death

ಜಮೀನಿನಲ್ಲಿ ರೈತನ ಕತ್ತು ಕೊಯ್ದು ಕೊಲೆ ► ಘಟನೆಗೆ ಕಾರಣ ನಿಗೂಢ

(ನ್ಯೂಸ್ ಕಡಬ) newskadaba.com ಮಂಡ್ಯ,ಸೆ.01, ರೈತರೊಬ್ಬರನ್ನು ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಚಿಕ್ಕೋನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ರೈತನನ್ನು ಚಿಕ್ಕತಿಮ್ಮಯ್ಯ (45) ಎಂದು ಗುರುತಿಸಲಾಗಿದೆ. ಚಿಕ್ಕತಿಮ್ಮಯ್ಯ ಎಂದಿನಂತೆ ಗುರುವಾರ ಕೂಡ ತನ್ನ ಜಮೀನಿನ ಬಳಿ ಕೆಲಸಕ್ಕೆ ಹೋಗಿದ್ದರು. ರಾತ್ರಿಯಾದರೂ ಮನೆಗೆ ವಾಪಸ್ ಬಂದಿರಲಿಲ್ಲ. ಇದರಿಂದ ಅನುಮಾನಗೊಂಡ ತಮ್ಮ ಮನೆಯವರು ಜಮೀನಿನ ಬಳಿ ಹೋಗಿ ಪರಿಶೀಲನೆ ನಡೆಸಿದಾಗ ರೈತ ಚಿಕ್ಕತಿಮ್ಮಯ್ಯ ಅವರನ್ನ ಕತ್ತು ಕೊಯ್ದು ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಕೊಲೆಗೆ ಕಾರಣವೇನು ಎಂಬುದು […]

ಜಮೀನಿನಲ್ಲಿ ರೈತನ ಕತ್ತು ಕೊಯ್ದು ಕೊಲೆ ► ಘಟನೆಗೆ ಕಾರಣ ನಿಗೂಢ Read More »

ಕರಾವಳಿ

ಯಡಿಯೂರಪ್ಪ ಪುತ್ರ ರಾಘವೇಂದ್ರರ ಕಾರು ಬೈಕಿಗೆ ಢಿಕ್ಕಿ ► ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಹೊನ್ನಾಳಿ, ಸೆ.01. ಮಾಜಿ ಮುಖ್ಯಮಂತ್ರಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪುತ್ರ ಶಾಸಕ ರಾಘವೇಂದ್ರ ಪ್ರಯಾಣಿಸುತ್ತಿದ್ದ ಕಾರು ಬೈಕೊಂದಕ್ಕೆ ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಹೊನ್ನಾಳಿ ತಾಲೂಕಿನ ಮಾದಾಪುರ ಕ್ರಾಸ್​ ಬಳಿ ಗುರುವಾರ ರಾತ್ರಿ ನಡೆದಿದೆ. ಶಾಸಕ ರಾಘವೇಂದ್ರ ಅವರು ಶಿವಮೊಗ್ಗದಿಂದ ಶಿಕಾರಿಪುರಕ್ಕೆ ತೆರಳುತ್ತಿದ್ದಾಗ ಅವರ ಕಾರು ಎದುರಿನಿಂದ ತೆರಳುತ್ತಿದ್ದ ಬೈಕಿಗೆ ಢಿಕ್ಕಿ ಹೊಡೆದಿದ್ದರಿಂದ ಬೈಕ್ ಸವಾರ ಸ್ಥಳೀಯ ನಿವಾಸಿ ಸುರೇಶ್​​(24) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯ ಬಗ್ಗೆ ಸ್ಥಳೀಯರು ರಾಘವೇಂದ್ರ ಅವರನ್ನು

ಯಡಿಯೂರಪ್ಪ ಪುತ್ರ ರಾಘವೇಂದ್ರರ ಕಾರು ಬೈಕಿಗೆ ಢಿಕ್ಕಿ ► ಬೈಕ್ ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ಭೀಕರ ರಸ್ತೆ ಅಪಘಾತ  ► ಮೂವರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ರಾಮನಗರ, ಆ.25, ಓಮಿನಿ ಕಾರು ಮತ್ತು ಕೆಎಸ್‍ಆರ್‍ಟಿಸಿ ಬಸ್ ನಡುವೆ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಕನಕಪುರ ತಾಲೂಕಿನ ಸಾಸಲಪುರದ ರಾಯರದೊಡ್ಡಿ ಬಳಿ ಶುಕ್ರವಾರ ನಡೆದಿದೆ.   ಅಪಘಾತದಲ್ಲಿ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೃತರೆಲ್ಲರೂ ಮೈಸೂರಿನವರು ಎಂದು ಹೇಳಲಾಗಿದೆ. ಸಾತನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಭೀಕರ ರಸ್ತೆ ಅಪಘಾತ  ► ಮೂವರು ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ನೀರು ತುಂಬಿದ್ದ ಬಕೆಟ್‍ನಲ್ಲಿ ಮುಳುಗಿ ► 1 ವರ್ಷದ ಮಗು ಮೃತ್ಯು

 (ನ್ಯೂಸ್ ಕಡಬ) newskadaba.com ಕೊಪ್ಪಳ, ಆ .22, ನೀರು ತುಂಬಿದ್ದ ಬಕೆಟ್‍ನಲ್ಲಿ ಮಗು ಬಿದ್ದು ಮೃತಪಟ್ಟಿರೋ ಹೃದಯವಿದ್ರಾವಕ ಘಟನೆ ಗಂಗಾವತಿ ತಾಲೂಕಿನ ಶರಣಬಸವೇಶ್ವರ ಕ್ಯಾಂಪ್ ನಲ್ಲಿ ನಡೆದಿದೆ. ನಗರದ ಶರಣಬಸವೇಶ್ವರ ಕ್ಯಾಂಪಿನ ನಿವಾಸಿಗಳಾದ ಹಸೀನಾ ಹಾಗೂ ಆಟೋ ಚಾಲಕ ಮೌಲಹುಸೇನ್ ಎಂಬುವರ ಒಂದು ವರ್ಷದ ರೀಯಾನ್ ಮೃತ ಮಗು. ಮನೆಯವರೆಲ್ಲಾ ಹೊರಗೆ ಕುಳಿತ ಸಂದರ್ಭದಲ್ಲಿ ಮಗು ಆಟವಾಡುತ್ತಾ ಮನೆಯೊಳಗೆ ಹೋಗಿತ್ತು. ಆಟ ಆಡುತ್ತಿರಬಹುದು ಎಂದು ಪಾಲಕರು ಸುಮ್ಮನಿದ್ದಾರೆ. ಆದರೆ ತುಂಬ ಹೊತ್ತಾದರೂ ಮಗು ಬಾರದ್ದರಿಂದ ಅನುಮಾನಗೊಂಡ ತಾಯಿ ಮನೆಯೊಳಗೆ

ನೀರು ತುಂಬಿದ್ದ ಬಕೆಟ್‍ನಲ್ಲಿ ಮುಳುಗಿ ► 1 ವರ್ಷದ ಮಗು ಮೃತ್ಯು Read More »

ಕರಾವಳಿ

ಅಪರಿಚಿತ ವಾಹನ ಡಿಕ್ಕಿ ► ಅಮಾವಾಸ್ಯೆ ಪೂಜೆಗೆಂದು ಹೊರಟ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಮಂಡ್ಯ, ಆ .21, ಅಮಾವಾಸ್ಯೆ ಪ್ರಯುಕ್ತ ಪೂಜೆ ಸಲ್ಲಿಸಲು ಬೆಳ್ಳಂಬೆಳಗ್ಗೆ ದೇವಸ್ಥಾನಕ್ಕೆ ಹೊರಟಿದ್ದ ಮಹಿಳೆಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ, ಮದ್ದೂರು ಪಟ್ಟಣದಲ್ಲಿ ನಡೆದಿದೆ. ಮೃತಪಟ್ಟವರನ್ನು ಮದ್ದೂರು ಪಟ್ಟಣದ ಶಿಕ್ಷಕರ ಬಡಾವಣೆಯ ನಿವಾಸಿಯಾದ ನಿವೃತ್ತ ಶಿಕ್ಷಕ ತಿಮ್ಮಯ್ಯ ಅವರ ಪತ್ನಿ (54) ಸುಧಾ ಎಂದು ಗುರುತಿಸಲಾಗಿದೆ. ಸುಧಾರವರು ಅಮವಾಸ್ಯೆ ಪೂಜೆ ಸಲ್ಲಿಸಲು ಸೋಮವಾರ ಬೆಳಗ್ಗೆ 5 ಗಂಟೆ ಸುಮಾರಿಗೆ ಮದ್ದೂರಮ್ಮ ದೇವಾಲಯಕ್ಕೆ ಹೊರಟಿದ್ದರು. ಈ ವೇಳೆ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ

ಅಪರಿಚಿತ ವಾಹನ ಡಿಕ್ಕಿ ► ಅಮಾವಾಸ್ಯೆ ಪೂಜೆಗೆಂದು ಹೊರಟ ಮಹಿಳೆ ಮೃತ್ಯು Read More »

ಕರಾವಳಿ

ಸರಕಾರಿ ವಸತಿ ನಿಲಯದಲ್ಲಿ ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ) newskadaba.com ವಿಜಯಪುರ, ಆ.11. ನಗರದ ಭೂತನಾಳ ರಸ್ತೆಯಲ್ಲಿರುವ ಮೆಟ್ರಿಕ್ ನಂತರದ ಬಾಲಕರ ಸರ್ಕಾರಿ ವಸತಿ ನಿಲಯದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶುಕ್ರವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಮೃತ ವಿದ್ಯಾರ್ಥಿಯನ್ನು ಯಾದಗಿರ ಜಿಲ್ಲೆಯ ಸುರಪುರ ತಾಲೂಕಿನ ಚಂದಾಪುರ ಎಲ್ ಟಿ ನಿವಾಸಿ ಶಂಕರ್ ತಿಪ್ಪಣ್ಣ ರಾಠೋಡ್(19) ಎಂದು ಗುರುತಿಸಲಾಗಿದೆ. ಈತ ಸುರಪುರದಲ್ಲಿ ಡಿಎಡ್ ಓದುತ್ತಿದ್ದು, ಎರಡು ದಿನಗಳ ಹಿಂದೆ ಆತನ ಸ್ನೇಹಿತನನ್ನು ಭೇಟಿಯಾಗಲು ಬಂದು ನಿನ್ನೆ ರಾತ್ರಿ ಹಾಸ್ಟೇಲ್ ನಲ್ಲೇ ಸ್ನೇಹಿತರೊಂದಿಗೆ ಉಳಿದುಕೊಂಡಿದ್ದ ಎನ್ನಲಾಗಿದೆ. ಶಂಕರ್

ಸರಕಾರಿ ವಸತಿ ನಿಲಯದಲ್ಲಿ ವಿದ್ಯಾರ್ಥಿ ಮೃತ್ಯು Read More »

ಕರ್ನಾಟಕ

ಬಲ್ಯ: ಅಪರಿಚಿತ ಮಹಿಳೆಯ ಶವ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಜು.30. ಇಲ್ಲಿನ ಬಲ್ಯ ಗ್ರಾಮದ ಕೆಮ್ಮತ ಕೂಟೇಲು ಎಂಬಲ್ಲಿ ಗುಂಡ್ಯ ಹೊಳೆಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆವೊಂದು ತೇಲಾಡುವ ಸ್ಥಿತಿಯಲ್ಲಿ ಭಾನುವಾರ ಅಪರಾಹ್ನ ಪತ್ತೆಯಾಗಿದೆ. ಮಹಿಳೆಯು ಕೆಂಪು ಬಣ್ಣದ ಚೂಡಿದಾರ್ ಟಾಪ್ ಹಾಗೂ ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ. ಕಳೆದೆರಡು ದಿನಗಳ ಹಿಂದೆ ಮೃತಪಟ್ಟಿರಬಹುದೆಂದು ಶಂಕಿಸಲಾಗಿದ್ದು, ಸ್ಥಳೀಯ ವ್ಯಕ್ತಿಯೋರ್ವರು ಶವವನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕಡಬ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಬಲ್ಯ: ಅಪರಿಚಿತ ಮಹಿಳೆಯ ಶವ ಪತ್ತೆ Read More »

ಕರಾವಳಿ

ಆಳ್ವಾಸ್ ವಿದ್ಯಾರ್ಥಿನಿ ಕಾವ್ಯ ಆತ್ಮಹತ್ಯೆಯ ಸುತ್ತ ಸಂಶಯದ ಹುತ್ತ ► ಕಾವ್ಯಳನ್ನು ಕೊಲೆ ಮಾಡಲಾಗಿದೆಯೆಂದು ಆರೋಪಿಸಿದ ಪೋಷಕರು

(ನ್ಯೂಸ್ ಕಡಬ) newskadaba.com ಮೂಡಬಿದಿರೆ, ಜು.27. ನ್ಯಾಶನಲ್ ಲೆವಲ್ ಬ್ಯಾಡ್ಮಿಂಟನ್ ಚಾಂಪಿಯನ್ ವಿದ್ಯಾರ್ಥಿನಿಯೊಬ್ಬಳು ವಾರದ ಹಿಂದೆ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಮೃತಪಟ್ಟಿರುವುದು ಹೊಸ ತಿರುವನ್ನು ಪಡೆದುಕೊಂಡಿದೆ. ಇದು ಆತ್ಮಹತ್ಯೆಯಲ್ಲ ಇದು ಒಂದು ಕೊಲೆ ಎಂದು ವಿದ್ಯಾರ್ಥಿನಿಯ ಪೋಷಕರು ಆರೋಪಿಸಿದ್ದಾರೆ. ಮೂಡಬಿದಿರೆಯ ಪ್ರತಿಷ್ಠಿತ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿನಿಯಾಗಿದ್ದ ಕಾವ್ಯ(15) ಜುಲೈ 20ರಂದು ಹಾಸ್ಟೆಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಗಳೆ ಎಂದು ಶಾಲೆಯಿಂದ ಮನೆಯವರಿಗೆ ತಿಳಿಸಲಾಗಿತ್ತು. ಆದರೆ ಹೆತ್ತವರು ಅಲ್ಲಿಗೆ ತೆರಳುವಷ್ಟರಲ್ಲಿ ವಿದ್ಯಾರ್ಥಿನಿಯ ಶವವನ್ನು ಆಳ್ವಾಸ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿತ್ತು. ಇದೀಗ ಹೆತ್ತವರು ಕಾವ್ಯ

ಆಳ್ವಾಸ್ ವಿದ್ಯಾರ್ಥಿನಿ ಕಾವ್ಯ ಆತ್ಮಹತ್ಯೆಯ ಸುತ್ತ ಸಂಶಯದ ಹುತ್ತ ► ಕಾವ್ಯಳನ್ನು ಕೊಲೆ ಮಾಡಲಾಗಿದೆಯೆಂದು ಆರೋಪಿಸಿದ ಪೋಷಕರು Read More »

ಕರಾವಳಿ

ಉಪ್ಪಿನಂಗಡಿ: ಕುಸಿದು ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜು.26.  ವ್ಯಕ್ತಿಯೋರ್ವರು ನಡೆದುಕೊಂಡು ಹೋಗುತ್ತಿದ್ದಾಗ  ಕುಸಿದು ಬಿದ್ದು ಮೃತಪಟ್ಟ ಘಟನೆ ಉಪ್ಪಿನಂಗಡಿ ಪೇಟೆಯಲ್ಲಿ  ಬುಧವಾರ ರಾತ್ರಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಕೇರಳ ಮೂಲದಿಂದ ಬಿದಿರು ಕಡಿಯುವ ಕೆಲಸಕ್ಕೆಂದು ಆಗಮಿಸಿದ್ದ ರಾಮೇಂದ್ರ ಎಂದು ಗುರುತಿಸಲಾಗಿದೆ. ಇವರು ತನ್ನ ಸಹ ಕಾರ್ಮಿಕನೊಂದಿಗೆ ಉಪ್ಪಿನಂಗಡಿ ಪೇಟೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಕುಸಿದು ಬಿದ್ದು ಅಸುನೀಗಿದ್ದಾರೆ. ಹೃದಯಾಘಾತದಿಂದ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ.

ಉಪ್ಪಿನಂಗಡಿ: ಕುಸಿದು ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ

ಕಡಬ: ನೀರಿನಲ್ಲಿ ಮುಳುಗಿ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಜು.25. ಠಾಣಾ ವ್ಯಾಪ್ತಿಯ ಕೊಲ್ಯದ ಕಟ್ಟೆ ಎಂಬಲ್ಲಿ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬುಧವಾರದಂದು ನಡೆದಿದೆ. ಮೃತ ಯುವಕನನ್ನು ಗೋಳಿಯಡ್ಕ ನಿವಾಸಿ ಅಮ್ಮು ಮುಗೇರ ಎಂಬವರ ಪುತ್ರ ವಸಂತ (26) ಎಂದು ಗುರುತಿಸಲಾಗಿದೆ. ಬುಧವಾರದಂದು ಬೆಳಿಗ್ಗೆ ಸ್ಥಳೀಯ ವ್ಯಕ್ತಿಯೊಂದಿಗೆ ಮೀನು ಹಿಡಿಯಲೆಂದು ತೆರಳಿದ್ದ ವಸಂತ ಕೊಲ್ಯದಕಟ್ಟೆ ಪವರ್ ಡ್ಯಾಂ ಬಳಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇಂದು ಬೆಳಿಗ್ಗೆ ಎದೆನೋವು ಇದೆಯೆಂದು ಮನೆಯವರಲ್ಲಿ ತಿಲಿಸಿದ್ದಾರೆನ್ನಲಾಗಿದ್ದು, ಮರಣೋತ್ತರ ಪರೀಕ್ಷೆಯ ನಂತರ ಕಾರಣ

ಕಡಬ: ನೀರಿನಲ್ಲಿ ಮುಳುಗಿ ಯುವಕ ಮೃತ್ಯು Read More »

ಕರಾವಳಿ
Scroll to Top