ಚಲಿಸುತ್ತಿರುವ ಸಾರಿಗೆ ಬಸ್ ಗಳ ಬಾಗಿಲು ಮುಚ್ಚುವುದು ಕಡ್ಡಾಯ ನ.6ರಿಂದಲೇ ಜಾರಿಗೊಳಿಸಲು ಡಿಸಿ ಮುಲ್ಲೈ ಮುಗಿಲನ್ ಆದೇಶ
(ನ್ಯೂಸ್ ಕಡಬ) newskadaba.com ಮಂಗಳೂರು, ನ. 06. ಸಿಟಿ ಬಸ್ ಹೊರತುಪಡಿಸಿ ನಗರದಿಂದ ಹೊರಡುವ ಎಲ್ಲ ಸಾರಿಗೆ ಬಸ್‌ಗಳು ಪ್ರಯಾಣಿಕರ ಹಿತದೃಷ್ಟಿಯಿಂದ ಬಸ್‌ಗಳ ಬಾಗಿಲು ಮುಚ್ಚುವ ಕ್ರಮವನ್ನು ಇಂದಿನಿಂದಲೇ (ನ.6) ಜಾರಿಗೊಳಿಸಬೇಕು. ಬಾಗಿಲು ಇಲ್ಲದ ಬಸ್‌ಗಳಿಗೆ ಡಿ.10ರ ಒಳಗಾಗಿ ಕಡ್ಡಾಯವಾಗಿ ಬಾಗಿಲು ಅಳವಡಿಸಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚಿಸಿದ್ದಾರೆ. ಮಂಗಳವಾರ ಇಲ್ಲಿ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ, ಡಿಸಿಪಿ ದಿನೇಶ್ ಕುಮಾರ್ ಈ ವಿಷಯ ಪ್ರಸ್ತಾಪಿಸಿ, ಈ ಹಿಂದೆ ನಡೆದ ಸಭೆಯಲ್ಲಿ ಬಸ್‌ಗಳಿಗೆ ಬಾಗಿಲು […]

