death

ಉಡುಪಿ: ವಿದ್ಯಾವಾಚಸ್ಪತಿ ಬನ್ನಂಜೆ ಗೋವಿಂದಾಚಾರ್ಯರು ನಿಧನ

(ನ್ಯೂಸ್ ಕಡಬ) newskadaba.com ಉಡುಪಿ, ಡಿ.13: ವಿದ್ಯಾವಾಚಸ್ಪತಿ ಬನ್ನಂಜೆ ಗೋವಿಂದಾಚಾರ್ಯರು ವಯೋಸಹಜ ಅನಾರೋಗ್ಯದಿಂದ (85) ನಿಧನರಾಗಿದ್ದಾರೆ. .ಪದ್ಮಶ್ರೀ ಪುರಸ್ಕೃತ ಬನ್ನಂಜೆ ಗೋವಿಂದಾಚಾರ್ಯರು ಉಡುಪಿಯ ಅಂಬಲಪಾಡಿ ನಿವಾಸದಲ್ಲಿಂದು ಕೊನೆಯುಸಿರೆಳೆದಿದ್ದಾರೆ. ಪ್ರವಚನಕಾರ, ಮಧ್ವ ಸಿದ್ಧಾಂತದ ಪ್ರತಿಪಾದಕ ಹಾಗೂ ಪತ್ರಕರ್ತರಾಗಿಯೂ ಗುರುತಿಸಿಕೊಂಡಿದ್ದ ಅವರು ನಟ ಡಾ.ವಿಷ್ಣುವರ್ಧನ್ ಗೆ ಆಧ್ಯಾತ್ಮಿಕ ಗುರುಗಳಾಗಿದ್ದರು. ಹಲವಾರು ಕೃತಿಗಳನ್ನು ಸಂಸ್ಕೃತದಿಂದ ಕನ್ನಡಕ್ಕೆ ಅನುವಾದಿಸಿದ್ದು, ಕನ್ನಡದ ಪ್ರಮುಖ ಮೂರು ಚಲನಚಿತ್ರಗಳಾದ ಮಧ್ವಾಚಾರ್ಯ, ಶಂಕರಾಚಾರ್ಯ, ರಾಮಾನುಜಾಚಾರ್ಯಕ್ಕೆ ಸಂಭಾಷಣೆಯನ್ನು ಬರೆದಿದ್ದರು.1936ರಲ್ಲಿ ಉಡುಪಿ ಜಿಲ್ಲೆಯ ಅಂಬಲಪಾಡಿಯಲ್ಲಿ ಜನಿಸಿದ್ದ ಗೋವಿಂದಾಚಾರ್ಯರು ಅಪಾರ ವಿದ್ವತ್ ಉಳ್ಳವರಾಗಿದ್ದರು.ಬನ್ನಂಜೆ […]

ಉಡುಪಿ: ವಿದ್ಯಾವಾಚಸ್ಪತಿ ಬನ್ನಂಜೆ ಗೋವಿಂದಾಚಾರ್ಯರು ನಿಧನ Read More »

ಕರಾವಳಿ, ಕರ್ನಾಟಕ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಕೋವಿಡ್-19 ಅಂಕಿ ಅಂಶ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.13: ಡಿ.12 ರ ವರದಿಯಂತೆ 53 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 32,325ಕ್ಕೆ ಏರಿಕೆಯಾಗಿದೆ. ಇನ್ನೂ ಡಿ.12 ರ ವರದಿಯಂತೆ 43 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 31,236ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಕಳೆದ ದಿನ ಇಬ್ಬರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದು, ಈವೆರಗೂ ಒಟ್ಟು 732 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ.      

ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಕೋವಿಡ್-19 ಅಂಕಿ ಅಂಶ Read More »

ಕರಾವಳಿ

ಆತ್ಮ ಹತ್ಯೆಗೆ ಶರಣಾದ ಬಾಲಿವುಡ್ ನಟಿ.!

(ನ್ಯೂಸ್ ಕಡಬ) newskadaba.com ಮುಂಬೈ, ಡಿ.12: ‘ಡರ್ಟಿ ಪಿಕ್ಚರ್’ ಸೇರಿದಂತೆ ಅನೇಕ ಬಾಲಿವುಡ್ ಸಿನಿಮಾಗಳಲ್ಲಿ ಅಭಿನಯಿಸಿದ್ದ ಬೆಂಗಾಲಿ ನಟಿ ಆರ್ಯ ಬ್ಯಾನರ್ಜಿ ಕೊಲ್ಕತ್ತಾದ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅಪಾರ್ಟ್​ಮೆಂಟ್​ನಲ್ಲಿರುವ ತಮ್ಮ ಫ್ಲ್ಯಾಟ್​ನಲ್ಲಿ ಒಂಟಿಯಾಗಿ ಬದುಕುತ್ತಿದ್ದ ಆರ್ಯ ಬ್ಯಾನರ್ಜಿ ಶುಕ್ರವಾರ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಮೂರನೇ ಮಹಡಿಯಲ್ಲಿದ್ದ ಆರ್ಯ ಅವರ ಫ್ಲ್ಯಾಟ್​ನ ಬಾಗಿಲು ಮುರಿದು ಪೊಲೀಸರು ಒಳಗೆ ಹೋದಾಗ ಆಕೆ ಬೆಡ್​ರೂಂನಲ್ಲಿ ಮೃತಪಟ್ಟಿರುವುದು ಖಚಿತವಾಗಿದೆ. 33 ವರ್ಷದ ಆರ್ಯ ಬ್ಯಾನರ್ಜಿ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಆರ್ಯ ಅವರ ಮನೆ

ಆತ್ಮ ಹತ್ಯೆಗೆ ಶರಣಾದ ಬಾಲಿವುಡ್ ನಟಿ.! Read More »

ರಾಷ್ಟ್ರೀಯ ನ್ಯೂಸ್

ವಿಟ್ಲ :ಬೈಕ್ ಅಪಘಾತ ➤ ಖ್ಯಾತ ಪಾಕಪ್ರವೀಣ ಕಾಂತಡ್ಕ ಶಂಕರನಾರಾಯಣ ಭಟ್ ಮೃತ್ಯು

(ನ್ಯೂಸ್ ಕಡಬ) newskadaba.com ಫರಂಗಿಪೇಟೆ, ಡಿ.12: ಬಂಟ್ವಾಳ ತಾಲೂಕಿನ ಫರಂಗಿಪೇಟೆ ರಾ.ಹೆ. 75ರಲ್ಲಿ ಗುರುವಾರ ಇಳಿಸಂಜೆ ಬೈಕ್ ಸ್ಕಿಡ್ ಆಗಿ ನಡೆದ ಅಪಘಾತದಲ್ಲಿ ವಿಟ್ಲದ ಜನಪ್ರಿಯ ಬಾಣಸಿಗ ಕಾಂತಡ್ಕ ಶಂಕರನಾರಾಯಣ ಭಟ್ (58) ಮೃತಪಟ್ಟಿದ್ದಾರೆ. ಮಂಗಳೂರು ಕಡೆಯಿಂದ ಬೈಕಿನಲ್ಲಿ ವಿಟ್ಲ ಕಡೆಗೆ ಬರುತ್ತಿದ್ದ ಅವರ ಬೈಕ್, ಫರಂಗಿಪೇಟೆಯ ಮೀನು ಮಾರುಕಟ್ಟೆ ಬಳಿ ಪಲ್ಟಿಯಾಗಿ ಅಪಘಾತ ಘಟಿಸಿದ್ದಾಗಿ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಬೆಳಗ್ಗೆ ಮೃತಪಟ್ಟಿದ್ದಾರೆ.

ವಿಟ್ಲ :ಬೈಕ್ ಅಪಘಾತ ➤ ಖ್ಯಾತ ಪಾಕಪ್ರವೀಣ ಕಾಂತಡ್ಕ ಶಂಕರನಾರಾಯಣ ಭಟ್ ಮೃತ್ಯು Read More »

ಕರಾವಳಿ

ಮೂರು ವರುಷದ ಪ್ರೀತಿಗೆ ಮನೆಯವರಿಂದ ಸಮ್ಮತಿ ➤ ಆದರೆ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಯುವತಿ.?!!

(ನ್ಯೂಸ್ ಕಡಬ) newskadaba.com ಉಡುಪಿ, ಡಿ.11: ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದ ಯುವಕನ ಜೊತೆ ಇನ್ನೇನು ಹಸಮಣೆಗೇರಬೇಕಾಗಿದ್ದ ಯುವತಿ ಬಾವಿಗೆ ಹಾರಿ ಅತ್ಮಹತ್ಯೆಗೆ ಶರಣಾಗಿದ್ದಾಳೆ.ಉಡುಪಿ ಜಿಲ್ಲೆಯ ಅಮಾವಸ್ಯೆಬೈಲ್ ಬಳಿಯ ಹುಣೆಸೆಮನೆಯ ಜಡ್ಡಿನಗುಡ್ಡೆಯ ಇಪ್ಪತ್ತೊಂದು ವರ್ಷದ ದಿವ್ಯಾ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದಾಳೆ.ದಿವ್ಯಾ ಬಿ ಕಾಂ ಅಂತಿಮ ವರ್ಷದ ಕಲಿಯುತ್ತಿದ್ದು ಕಳೆದ ಮೂರು ವರ್ಷಗಳಿಂದ ಹತ್ತಿರದ ಸಂಬಂಧಿ ಯುವಕನನ್ನು ಪ್ರೀತಿಸುತ್ತಿದ್ದಳು. ಇಬ್ಬರ ಮನೆಯಲ್ಲಿಯೂ ಪ್ರೀತಿಗೆ ಒಪ್ಪಿಗೆ ಇತ್ತು.ಸದ್ಯದಲ್ಲೇ ಇಬ್ಬರ ಮದುವೆ ನೆರವೇರಿಸುವುದಾಗಿ ಮನೆಯ ಹಿರಿಯರು ನಿಶ್ಚಯಿಸಿದ್ದರು.ಅದ್ರೆ ಏಕಾಏಕಿ ಕಾಲೇಜಿನಿಂದ ಬಂದ ದಿವ್ಯಾ

ಮೂರು ವರುಷದ ಪ್ರೀತಿಗೆ ಮನೆಯವರಿಂದ ಸಮ್ಮತಿ ➤ ಆದರೆ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಯುವತಿ.?!! Read More »

ಕರಾವಳಿ

ಉಡುಪಿ :ಸಿಡಿಲು ಬಡಿದು ವರ್ಕ್ ಫ್ರಂ ಹೋಮ್ ಉದ್ಯೋಗಿ ಮೃತ್ಯು

(ನ್ಯೂಸ್ ಕಡಬ) newskadaba.com ಉಡುಪಿ, ಡಿ.11: ಸಿಡಿಲು‌ ಬಡಿದು‌ ಯುವಕನೋರ್ವ ಸಾವನ್ನಪ್ಪಿದ ಘಟನೆ ವಂಡಾರಿನ ಬೋರ್ಡಕಲ್ಲಿನಲ್ಲಿ ಗುರುವಾರ ರಾತ್ರಿ ಸಂಭವಿಸಿದೆ. ಸ್ಥಳೀಯ ನಿವಾಸಿ‌ ಸಾಫ್ಟ್ ವೇರ್ ಇಂಜಿನಿಯರ್ ಚೇತನ್ (24) ಮೃತಪಟ್ಟ ಯುವಕ.   ಇವರು ಬೆಂಗಳೂರಿನ ಪ್ರತಿಷ್ಠಿತ ಸಾಫ್ಟ್‌ವೇರ್ ಕಂಪನಿಯ ಉದ್ಯೋಗಿಯಾಗಿದ್ದು ಕೊರೊನಾ ಸಮಸ್ಯೆಯ ಅನಂತರ ಹಲವು ತಿಂಗಳಿಂದ ಮನೆಯಲ್ಲೇ ಕಾರ್ಯನಿರ್ವಹಿಸುತ್ತಿದ್ದರು.ಮನೆಯೊಳಗಡೆ ಲ್ಯಾಪ್‌ಟಾಪ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಂದರ್ಭ ಸಿಡಿಲಿನ‌ ಹೊಡೆತಕ್ಕೆ ಒಳಗಾಗಿ ಗಂಭೀರವಾಗಿ ಅಸ್ವಸ್ಥತಗೊಂಡಿದ್ದು ತಕ್ಷಣ ಅವರನ್ನು ಬ್ರಹ್ಮಾವರದ ಖಾಸಗಿ ಆಸ್ಪತ್ರೆ ಗೆ ಕರೆದೊಯ್ಯಲಾಯಿತು.

ಉಡುಪಿ :ಸಿಡಿಲು ಬಡಿದು ವರ್ಕ್ ಫ್ರಂ ಹೋಮ್ ಉದ್ಯೋಗಿ ಮೃತ್ಯು Read More »

ಕರಾವಳಿ

ನಿಯಂತ್ರಣ ತಪ್ಪಿ ಸೇತುವೆಗೆ ಢಿಕ್ಕಿ ಹೊಡೆದ ಕಾರು ➤ ಕೆಎಂಎಫ್‌ ನಿರ್ದೇಶಕ ಹದ್ದೂರು ರಾಜೀವ ಶೆಟ್ಟಿ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.09: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಢಿಕ್ಕಿ ಹೊಡೆದ ಪರಿಣಾಮ ಕೆಎಂಎಫ್ ನಿರ್ದೇಶಕ ಹದ್ದೂರು ರಾಜೀವ ಶೆಟ್ಟಿ ಮೃತಪಟ್ಟಿದ್ದಾರೆ. ಅವರು ಶಂಕರನಾರಾಯಣದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.ಸ್ಥಳಕ್ಕೆ ಶಂಕರನಾರಾಯಣ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಹದ್ದೂರು ರಾಜೀವ್ ಶೆಟ್ಟಿಯವರನ್ನು ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕರೆತರುವ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ.  

ನಿಯಂತ್ರಣ ತಪ್ಪಿ ಸೇತುವೆಗೆ ಢಿಕ್ಕಿ ಹೊಡೆದ ಕಾರು ➤ ಕೆಎಂಎಫ್‌ ನಿರ್ದೇಶಕ ಹದ್ದೂರು ರಾಜೀವ ಶೆಟ್ಟಿ ಮೃತ್ಯು Read More »

ಕರಾವಳಿ, ಕರ್ನಾಟಕ

ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಕಿರುತೆರೆಯ ಖ್ಯಾತ ನಟಿ..!!

(ನ್ಯೂಸ್ ಕಡಬ) newskadaba.com ತಮಿಳುನಾಡು, ಡಿ.09: ತಮಿಳಿನ ಕಿರುತೆರೆಯಲ್ಲಿ ಇತ್ತೀಚೆಗೆ ಖ್ಯಾತಿ ಪಡೆದಿದ್ದ ನಟಿ ಚಿತ್ರಾ ಸಾವನ್ನಪ್ಪಿದ್ದಾರೆ. ಪಾಂಡಿಯನ್​ ಸ್ಟೋರ್ಸ್​​ ಖ್ಯಾತಿಯ ನಟಿ ಚಿತ್ರಾ ತಮಿಳುನಾಡಿನ ಹೋಟೆಲ್​ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಅವರ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಸಿಕ್ಕಿದೆ.ಚಿತ್ರಾ ಅವರು ಪಾಂಡಿಯನ್​ ಸ್ಟೋರ್ಸ್​ ಧಾರಾವಾಹಿಯಲ್ಲಿ ನಟಿಸುತ್ತಿದ್ದರು. ಇದರಿಂದಾಗಿಯೇ ಇತ್ತೀಚೆಗೆ ಖ್ಯಾತಿ ಪಡೆದಿದ್ದರು. ಅಲ್ಲದೆ ಉದ್ಯಮಿ ಹೇಮಂತ್​ ರವಿ ಎಂಬುವರೊಂದಿಗೆ ನಿಶ್ಚಿತಾರ್ಥ ಸಹ ನಿಗದಿಯಾಗಿತ್ತು. ಹೇಮಂತ್​ ರವಿ ಅವರೊಂದಿಗೆ ಹೋಟೆಲ್​ನಲ್ಲಿರುವಾಗಲೇ ಈ ಘಟನೆ ನಡೆದಿದೆ. ಹೇಮಂತ್​ ಅವರೊಂದಿಗೆ

ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಕಿರುತೆರೆಯ ಖ್ಯಾತ ನಟಿ..!! Read More »

ರಾಷ್ಟ್ರೀಯ ನ್ಯೂಸ್

ಪಡೀಲ್‌ನಲ್ಲಿ ಭೀಕರ ಅಪಘಾತ ➤ ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.09: ನಗರದ ಪಡೀಲ್ ಸಮೀಪ ಓಮ್ನಿ ಇಕೋ ಕಾರು ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಮಂಗಳವಾರ ಸಂಜೆ ನಡೆದಿದೆ.   ಚಿಕ್ಕಮಗಳೂರು ಮೂಲದ ಸುಮಂತ್ (21) ಮೃತ ಬೈಕ್ ಸವಾರ. ಸಹಸವಾರ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.  ಪಡೀಲ್ ಸಮೀಪದಲ್ಲಿ ಓಮ್ನಿ ಇಕೋ ಕಾರಿಗೆ ಸುಮಂತ್ ಚಲಾಯಿಸುತ್ತಿದ್ದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸುಮಂತ್ ಗಂಭೀರವಾಗಿ ಗಾಯಗೊಂಡಿದ್ದು, ರಸ್ತೆಗೆ ಎಸೆಯಲ್ಪಟ್ಟಿದ್ದರು.

ಪಡೀಲ್‌ನಲ್ಲಿ ಭೀಕರ ಅಪಘಾತ ➤ ಬೈಕ್ ಸವಾರ ಮೃತ್ಯು Read More »

ಕರಾವಳಿ

ಬೆಳ್ತಂಗಡಿ :ಏಣಿಯಿಂದ ಕಾಲುಜಾರಿ ಬಿದ್ದು ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ.08:  ಮನೆಯ ಮಹಡಿ ಹತ್ತುವ ವೇಳೆ ಏಣಿಯಿಂದ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ಗಾಯಗೊಂಡಿದ್ದ ಸುಲೇಮಾನ್ (34) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಮೃತಪಟ್ಟಿದ್ದಾರೆ. ಘಟನೆ ಭಾನುವಾರ ನಡೆದಿದ್ದು, ತಕ್ಷಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಸೋಮವಾರ ಮೃತಪಟ್ಟಿದ್ದಾರೆ. ಮೃತರು ತಂದೆ, ತಾಯಿ, ಪತ್ನಿ, ಇಬ್ಬರು ಪುತ್ರಿಯರರನ್ನು ಅಗಲಿದ್ದಾರೆ.  

ಬೆಳ್ತಂಗಡಿ :ಏಣಿಯಿಂದ ಕಾಲುಜಾರಿ ಬಿದ್ದು ಮೃತ್ಯು Read More »

ಕರಾವಳಿ
Scroll to Top