್ತಿನಲ್ಲಿದ್ದ ವೇಳೆ ಪಡುಕೊಣಾಜೆ ಎಂಬಲ್ಲಿ ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ ಪಿಕಪ್ ವಾಹನವನ್ನು

ಅಕ್ರಮ ಗೋಸಾಗಾಟ; ಇಬ್ಬರ ಬಂಧನ- ಮೂವರು ಪರಾರಿ Read More »

ಕರಾವಳಿ, ಕ್ರೈಮ್ ನ್ಯೂಸ್

ದಕ್ಷಿಣ ಕನ್ನಡ- ಗ್ರಾಮ ಪಂಚಾಯತ್ ಗಳಲ್ಲಿ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 17. ಜಿಲ್ಲಾ ವ್ಯಾಪ್ತಿಯ 17 ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ನವೆಂಬರ್ 6ರೊಳಗೆ ಅರ್ಜಿ ಆಹ್ವಾನಿಸಲಾಗಿದೆ. ಮುಲ್ಕಿ ತಾಲೂಕಿನ ಅತಿಕಾರಿ ಬೆಟ್ಟು ಗ್ರಾಮ ಪಂಚಾಯತ್, ಮೂಡಬಿದ್ರೆ ತಾಲೂಕಿನ ಇರುವೈಲ್ ಗ್ರಾಮ ಪಂಚಾಯತ್, ಬಂಟ್ವಾಳ ತಾಲೂಕಿನ ಇರುವತ್ತೂರು ಗ್ರಾಮ ಪಂಚಾಯತ್, ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮ ಪಂಚಾಯತ್, ಕಡಬ ತಾಲೂಕಿನ ಕಡ್ಯ ಕೊಣಾಜೆ ಗ್ರಾಮ ಪಂಚಾಯತ್, ಪುತ್ತೂರು ತಾಲೂಕಿನ

ದಕ್ಷಿಣ ಕನ್ನಡ- ಗ್ರಾಮ ಪಂಚಾಯತ್ ಗಳಲ್ಲಿ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಉಪ್ಪಿನಂಗಡಿ: ಸಿಡಿಲು ಬಡಿದು ಮನೆಗೆ ಹಾನಿ- ಅಪಾರ ನಷ್ಟ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ. 14. ಸಿಡಿಲು ಬಡಿದ ಪರಿಣಾಮ ಮನೆಯೊಂದು ಬಾಗಶ. ಬಿರುಕು ಬಿಟ್ಟಿದ್ದು ಮನೆ ಸಂಪೂರ್ಣವಾಗಿ ಹಾನಿಯಾದ ಘಟನೆ ಉಪ್ಪಿನಂಗಡಿ ಸಮೀಪದ ತೆಕ್ಕಾರು ಎಂಬಲ್ಲಿ ಸಂಭವಿಸಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇಲ್ಲಿನ ತೆಕ್ಕಾರು ಕಾಪಿಗುಡ್ಡೆ ನಿವಾಸಿ ತಾಹಿರ ಎಂಬವರ ಮನೆಗೆ ಸಿಡಿಲು ಬಡಿದು ಸುಮಾರು 2ಲಕ್ಷಕ್ಕೂ ಅಧಿಕ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಇನ್ನು ಸಿಡಿಲಿನ ರಭಸಕ್ಕೆ ಮನೆಯ ಗೋಡೆಗಳು ಬಿರುಕು ಬಿಟ್ಟಿದ್ದು ಮನೆಯ ವಯರಿಂಗ್ ಗಳು ಸಂಪೂರ್ಣ ಹಾನಿಯಾಗಿದೆ. ಮನೆಯ

ಉಪ್ಪಿನಂಗಡಿ: ಸಿಡಿಲು ಬಡಿದು ಮನೆಗೆ ಹಾನಿ- ಅಪಾರ ನಷ್ಟ Read More »

ಕರಾವಳಿ, ಕ್ರೈಮ್ ನ್ಯೂಸ್

ದಕ್ಷಿಣ ಕನ್ನಡ: ಕಾರು ಹರಿದು ಸ್ಕೂಟರ್ ಸವಾರ ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 12. ನಗರದ ಕುಂಟಿಕಾನದ ಎ.ಜೆ. ಆಸ್ಪತ್ರೆಯಿಂದ ಹೊರಬರುತ್ತಿದ್ದ ದ್ವಿಚಕ್ರ ವಾಹನ‌ ಸವಾರನ ಮೇಲೆ ಕಾರು ಹರಿದ ಪರಿಣಾಮ ಯುವಕ ಮೃತಪಟ್ಟ ಘಟನೆ ಬುಧವಾರ ತಡರಾತ್ರಿ ನಡೆದಿದೆ. ಮೃತ ಯುವಕನನ್ನು ಕಾವೂರು ನಿವಾಸಿ ಕೌಶಿಕ್ (21) ಎಂದು ಗುರುತಿಸಲಾಗಿದೆ. ಈತ ಆಸ್ಪತ್ರೆಯ ಆವರಣದಿಂದ ಹೊರ ಬರುತ್ತಿದ್ದಂತೆ ಅವರು ಚಲಾಯಿಸುತ್ತಿದ್ದ ಸ್ಕೂಟರ್ ಆಟೋ ರಿಕ್ಷಾಕ್ಕೆ ತಗುಲಿದೆ. ಈ ವೇಳೆ‌ ನೆಲಕ್ಕೆ ಬಿದ್ದ ಅವರ ಮೇಲೆ ಸ್ವಿಫ್ಟ್ ಕಾರು ಹರಿದು ಮೃತಪಟ್ಟಿದ್ದಾರೆ ಎಂದು ತಿಳಿದು

ದಕ್ಷಿಣ ಕನ್ನಡ: ಕಾರು ಹರಿದು ಸ್ಕೂಟರ್ ಸವಾರ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಅ. 31ರಿಂದ ಮಂಗಳೂರು ಏರ್ಪೋರ್ಟ್ ಆಡಳಿತ ಸಂಪೂರ್ಣ ಅದಾನಿ ತೆಕ್ಕೆಗೆ…!

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 09. ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದ ಆಡಳಿತವು ಅಕ್ಟೋಬರ್ 31ರಿಂದ ಸಂಪೂರ್ಣವಾಗಿ ಅದಾನಿ ಸಮೂಹಕ್ಕೆ ಹಸ್ತಾಂತರಗೊಳ್ಳಲಿದೆ. ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣ ಸಹಿತ ಭಾರತದ 6 ವಿಮಾನ ನಿಲ್ದಾಣಗಳ ಆಡಳಿತ, ಅಭಿವೃದ್ಧಿ ಹಾಗೂ ನಿರ್ವಹಣೆಯ ಹಿನ್ನೆಲೆ ಏರ್ಪಡಿಸಲಾಗಿದ್ದ ಹರಾಜಿನಲ್ಲಿ ಮಂಗಳೂರು ಏರ್ಪೋರ್ಟ್ ಅದಾನಿ ಸಮೂಹಕ್ಕೆ ಒಳಗಾಗಿತ್ತು. ಬಳಿಕ ಮಂಗಳೂರು ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದ ಜವಾಬ್ದಾರಿಯನ್ನು 2020ರ ಅಕ್ಟೋಬರ್ 30ರಂದು ಅದಾನಿ ಸಮೂಹ ಕೈಗೆತ್ತಿಕೊಂಡಿತ್ತು. ಒಪ್ಪಂದದ ಪ್ರಕಾರ ಮೂರು ವರ್ಷಗಳ

ಅ. 31ರಿಂದ ಮಂಗಳೂರು ಏರ್ಪೋರ್ಟ್ ಆಡಳಿತ ಸಂಪೂರ್ಣ ಅದಾನಿ ತೆಕ್ಕೆಗೆ…! Read More »

ಕರಾವಳಿ, ಕರ್ನಾಟಕ
Scroll to Top