death

Crime

ಚಾಕುವಿನಿಂದ ಇರಿದು ಯುವಕನ ಬರ್ಬರ ಕೊಲೆ..!

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಅ. 12.   ಹಳೆ ದ್ವೇಷಕ್ಕೆ ಯುವಕನ‌ನ್ನ ದುಷ್ಕರ್ಮಿಗಳು ಬರ್ಬರವಾಗಿ ಕೊಲೆಗೈದ ಘಟನೆ ಗೋಪನಕೊಪ್ಪದ ಸಂತೋಷನಗರದ ಬಳಿ ಶುಕ್ರವಾರ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಶಿವು ಚಂದ್ರಶೇಖರ್ ಕಮ್ಮಾರ (23) ಎಂದು ಗುರುತಿಸಲಾಗಿದೆ. ಕೊಲೆಗೈದ ಆರೋಪಿಯನ್ನು ಸುದೀಪ್ ರಾಯಾಪುರ ಎಂದು ಗುರುತಿಸಲಾಗಿದೆ. ಆಯುಧ ಪೂಜೆ ದಿನವೇ ಚಾಕುವಿನಿಂದ ಇರಿದು ಯುವಕನನ್ನ ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿದ್ದು, ಸುಮಾರು ರಾತ್ರಿ 11.15 ಗಂಟೆಗೆ ಘಟನೆ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಶಿವು ಕಮ್ಮಾರನನ್ನ ನಡುರಸ್ತೆಯಲ್ಲೇ ದುಷ್ಕರ್ಮಿಗಳು ಬರ್ಬರವಾಗಿ […]

ಚಾಕುವಿನಿಂದ ಇರಿದು ಯುವಕನ ಬರ್ಬರ ಕೊಲೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆಕ್ಟಿವಾ ಗೆ ಲಾರಿ ಢಿಕ್ಕಿ- ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಅ. 12. ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಪಡೀಲ್ ಬಳಿ ಶುಕ್ರವಾರ ರಾತ್ರಿ ನಡೆದಿದೆ. ಸವಾರನನ್ನು ಅಡ್ಯಾರ್‌ ಪದವಿನ ಜೋಸೆಫ್ ಎಂದು ಗುರುತಿಸಲಾಗಿದೆ. ಪಡೀಲ್‌ನಿಂದ ಬಿ.ಸಿ‌.ರೋಡ್ ಕಡೆಗೆ ತೆರಳುತ್ತಿದ್ದ ಲಾರಿಯು ಆಗಷ್ಟೇ ಪೆಟ್ರೋಲ್ ತುಂಬಿಸಿ ಬಂಕ್‌ನಿಂದ ಹೊರಬರುತ್ತಿದ್ದ ಆಕ್ಟಿವಾಗೆ ಢಿಕ್ಕಿ ‌ಹೊಡೆದಿದ್ದು, ಪರಿಣಾಮ ಸವಾರ ಜೋಸೆಫ್ ಸ್ಥಳದಲ್ಲೇ ಕೊನೆಯುಸಿರೆಳೆದರು ಎಂದು ತಿಳಿದು ಬಂದಿದೆ.

ಆಕ್ಟಿವಾ ಗೆ ಲಾರಿ ಢಿಕ್ಕಿ- ಸವಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಬಸ್ – ಚಾಲಕ ಸ್ಥಳದಲ್ಲೇ ಮೃತ್ಯು..!

(ನ್ಯೂಸ್ ಕಡಬ) newskadaba.com ಅ. 12. ಬೆಂಗಳೂರು ಮೂಲದ ಖಾಸಗಿ ಸ್ಲೀಪರ್‌ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಮೃತರು ಬೆಂಗಳೂರು ಮೂಲದವರೆಂದು ತಿಳಿದುಬಂದಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಷ್ಟೇ. ಈ ಖಾಸಗಿ ಸ್ಲೀಪರ್‌ ಬಸ್‌ ಗುರುವಾರದಂದು ಬೆಂಗಳೂರಿನಿಂದ ಬಂದು ಪ್ರಯಾಣಿಕರನ್ನು ಗೋಕರ್ಣದಲ್ಲಿ ಇಳಿಸಿ, ಶುಕ್ರವಾರ ಕುಕ್ಕೆ ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ಪ್ರಯಾಣಿಕರನ್ನು ಪಿಕ್‌-ಅಪ್‌

ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಬಸ್ – ಚಾಲಕ ಸ್ಥಳದಲ್ಲೇ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಬೈಕ್ ಅಪಘಾತ: ಸವಾರ ಮೃತ್ಯು..!

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಅ. 11.  ಡಿವೈಡರ್‌ಗೆ ಬೈಕ್‌ ಢಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಭವಿಸಿದೆ. ಮೃತರನ್ನು ಬೆಳ್ತಂಗಡಿ ತಾಲೂಕು ತೆಂಕಕಾರಂದೂರು ಗ್ರಾಮದ ಕಟ್ಟೆ ನಿವಾಸಿ ಸುಧೀಶ್‌ (30) ಎಂದು ಗುರುತಿಸಲಾಗಿದೆ. ಸುಧೀಶ್‌ ಅವರು ಯಾವುದೋ ಕಾರ್ಯನಿಮಿತ್ತ ಉಪ್ಪಿನಂಗಡಿಯಿಂದ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ ನಡೆದಿದೆ. ಈ ಅವಘಡದಲ್ಲಿ ಸುಧೀಶ್ ಅವರ ತಲೆಗೆ ಪೆಟ್ಟಾದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಬಳಿಕ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು

ಬೈಕ್ ಅಪಘಾತ: ಸವಾರ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಹಳಸಿದ ಅನ್ನ ತಿಂದು ಬಾಲಕ ಮೃತ್ಯು

(ನ್ಯೂಸ್ ಕಡಬ)newskadaba.com, ಅ. 09 ಬೆಂಗಳೂರು: ಹಳಸಿದ ಆಹಾರ ಸೇವಿಸಿ 5 ವರ್ಷದ ಬಾಲಕ ಮೃತಪಟ್ಟ ಪ್ರಕರಣಕ್ಕೆ ಸಂಬಂದಿಸಿದಂತೆ ಕೆಪಿ ಅಗ್ರಹಾರ ಪೊಲೀಸರು ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದೇ ಆಹಾರ ಸೇವಿಸಿದ ಬಾಲಕನ ಪೋಷಕರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಚೇತರಿಸಿಕೊಳ್ಳುತ್ತಿದ್ದಾರೆಂದು ತಿಳಿದುಬಂದಿದೆ.ಸೋಮವಾರ ಬೆಳಗ್ಗೆ ಈ ಘಟನೆ ನಡೆದಿದ್ದು, ಮೂವರಿಗೂ ಪದೇ ಪದೇ ವಾಂತಿ ಮತ್ತು ಬೇಧಿ ಕಾಣಿಸಿಕೊಂಡಿದೆ. ಮೂವರು ಆಸ್ಪತ್ರೆಗೆ ದಾಖಲಾದ ಬಳಿಕ ವೈದ್ಯರು ಬಾಲಕ ಧೀರಜ್ (5) ಮೃತಟ್ಟಿರುವುದಾಗಿ ತಿಳಿಸಿದ್ದಾರೆ.

ಹಳಸಿದ ಅನ್ನ ತಿಂದು ಬಾಲಕ ಮೃತ್ಯು Read More »

ಕರ್ನಾಟಕ

​ಕಾರು- ಬೈಕ್ ಢಿಕ್ಕಿ; ಸವಾರ ಮೃತ್ಯು..!

(ನ್ಯೂಸ್ ಕಡಬ)newskadaba.com ಉಡುಪಿ, ಅ. 08. ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಅ.7 ಸೋಮವಾರ ರಾತ್ರಿ 10.30ರ ಸುಮಾರಿಗೆ ಉಡುಪಿ ಎಂಜಿಎಂ ಕಾಲೇಜು ಎದುರಿನ ಡೈವರ್ಶನ್ ಪಾಯಿಂಟ್‌ನಲ್ಲಿ ನಡೆದಿದೆ. ಮೃತರನ್ನು ಹಿರಿಯಡ್ಕ ನಿವಾಸಿ, ತೆಂಕನಿಡಿಯೂರು ಕಾಲೇಜಿನ ಪದವಿ ವಿದ್ಯಾರ್ಥಿ ವೀರಜ್(18) ಎಂದು ಗುರುತಿಸಲಾಗಿದೆ. ಉಡುಪಿ-ಮಣಿಪಾಲ ರಾಷ್ಟ್ರೀಯ ಹೆದ್ದಾರಿ -169ಎ ರಸ್ತೆಯ ಇಂದ್ರಾಳಿ ರೈಲ್ವೆ ಸೇತುವೆ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ಎಂಜಿಎಂ ಕಾಲೇಜು ಎದುರು ಉಡುಪಿ ಕಡೆಯಿಂದ ಮಣಿಪಾಲ ಕಡೆಗೆ ಹಾದು ಹೋಗಿರುವ ಏಕಮುಖ

​ಕಾರು- ಬೈಕ್ ಢಿಕ್ಕಿ; ಸವಾರ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

​ಎ ಕೆ ಸಮೂಹ ಸಂಸ್ಥೆಯ ಅಧ್ಯಕ್ಷ ಎ ಕೆ ಅಹ್ಮದ್ ನಿಧನ

(ನ್ಯೂಸ್ ಕಡಬ)newskadaba.com ಮಂಗಳೂರು, ಅ. 08. ಪ್ರತಿಷ್ಠಿತ ಎ ಕೆ ಸಮೂಹ ಸಂಸ್ಥೆಗಳ ಸ್ಥಾಪಕ ಎ ಕೆ ಅಹ್ಮದ್ ಅವರು ಮಂಗಳವಾರ ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಹೈಲ್ಯಾಂಡ್ ನ ಇಹ್ಸಾನ್ ಮಸೀದಿಯ ಸ್ಥಾಪಕಾಧ್ಯಕ್ಷರಾಗಿದ್ದ ಅವರು ಸಾಮಾಜಿಕ, ಧಾರ್ಮಿಕ ಸೇವಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದರು. ಸರಳ ಸಜ್ಜನ ವ್ಯಕ್ತಿತ್ವದ ಪರೋಪಕಾರಿ ಮನೋಭಾವದವರಾಗಿದ್ದರು. ಎ ಕೆ ಗ್ರೂಪ್ ಅನ್ನು ಪ್ರಾರಂಭಿಸಿ ಯಶಸ್ಸಿನ ಉತ್ತುಂಗಕ್ಕೆ ಒಯ್ದು ಪ್ರತಿಷ್ಠಿತ ಬ್ರ್ಯಾಂಡ್ ಆಗಿ ಪರಿವರ್ತಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು.  

​ಎ ಕೆ ಸಮೂಹ ಸಂಸ್ಥೆಯ ಅಧ್ಯಕ್ಷ ಎ ಕೆ ಅಹ್ಮದ್ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್

KSRTC ಬಸ್- ಬೈಕ್ ಢಿಕ್ಕಿ: ಒಂದೇ ಕುಟುಂಬದ ನಾಲ್ವರು ಮೃತ್ಯು

(ನ್ಯೂಸ್ ಕಡಬ)newskadaba.com ಬೀದರ್, ಅ. 08. KSRTC ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿದ್ದು ಭೀಕರ ಅಪಘಾತ ಸಂಭವಿಸಿದೆ. ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತೆಲಂಗಾಣ ರಾಜ್ಯದ ಸಂಗಾರೆಡ್ಡಿ ಜಿಲ್ಲೆಯ ಗಣೇಶಪುರ ಗ್ರಾಮದವರಾಗಿದ್ದಾರೆ. ಬೈಕ್‌ನಲ್ಲಿ ಜಮೀನಿನ ಕೆಲಸ‌ ಮುಗಿಸಿಕೊಂಡು ಮನೆಗೆ ವಾಪಸ್ ಆಗುತ್ತಿದ್ದರು. ಈ ವೇಳೆ ಹೈದ್ರಾಬಾದ್‌ನಿಂದ ಬೀದರ್ ಕಡೆಗೆ ಬರುತ್ತಿದ್ದ ಸಾರಿಗೆ ಬಸ್‌ಗೆ ಡಿಕ್ಕಿಯಾಗಿದೆ. ಮೃತರನ್ನು ಗಣೇಶಪುರದ ಸಿದ್ದರಾಮಪ್ಪ (71), ಅವರ ಪುತ್ರಿ ರೇಣುಕಾ (36), ಅಳಿಯ ಜಗನ್ನಾಥ್ (41) ಮತ್ತು ಮೊಮ್ಮಗ ವಿನಯ್ ಕುಮಾರ್

KSRTC ಬಸ್- ಬೈಕ್ ಢಿಕ್ಕಿ: ಒಂದೇ ಕುಟುಂಬದ ನಾಲ್ವರು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿಪರೀತ ಜ್ವರದಿಂದ ಯುವಕ ಮೃತ್ಯು..!

(ನ್ಯೂಸ್ ಕಡಬ)newskadaba.com ವಿಟ್ಲ, ಅ. 05. ಮಂಗಿಲಪದವು ಬನಾರಿ ನಿವಾಸಿ ಯುವಕನೊಬ್ಬ ವಿಪರೀತ ಜ್ವರದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಮೃತ ಯುವಕನನ್ನು ಅಬೂಬಕ್ಕರ್ ಸಿದ್ದೀಕ್ (30) ಎಂದು ಗುರುತಿಸಲಾಗಿದೆ. ಎರಡು, ಮೂರು ದಿನಗಳ ವಿಪರೀತ ಜ್ವರದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ವಿಟ್ಲ ಕೇಂದ್ರ ಜುಮಾ ಮಸೀದಿಯ ಜಮಾಅತ್ ಗೆ ಒಳಪಟ್ಟ ಮೂಲತಃ ವಿಟ್ಲ ಸಮೀಪದ ಮೇಗಿನಪೇಟೆ ಕಾಟ್ರಸ್ ನಿವಾಸಿಯಾಗಿದ್ದು, ಪ್ರಸ್ತುತ ವಿಟ್ಲ ಸಮೀಪದ ಮಂಗಿಲಪದವು ಬಾಬಟ್ಟ ಬನಾರಿ ಎಂಬಲ್ಲಿ ನೆಲೆಸಿದ್ದರು

ವಿಪರೀತ ಜ್ವರದಿಂದ ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ವಿದ್ಯುತ್ ಆಘಾತಕ್ಕೆ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ, ಅ. 05.  ವಿದ್ಯುತ್ ಆಘಾತಕ್ಕೊಳಗಾಗಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕೊಯಿಲ ಗ್ರಾಮದ ವಳಕಡಮದ ಕೆರಂತೇಳು ಎಂಬಲ್ಲಿ ಅ.4ರಂದು ನಡೆದಿದೆ. ಮೃತಪಟ್ಟವರನ್ನು ಬಾಬು (52) ಎಂದು ಗುರುತಿಸಲಾಗಿದೆ. ಮನೆಯಲ್ಲಿ ವಿದ್ಯುತ್ ಸ್ವಿಚ್ ಬೋರ್ಡ್‍ಗೆ ಕೈ ಹಾಕಿದಾಗ ಅದರಲ್ಲಿ ವಿದ್ಯುತ್ ಪ್ರವಹಿಸಿ, ಇವರು ವಿದ್ಯುತ್ ಆಘಾತಕ್ಕೊಳಗಾದರು. ತಕ್ಷಣವೇ ಇವರ ಸಂಬಂಧಿಕರು ಅವರನ್ನು ಉಪ್ಪಿನಂಗಡಿಯ ಸಮುದಾಯ ಆಸ್ಪತ್ರೆಗೆ ಕರೆ ತಂದಿದ್ದು, ಇಲ್ಲಿನ ಸಿಬ್ಬಂದಿ ಅವರನ್ನು ತಕ್ಷಣವೇ ಪುತ್ತೂರು ಆಸ್ಪತ್ರೆಗೆ ಸಾಗಿಸಿದ್ದು, ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು

ವಿದ್ಯುತ್ ಆಘಾತಕ್ಕೆ ವ್ಯಕ್ತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top