death

ಸ್ಕೂಟಿಗೆ ಅಪರಿಚಿತ ವಾಹನ ಢಿಕ್ಕಿ  ➤ 9 ತಿಂಗಳ ಶಿಶು ಹಾಗೂ ವೃದ್ಧ ಮೃತ್ಯು  

(ನ್ಯೂಸ್ ಕಡಬ) newskadaba.com ತುಮಕೂರು, ಡಿ. 17. ಅಪಘಾತಗಳ ಸರಮಾಲೆ ಮುಂದುವರೆದಿದ್ದು, ಸ್ಕೂಟಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು 9 ತಿಂಗಳ ಶಿಶು ಹಾಗೂ ವೃದ್ಧ ಮೃತಪಟ್ಟ ಘಟನೆ ತುಮಕೂರಿನಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ನಿಂಗಪ್ಪ (65) ಮತ್ತು 9 ತಿಂಗಳ ಹೆಣ್ಣು ಮಗು ಎಂದು ಗುರುತಿಸಲಾಗಿದೆ. ವೃದ್ಧ ನಿಂಗಪ್ಪ ಶಿಶು ಜೊತೆಗೆ ಸ್ಕೂಟಿಯಲ್ಲಿ ತೆರಳುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಸ್ಕೂಟಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಸ್ಕೂಟಿಗೆ ಅಪರಿಚಿತ ವಾಹನ ಢಿಕ್ಕಿ  ➤ 9 ತಿಂಗಳ ಶಿಶು ಹಾಗೂ ವೃದ್ಧ ಮೃತ್ಯು   Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ ➤ ಇಬ್ಬರು ಮೃತ್ಯು, ಮಹಿಳೆ ಗಂಭೀರ

(ನ್ಯೂಸ್ ಕಡಬ) newskadaba.com ತುಮಕೂರು, ಡಿ. 17. ದ್ವಿ ಚಕ್ರ ವಾಹನಕ್ಕೆ ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ 9 ವರ್ಷದ ಬಾಲಕಿ ಸೇರಿ ಇಬ್ಬರು ಮೃತಪಟ್ಟ ಘಟನೆ ತುರುವೇಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಆನೆಮಲೆ ಗೇಟ್ ಬಳಿ ಸಂಭವಿಸಿದೆ. ಮೃತರನ್ನು ದ್ವಿಚಕ್ರ ಸವಾರ ನಿಂಗಪ್ಪ (65) ಹಾಗೂ 9 ವರ್ಷದ ಬಾಲಕಿ ಎಂದು ಗುರುತಿಸಲಾಗಿದೆ. ಇನ್ನೋರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ರಾತ್ರಿ ಇವರು ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು ಪರಾರಿಯಾಗಿದೆ.

ರಸ್ತೆ ಅಪಘಾತ ➤ ಇಬ್ಬರು ಮೃತ್ಯು, ಮಹಿಳೆ ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಾಟರ್ ಟ್ಯಾಂಕ್ ನೊಳಗೆ ಬಿದ್ದು 30 ಕ್ಕೂ ಅಧಿಕ ಕೋತಿಗಳು ಮೃತ್ಯು..!       

(ನ್ಯೂಸ್ ಕಡಬ) newskadaba.com ಕಲಬುರಗಿ, ಡಿ. 17. ಬಳಕೆಯಲ್ಲಿ ಇಲ್ಲದ ವಾಟರ್‌ ಟ್ಯಾಂಕ್‌ನಲ್ಲಿ 30ಕ್ಕೂ ಅಧಿಕ ಕೋತಿಗಳು ಬಿದ್ದ ಪರಿಣಾಮ ಆಹಾರವಿಲ್ಲದೆ ಬಳಲಿ ಮೃತಪಟ್ಟ ಘಟನೆ ಇಲ್ಲಿನ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದಲ್ಲಿ ನಡೆದಿದೆ. ಬಳಕೆಯಲ್ಲಿಲ್ಲದ ಶೀಥಿಲಾವಸ್ಥೆಯ ಟ್ಯಾಂಕ್ ನೊಳಗೆ ನೀರಿಗಾಗಿ ಕೆಲವು ಕೋತಿಗಳು ಜಿಗಿದಿದ್ದವು. ಈ ವೇಳೆ ಮೇಲೆ ಬರಲು ಎಷ್ಟೇ ಶ್ರಮ ವಹಿಸಿದ್ದರೂ ಸಾಧ್ಯವಾಗಿರಲಿಲ್ಲ. ಒಂದರಂತೆ ಇನ್ನೊಂದು ಈ ರೀತಿ 30 ಕ್ಕೂ ಹೆಚ್ಚು ಕೋತಿಗಳು ಟ್ಯಾಂಕ್ ನೊಳಗೆ ಬಿದ್ದು ಪರದಾಟ ನಡೆಸುತ್ತಿದ್ದವು. ಇದರಿಂದಾಗಿ

ವಾಟರ್ ಟ್ಯಾಂಕ್ ನೊಳಗೆ ಬಿದ್ದು 30 ಕ್ಕೂ ಅಧಿಕ ಕೋತಿಗಳು ಮೃತ್ಯು..!        Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೆರೆಗೆ ವಿಷ ಬೆರೆಸಿದ ಶಂಕೆ  ➤ ನೂರಾರು ಮೀನು ಮತ್ತು ಜಾನುವಾರುಗಳ ಸಾವು  

(ನ್ಯೂಸ್ ಕಡಬ) newskadaba.com ದಾವಣಗೆರೆ, ಡಿ. 17. ಇತ್ತೀಚೆಗೆ ಭರ್ಜರಿ ಮಳೆಯಾದ ಹಿನ್ನೆಲೆ ಜಗಳೂರು ತಾಲೂಕಿನ ಹಿರೇಅರಕೆರೆ ಗ್ರಾಮ ಕೆರೆ ಭರ್ತಿಯಾಗಿದ್ದು, 125 ಎಕರೆ ಪ್ರದೇಶದ ಕೆರೆಯಲ್ಲಿ ಮೂರು ಲಕ್ಷ ಮೀನಿನ ಮರಿಗಳನ್ನ ಬಿಡಲಾಗಿತ್ತು. ಆದ ಇಂತಹ ಮೀನುಗಳು ಸಾವನ್ನಪ್ಪಿ ತೇಲಾಡುತ್ತಿವೆ. ಸತ್ತ ಮೀನುಗಳನ್ನ ತಿಂದ ನಾಯಿಗಳು, ಕೆರೆ ನೀರು ಕುಡಿದ ಜಾನುವಾರುಗಳು ಕೂಡ ಸಾವನ್ನಪ್ಪುತ್ತಿವೆ ಎನ್ನಲಾಗಿದೆ. ಬಸವರಾಜ್ ಎಂಬವರು ಸಣ್ಣ ನೀರಾವರಿ ಇಲಾಖೆಯಿಂದ ಗುತ್ತಿಗೆ ಪಡೆದು ಕೆರೆಯಲ್ಲಿ ಮೂರು ಲಕ್ಷ ಮೀನಿನ ಮರಿಗಳನ್ನ ಬಿಟ್ಟಿದ್ದರು. ಇದಕ್ಕಾಗಿ

ಕೆರೆಗೆ ವಿಷ ಬೆರೆಸಿದ ಶಂಕೆ  ➤ ನೂರಾರು ಮೀನು ಮತ್ತು ಜಾನುವಾರುಗಳ ಸಾವು   Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಾಪತ್ತೆಯಾಗಿದ್ದ ಯುವತಿಯ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಕಲಬುರಗಿ, ಡಿ. 17. ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಕುರಿಕೋಟಾ ಸೇತುವೆ ಬಳಿ ಯುವತಿ ಶವ ಪತ್ತೆಯಾಗಿದ್ದು, ಮೃತ ಯುವತಿಯನ್ನು ಸೃಷ್ಟಿ ಮಾರುತಿ (21) ಎಂದು ಗುರುತಿಸಲಾಗಿದೆ. ಸೃಷ್ಟಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ. ಕಾಲೇಜಿಗೆ ಹೋಗಿದ್ದ ಯುವತಿ ಸಂಜೆಯಾದ್ರು ಮನೆಗೆ ಬಂದಿರಲಿಲ್ಲ, ಈ ಹಿನ್ನೆಲೆ ಪೋಷಕರು ಹುಡುಕಾಟ ನಡೆಸಿದ್ದರು ಎನ್ನಲಾಗಿದೆ. ಇದೀಗ ಸೃಷ್ಟಿ ಸಾವಿನ ಕುರಿತು ತನಿಖೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ. ಮೃತದೇಹ ಪತ್ತೆಯಾದ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು

ನಾಪತ್ತೆಯಾಗಿದ್ದ ಯುವತಿಯ ಮೃತದೇಹ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ತಡರಾತ್ರಿ ಭೀಕರ ಬೆಂಕಿ ಅವಘಢ  ➤ ಒಂದೇ ಕುಟುಂಬದ 6 ಮಂದಿ ಸಜೀವ ದಹನ     

(ನ್ಯೂಸ್ ಕಡಬ) newskadaba.com ಹೈದರಾಬಾದ್, ಡಿ. 17. ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಮನೆಯ ಯಜಮಾನ ಸೇರಿದಂತೆ ಒಂದೇ ಕುಟುಂಬದ ಆರು ಜನರು ಮೃತಪಟ್ಟ ಘಟನೆ ತೆಲಂಗಾಣದಲ್ಲಿ ವರದಿಯಾಗಿದೆ. ಮೃತಪಟ್ಟವರನ್ನು ಮನೆಯ ಯಜಮಾನ ಶಿವಯ್ಯ (50), ಪತ್ನಿ ಪದ್ಮಾ (45) ಹಾಗೂ ಇಬ್ಬರು ಮಕ್ಕಳು, ಪದ್ಮಾರವರ ಅಕ್ಕನ ಮಗಳು ಮೌನಿಕ ಸೇರಿ ಶಾಂತಯ್ಯ ಎಂಬವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ತಡರಾತ್ರಿ ಭೀಕರ ಅಗ್ನಿ ಅವಘಢ ಸಂಭವಿಸಿದ ಪರಿಣಾಮ ಈ ದುರ್ಘಟನೆ ನಡೆದಿದೆ. ಮಾಹಿತಿ ತಿಳಿದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ

ತಡರಾತ್ರಿ ಭೀಕರ ಬೆಂಕಿ ಅವಘಢ  ➤ ಒಂದೇ ಕುಟುಂಬದ 6 ಮಂದಿ ಸಜೀವ ದಹನ      Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನೀರಿನ ಸಂಪ್ ಗೆ ಬಿದ್ದು 5 ವರ್ಷದ ಬಾಲಕ ಮೃತ್ಯು          

(ನ್ಯೂಸ್ ಕಡಬ) newskadaba.com ವಿಜಯಪುರ, ಡಿ. 16. 5 ವರ್ಷದ ಬಾಲಕನೋರ್ವನ ನೀರಿನ ಸಂಪ್ ಗೆ ಬಿದ್ದು ಮೃತಪಟ್ಟ ಘಟನೆ ವಿಜಯಪುರದಲ್ಲಿ ನಡೆದಿದೆ. ಮೃತ ಬಾಲಕನನ್ನು ಹೂಡ್ಕೋ ಬಡಾವಣೆಯ ಶ್ರೇಯಸ್ (5) ಎಂದು ಗುರುತಿಸಲಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಕಾರ್ಯಾಚರಣೆ ನಡೆಸಿ ಬಾಲಕನ ಮೃತದೇಹ ಹೊರತೆಗೆದಿದ್ದಾರೆ ಎಂದು ತಿಳಿದುಬಂದಿದೆ.

ನೀರಿನ ಸಂಪ್ ಗೆ ಬಿದ್ದು 5 ವರ್ಷದ ಬಾಲಕ ಮೃತ್ಯು           Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹೈಕೋರ್ಟ್ ವಕೀಲ ಅಬ್ದುಲ್ ಫಾರೂಕ್ ಹೃದಯಾಘಾತದಿಂದ ಮೃತ್ಯು                    

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 16. ಹೈಕೋರ್ಟ್ ವಕೀಲ ಹಾಗೂ ಮೂಲತಃ ಮೂಡಬಿದಿರೆ ನಿವಾಸಿ ಅಬ್ದುಲ್ ಫಾರೂಕ್(49) ಹೃದಯಾಘಾತದಿಂದ ಬೆಂಗಳೂರಿನಲ್ಲಿ ಮೃತಪಟ್ಟಿದ್ದಾರೆ. ಸುಪ್ರೀಂ ಕೋರ್ಟ್ ನ್ಯಾಯಾಧೀಶ ಅಬ್ದುಲ್ ನಝೀರ್ ಅವರ ಕಿರಿಯ ಸಹೋದರ ಆಗಿರುವ ಅಬ್ದುಲ್ ಫಾರೂಕ್ ಅವರ ಮೃತದೇಹ ಬೆಳುವಾಯಿಗೆ ತರಲಾಗುತ್ತದೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಸ್ವಲ್ಪ ಸಮಯ ಮಂಗಳೂರು ಪಾಂಡೇಶ್ವರದಲ್ಲಿ ವಾಸವಾಗಿದ್ದ ಅವರು ಈಗ ಹೈಕೋರ್ಟ್ ವಕೀಲರಾಗಿದ್ದು, ಬೆಂಗಳೂರಿನಲ್ಲಿ ನೆಲೆಸಿದ್ದರು ಎನ್ನಲಾಗಿದೆ.  

ಹೈಕೋರ್ಟ್ ವಕೀಲ ಅಬ್ದುಲ್ ಫಾರೂಕ್ ಹೃದಯಾಘಾತದಿಂದ ಮೃತ್ಯು                     Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಭಟ್ಕಳ : ಬೈಕ್ ಮತ್ತು ಲಾರಿ ನಡುವೆ ಭೀಕರ ಅಪಘಾತ  ➤ ಇಬ್ಬರು ಯುವಕರು ಮೃತ್ಯು          

(ನ್ಯೂಸ್ ಕಡಬ) newskadaba.com  ಭಟ್ಕಳ, ಡಿ. 15. ಬೈಕ್ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿ ಬೈಕ್ ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾ.ಹೆ.66 ರ ಮೂಡ್ ಭಟ್ಕಳ ಬೈಪಾಸ್ ಬಳಿ ಸಂಭವಿಸಿದೆ. ಮೃತಪಟ್ಟವರನ್ನು ತಲಾಂದಸಬ್ಬತ್ತಿ ನಿವಾಸಿ ಶೇಖರ್ ಸುಬ್ರಮಣ್ಯ ನಾಯ್ಕ (25) ಹಾಗೂ ಮಂಜುನಾಥ್ ನಾಯ್ಕ್ (30) ಎಂದು ಗುರುತಿಸಲಾಗಿದೆ. ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಯುವಕರಿಬ್ಬರು ನಗರದ ಹೋಟೇಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದು, ಊಟ ಮುಗಿಸಿ ಹೋಟೆಲ್ ನಲ್ಲಿ ವಿಶ್ರಾಂತಿಗೆ ಹೋಗುತ್ತಿದ್ದ ವೇಳೆ

ಭಟ್ಕಳ : ಬೈಕ್ ಮತ್ತು ಲಾರಿ ನಡುವೆ ಭೀಕರ ಅಪಘಾತ  ➤ ಇಬ್ಬರು ಯುವಕರು ಮೃತ್ಯು           Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೈಕ್ ಗಳ ನಡುವೆ ಭೀಕರ ಅಪಘಾತ ➤ ಇಬ್ಬರು ಮೃತ್ಯು, ಓರ್ವ ಗಂಭೀರ

(ನ್ಯೂಸ್ ಕಡಬ) newskadaba.com  ಗುಂಡ್ಲುಪೇಟೆ , ಡಿ 15 : ಎರಡು ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಟ್ಟಣದ ಹೊರವಲಯದ ಸೆಂಟ್ ಜಾನ್ಸ್ ಶಾಲೆಯ ಬಳಿ ನಡೆದಿದೆ. ಮೃತಪಟ್ಟವರನ್ನು ಜಕ್ಕಹಳ್ಳಿ ಗ್ರಾಮದ ಚಂದ್ರು(32) ,ಲಕ್ಕೂರು ಗ್ರಾಮದ ಅನಿಲ್ (26) ಎಂದು ಗುರುತಿಸಲಾಗಿದೆ. ಬೈಕಿನಲ್ಲಿದ್ದ ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ಆತನನ್ನು ಮೈಸೂರಿನ  ಆಸ್ಪತ್ರೆಗೆ ದಾಖಲಿಸಲಾಗಿದೆ. ಎರಡು ಬೈಕ್ ಸವಾರರು ಅತೀ ವೇಗದಿಂದ ಬಂದ ಪರಿಣಾಮ ಮುಖಾಮುಖಿ ಢಿಕ್ಕಿ

ಬೈಕ್ ಗಳ ನಡುವೆ ಭೀಕರ ಅಪಘಾತ ➤ ಇಬ್ಬರು ಮೃತ್ಯು, ಓರ್ವ ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top