death

ಚಿಕಿತ್ಸೆ ನೀಡುವಾಗಲೇ ವ್ಯಕ್ತಿ ಮೃತ್ಯು…!

(ನ್ಯೂಸ್ ಕಡಬ) newskadaba.com ದೇವನಹಳ್ಳಿ, ಡಿ. 22. ಮಗಳೊಂದಿಗೆ ಆಸ್ಪತ್ರೆಗೆ ಆಗಮಿಸಿದ ವೃದ್ಧರೊಬ್ಬರು ಪ್ರಾಥಮಿಕ ಚಿಕಿತ್ಸೆ ನೀಡುವಾಗಲೇ ಮೃತಪಟ್ಟಿರುವ ಘಟನೆ ಇಲ್ಲಿನ ವಿಜಯಪುರ ರಸ್ತೆಯಲ್ಲಿರುವ ತಾಲ್ಲೂಕಿನ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಚಿಕ್ಕಬಳ್ಳಾಪುರದ ಶಿಡ್ಲಘಟ್ಟದ ಹೆಮರ್ಲಹಳ್ಳಿ ಮೂಲದ ಚಿನ್ನಪ್ಪ (61) ಎಂದು ಗುರುತಿಸಲಾಗಿದೆ. ತಂದೆಯನ್ನು ಕಳೆದುಕೊಂಡ  ಮಗಳು ಆಕ್ರೋಶ ಭರಿತರಾಗಿ ಆಸ್ಪತ್ರೆಯಲ್ಲಿದ್ದ ದಾಖಲಾತಿ ಪುಸ್ತಕ, ಪೀಠೋಪಕಣ ಎಸೆದು ರಂಪಾಟ ಮಾಡಿದ್ದು, ಆಸ್ಪತ್ರೆಯಲ್ಲಿ ಕೆಲಕಾಲ ಬಿಗುವಿನ ವಾತಾರಣ ನಿರ್ಮಾಣವಾಗಿತ್ತು.    

ಚಿಕಿತ್ಸೆ ನೀಡುವಾಗಲೇ ವ್ಯಕ್ತಿ ಮೃತ್ಯು…! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಣಿಪುರದ ನೋನಿ ಜಿಲ್ಲೆಯಲ್ಲಿ ಭೀಕರ ಬಸ್ ಅಪಘಾತ ➤ 15 ವಿದ್ಯಾರ್ಥಿಗಳು ಮೃತ್ಯು..!

(ನ್ಯೂಸ್ ಕಡಬ) newskadaba.com  ಮಣಿಪುರ , ಡಿ 21 :  ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಎರಡು ಬಸ್ ಗಳು ನಿಯಂತ್ರಣ ಕಳೆದುಕೊಂಡು ಅಪಘಾತವಾದ ಭೀಕರ ಘಟನೆ ಮಣಿಪುರದ ನೋನಿ ಜಿಲ್ಲೆಯ ಲಾಂಗ್ಸಾಯ್ ತುಬುಂಗ್ ಗ್ರಾಮದ ಬಳಿ ಸಂಭವಿಸಿದೆ. ಅಪಘಾತದಲ್ಲಿ ಕನಿಷ್ಠ 15 ಮಂದಿ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ  ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ವಿದ್ಯಾರ್ಥಿಗಳನ್ನು ಕರೆದು ಕೊಂಡು ಹೋಗುತ್ತಿದ್ದ  ಎರಡು ಬಸ್ ಗಳು ಯಾರಿಪೋಕ್ ನ ತಂಬಲ್ನು ಹೈಯರ್ ಸೆಕೆಂಡರಿ ಶಾಲೆಗೆ ಸೇರಿದ್ದು. ಈ ಬಸ್ಸುಗಳು ಅಧ್ಯಯನ ಪ್ರವಾಸಕ್ಕಾಗಿ

ಮಣಿಪುರದ ನೋನಿ ಜಿಲ್ಲೆಯಲ್ಲಿ ಭೀಕರ ಬಸ್ ಅಪಘಾತ ➤ 15 ವಿದ್ಯಾರ್ಥಿಗಳು ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಯುವಕನ ಬರ್ಬರ ಕೊಲೆ…!

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 21. ಯುವಕನೋರ್ವನನ್ನು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಹೆಗಡೆನಗರದ ಬಾಲಾಜಿ ಲೇಔಟ್ ಬಳಿ ಸಂಭವಿಸಿದೆ. ಕೊಲೆಯಾದ ಯುವಕನನ್ನು ಹೆಗಡೆನಗರ ನಿವಾಸಿ ಸಲ್ಮಾನ್ (17) ಎಂದು ಗುರುತಿಸಲಾಗಿದೆ. ಹೋಟೆಲೊಂದರಲ್ಲಿ ಕೆಲಸ ಮಾಡುತ್ತಿದ್ದ ಈತ, ಮನೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಬಂದ ಹಂತಕರು ಯುವಕನನ್ನು ಚಾಕುವಿನಿಂದ ಇರಿದಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸಂಪಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಯುವಕನ ಬರ್ಬರ ಕೊಲೆ…! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಂಗಳೂರು : 7ನೇ ಮಹಡಿಯಿಂದ ಬಿದ್ದು ಕಾರ್ಮಿಕ ಮೃತ್ಯು..!

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ. 21. ಕಟ್ಟಡದ 7 ನೇ ಮಹಡಿಯಿಂದ ಬಿದ್ದು ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹೊಸೂರು ರಸ್ತೆಯಲ್ಲಿರುವ ಪಿಇಎಸ್ ಕಾಲೇಜು ಆವರಣದಲ್ಲಿ ಸಂಭವಿಸಿದೆ. ಮೃತ ಕಾರ್ಮಿಕರನ್ನು ಪಶ್ಚಿಮ ಬಂಗಾಳದ ಮೂಲದ ಎಸ್.ಕೆ.ಜಿಯಾರುಲ್ (24) ಎಂದು ಗುರುತಿಸಲಾಗಿದೆ. ಮಗನ ಸಾವಿನ ಕುರಿತು ತಾಯಿ ನೀಡಿರುವ ದೂರಿನನ್ವಯ, ಕಟ್ಟಡ ನಿರ್ಮಾಣದ ಗುತ್ತಿಗೆ ಪಡೆದಿದ್ದ ಎವಿಎಸ್ ಕಂಪನಿಯ ಜವಾಹರ್, ಎಂಜಿನಿಯರ್ ನಂಬಿರಾಜನ್, ಉಸ್ತುವಾರಿ ಕುಮಾರ್ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಬೆಂಗಳೂರು : 7ನೇ ಮಹಡಿಯಿಂದ ಬಿದ್ದು ಕಾರ್ಮಿಕ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೈಕ್ ಗೆ ಗೂಡ್ಸ್ ವಾಹನ ಢಿಕ್ಕಿ ➤ ಸವಾರ ಸ್ಥಳದಲ್ಲೇ ಮೃತ್ಯು..!

(ನ್ಯೂಸ್ ಕಡಬ) newskadaba.com ಸಂತೆಬೆನ್ನೂರು, ಡಿ. 21. ಗೂಡ್ಸ್ ವಾಹನಕ್ಕೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸಂತೇಬೆನ್ನೂರು ಸಮೀಪದ ಕಾಕನೂರು ವಿನಾಯಕ ಪ್ರೌಢಶಾಲೆ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ದಾವಣಗೆರೆ ತಾಲ್ಲೂಕಿನ ಗೋಪನಾಳು ಗ್ರಾಮದ ನಿವಾಸಿ ಪರಮೇಶ್ (33) ಎಂದು ಗುರುತಿಸಲಾಗಿದೆ. ಇವರು ಪಾಂಡೋಮಟ್ಟಿ ಗ್ರಾಮಕ್ಕೆ ಸಂಬಂಧಿಕರ ಶವ ಸಂಸ್ಕಾರಕ್ಕೆಂದು ತೆರಳುವಾಗ ಈ ದುರ್ಘಟನೆ ನಡೆದಿದೆ. ಈ ಬಗ್ಗೆ ಸಂತೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್ ಗೆ ಗೂಡ್ಸ್ ವಾಹನ ಢಿಕ್ಕಿ ➤ ಸವಾರ ಸ್ಥಳದಲ್ಲೇ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚಾಮರಾಜನಗರ: ಬಿ.ಆರ್.ಟಿ ಅರಣ್ಯ ಪ್ರದೇಶದಲ್ಲಿ ಹುಲಿ ಮೃತ್ಯು..!

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಡಿ. 21. 5 ವರ್ಷ ಪ್ರಾಯದ ಹುಲಿ ಕಾದಾಟದಲ್ಲಿ ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಗುಂಡಾಲ್ ಜಲಾಶಯದ ಬಿ ಆರ್ ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಕಗ್ಗಲಿಗುಂಡಿ ಎಂಬಲ್ಲಿ ಸಂಭವಿಸಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಧಿಕಾರಿಗಳು ಬಂದು ಮರಣೋತ್ತರ ಪರೀಕ್ಷೆ ನಡೆಸಿ ನಂತರ ಅಂತ್ಯಕ್ರಿಯೆ ನೆರವೇರಿಸಿದ್ದಾರೆ ಎನ್ನಲಾಗಿದೆ. ಕಗ್ಗಲಿಗುಂಡಿ ಅರಣ್ಯ ಪ್ರದೇಶದಲ್ಲಿ ಸಿಬ್ಬಂದಿ ಗಸ್ತು ತಿರುಗುವಾಗ ಹುಲಿಯ ಕಳೇಬರ ಪತ್ತೆಯಾಗಿದೆ. ಸ್ಥಳದಲ್ಲಿ ಹುಲಿಗಳ ಹೆಜ್ಜೆ ಗುರುತು ಹೆಚ್ಚು ಪತ್ತೆಯಾಗಿದೆ.

ಚಾಮರಾಜನಗರ: ಬಿ.ಆರ್.ಟಿ ಅರಣ್ಯ ಪ್ರದೇಶದಲ್ಲಿ ಹುಲಿ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸ್ಮಶಾನದ ಬಾವಿಯಲ್ಲಿ ನವಜಾತ ಹೆಣ್ಣು ಶಿಶುವಿನ ಮೃತದೇಹ ಪತ್ತೆ …..!  

(ನ್ಯೂಸ್ ಕಡಬ) newskadaba.com  ವಿಜಯಪುರ, ಡಿ.20 ಸ್ಮಶಾನದ ಬಾವಿಯಲ್ಲಿ ನವಜಾತ ಹೆಣ್ಣು ಶಿಶುವಿನ ಶವ ಪತ್ತೆಯಾದ ಘಟನೆ ವಿಜಯಪುರ ನಗರದ ದೇವಗಿರಿ ಎಂಬಲ್ಲಿ ಸಂಭವಿಸಿದೆ. ಸ್ಮಶಾನದ ಬಾವಿಯಲ್ಲಿನ ಮೋಟರ್ ಸ್ಟಾರ್ಟ್ ಮಾಡಲು ಹೋದಾಗ ಶಿಶುವಿನ ಶವ ಪತ್ತೆಯಾಗಿದ್ದು, ಪಾಪಿಗಳು ಆಗತಾನೆ ಜನಿಸಿದ ನವಜಾತ ಹೆಣ್ಣು ಶಿಶುವನ್ನು ಬಾವಿಯಲ್ಲಿ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ. ಹೆಣ್ಣು ಮಗುವಾಗಿದೆ ಎಂಬ ಕಾರಣಕ್ಕೆ ಯಾರು ಬಾವಿಯಲ್ಲಿ ಬಿಸಾಕಿ ಹೋಗಿದ್ದಾರೆ ಎಂಬುದು ತಿಳಿದುಬಂದಿಲ್ಲ. ಸ್ಥಳಕ್ಕೆ ಆದರ್ಶ ನಗರ ಪಿಎಸ್ಐ ಯತೀಂದ್ರ ಭೇಟಿ ನೀಡಿ

ಸ್ಮಶಾನದ ಬಾವಿಯಲ್ಲಿ ನವಜಾತ ಹೆಣ್ಣು ಶಿಶುವಿನ ಮೃತದೇಹ ಪತ್ತೆ …..!   Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕುಸಿದು ಬಿದ್ದು ಚಾಲಕ ಮೃತ್ಯು!

(ನ್ಯೂಸ್ ಕಡಬ) newskadaba.com  ಸೋಮವಾರಪೇಟೆ  , ಡಿ 20 :  ಟ್ಯಾಕ್ಸಿ ಚಾಲಕರೊಬ್ಬರು ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಸೋಮವಾರಪೇಟೆ ತಾಲ್ಲೂಕಿನ ಆಯತಾನ ರೆಸಾರ್ಟ್ ಬಳಿ ಸಂಭವಿಸಿದೆ. ಮೃತರನ್ನು ಈರಣ್ಣ (36) ಎಂದು ಗುರುತಿಸಲಾಗಿದೆ. ಇವರು ಮಂಡ್ಯ ಜಿಲ್ಲೆಯ ಮಳವಳ್ಳಿ ನಿವಾಸಿ, ಸ್ನಾನ ಮುಗಿಸಿ ಹೊರಬಂದು ಕೊಠಡಿಯಲ್ಲಿ ಕುಳಿತಿದ್ದ ಸಂದರ್ಭ ದಿಢೀರ್ ಕುಸಿದು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇವರು ಪತ್ನಿ ಸೇರಿದಂತೆ ಎರಡು ವರ್ಷದ ಮಗುವನ್ನು ಅಗಲಿದ್ದಾರೆ.

ಕುಸಿದು ಬಿದ್ದು ಚಾಲಕ ಮೃತ್ಯು! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾಸರಗೋಡು : ಭೀಕರ ರಸ್ತೆ ಅಪಘಾತ ➤ ಓರ್ವ ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ) newskadaba.com   ಕಾಸರಗೋಡು, ಡಿ.20  ದ್ವಿಚಕ್ರ ವಾಹನಕ್ಕೆ ಲಾರಿಯೊಂದು ಡಿಕ್ಕಿಯಾದ ಪರಿಣಾಮ ವಿದ್ಯಾರ್ಥಿಯೋರ್ವ ಮರತಪಟ್ಟ ಘಟನೆ ಬೇಕಲ ಸಮೀಪದ ಪಳ್ಳಿಕೆರೆಯಲ್ಲಿ ಸಂಭವಿಸಿದೆ ಎಂದು ವರದಿ ತಿಳಿಸಿದೆ. ಮೃತಪಟ್ಟವರನ್ನು ಚಂದ್ರಗಿರಿ ಕಾಲೇಜಿನ ಪ್ಲಸ್ ವನ್ ವಿದ್ಯಾರ್ಥಿ ಅಸ್ಬಾಕ್ ಎಂದು ಗುರುತಿಸಲಾಗಿದೆ. ಕಾಲೇಜ್ ಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಅಡುಗೆ ಅನಿಲ ಸಿಲಿಂಡರ್ ಹೇರಿಕೊಂಡು ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.    

ಕಾಸರಗೋಡು : ಭೀಕರ ರಸ್ತೆ ಅಪಘಾತ ➤ ಓರ್ವ ವಿದ್ಯಾರ್ಥಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಗುಂಡಿ ತಪ್ಪಿಸಲು ಹೋಗಿ ಬೈಕ್ ಸವಾರ ಮೃತ್ಯು       

(ನ್ಯೂಸ್ ಕಡಬ) newskadaba.com   ನೆಲಮಂಗಲ, ಡಿ.20   ರಸ್ತೆಯಲ್ಲಿ ಬಿದ್ದಿದ್ದ ಗುಂಡಿ ತಪ್ಪಿಸಲು ಹೋಗಿ ಬೈಕ್ ಸವಾರರೊಬ್ಬರು ಮೃತಪಟ್ಟ ಘಟನೆ ನೆಲಮಂಗಲ ಸಮೀಪದ ಮಾದಾ ವರದ ರಸ್ತೆಯಲ್ಲಿ ಸಂಭವಿಸಿದೆ ಎಂದು ವರದಿ ತಿಳಿಸಿದೆ. ಮೃತಪಟ್ಟವರನ್ನು ದಾವಣಗೆರೆಯ ಹರ್ಷ ( 25 ) ಎಂದು ಗುರುತಿಸಲಾಗಿದೆ. ಗುಂಡಿ ತಪ್ಪಿಸಲು ಹೋಗಿ ಅಯತಪ್ಪಿ ರಸ್ತೆಯ ಮಧ್ಯದಲ್ಲಿ ಬಿದ್ದಿದ್ದ ಸವಾರನ ಮೇಲೆ ಹಿಂಬದಿಯಿಂದ ಬಂದ ಲಾರಿ ಹರಿದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಲಾರಿ ಚಾಲಕ ಪರಾರಿಯಾಗಿದ್ದಾನೆ ಎಂದು ಪೊಲೀಸ್ ಮೂಲಗಳು

ಗುಂಡಿ ತಪ್ಪಿಸಲು ಹೋಗಿ ಬೈಕ್ ಸವಾರ ಮೃತ್ಯು        Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top