dakshina kannada

ಸಂಶೋಧಕ ರಾಘವೇಂದ್ರ ಅವರಿಗೆ ಪಿಎಚ್ ಡಿ ಪ್ರದಾನ

(ನ್ಯೂಸ್ ಕಡಬ) newskadaba.com ಅ. 11. “ಉದ್ಯಮಶೀಲತೆ ಅಭಿವೃದ್ಧಿಯಲ್ಲಿ ಶಿಕ್ಷಣದ ಪಾತ್ರ ಒಂದು ಅಧ್ಯಯನ” ಎಂಬ ಪ್ರೌಢ ಪ್ರಬಂಧಕ್ಕಾಗಿ ವಾಣಿಜ್ಯ ವಿಭಾಗದ ಸಂಶೋಧಕ ರಾಘವೇಂದ್ರ ಅವರಿಗೆ ಮಂಗಳೂರು ವಿಶ್ವವಿದ್ಯಾಲಯ ಡಾಕ್ಟರೇಟ್ ಆಫ್ ಫಿಲಾಸಫಿ (ಪಿಎಚ್‍ಡಿ) ಪದವಿ ನೀಡಿದೆ. ವಿಶ್ವವಿದ್ಯಾನಿಲಯ ಕಾಲೇಜು ನಿವೃತ್ತ ಸಹ ಪ್ರಾಧ್ಯಾಪಕ ಉದಯಕುಮಾರ್ ಎಂ.ಎ, ಸಂಶೋಧಕರಿಗೆ ಮಾರ್ಗದರ್ಶನ ನೀಡಿದ್ದಾರೆ.

ಸಂಶೋಧಕ ರಾಘವೇಂದ್ರ ಅವರಿಗೆ ಪಿಎಚ್ ಡಿ ಪ್ರದಾನ Read More »

ಕರಾವಳಿ

ಜಲಪ್ರದೇಶಗಳಿಗೆ ಪ್ರವೇಶ ನಿರ್ಬಂಧ ಆದೇಶ ಹಿಂತೆಗೆತ

(ನ್ಯೂಸ್ ಕಡಬ) newskadaba.com ಅ. 11. ಮುಂಗಾರು ಅವಧಿ ಮುಕ್ತಾಯವಾಗಿರುವುದರಿಂದ ಹಾಗೂ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಇರುವ ಜಲಪಾತ, ನದಿ, ಸಮುದ್ರ, ಜಲಾಶಯ ಪ್ರದೇಶಗಳಲ್ಲಿ ಸಾರ್ವಜನಿಕರು/ಪ್ರವಾಸಿಗರು ನೀರಿನಲ್ಲಿ ಇಳಿಯುವುದು, ಈಜುವುದು. ಸಾಹಸ ಚಟುವಟಿಕೆಗಳನ್ನು ನಡೆಸುವುದನ್ನು ನಿರ್ಬಂಧಿಸಿ  ಜುಲೈ 6ರಂದು ಹೊರಡಿಸಿರುವ ಆದೇಶವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಆದೇಶಿಸಿದ್ದಾರೆ.  

ಜಲಪ್ರದೇಶಗಳಿಗೆ ಪ್ರವೇಶ ನಿರ್ಬಂಧ ಆದೇಶ ಹಿಂತೆಗೆತ Read More »

ಕರಾವಳಿ

ಧಾರ್ಮಿಕ ಸಭಾ ಕಾರ್ಯಕ್ರಮ ಹಿನ್ನೆಲೆ- ಮದ್ಯ ನಿಷೇಧ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 09. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲದಲ್ಲಿ ಅಕ್ಟೋಬರ್ 11ರಂದು ನಡೆಯುವ ಆಯುಧ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು, ಈ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಬೆಳಿಗ್ಗೆ 6ರಿಂದ ಮಧ್ಯರಾತ್ರಿಯವರೆಗೆ ನೆಟ್ಟಣಿಗೆ ಮುಡ್ನೂರು ವ್ಯಾಪ್ತಿಯ ಮದ್ಯದಂಗಡಿಗಳನ್ನು ಮುಚ್ಚಲು ಹಾಗೂ ಈ ಸಮಯದಲ್ಲಿ ಎಲ್ಲಾ ಶೇಂದಿ ಅಂಗಡಿ ಮತ್ತು ಎಲ್ಲಾ ವಿಧದ

ಧಾರ್ಮಿಕ ಸಭಾ ಕಾರ್ಯಕ್ರಮ ಹಿನ್ನೆಲೆ- ಮದ್ಯ ನಿಷೇಧ Read More »

ಕರಾವಳಿ

ವಿಧಾನ ಪರಿಷತ್ ಚುನಾವಣೆ- ನಿಷೇದಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 09. ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆಯುವ ಉಪಚುನಾವಣೆ ಗೆ ಮತದಾನವು ಅಕ್ಟೋಬರ್ 21 ರಂದು ನಡೆಯಲಿದ್ದು ಸಾರ್ವಜನಿಕ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಮೂಲಕ ಮುಕ್ತ ಮತ್ತು ನ್ಯಾಯಯುತ ಹಾಗೂ ನಿಷ್ಪಕ್ಷಪತವಾದ ಚುನಾವಣೆಯನ್ನು ನಡೆಸುವ ನಿಟ್ಟಿನಲ್ಲಿ ಅಕ್ಟೋಬರ್ 19ರಂದು ಸಂಜೆ 4ಗಂಟೆಯಿಂದ ಅಕ್ಟೋಬರ್ 21ರಂದು ಮತದಾನ ಪ್ರಕ್ರಿಯೆ ಮುಕ್ತಾಯವಾಗುವವರೆಗೆ ಜಿಲ್ಲೆಯ ಒಟ್ಟು 234 ಮತದಾನ ಕೇಂದ್ರಗಳ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ

ವಿಧಾನ ಪರಿಷತ್ ಚುನಾವಣೆ- ನಿಷೇದಾಜ್ಞೆ ಜಾರಿ Read More »

ಕರಾವಳಿ

ಪಿ.ಎ. ಫಾರ್ಮಸಿಯ ಕಾಲೇಜು ವತಿಯಿಂದ ಯೆನೆಪೋಯ ಆರ್ಯುವೇದಿಕ್ ಆಸ್ಪತ್ರೆ ರೋಗಿಗಳಿಗೆ ಉಚಿತ ಗಾಲಿ ಕುರ್ಚಿ ವಿತರಣೆ

(ನ್ಯೂಸ್ ಕಡಬ) newskadaba.com ದೇರಳಕಟ್ಟೆ, ಸೆ. 27. ಪಿ.ಎ. ಕಾಲೇಜ್ ಆಫ್ ಫಾರ್ಮಸಿಯ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳ ವತಿಯಿಂದ “ವಿಶ್ವ ಔಷಧ ತಜ್ಞರ ದಿನ”ದ ಅಂಗವಾಗಿ ನರಿಂಗಾನ ಗ್ರಾಮದ ಕಲ್ಲೊರ ಕೋಡಿಯಲ್ಲಿರುವ ಯೆನೆಪೋಯ ಆರ್ಯುವೇದಿಕ್ ಆಸ್ಪತ್ರೆಯ ರೋಗಿಗಳಿಗೆ ಉಚಿತ ಗಾಲಿ ಕುರ್ಚಿ ಹಾಗೂ ಹಣ್ಣುಹಂಪಲುಗಳನ್ನು ವಿತರಿಸಲಾಯಿತು. ಬಳಿಕ ಸೋಮೇಶ್ವರದಲ್ಲಿರುವ ಪಶ್ಚಿಮ್ ರಿಹಾಬಿಲೇಶನ್ ಸೆಂಟರ್ ಮಾನಸಿಕ ಪುನಶ್ಚೇತನ ಕೇಂದ್ರದಲ್ಲಿರುವ ಆಶ್ರಮ ನಿವಾಸಿಗಳಿಗೆ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಿ, ಆರೋಗ್ಯ ಸಂರಕ್ಷಣೆಯ ಮಾಹಿತಿಗಳನ್ನು ನೀಡಿ, ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಮಾಡಲಾಯಿತು.

ಪಿ.ಎ. ಫಾರ್ಮಸಿಯ ಕಾಲೇಜು ವತಿಯಿಂದ ಯೆನೆಪೋಯ ಆರ್ಯುವೇದಿಕ್ ಆಸ್ಪತ್ರೆ ರೋಗಿಗಳಿಗೆ ಉಚಿತ ಗಾಲಿ ಕುರ್ಚಿ ವಿತರಣೆ Read More »

ಕರಾವಳಿ

ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿ-2024 – ದಕ್ಷಿಣ ಕನ್ನಡ ಜಿಲ್ಲೆಯಿಂದ ಪೃಥ್ವಿರಾಜ್ ಪಿ.ಶೆಟ್ಟಿ ಆಯ್ಕೆ

(ನ್ಯೂಸ್ ಕಡಬ) newskadaba.com ಸೆ. 26. ರಾಜ್ಯ ಸರಕಾರದಿಂದ ಕೊಡಮಾಡುವ ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024 ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪೃಥ್ವಿರಾಜ್‌ ಪಿ. ಶೆಟ್ಟಿ ಆಯ್ಕೆಯಾಗಿದ್ದಾರೆ. ಈ ಕುರಿತು ರಾಜ್ಯ ಸರಕಾರವು ಆದೇಶವನ್ನು ಹೊರಡಿಸಿದೆ. ಈ ಪ್ರಶಸ್ತಿಯನ್ನು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಅಚ್ಚುಕಟ್ಟಾಗಿ ಒದಗಿಸಿರುವ ಅಧಿಕಾರಿಗಳ ಸೇವೆಯನ್ನು ಗುರುತಿಸಿ ಜಿಲ್ಲಾಧಿಕಾರಿಗಳಿಗೆ, ಸಹಾಯಕ ಆಯುಕ್ತರುಗಳಿಗೆ, ತಹಶೀಲ್ದಾರಗಳಿಗೆ ಹಾಗೂ ಗ್ರಾಮಾಡಳಿತ ಅಧಿಕಾರಿಗಳಿಗೆ ಕೊಡಲಾಗುತ್ತದೆ. ಹೀಗಾಗಿ ಕಂದಾಯ ಇಲಾಖೆಯಲ್ಲಿ ಅತ್ಯುತ್ತಮ ಸೇವೆಯನ್ನು ನೀಡಿರುವ ಅಧಿಕಾರಿಗಳ

ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿ-2024 – ದಕ್ಷಿಣ ಕನ್ನಡ ಜಿಲ್ಲೆಯಿಂದ ಪೃಥ್ವಿರಾಜ್ ಪಿ.ಶೆಟ್ಟಿ ಆಯ್ಕೆ Read More »

ಕರಾವಳಿ

ಫ್ಲೆಕ್ಸ್, ಬ್ಯಾನರ್ ಗಳಿಗೆ ಅಕ್ರಮ ವಿದ್ಯುತ್ ಸಂಪರ್ಕ- ಮಹಾನಗರಪಾಲಿಕೆ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಸೆ. 25. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದಸರಾ ಹಬ್ಬದ ಪ್ರಯುಕ್ತ ನಗರದ ಮುಖ್ಯ ರಸ್ತೆಗಳಲ್ಲಿ ಅಲಂಕಾರಿಕ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿರುತ್ತದೆ. ಹಲವಾರು ಸ್ಥಳಗಳಲ್ಲಿ ಸಾರ್ವಜನಿಕ ಹಾಗೂ ಖಾಸಗಿ ಸಂಘ ಸಂಸ್ಥೆಗಳು ತಮ್ಮ ತಮ್ಮ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಗಳನ್ನು ಅಳವಡಿಸಿದ್ದು, ಈ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಗಳಿಗೆ ಅಲಂಕಾರಿಕ ದೀಪಗಳನ್ನು ಅಳವಡಿಸಲು ಮಂಗಳೂರು ನಗರ ಪಾಲಿಕೆಯಿಂದ ಅಳವಡಿಸಿರುವ ಕಂಬ ಮತ್ತು ವಿದ್ಯುತ್ ದೀಪಗಳ ಸಂಪರ್ಕದಿಂದ ಅತಿಕ್ರಮಣವಾಗಿ ವಿದ್ಯುತ್ ಸಂಪರ್ಕ ಪಡೆದಿರುವುದು ಕಂಡುಬಂದಿದೆ.

ಫ್ಲೆಕ್ಸ್, ಬ್ಯಾನರ್ ಗಳಿಗೆ ಅಕ್ರಮ ವಿದ್ಯುತ್ ಸಂಪರ್ಕ- ಮಹಾನಗರಪಾಲಿಕೆ ಎಚ್ಚರಿಕೆ Read More »

ಕರಾವಳಿ

ಕಾರಾಗೃಹದಲ್ಲಿ ವಿಶ್ವ ಸಾಕ್ಷರತಾ ದಿನಾಚರಣೆ

(ನ್ಯೂಸ್ ಕಡಬ) newskadaba.com ಸೆ. 25. ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತು ವತಿಯಿಂದ ವಿಶ್ವ ಸಾಕ್ಷರತಾ ದಿನಾಚರಣೆ ಅಂಗವಾಗಿ ಕಾರಾಗೃಹದೊಳಗಿನ ಅನಕ್ಷರಸ್ಥರನ್ನು ಅಕ್ಷರಸ್ಥರನ್ನಾಗಿ ಮಾಡಲು ‘ಒಬ್ಬರು ಒಬ್ಬರಿಗೆ ಕಲಿಸಿ’ ಎಂಬ ಕಾರ್ಯಕ್ರಮವು ನಗರದ ಜಿಲ್ಲಾ ಕಾರಾಗೃಹದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಸಾಕ್ಷರತಾ ರಾಜ್ಯ ಸಂಪನ್ಮೂಲ ವ್ಯಕ್ತಿ ಹಾಗೂ ಹಿರಿಯ ಸಾಹಿತಿ ಇರಾ  ನೇಮು ಪೂಜಾರಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು,  ಅನಕ್ಷರತೆ ಎಂಬುದು ಚಂದ್ರ ತಾರೆಗಳಿಲ್ಲದ ಕತ್ತಲೆಯ ಬಾನು, ದೇಶದ ಅಭಿವೃದ್ಧಿಗೆ ಅನಕ್ಷರತೆ ಮಾರಕ ಎಂದರು. ಕಾರ್ಯಕ್ರಮದ

ಕಾರಾಗೃಹದಲ್ಲಿ ವಿಶ್ವ ಸಾಕ್ಷರತಾ ದಿನಾಚರಣೆ Read More »

ಕರಾವಳಿ

ಹಿರಿಯ ಸಾಮಾಜಿಕ ಹೋರಾಟಗಾರ ಪಿ.ಬಿ.ಡೇಸಾ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 24.  ಮಂಗಳೂರು ನಗರದ ವೆಲೆನ್ಸಿಯಾ ನಿವಾಸಿ ಹಾಗೂ ರಾಜ್ಯದ ಹಿರಿಯ ಸಾಮಾಜಿಕ ಹೋರಾಟಗಾರ ಪಿ.ಬಿ.ಡೇಸಾ ಅವರು ಇಂದು ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಪೀಪಲ್ಸ್ ಯೂನಿಯನ್ ಫಾರ್ ಲಿಬರ್ಟೀಸ್ ರಾಜ್ಯಾಧ್ಯಕ್ಷರಾಗಿದ್ದಇವರು ಸಮಾಜದಲ್ಲಿ ನಡೆಯುವ ಅನ್ಯಾಯ, ಅಕ್ರಮದ ವಿರುದ್ಧ ಧ್ವನಿ ಎತ್ತಿದವರಾಗಿದ್ದರು. ಅದರಲ್ಲೂ ಪೊಲೀಸರ ದೌರ್ಜನ್ಯದ ವಿರುದ್ಧ ಸಂಘಟಿತ ಹೋರಾಟ ಮಾಡುವಲ್ಲಿ‌ ಮುಂಚೂಣಿಯಲ್ಲಿದ್ದರು. ಯಾವುದೇ ಧಾರ್ಮಿಕ ಕ್ರಿಯೆ ನಡೆಸದೆ ಮೃತದೇಹವನ್ನು ನಗರದ ಖಾಸಗಿ ಆಸ್ಪತ್ರೆಗೆ ನಾಳೆ ಹಸ್ತಾಂತರ ಮಾಡಲಾಗುವುದು ಎಂದು

ಹಿರಿಯ ಸಾಮಾಜಿಕ ಹೋರಾಟಗಾರ ಪಿ.ಬಿ.ಡೇಸಾ ನಿಧನ Read More »

ಕರಾವಳಿ

ಹಿಂದೂ ಕಾರ್ಯಕರ್ತರ ಬಂಧನ ಖಂಡಿಸಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 24. ಅನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿ ಹಿಂದೂ ಕಾರ್ಯಕರ್ತರನ್ನು ಬಂಧಿಸಲಾಗಿದ್ದು, ಈ ಘಟನೆಯನ್ನು ಖಂಡಿಸಿ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಸುಳ್ಯ ಠಾಣೆಯ ಗೇಟಿನ ಬಳಿಯಲ್ಲಿ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸುತ್ತಿರುವ ಕುರಿತು ವರದಿಯಾಗಿದೆ.

ಹಿಂದೂ ಕಾರ್ಯಕರ್ತರ ಬಂಧನ ಖಂಡಿಸಿ ಪ್ರತಿಭಟನೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top