DC

ದ.ಕ. ಜಿಲ್ಲೆಯಲ್ಲಿ ಚಾರಣಕ್ಕೆ ವಿಧಿಸಿದ್ದ ನಿಷೇಧ ವಾಪಸ್ – ಡಿಸಿ ಮುಲ್ಲೈ ಮುಹಿಲನ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 17. ಇಲ್ಲಿನ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಬೆಳ್ತಂಗಡಿ ವನ್ಯಜೀವಿ ವಲಯ ವ್ಯಾಪ್ತಿಯ ‘ನೇತ್ರಾವತಿ ಪೀಕ್‌ ಪ್ರದೇಶ’ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚಾರಣಕ್ಕೆ ವಿಧಿಸಿದ್ದ ನಿಷೇಧವನ್ನು ಜಿಲ್ಲಾ ಆಡಳಿತ ವಾಪಸ್‌ ಪಡೆದಿದೆ. ಜಿಲ್ಲೆಯ ಗಿರಿತಾಣಗಳ ಚಾರಣವನ್ನು ಹೋಂ ಸ್ಟೇ, ರೆಸಾರ್ಟ್‌ ಹಾಗೂ ಅರಣ್ಯ ಇಲಾಖೆಯಿಂದ ಕೈಗೊಳ್ಳುವ ಚಾರಣ-ಸಾಹಸ ಚಟುವಟಿಕೆಗಳನ್ನು ಅಗತ್ಯ ಮುಂಜಾಗೃತಾ ಕ್ರಮಗಳೊಂದಿಗೆ ನಡೆಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ತಿಳಿಸಿದ್ದಾರೆ. ವ್ಯಾಪಕ ಮಳೆಯ ಹಿನ್ನೆಲೆ ಭೂಕುಸಿತ, ಗುಡ್ಡ ಕುಸಿತ, […]

ದ.ಕ. ಜಿಲ್ಲೆಯಲ್ಲಿ ಚಾರಣಕ್ಕೆ ವಿಧಿಸಿದ್ದ ನಿಷೇಧ ವಾಪಸ್ – ಡಿಸಿ ಮುಲ್ಲೈ ಮುಹಿಲನ್ Read More »

ಕರಾವಳಿ, ಕರ್ನಾಟಕ

ಮುಂದುವರಿದ ವರುಣನ ಆರ್ಭಟ ನಾಳೆ (ಜೂ.28) ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲೆಗಳಿಗೆ ರಜೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.27. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವಿಪರೀತ ಮಳೆಯಾಗುತ್ತಿರುವ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜೂ. 28 ಗುರುವಾರದಂದು ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಆದೇಶಿಸಿದ್ದಾರೆ‌. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜೂನ್ 27 ರಂದು ರೆಡ್ ಅಲರ್ಟ್ ಘೋಷಿಸಲಾಗಿತ್ತು.

ಮುಂದುವರಿದ ವರುಣನ ಆರ್ಭಟ ನಾಳೆ (ಜೂ.28) ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲೆಗಳಿಗೆ ರಜೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ದ.ಕ. ನೂತನ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ)newskadaba. ಮಂಗಳೂರು, ಜೂ . 17  .  ದ.ಕ. ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಮುಲೈ ಮುಹಿಲನ್ ಎಂ.ಪಿ. ಜೂ.17ರ ಶನಿವಾರ ಅಧಿಕಾರ ಸ್ವೀಕರಿಸಿದರು. ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ಎಂ.ಆರ್.ರವಿಕುಮಾರ್ ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರ ಮಾಡಿದರು.ಮುಲೈ ಮುಹಿಲನ್ ಇದಕ್ಕೂ ಮೊದಲು ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್ ಬೆಂಗಳೂರು ಇದರ ಕಾರ್ಯಕಾರಿ ನಿರ್ದೇಶಕರಾಗಿದ್ದರು.ಮುಲ್ಲೈ ಮುಹಿಲನ್ ತಮಿಳುನಾಡು ಮೂಲದವರಾಗಿದ್ದು, ದಿಂಡಿಗಲ್ ಅಣ್ಣಾ ವಿಶ್ವವಿದ್ಯಾಲಯದ ಪಿಎಸ್‌ಎನ್‌ಎ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿನಲ್ಲಿ ಓದಿದ್ದು ಕಂಪ್ಯೂಟರ್ ಸೈನ್ಸ್ ವಿಷಯದಲ್ಲಿ

ದ.ಕ. ನೂತನ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಅಧಿಕಾರ ಸ್ವೀಕಾರ Read More »

ಕರಾವಳಿ, ಕರ್ನಾಟಕ
dc ravikumar

ಪೌರ ಕಾರ್ಮಿಕರಿಗೆ ಪ್ರತಿ ತಿಂಗಳು 5ರೊಳಗೆ ವೇತನ ಪಾವತಿಸಲು ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 30. ಪೌರ ಕಾರ್ಮಿಕರಿಗೆ ಪ್ರತಿ ತಿಂಗಳ 5ನೇ ತಾರೀಖಿನೊಳಗೆ ಕಡ್ಡಾಯವಾಗಿ ವೇತನ ಪಾವತಿಸಬೇಕು, ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು ಎಂದು ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಜಿಲ್ಲಾ ಖಜಾನೆ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅವರು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಫಾಯಿ ಕರ್ಮಚಾರಿ/ಮ್ಯಾನ್ಯು ವಲ್ ಸ್ಕ್ಯಾವೆಂಜರ್‍ ಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲಾ ಖಜಾನೆಯ ಉಪ ನಿರ್ದೇಶಕರು ಈ ಸಂಬಂಧ ಕೂಡಲೇ ಸೂಕ್ತ

ಪೌರ ಕಾರ್ಮಿಕರಿಗೆ ಪ್ರತಿ ತಿಂಗಳು 5ರೊಳಗೆ ವೇತನ ಪಾವತಿಸಲು ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ, ಕರ್ನಾಟಕ

ಕೊರೊನಾ ಹಿನ್ನೆಲೆ ಜುಲೈ 3ರಿಂದ 5ರ ತನಕ ದ.ಕ. ಜಿಲ್ಲಾಧಿಕಾರಿ ಕಚೇರಿ ಬಂದ್ ➤ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು.02., ಕೊರೊನಾ ಮುನ್ನೆಚ್ಚರಿಕಾ ಕ್ರಮವಾಗಿ ಜುಲೈ 3ರಿಂದ 5ರ ತನಕ ದ.ಕ. ಜಿಲ್ಲಾಧಿಕಾರಿ ಕಚೇರಿಯನ್ನು ಬಂದ್ ಮಾಡುವಂತೆ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಆದೇಶ ನೀಡಿದ್ದಾರೆ. ದ.ಕ. ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕು ಮತ್ತಷ್ಟು ಹರಡದಂತೆ ಜಿಲ್ಲಾಡಳಿತ ಆರೋಗ್ಯ ಇಲಾಖೆ ಹತ್ತು ಹಲವು ರೀತಿಯಲ್ಲಿ ಕ್ರಮ ಕೈಗೊಂಡಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಸಂಸದರು, ಸಚಿವರ ಕಚೇರಿ ಸೇರಿದಂತೆ ಸಂಪೂರ್ಣ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ಬಂದ್ ಮಾಡುವಂತೆ ಆದೇಶ

ಕೊರೊನಾ ಹಿನ್ನೆಲೆ ಜುಲೈ 3ರಿಂದ 5ರ ತನಕ ದ.ಕ. ಜಿಲ್ಲಾಧಿಕಾರಿ ಕಚೇರಿ ಬಂದ್ ➤ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ Read More »

ಕರಾವಳಿ

ಕೊರೋನಾ ತಡೆಗಟ್ಟಲು ವೈದ್ಯರ ಸಲಹೆಯೇನು..? ಉತ್ತರ ‘ನ್ಯೂಸ್ ಕಡಬ’ದ ಗ್ರೌಂಡ್ ರಿಪೋರ್ಟ್ ನಲ್ಲಿ

➤➤ ವೀಡಿಯೋ | Video ಲಾಕ್ ಡೌನ್ ನಿಂದಾಗಿ ಕಡಬದ ಈಗಿನ ಪರಿಸ್ಥಿತಿ ಹೇಗಿದೆ..? ➤ ಕೊರೋನಾ ತಡೆಗಟ್ಟಲು ವೈದ್ಯರ ಸಲಹೆಯೇನು..? ➤ ನೂಕುನುಗ್ಗಲು ತಡೆಯಲು ವ್ಯಾಪಾರಸ್ಥರು ಮಾಡಿದ್ದೇನು..? ➤ ಪೊಲೀಸರು ಪರಿಸ್ಥಿತಿಯನ್ನು ನಿಭಾಯಿಸಿದ್ದು ಹೇಗೆ..? ಎಲ್ಲದಕ್ಕೂ ಉತ್ತರ ‘ನ್ಯೂಸ್ ಕಡಬ’ದ ಗ್ರೌಂಡ್ ರಿಪೋರ್ಟ್ ನಲ್ಲಿ

ಕೊರೋನಾ ತಡೆಗಟ್ಟಲು ವೈದ್ಯರ ಸಲಹೆಯೇನು..? ಉತ್ತರ ‘ನ್ಯೂಸ್ ಕಡಬ’ದ ಗ್ರೌಂಡ್ ರಿಪೋರ್ಟ್ ನಲ್ಲಿ Read More »

ಬ್ರೇಕಿಂಗ್ ನ್ಯೂಸ್, ವಿಶೇಷ ಲೇಖನಗಳು

ನೈರುತ್ಯ ಕ್ಷೇತ್ರದ ಮತದಾರರ ಕರಡು ಪಟ್ಟಿ ನ.21ರಂದು ಪ್ರಕಟ: ಅಪರ ಜಿಲ್ಲಾಧಿಕಾರಿ ► ಮತದಾರರ ಪಟ್ಟಿಯಲ್ಲಿ ಹೆಸರಿದ್ದರೂ ಹೊಸದಾಗಿ ಅರ್ಜಿ ಸಲ್ಲಿಸಬೇಕಾಗಿದೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ.08. ನೈರುತ್ಯ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರದ ಮತದಾರರ ಕರಡು ಪಟ್ಟಿಯು ನವೆಂಬರ್ 21ರಂದು ಪ್ರಕಟವಾಗಲಿದೆ ಎಂದು ಅಪರ ಜಿಲ್ಲಾಧಿಕಾರಿ ಕುಮಾರ್ ತಿಳಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಈ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನೈರುತ್ಯ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರಗಳಿಗೆ ಮುಂದಿನ ವರ್ಷ ಜೂನ್‍ನಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಮತದಾರರ ಪಟ್ಟಿ ತಯಾರಿಸಲಾಗುತ್ತಿದೆ. ಈ ಹಿಂದಿನ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರದ

ನೈರುತ್ಯ ಕ್ಷೇತ್ರದ ಮತದಾರರ ಕರಡು ಪಟ್ಟಿ ನ.21ರಂದು ಪ್ರಕಟ: ಅಪರ ಜಿಲ್ಲಾಧಿಕಾರಿ ► ಮತದಾರರ ಪಟ್ಟಿಯಲ್ಲಿ ಹೆಸರಿದ್ದರೂ ಹೊಸದಾಗಿ ಅರ್ಜಿ ಸಲ್ಲಿಸಬೇಕಾಗಿದೆ Read More »

ಕರಾವಳಿ

► ದಕ್ಷಿಣ ಕನ್ನಡದ ನೂತನ ಜಿಲ್ಲಾಧಿಕಾರಿಯಾಗಿ ಶಶಿಕಾಂತ್ ಸೆಂಥಿಲ್ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.19. ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿರ್ದೇಶಕರಾಗಿದ್ದ ಶಶಿಕಾಂತ್ ಸೆಂಥಿಲ್ ಗುರುವಾರ ಅಧಿಕಾರ ಸ್ವೀಕರಿಸಿದರು. ಪ್ರಭಾರ ಜಿಲ್ಲಾಧಿಕಾರಿ ಕುಮಾರ್ ಅವರು ನೂತನ ಜಿಲ್ಲಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಿ, ಸ್ವಾಗತಿಸಿದರು. ಈ ಸಂದರ್ಭ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಂ.ಆರ್. ರವಿ, ಮಂಗಳೂರು ಸಹಾಯಕ ಆಯುಕ್ತ ರೇಣುಕಾ ಪ್ರಸಾದ್, ಜಿ.ಪಂ. ಉಪ ಕಾರ್ಯದರ್ಶಿ ಎನ್.ಆರ್. ಉಮೇಶ್ ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

► ದಕ್ಷಿಣ ಕನ್ನಡದ ನೂತನ ಜಿಲ್ಲಾಧಿಕಾರಿಯಾಗಿ ಶಶಿಕಾಂತ್ ಸೆಂಥಿಲ್ ಅಧಿಕಾರ ಸ್ವೀಕಾರ Read More »

ಕರಾವಳಿ

ದ.ಕ. ಜಿಲ್ಲಾಧಿಕಾರಿ ಕೆ.ಜಿ.ಜಗದೀಶ್ ವರ್ಗಾವಣೆ ► ನೂತನ ಜಿಲ್ಲಾಧಿಕಾರಿಯಾಗಿ ಶಶಿಕಾಂತ್ ಸೆಂತಿಲ್ ನೇಮಕ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.10. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೆ.ಜಿ.ಜಗದೀಶ್ ರವರನ್ನು ರಾಜ್ಯ ಗಣಿ ಹಾಗೂ ಭೂವಿಜ್ಞಾನ ಇಲಾಖೆಯ ನಿರ್ದೇಶಕರಾಗಿ ವರ್ಗಾಯಿಸಿ ರಾಜ್ಯ ಸರ್ಕಾರ ಮಂಗಳವಾರದಂದು ಆದೇಶಿಸಿದೆ. ಗಣಿ ಹಾಗೂ ಭೂವಿಜ್ಞಾನ ಇಲಾಖೆಯ ನಿರ್ದೇಶಕರಾಗಿ ಕರ್ತವ್ಯದಲ್ಲಿದ್ದ 2009ರ ಬ್ಯಾಚ್ ನ ಐಎಎಸ್‌ ಅಧಿಕಾರಿ ಶಶಿಕಾಂತ್ ಸೆಂತಿಲ್ ಎಸ್.ರವರನ್ನು ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನೇಮಕಗೊಳಿಸಿದೆ.

ದ.ಕ. ಜಿಲ್ಲಾಧಿಕಾರಿ ಕೆ.ಜಿ.ಜಗದೀಶ್ ವರ್ಗಾವಣೆ ► ನೂತನ ಜಿಲ್ಲಾಧಿಕಾರಿಯಾಗಿ ಶಶಿಕಾಂತ್ ಸೆಂತಿಲ್ ನೇಮಕ Read More »

ಕರಾವಳಿ

ಪತ್ರಕರ್ತರಿಗೆ ಹಲ್ಲೆ ನಡೆಸಿದರೆ ನಿರ್ದಾಕ್ಷಿಣ್ಯ ಕ್ರಮ: ಜಿಲ್ಲಾಧಿಕಾರಿ

 (ನ್ಯೂಸ್ ಕಡಬ) newskadaba.com ಮ0ಗಳೂರು. ಆ.05. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪತ್ರಕರ್ತರಿಗೆ ಕರ್ತವ್ಯ ನಿರ್ವಹಣೆಯಲ್ಲಿ ಬೆದರಿಕೆ, ಹಲ್ಲೆಯಂತಹ  ಪ್ರಕರಣಗಳು ನಡೆದರೆ ಅಂತಹವರ ವಿರುದ್ಧ ಕಾನೂನು ಪ್ರಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು  ಜಿಲ್ಲಾಧಿಕಾರಿ ಡಾ.ಕೆ.ಜಿ.ಜಗದೀಶ್ ಹೇಳಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಪತ್ರಕರ್ತರ ಮೇಲಿನ ಹಲ್ಲೆಗಳ ಮೇಲ್ವಿಚಾರಣೆ ಮತ್ತು ಪರಿಶೀಲನೆಗೆ ರಚಿಸಿರುವ ಜಿಲ್ಲಾಮಟ್ಟದ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪತ್ರಕರ್ತರ ವಿರುದ್ಧ  ಯಾವುದೇ ದೂರುಗಳಿದ್ದರೂ ಸಮಿತಿಗೆ ಸಲ್ಲಿಸಬಹುದು. ಅದು ಬಿಟ್ಟು ಯಾರಾದರೂ ಕಾನೂನು ಕೈಗೆತ್ತಿಕೊಂಡರೆ ಸೂಕ್ತ ಕ್ರಮ ನಡೆಯಲಿದೆ.

ಪತ್ರಕರ್ತರಿಗೆ ಹಲ್ಲೆ ನಡೆಸಿದರೆ ನಿರ್ದಾಕ್ಷಿಣ್ಯ ಕ್ರಮ: ಜಿಲ್ಲಾಧಿಕಾರಿ Read More »

ಕರಾವಳಿ
Scroll to Top