death

ಕಳೆದ ವರ್ಷ ಅಣ್ಣ ಮೃತಪಟ್ಟ ದಿನವೇ ಈ ವರ್ಷ ತಮ್ಮ ಮೃತ್ಯು..!

(ನ್ಯೂಸ್ ಕಡಬ) newskadaba.com  ಹಾಸನ, ಜ.12. ಬೈಕ್ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಹಾಸನದ ಬೇಲೂರು ತಾಲ್ಲೂಕಿನ ನೆಟ್ಟೆಕೆರೆ ಗ್ರಾಮದಲ್ಲಿ ವರದಿಯಾಗಿದೆ. ಮೃತಪಟ್ಟವರನ್ನು ದಿಲೀಪ್ (21) ಎಂದು ಗುರುತಿಸಲಾಗಿದೆ. ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದರು. ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ. ಅಚ್ಚರಿ ಎಂದರೆ ದಿಲೀಪ್ ಅಣ್ಣ ಶ್ರೀಧರ್  2022ರ  ಜನವರಿ 9 ರಂದು ಅನಾರೋಗ್ಯದಿಂದ ಮೃತಪಟ್ಟಿದ್ದರು. ಈ ಘಟನೆ ನಡೆದ ಒಂದು ವರ್ಷದ ಬಳಿಕ ಅದೇ ದಿನಾಂಕದಂದು ದಿಲೀಪ್ ಮೃತಪಟ್ಟಿದ್ದಾರೆ […]

ಕಳೆದ ವರ್ಷ ಅಣ್ಣ ಮೃತಪಟ್ಟ ದಿನವೇ ಈ ವರ್ಷ ತಮ್ಮ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ; ಭಜರಂಗದಳದ ಮುಖಂಡನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆ..!         

(ನ್ಯೂಸ್ ಕಡಬ) newskadaba.com  ಬಂಟ್ವಾಳ, ಜ.12. ಬಜರಂಗದಳದ ಮುಖಂಡನೋರ್ವನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆಯಾದ ಘಟನೆ ಪಾಣೆಮಂಗಳೂರು ಹಳೆ ಸೇತುವೆ ಬಳಿ ಸಂಭವಿಸಿದೆ. ಮೃತಪಟ್ಟವರನ್ನು ಸಜೀಪ ನಿವಾಸಿ ರಾಜೇಶ್ ಪೂಜಾರಿ ಎಂದು ಗುರುತಿಸಲಾಗಿದೆ. ರಾಜೇಶ್ ಪೂಜಾರಿ ಬಜರಂಗದಳದ ಕಲ್ಲಡ್ಕ ಪ್ರಖಂಡ ಗೋ ರಕ್ಷಣಾ ಪ್ರಮುಖ ಆಗಿದ್ದರು ಎಂದು ತಿಳಿದುಬಂದಿದೆ. ಯುವಕ ನದಿಗೆ ಬಿದ್ದ ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯ ಮುಸ್ಲಿಮ್ ಯುವಕರ ತಂಡ ಸ್ಥಳಕ್ಕೆ ಧಾವಿಸಿ ಅಗ್ನಿಶಾಮಕ ದಳದ ಸಿಬ್ಬಂದಿಯ ಸಹಕಾರದೊಂದಿಗೆ ಮೃತದೇಹವನ್ನು ನೀರಿನಿಂದ ಮೇಲಕ್ಕೆ ಎತ್ತಿದೆ. ಮೃತದೇಹವನ್ನು

ಬಂಟ್ವಾಳ; ಭಜರಂಗದಳದ ಮುಖಂಡನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆ..!          Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದು ಯುವಕ ಮೃತ್ಯು..!!

(ನ್ಯೂಸ್ ಕಡಬ) newskadaba.com ಮಾಲೂರು, ಜ.12.  ನೀರಿನ ಹೊಂಡಕ್ಕೆ ಕಾಲು ಜಾರಿ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಮಾಲೂರಿನಲ್ಲಿ ವರದಿಯಾಗಿದೆ. ಮೃತ ಯುವಕನನ್ನು ಲಕ್ಕೂರು ಗ್ರಾಮದ ಜಾವೀದ್ (23) ಎಂದು ಗುರುತಿಸಲಾಗಿದೆ. ಕುಡಿತದ ದಾಸನಾಗಿದ್ದ ಈತನನ್ನು  ನಾಲ್ಕು ತಿಂಗಳ ಹಿಂದೆ ಚಟದಿಂದ ಬಿಡಿಸಲು ನವಚೈತನ್ಯ ಫೌಂಡೇಶನ್ ಗೆ ಪೋಷಕರು ಸೇರಿಸಿದ್ದರು ಎಂದಿ ತಿಳಿದುಬಂದಿದೆ. ಈ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದು ಯುವಕ ಮೃತ್ಯು..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಡುಗೆ ಸಿಲಿಂಡರ್‌ ಸೋರಿಕೆಯಿಂದ ಮನೆಗೆ ಬೆಂಕಿ ➤ ದಂಪತಿ ಹಾಗೂ ನಾಲ್ವರು ಮಕ್ಕಳು ಮೃತ್ಯು..!!

(ನ್ಯೂಸ್ ಕಡಬ) newskadaba.com ಚಂಡೀಗಢ, ಜ. 12. ಅಡುಗೆ ಸಿಲಿಂಡರ್ ಸೋರಿಕೆಯಾದ ಪರಿಣಾಮ ಮನೆಗೆ ಬೆಂಕಿ ಹೊತ್ತಿಕೊಂಡು ಒಂದೇ ಕುಟುಂಬದ ಆರು ಸದಸ್ಯರು ಮೃತಪಟ್ಟ ಭೀಕರ ಘಟನೆ ಚಂಡೀಗಢದ ಪಾಣಿಪತ್‌ನಲ್ಲಿ ವರದಿಯಾಗಿದೆ. ಮೃತರನ್ನು ಅಬ್ದುಲ್ (45), ಅವರ ಪತ್ನಿ(40) ಮತ್ತು 18 ಮತ್ತು 16 ವರ್ಷದ ಇಬ್ಬರು ಪುತ್ರಿಯರು ಹಾಗೂ 12 ಮತ್ತು 10 ವರ್ಷದ ಇಬ್ಬರು ಪುತ್ರರು ಎಂದು ಗುರುತಿಸಲಾಗಿದೆ. ಪಾಣಿಪತ್ ಜಿಲ್ಲೆಯ ಬಿಚ್ಪರಿ ಗ್ರಾಮದ ಬಳಿಯ ತಹಸಿಲ್ ಕ್ಯಾಂಪ್ ಪ್ರದೇಶದಲ್ಲಿ ಈ ದುರ್ಘಟನೆ  ಸಂಭವಿಸಿದೆ ಎನ್ನಲಾಗಿದೆ.

ಅಡುಗೆ ಸಿಲಿಂಡರ್‌ ಸೋರಿಕೆಯಿಂದ ಮನೆಗೆ ಬೆಂಕಿ ➤ ದಂಪತಿ ಹಾಗೂ ನಾಲ್ವರು ಮಕ್ಕಳು ಮೃತ್ಯು..!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹೃದಯಾಘಾತದಿಂದ ಯಾದಗಿರಿಯ ಶ್ರೀಗಳು ವಿಧಿವಶ

(ನ್ಯೂಸ್ ಕಡಬ) newskadaba.com ಯಾದಗಿರಿ, ಜ. 12.  ಹಿರೇಮಠದ  ಪೀಠಾಧಿಪತಿ  ಷ. ಬ್ರ. ಶ್ರೀ  ವೀರಮಹಾಂತ ಶಿವಾಚಾರ್ಯರು (48) ತೀವ್ರ ಹೃದಯಘಾತದಿಂದ ಲಿಂಗೈಕ್ಯರಾಗಿದ್ದಾರೆ ಎನ್ನಲಾಗಿದೆ.   ಶ್ರೀಗಳಿಗೆ ಬೆಂಗಳೂರು ರೈಲು ನಿಲ್ದಾಣದಲ್ಲಿ ತೀವ್ರ ಹೃದಯಾಘಾತ ಆದಾಗ, ಅವರಿಗೆ ನೀಡಿದ ಪ್ರಾಥಮಿಕ ಚಿಕಿತ್ಸೆ ಫಲಕಾರಿಯಾಗದೆ ಶ್ರೀಗಳು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.  25ನೇ ವರ್ಷದ  ಪಟ್ಟಾಧಿಕಾರ ಮಹೋತ್ಸವದ ಕಾರ್ಯಕ್ರಮದ ಅಂಗವಾಗಿ ಗಣ್ಯರಿಗೆ ಆಹ್ವಾನ ನೀಡಲು ಶ್ರೀಗಳು ಬೆಂಗಳೂರಿಗೆ ತೆರಳಿದ್ದರು ಎನ್ನಲಾಗಿದೆ. ಬೆಂಗಳೂರಿನಲ್ಲಿ  ಬಿ. ವೈ. ವಿಜಯೇಂದ್ರ ಸೇರಿದಂತೆ ಮತ್ತಿತರ

ಹೃದಯಾಘಾತದಿಂದ ಯಾದಗಿರಿಯ ಶ್ರೀಗಳು ವಿಧಿವಶ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆಟವಾಡುತ್ತಿದ್ದ ಯುವಕ ಹೃದಯಾಘಾತದಿಂದ ಮೃತ್ಯು..!  

(ನ್ಯೂಸ್ ಕಡಬ) newskadaba.com  ಮಸ್ಕತ್, ಜ.12. ಸ್ನೇಹಿತರೊಂದಿಗೆ ಬ್ಯಾಡ್ಮಿಂಟನ್‌ ಆಟವಾಡುತ್ತಿದ್ದ ಯುವಕನೋರ್ವ ದಿಢೀರ್ ಕುಸಿದು ಬಿದ್ದು ಮೃತಪಟ್ಟ ಘಟನೆ ಮಸ್ಕತ್ ನಲ್ಲಿ ವರದಿಯಾಗಿದೆ. ಕೇರಳ ಮೂಲದ ಯುವಕ ಮೃತಪಟ್ಟವರು ಎನ್ನಲಾಗಿದ್ದು, ಸ್ನೇಹಿತರೊಂದಿಗೆ ಬ್ಯಾಡ್ಮಿಂಟನ್‌ ಕೋರ್ಟ್‌ನಲ್ಲಿ ಆಟವಾಡುತ್ತಿದ್ದಾಗ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.ಈ ವೇಳೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ವೈದ್ಯರು ಪರೀಕ್ಷೆ ಬಳಿಕ ಹೃದಯಾಘಾತಗೊಂಡು ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ. ಬ್ಯಾಡ್ಮಿಂಟನ್ ಆಟದ ವೇಳೆ‌ ನಡೆದ ಹೃದಯಾಘಾತದ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ ಎಂದು ವರದಿ ತಿಳಿಸಿದೆ.  

ಆಟವಾಡುತ್ತಿದ್ದ ಯುವಕ ಹೃದಯಾಘಾತದಿಂದ ಮೃತ್ಯು..!   Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೆಟ್ರೋ ಪಿಲ್ಲರ್ ಕುಸಿತ ಪ್ರಕರಣ ➤ 9 ಮಂದಿಯ ವಿರುದ್ದ ಎಫ್ಐಆರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 12. ತಾಯಿ ತೇಜಸ್ವಿನಿ ಸುಲಾಖೆ ಮತ್ತು ಆಕೆಯ ಎರಡೂವರೆ ವರ್ಷದ ಮಗ ವಿಹಾನ್ ಎಲ್ ಸುಲಾಖೆ ಸಾವಿನ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಎಫ್‌ಐಆರ್‌ನಲ್ಲಿ ನಾಗಾರ್ಜುನ ಕಂಪನಿ ಸೇರಿ ಒಟ್ಟು 9 ಮಂದಿಯ ಹೆಸರನ್ನು ದಾಖಲಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಸಂಬಂಧ ತನಿಖೆಗೆ ಹಾಜರಾಗುವಂತೆ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (ಬಿಎಂಆರ್‌ಸಿಎಲ್) ಅಧಿಕಾರಿಗಳು ಮತ್ತು ನಾಗಾರ್ಜುನ ಕನ್‌ಸ್ಟ್ರಕ್ಷನ್ ಕಂಪನಿ (ಎನ್‌ಸಿಸಿ)ಗೆ ನೋಟಿಸ್ ಜಾರಿ ಮಾಡಿದ್ದಾರೆ ಎನ್ನಲಾಗಿದೆ. ನಾಗಾರ್ಜುನ ಕಂಪನಿ

ಮೆಟ್ರೋ ಪಿಲ್ಲರ್ ಕುಸಿತ ಪ್ರಕರಣ ➤ 9 ಮಂದಿಯ ವಿರುದ್ದ ಎಫ್ಐಆರ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮೂವರು ಹೆಣ್ಣು ಮಕ್ಕಳಿಗೆ ವಿಷ ನೀಡಿ ತಾನೂ ಆತ್ಮಹತ್ಯೆ ಮಾಡಿಕೊಂಡ ತಾಯಿ..!   

(ನ್ಯೂಸ್ ಕಡಬ) newskadaba.com  ಬಾಗಲಕೋಟೆ, ಜ.12. ಮೂವರು ಹೆಣ್ಣು ಮಕ್ಕಳಿಗೆ ವಿಷ ನೀಡಿ ತಾಯಿ ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಿಮ್ಮಾಪುರ ಗ್ರಾಮದಲ್ಲಿ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ರೇಖಾ(28) ಮಕ್ಕಳಾದ ಸನ್ನಿಧಿ (7), ಸಮೃದ್ಧಿ (5), ಶ್ರೀನಿಧಿ (2)ಗೆ ವಿಷವುಣಿಸಿ ತಾವು ಕೂಡ ಅತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ‌. ಘಟನೆಯಲ್ಲಿ ನಾಲ್ವರು ಕೂಡ ಮೃತಪಟ್ಟಿದ್ದಾರೆ ಎನ್ನಲಾಗಿದೆ. ರೇಖಾ ಮಾನಸಿಕ ಸಮಸ್ಯೆ ಕೂಡ ಹೊಂದಿದ್ದು, ಈ‌ ಮೊದಲು ಕೂಡ ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿದೆ. ಈ ಕುರಿತು ಬಾಗಲಕೋಟೆ ಗ್ರಾಮೀಣ

ಮೂವರು ಹೆಣ್ಣು ಮಕ್ಕಳಿಗೆ ವಿಷ ನೀಡಿ ತಾನೂ ಆತ್ಮಹತ್ಯೆ ಮಾಡಿಕೊಂಡ ತಾಯಿ..!    Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೈಕ್ ನಿಂದ ಆಯತಪ್ಪಿ ಬಸ್ ಕೆಳಗೆ ಬಿದ್ದು ವಿದ್ಯಾರ್ಥಿ ಮೃತ್ಯು..!!!

(ನ್ಯೂಸ್ ಕಡಬ) newskadaba.com ಬಳ್ಳಾರಿ, ಜ.11.  ಬಿಪಿಎಸ್ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಬೈಕ್ ನಿಂದ ಆಯತಪ್ಪಿ ಅದೇ ಕಾಲೇಜಿನ ಬಸ್ ಕೆಳಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬಳ್ಳಾರಿ ವರದಿಯಾಗಿದೆ. ಮೃತ ವಿದ್ಯಾರ್ಥಿಯನ್ನು ಹನುಮಾನ್ ನಗರದ ಪ್ರಶಾಂತ್ (18) ಎಂದು ಗುರುತಿಸಲಾಗಿದೆ. ಕಾಲೇಜ್ ಮುಗಿದ ನಂತರ ಆತ ಬೈಕ್ ತೆಗೆದುಕೊಂಡು ಹೊರಟಿದ್ದ. ಅನಂತಪುರಂ ರಸ್ತೆಯ ಶಾಂತಿನಿಕೇತನ ಶಾಲೆಯ ಬಳಿ ಹೋಗುವಾಗ ಆಯತಪ್ಪಿ ಬೈಕ್ ನಿಂದ ಬಸ್ ಕೆಳಗೆ ಬಿದ್ದಿದ್ದಾನೆ. ಬಸ್ ಆತನ ತಲೆಯ ಮೇಲೆ ಹರಿದಿದೆ

ಬೈಕ್ ನಿಂದ ಆಯತಪ್ಪಿ ಬಸ್ ಕೆಳಗೆ ಬಿದ್ದು ವಿದ್ಯಾರ್ಥಿ ಮೃತ್ಯು..!!! Read More »

ಕರ್ನಾಟಕ, ಕ್ರೈಮ್ ನ್ಯೂಸ್
Crime

ಜನರ ಕಣ್ಣೆದುರೇ ಕಾನ್‌ಸ್ಟೆಬಲ್‌ನನ್ನು ಇರಿದು ಕೊಂದ ಕಳ್ಳ…!

(ನ್ಯೂಸ್ ಕಡಬ)newskadaba.com  ಹೊಸದಿಲ್ಲಿ, ಜ.11. ನಡುರಸ್ತೆಯಲ್ಲಿ ಎಲ್ಲರ ಕಣ್ಣೆದುರೇ ಕಳ್ಳನಿಂದ ಇರಿತಕ್ಕೆ ಒಳಗಾದ ಪೊಲೀಸ್ ಅಧಿಕಾರಿ ಮೃತಪಟ್ಟ ಘಟನೆ ರಾಜಧಾನಿ ದಿಲ್ಲಿಯಲ್ಲಿ ನಡೆದಿದೆ. ಮೊಬೈಲ್ ಫೋನ್ ಕದ್ದು ಪರಾರಿಯಾಗುತ್ತಿದ್ದ ಖದೀಮನನ್ನು ಪೊಲೀಸ್ ಸಿಬ್ಬಂದಿಯೊಬ್ಬರು ಹಿಡಿದಿದ್ದರು. ಆದರೆ ಕಳ್ಳ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ 12 ಬಾರಿ ಅವರಿಗೆ ಚಾಕುವಿನಿಂದ ಇರಿದಿದ್ದಾನೆ. ಇಷ್ಟೆಲ್ಲಾ ನಡೆದರೂ ಜನರ ಗುಂಪು ಮೂಕ ಪ್ರೇಕ್ಷಕರಾಗಿತ್ತೇ ವಿನಾ, ಕಳ್ಳನ ಆಕ್ರಮಣದಿಂದ ಪೊಲೀಸ್ ಸಿಬ್ಬಂದಿಯನ್ನು ರಕ್ಷಿಸುವ ಗೋಜಿಗೆ ಹೋಗಲಿಲ್ಲ. ದಾಳಿಕೋರನನ್ನು ತಡೆಯುವ ಅಥವಾ ಅವನನ್ನು ಹಿಡಿಯುವ ಪೊಲೀಸ್ ಪ್ರಯತ್ನಕ್ಕೆ

ಜನರ ಕಣ್ಣೆದುರೇ ಕಾನ್‌ಸ್ಟೆಬಲ್‌ನನ್ನು ಇರಿದು ಕೊಂದ ಕಳ್ಳ…! Read More »

ಕರ್ನಾಟಕ
Scroll to Top