dakshina kannada

ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ – ಸಂಚಾರಕ್ಕೆ ತೊಡಕು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 20. ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸುಮಾರು ಒಂದು ತಾಸಿಗಿಂತಲೂ ಅಧಿಕ ಸಂಚಾರಕ್ಕೆ ಅಡಚಣೆಯಾದ ಘಟನೆ ಪಾಣೆಮಂಗಳೂರು ಸೇತುವೆಯಲ್ಲಿ ನಡೆದಿದೆ. ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿದ್ದಲ್ಲದೇ, ಇದರ ಹಿಂಬದಿಯಿಂದ ಬಂದ ಎರಡು ವಾಹನಗಳು ಮತ್ತೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಎರಡು ಕಾರುಗಳು ಜಖಂಗೊಂಡಿದೆ. ಅದೃಷ್ಟವಶಾತ್ ಪ್ರಯಾಣಿಕರಿಗೆ ಅಪಾಯದಿಂದ ಪಾರಾಗಿದ್ದಾರೆ. ಇದರ ಜೊತೆಗೆ ಸೇತುವೆ ಸಮೀಪ ನೆಹರು ನಗರ ಎಂಬಲ್ಲಿ ಲಾರಿಯೊಂದರ ಕೆಟ್ಟು ನಿಂತಿತ್ತು. ಹೀಗಾಗಿ ತಾಸುಗಟ್ಟಲೆ ವಾಹನಗಳು ಸಾಲಾಗಿ […]

ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ – ಸಂಚಾರಕ್ಕೆ ತೊಡಕು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಸೆ. 22ರಂದು ಹೋಬಳಿ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 18. 2023-24ನೇ ಸಾಲಿನ ಮಂಗಳೂರು ಪ್ರೌಢಶಾಲಾ ವಿಭಾಗದ ಹೋಬಳಿ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಸೆ. 22ರಂದು ನಗರದ ಮಂಗಳಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಶಾಸಕರಾದ ಭರತ್ ಶೆಟ್ಟಿ ವೈ. ಅಧ್ಯಕ್ಷತೆ ವಹಿಸುವರು. ಕಾರ್ಯಕ್ರಮದಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ಮಹಾನಗರ ಪಾಲಿಕೆಯ ಸದಸ್ಯರಾದ ಸುಮಂಗಲಾ ರಾವ್, ಮಂಗಳೂರು ಉತ್ತರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಜೇಮ್ಸ್ ಕುಟೀನ್ಹೊ, ಉತ್ತರ ವಲಯದ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಭರತ್ ಕೆ, ಇ.ಟಿ.ಎ

ಮಂಗಳೂರು: ಸೆ. 22ರಂದು ಹೋಬಳಿ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ Read More »

ಕರಾವಳಿ

ಸೆ. 20ರಂದು ಸಮಾಜ ಕಲ್ಯಾಣ ಸಚಿವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 18. ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ. ಎಚ್.ಸಿ ಮಹದೇವಪ್ಪ ಅವರು ಸೆ. 20ರ ಬುಧವಾರದಂದು ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. ವಿವರ ಇಂತಿದೆ: ಸೆ.20ರಂದು ಬೆಳಗ್ಗೆ 10.30ಕ್ಕೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ನಗರದ ಪಿವಿಎಸ್ ಬಳಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳನ್ನು ಉದ್ಘಾಟಿಸುವರು. ಮಧ್ಯಾಹ್ನ 1 ಗಂಟೆಗೆ ಮಂಗಳೂರು ತಾಲೂಕಿನ ಕಮ್ಮಾಜೆಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ

ಸೆ. 20ರಂದು ಸಮಾಜ ಕಲ್ಯಾಣ ಸಚಿವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ Read More »

ಕರಾವಳಿ

ದಕ್ಷಿಣ ಕನ್ನಡ: ಪಾರ್ಟ್ ಟೈಂ ಕೆಲಸ ಕೊಡುವುದಾಗಿ 9.29 ಲಕ್ಷ ರೂ. ವಂಚನೆ – ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 17. ಟೆಲಿಗ್ರಾಂ ನಲ್ಲಿ ಬಂದ ಆನ್‌ಲೈನ್‌ ಪಾರ್ಟ್‌ ಟೈಂ ಕೆಲಸದ ಸಂದೇಶವನ್ನು ನಂಬಿದ ವ್ಯಕ್ತಿಯೋರ್ವ 9,29,986 ರೂ. ಕಳೆದುಕೊಂಡಿರುವ ಕುರಿತು ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರಿಗೆ ಯಾರೋ ಅಪರಿಚಿತ ಟೆಲಿಗ್ರಾಂ ಮೂಲಕ ಪಾರ್ಟ್‌ ಟೈಂ ಆನ್‌ಲೈನ್‌ ಕೆಲಸದ ಬಗ್ಗೆ ಸಂದೇಶ ಕಳುಹಿಸಿದ್ದನು. ಸಂದೇಶವನ್ನು ನಂಬಿದ ದೂರುದಾರ ಲಿಂಕ್‌ ಮೂಲಕ ಟಾಸ್ಕ್ ಪೂರ್ಣಗೊಳಿಸಿದ್ದಾರೆ. ಅದಕ್ಕೆ 10 ಸಾವಿರ ರೂ. ಬೋನಸ್‌ ಲಭಿಸಿದ್ದು, ಅದರಲ್ಲಿ 1,044 ರೂ.ಗಳನ್ನು ತಮ್ಮ ಖಾತೆಗೆ ಹಿಂಪಡೆದಿದ್ದಾರೆ.

ದಕ್ಷಿಣ ಕನ್ನಡ: ಪಾರ್ಟ್ ಟೈಂ ಕೆಲಸ ಕೊಡುವುದಾಗಿ 9.29 ಲಕ್ಷ ರೂ. ವಂಚನೆ – ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಸೆ. 25ರವರೆಗೆ ಮಲ್ಪೆ ಬೀಚ್ ಪ್ರವೇಶಕ್ಕೆ ನಿರ್ಬಂಧ..!

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 17. ಸಮುದ್ರ ಪ್ರಕ್ಷುಬ್ಧಗೊಂಡಿರುವ ಹಿನ್ನೆಲೆ ಮಲ್ಪೆ ಬೀಚ್ ಪ್ರವೇಶಕ್ಕೆ ಪ್ರವಾಸಿಗರಿಗೆ ಹಾಗೂ ಸಾರ್ವಜನಿಕರಿಗೆ ಮೇ 16ರಿಂದ ಸೆ.15ರವರೆಗೆ ವಿಧಿಸಲಾಗಿದ್ದ ನಿಷೇಧವನ್ನು ಜಿಲ್ಲಾಧಿಕಾರಿ ಸೂಚನೆಯಂತೆ ಸೆ. 25ರವರೆಗೆ ಮುಂದುವರಿಸಲಾಗಿದೆ ಎಂದು ಮಲ್ಪೆ ಅಭಿವೃದ್ಧಿ ಸಮಿತಿಯ ಕಾರ್ಯದರ್ಶಿ ಹಾಗೂ ಉಡುಪಿ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರತಿ ವರ್ಷ ಹಾರ್ಬರ್ ಕ್ರಾಷ್ಟ್ ನಿಯಮದಂತೆ ಬೀಚ್ ಪ್ರದೇಶದಲ್ಲಿ ಮಳೆಗಾಲದುದ್ದಕ್ಕೂ ಎಲ್ಲಾ ರೀತಿಯ ಜಲ ಸಾಹಸ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸಲಾಗುತ್ತಿದ್ದು, ಇತ್ತೀಚಿನ ಮಳೆಯಿಂದಾಗಿ ಅರಬಿಸಮುದ್ರ ಈಗಲೂ

ಸೆ. 25ರವರೆಗೆ ಮಲ್ಪೆ ಬೀಚ್ ಪ್ರವೇಶಕ್ಕೆ ನಿರ್ಬಂಧ..! Read More »

ಕರಾವಳಿ

ನಿಷೇಧಿತ ಎಂಡಿಎಂಎ ಮಾರಾಟಕ್ಕೆ ಯತ್ನ- ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಉಳ್ಳಾಲ, ಸೆ. 17. ನಿಷೇಧಿತ ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ಕೇರಳದ ಇಬ್ಬರು ಆರೋಪಿಗಳನ್ನು ಉಳ್ಳಾಲ ಪೊಲೀಸರು ತಲಪಾಡಿ ತಚ್ಚಾಣಿ ಬಳಿ ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತ ಆರೋಪಿಗಳನ್ನು ತ್ರಿಶ್ಶೂರ್‌ನ ವಡಕಂಚೇರಿ ಗ್ರಾಮದ ಶೇಕ್‌ ತನ್ವೀರ್‌ (20) ಹಾಗೂ ಕೋಝಿಕ್ಕೋಡ್‌ ಅಂಜೇರಿ ವಡಗೆರೆ ನಿವಾಸಿ ಸಾಯಿಕೃಷ್ಣ (19) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಎಂಡಿಎಂಎ ಹಾಗೂ ಸಾಗಾಟಕ್ಕೆ ಬಳಸಿದ್ದ ಬೈಕ್‌ ಮತ್ತು ಮೊಬೈಲ್‌ಗ‌ಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಈ ಕುರಿತು ಉಳ್ಳಾಲ ಠಾಣೆಯಲ್ಲಿ ಎನ್‌ಡಿಪಿಎಸ್‌

ನಿಷೇಧಿತ ಎಂಡಿಎಂಎ ಮಾರಾಟಕ್ಕೆ ಯತ್ನ- ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಗಣೇಶ ಚತುರ್ಥಿ- ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಸೆ. 19ರಂದು ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 16. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಚೌತಿ ಹಬ್ಬಕ್ಕೆ ಸೆ.18ರ ಬದಲು ಸೆ.19 ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಸೆ.19ರಂದು ಚೌತಿ ಹಬ್ಬ ಆಚರಿಸುವುದರಿಂದ ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಮನವಿಯ ಮೇರೆಗೆ ಸೆ.19ರಂದು ರಜೆ ಘೋಷಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ದ.ಕ. ಜಿಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ದ.ಕ. ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದ್ದರು. ಇದೀಗ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ

ಗಣೇಶ ಚತುರ್ಥಿ- ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಸೆ. 19ರಂದು ರಜೆ ಘೋಷಣೆ Read More »

ಕರಾವಳಿ

ನಾಳೆ(ಸೆ. 17) ರಬೀವುಲ್ ಅವ್ವಲ್ ತಿಂಗಳಾರಂಭ- ಸೆ. 28ರಂದು ಮೀಲಾದುನ್ನಬಿ; ದ.ಕ. ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 16. ಶುಕ್ರವಾರ ಅಸ್ತಮಿಸಿದ ಶನಿವಾರ ರಾತ್ರಿ (ಸೆ. 15) ರಬೀವುಲ್ ಅವ್ವಲ್ ತಿಂಗಳ ಚಂದ್ರದರ್ಶನವಾದ ಯಾವುದೇ ಮಾಹಿತಿ ಇಲ್ಲದ ಕಾರಣ ಸಫರ್ 30 ಪೂರ್ತಿಗೊಳಿಸಿ ಇಂದು ಸೆ. 16ರ ಶನಿವಾರ ಅಸ್ತಮಿಸಿದ ರವಿವಾರ ರಾತ್ರಿ ರಬೀವುಲ್ ಅವ್ವಲ್ 1 ಆಗಿರುತ್ತದೆ ಎಂದು ದ.ಕ. ಜಿಲ್ಲಾ ಖಾಝಿ ಶೈಖುನಾ ಅಲ್ಹಾಜ್ ತ್ವಾಖಾ ಅಹ್ಮದ್ ಅಲ್ ಅಝ್ಹರಿ ತಿಳಿಸಿದ್ದಾರೆ. ಸೆ. 28ರಂದು ರಬೀವುಲ್ ಅವ್ವಲ್ 12 ಮೀಲಾದುನ್ನಬೀ ದಿನವಾಗಿರುತ್ತದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

ನಾಳೆ(ಸೆ. 17) ರಬೀವುಲ್ ಅವ್ವಲ್ ತಿಂಗಳಾರಂಭ- ಸೆ. 28ರಂದು ಮೀಲಾದುನ್ನಬಿ; ದ.ಕ. ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ Read More »

ಕರಾವಳಿ

ಕಾರು- ಬೈಕ್ ನಡುವೆ ಢಿಕ್ಕಿ; ಸಹಸವಾರೆ ಮೃತ್ಯು

(ನ್ಯೂಸ್ ಕಡಬ) newskadaba.com ಮುಲ್ಕಿ, ಸೆ. 16. ಕಾರು ಹಾಗೂ ಬೈಕ್ ನಡುವೆ  ಢಿಕ್ಕಿ ಸಂಭವಿಸಿದ ಪರಿಣಾಮ ಬೈಕಿನಲ್ಲಿ ಪ್ರಯಾಣಿಸುತ್ತಿದ್ದ ಸಹಸವಾರೆ ಮೃತಪಟ್ಟು, ಸವಾರ ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ವಿಜಯ ಸನ್ನಿಧಿ ಜಂಕ್ಷನ್ ಬಳಿ ನಡೆದಿದೆ. ಮೃತರನ್ನು ಕೇರಳ ರಾಜ್ಯದ ಕಾಸರಗೋಡಿನ ನಿವಾಸಿ ಪ್ರೀತಿಕಾ ಶೆಟ್ಟಿ(21) ಎಂದು ಗುರುತಿಸಲಾಗಿದ್ದು. ಗಾಯಾಳು ಬೈಕ್ ಸವಾರ ಬಂಟ್ವಾಳದ ಅರಂತೋಡಿ ಬಾಳೆಪುಣಿ ನಿವಾಸಿ ಮನ್ವಿತ್ ರಾಜ್ ಶೆಟ್ಟಿ(21) ಎಂದು ತಿಳಿದುಬಂದಿದೆ. ಉಡುಪಿ ಕಡೆಯಿಂದ ಮಂಗಳೂರು ಕಡೆಗೆ

ಕಾರು- ಬೈಕ್ ನಡುವೆ ಢಿಕ್ಕಿ; ಸಹಸವಾರೆ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ದಕ್ಷಿಣ ಕನ್ನಡ: ಗಣೇಶ ಚತುರ್ಥಿ ಪ್ರಯುಕ್ತ ಸೆ.19 ರಂದು ರಜೆ ನೀಡಲು ಸಚಿವರ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 14. ಸೆಪ್ಟೆಂಬರ್ 19ರಂದು ಕರಾವಳಿ ಜಿಲ್ಲೆಗಳು ಸೇರಿದಂತೆ ನಾನಾ ಜಿಲ್ಲೆಗಳಲ್ಲಿ ಗಣೇಶ ಚತುರ್ಥಿ ಆಚರಿಸಲಾಗುತ್ತಿದ್ದು, ಅದೇ ದಿನ ಸರಕಾರಿ ರಜೆ ಘೋಷಣೆ ಮಾಡಬೇಕೆಂಬ ಆಗ್ರಹ ವ್ಯಕ್ತವಾಗುತ್ತಿರುವ ಹಿನ್ನೆಲೆ ದ.ಕ. ಜಿಲ್ಲೆಯಾದ್ಯಂತ ಸರಕಾರಿ ರಜೆಯನ್ನು ಸೆ. 18ರ ಬದಲು 19ರಂದು ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಅವರು ಸರಕಾರದ ಮುಖ್ಯ ಕಾರ್ಯದರ್ಶಿ ಹಾಗೂ ದ.ಕ. ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ. ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ

ದಕ್ಷಿಣ ಕನ್ನಡ: ಗಣೇಶ ಚತುರ್ಥಿ ಪ್ರಯುಕ್ತ ಸೆ.19 ರಂದು ರಜೆ ನೀಡಲು ಸಚಿವರ ಸೂಚನೆ Read More »

ಕರಾವಳಿ
Scroll to Top