death

ಪಾದಚಾರಿಗಳಿಗೆ ಬೈಕ್ ಢಿಕ್ಕಿ ನಾಲ್ವರು ಮೃತ್ಯು- ಮೂವರಿಗೆ ಗಂಭೀರ ಗಾಯ..!

(ನ್ಯೂಸ್ ಕಡಬ) newskadaba.com  ವಿಜಯಪುರ, ಸೆ. 6. ರಸ್ತೆ ದಾಟುತ್ತಿದ್ದ ಪಾದಚಾರಿಗಳಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟ ದಾರುಣ ಘಟನೆ ಮುದ್ದೇಬಿಹಾಳ ತಾಲೂಕಿನ ಕುಂಟೋಜಿ ಗ್ರಾಮದ ಹೊರ ವಲಯದ ಪಿಕೆಪಿಎಸ್ ಬಳಿ ಗುರುವಾರ ರಾತ್ರಿ 11.10ರ ಸುಮಾರಿಗೆ ನಡೆದಿದೆ. ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಮೃತ ಪಟ್ಟವರನ್ನು ಬೈಕ್ ಚಾಲಕ ತಾಳಿಕೋಟೆ ತಾಲೂಕಿನ ಗೊಟಗುಣಕಿ ನಿವಾಸಿ ನಿಂಗರಾಜ ಚೌಡಕಿ(22), ಸಹ ಸವಾರ ದೇವರಹಿಪ್ಪರಗಿ ತಾಲೂಕು ಹಂಚಲಿ ನಿವಾಸಿ ಅನೀಲ ಎಂ. ಖೈನೂರ(23), ರಸ್ತೆ […]

ಪಾದಚಾರಿಗಳಿಗೆ ಬೈಕ್ ಢಿಕ್ಕಿ ನಾಲ್ವರು ಮೃತ್ಯು- ಮೂವರಿಗೆ ಗಂಭೀರ ಗಾಯ..! Read More »

ಕ್ರೈಮ್ ನ್ಯೂಸ್

ಕಡಬ: ಕಾಲುಜಾರಿ ತೋಡಿಗೆ ಬಿದ್ದು ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಸೆ. 05. ಕಾಲು ಜಾರಿ ತೋಡಿಗೆ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ‌ ಕಡಬ ತಾಲೂಕಿನ ಪೇರಡ್ಕ ಎಂಬಲ್ಲಿ ಗುರುವಾರ ಸಂಜೆ ನಡೆದಿದೆ. ಮೃತ ಯುವಕನನ್ನು ಮೀನಾಡಿ ಸಮೀಪ ದೋಳ ನಿವಾಸಿ ಉಮೇಶ (35) ಎಂದು ಗುರುತಿಸಲಾಗಿದೆ. ಉಮೇಶ ಗುರುವಾರ ಸಂಜೆ ಕೆಲಸ ಬಿಟ್ಟು ಮನೆಗೆ ಬರುತ್ತಿದ್ದ ವೇಳೆ ಕಾಲು ಜಾರಿ ತೋಡಿಗೆ ಬಿದ್ದಿದ್ದರು. ನದಿಯಲ್ಲಿ ನೀರಿನ ಹರಿವು ಹೆಚ್ಚಳವಾಗಿದ್ದ ಹಿನ್ನೆಲೆಯಲ್ಲಿ ಸುಮಾರು ಒಂದು ಕಿಮೀ ಕೆಳಗಡೆ ಪೇರಡ್ಕ ಸೇತುವೆ ಬಳಿ ಮೃತದೇಹ

ಕಡಬ: ಕಾಲುಜಾರಿ ತೋಡಿಗೆ ಬಿದ್ದು ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಸಾರಿಗೆ ಬಸ್- ಶಾಲಾ ವಾಹನ ಡಿಕ್ಕಿ: ಇಬ್ಬರು ಮಕ್ಕಳು ಮೃತ್ಯು  ಹಲವರಿಗೆ ಗಂಭೀರ ಗಾಯ     

(ನ್ಯೂಸ್ ಕಡಬ) newskadaba.com  ರಾಯಚೂರು, ಸೆ. 5. ರಾಜ್ಯ ಸಾರಿಗೆ ಸಂಸ್ಥೆ ಬಸ್ ಹಾಗೂ ಶಾಲಾ ವಾಹನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಮಕ್ಕಳು ಮೃತಪಟ್ಟಿದ್ದು, ಹಲವು ಮಂದಿ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆ ಮಾನ್ವಿ ತಾಲ್ಲೂಕಿನ ಕಪಗಲ್ ಗ್ರಾಮದ ಬಳಿ ನಡೆದಿದೆ. ಲೊಯಲ್ ಶಾಲಾ ಮಕ್ಕಳನ್ನು ಕರೆದುಕೊಂಡು ಶಾಲೆಗೆ ತೆರಳುತ್ತಿದ್ದ ವಾಹನಕ್ಕೆ ಮಾನ್ವಿ ಪಟ್ಟಣದಿಂದ ರಾಯಚೂರು ಕಡೆಗೆ ತೆರಳುತ್ತಿದ್ದ ಸಾರಿಗೆ ಸಂಸ್ಥೆ ಬಸ್ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾರಿಗೆ ಬಸ್- ಶಾಲಾ ವಾಹನ ಡಿಕ್ಕಿ: ಇಬ್ಬರು ಮಕ್ಕಳು ಮೃತ್ಯು  ಹಲವರಿಗೆ ಗಂಭೀರ ಗಾಯ      Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ- ಯುವಕ ಮೃತ್ಯು..!  

(ನ್ಯೂಸ್ ಕಡಬ) newskadaba.com  ಮಂಗಳೂರು, ಸೆ. 5. ರಸ್ತೆ ಅಪಘಾತ ಸಂಭವಿಸಿ ಯುವಕನೋರ್ವ ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಕ್ಕ ಜಂಕ್ಷನ್ ನಲ್ಲಿ ಬೆಳಗ್ಗೆ ನಡೆದಿದೆ. ಮೃತ ಯುವಕನನ್ನು ಹಳೆಯಂಗಡಿ ಇಂದಿರಾನಗರಇಂದಿರಾನಗರ ನಿವಾಸಿ ಗಣೇಶ ದೇವಾಡಿಗ (27) ಎಂದು ಗುರುತಿಸಲಾಗಿದೆ. ಗಣೇಶ ಅವರು ಪಣಂಬೂರು ಬಂದರ್ ನಲ್ಲಿ ಉದ್ಯೋಗದಲ್ಲಿದ್ದು, ಬೆಳಗ್ಗೆ 7 ಗಂಟೆಯ ಸುಮಾರಿಗೆ ಕೆಲಸಕ್ಕೆ ತನ್ನ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಮುಕ್ಕ ಜಂಕ್ಷನ್ ನಲ್ಲಿ ಹಾಕಲಾಗಿದ್ದ ಬ್ಯಾರಿಕೇಡ್ ಬಳಿ ಸ್ಕೂಟರ್ ನಿಧಾನಿಸಿದಾಗ ಹಿಂದಿನಿಂದ ಬಂದ

ರಸ್ತೆ ಅಪಘಾತ- ಯುವಕ ಮೃತ್ಯು..!   Read More »

ಕರಾವಳಿ, ಕ್ರೈಮ್ ನ್ಯೂಸ್

ಸ್ಟಿರಾಯ್ಡ್ ಎಫೆಕ್ಟ್-  ಯುವ ಬಾಡಿಬಿಲ್ಡರ್‌ ಹೃದಯಾಘಾತದಿಂದ ಮೃತ್ಯು

(ನ್ಯೂಸ್ ಕಡಬ) newskadaba.com  ಬ್ರೆಜಿಲ್, ಸೆ. 4. ಬ್ರೆಜಿಲ್ ನ ಯುವ ದೇಹದಾರ್ಢ್ಯಪಟು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಭಾನುವಾರ (ಸೆ.01) ನಡೆದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮ್ಯಾಥ್ಯೂಸ್ ಪವ್ಲಾಕ್(19ವರ್ಷ) ಕೇವಲ ಐದು ವರ್ಷಗಳಲ್ಲಿ ತನ್ನ ದೇಹವನ್ನು ಕಟ್ಟುಮಸ್ತುಗೊಳಿಸಿ ಯುವ ದೇಹದಾರ್ಢ್ಯ ಪಟುವಾಗಿ ಬೆಳೆದಿದ್ದ. ದೇಹದಾರ್ಢ್ಯ ಸ್ಪರ್ಧೆಗಳಲ್ಲಿ ಭಾಗವಹಿಸುವ ಮೂಲಕ ಬಾಡಿಬಿಲ್ಡರ್‌ ವಲಯದಲ್ಲಿ ಯುವ ತಾರೆಯಾಗಿ ಗಮನ ಸೆಳೆದಿದ್ದರು. 2023ರಲ್ಲಿ ನಡೆದ U23 ಸ್ಪರ್ಧೆಯಲ್ಲಿ ಮ್ಯಾಥ್ಯೂ ವಿಜೇತನಾಗಿದ್ದರು. ಇತ್ತೀಚೆಗೆ ನಡೆದ ಬ್ರೆಜಿಲ್ ನ ಸ್ಥಳೀಯ ಸ್ಪರ್ಧೆಗಳಲ್ಲಿ ನಾಲ್ಕನೇ

ಸ್ಟಿರಾಯ್ಡ್ ಎಫೆಕ್ಟ್-  ಯುವ ಬಾಡಿಬಿಲ್ಡರ್‌ ಹೃದಯಾಘಾತದಿಂದ ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

CPIM ಹಿರಿಯ ಸದಸ್ಯ ಕಾಂ.ರಾಘವ ಅಂಚನ್ ಮೃತ್ಯು

(ನ್ಯೂಸ್ ಕಡಬ) newskadaba.com  ಮಂಗಳೂರು, ಸೆ. 04.  CPIM ಹಿರಿಯ ಸದಸ್ಯ ಕಾಂ.ರಾಘವ ಅಂಚನ್ ಬಜಾಲ್ (85) ರವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಕಾರ್ಮಿಕ ಚಳುವಳಿಯ ಪ್ರಮುಖ ಕೇಂದ್ರವಾಗಿದ್ದ ಬಜಾಲ್ ಪ್ರದೇಶದ ಪಕ್ಕಲಡ್ಕ ದಲ್ಲಿ ಹುಟ್ಟಿ ಬೆಳೆದಿರುವ ರಾಘವ ಅಂಚನ್ ರವರು, ಎಳೆಯ ಪ್ರಾಯದಲ್ಲೇ ತಮ್ಮ ಕಣ್ಣೆದುರು ನಡೆಯುತ್ತಿದ್ದ ನೇಯ್ಗೆ ,ಹಂಚು ಬೀಡಿ ಕಾರ್ಮಿಕರ ಹೋರಾಟಗಳಲ್ಲಿ ಸ್ವತಃ ಭಾಗವಹಿಸುವ ಮೂಲಕ ಎಡಪಂಥೀಯ ವಿಚಾರಧಾರೆಗೆ ಆಕರ್ಷಿತರಾಗಿದ್ದರು. ಬಳಿಕ ತಮ್ಮ ಯೌವ್ವನದಲ್ಲಿ ಕಮ್ಯುನಿಸ್ಟ್ ಕಾರ್ಯಕರ್ತರಾಗಿ ಬೆಳೆದರು. ಕಮ್ಯುನಿಸ್ಟ್ ಪಕ್ಷದ ಚಟುವಟಿಕೆಗಳಲ್ಲಿ

CPIM ಹಿರಿಯ ಸದಸ್ಯ ಕಾಂ.ರಾಘವ ಅಂಚನ್ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ವಾಹನ ಅಪಘಾತ- 4 ಭಾರತೀಯರು ಮೃತ್ಯು..!

(ನ್ಯೂಸ್ ಕಡಬ) newskadaba.com  ನವದೆಹಲಿ, ಸೆ. 04.  ಟೆಕ್ಸಾಸ್‌ ನಲ್ಲಿ ಐದು ವಾಹನಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಮಹಿಳೆ ಸೇರಿದಂತೆ ನಾಲ್ವರು ಭಾರತೀಯರು ಸಾವನ್ನಪ್ಪಿದ್ದಾರೆ. ಅರ್ಕಾನ್ಸಾಸ್ ನ ಬೆಂಟೊನ್‌ ವಿಲ್ಲೆಗೆ ತೆರಳುತ್ತಿದ್ದಾಗ ದುರಂತ ಸಂಭವಿಸಿದೆ. ಮೃತಪಟ್ಟವರನ್ನು ಆರ್ಯನ್ ರಘುನಾಥ್ ಓರಂಪಾಟಿ, ಫಾರೂಕ್ ಶೇಕ್, ಲೋಕೇಶ್ ಪಾಲಾಚಾರ್ಲ ಮತ್ತು ದರ್ಶಿನಿ ವಾಸುದೇವನ್ ಎಂದು ಗುರುತಿಸಲಾಗಿದೆ. ವೇಗವಾಗಿ ಬಂದ ಟ್ರಕ್ ಹಿಂಬದಿಯಿಂದ ಭಾರತೀಯರಿದ್ದ ಎಸ್‌ ಯುವಿ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು

ವಾಹನ ಅಪಘಾತ- 4 ಭಾರತೀಯರು ಮೃತ್ಯು..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ವಾಯುಭಾರ ಕುಸಿತ: ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಭಾರಿ ಮಳೆ 35 ಮಂದಿ ಮೃತ್ಯು..!

(ನ್ಯೂಸ್ ಕಡಬ) newskadaba.com  ಹೈದರಾಬಾದ್, ಸೆ. 03. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನೆಲೆ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಭಾರಿ ಮಳೆಯಾಗುತ್ತಿದ್ದು, ಇದರಿಂದಾಗಿ 35 ಮಂದಿ ಮೃತಪಟ್ಟಿದ್ದಾರೆ. ಆಂಧ್ರಪ್ರದೇಶದಲ್ಲಿ ಮಳೆ ಸಂಬಂಧಿತ ಅವಘಡಗಳಿಂದಾಗಿ 19 ಮಂದಿ ಸಾವನ್ನಪ್ಪಿದ್ದಾರೆ. ಜೊತೆಗೆ ತೆಲಂಗಾಣದಲ್ಲಿ ಮಳೆ ಮತ್ತು ಪ್ರವಾಹದಿಂದಾಗಿ 16 ಮಂದಿ ಮೃತಪಟ್ಟಿದ್ದಾರೆ. ಎರಡೂ ರಾಜ್ಯಗಳಲ್ಲಿ 47,000 ಕ್ಕೂ ಹೆಚ್ಚು ಜನರನ್ನು ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ. ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಸಿಬ್ಬಂದಿ ಸೇರಿದಂತೆ ಒಟ್ಟು 47 ರಕ್ಷಣಾ ತಂಡಗಳು ರಾಜ್ಯದಲ್ಲಿ

ವಾಯುಭಾರ ಕುಸಿತ: ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಭಾರಿ ಮಳೆ 35 ಮಂದಿ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕ್ಯೂ ನಲ್ಲಿರುವಾಗಲೇ ರಿಕ್ಷಾ ಚಾಲಕ ಹೃದಯಘಾತದಿಂದ ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 03.  ನಗರದ ಸೆಂಟ್ರಲ್ ರೈಲ್ವೇ ಸ್ಟೇಷನ್ ರಿಕ್ಷಾ ಪಾರ್ಕ್ ನಲ್ಲಿ ಕ್ಯೂ ನಲ್ಲಿರುವಾಗಲೇ ರಿಕ್ಷಾ ಚಾಲಕರೊಬ್ಬರು ಹೃದಯಘಾತದಿಂದ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮೃತ ಚಾಲಕನನ್ನು ಮೂಲತಃ ಬಜಾಲ್ ವಿಬಜಾಲ್ ವಿದ್ಯಾ ನಗರದ ನಿವಾಸಿ ಇಕ್ಬಾಲ್ (47) ಎಂದು ಗುರುತಿಸಲಾಗಿದೆ. ಪ್ರಸ್ತುತ ಅಡ್ಯಾರ್ ಕಣ್ಣೂರಿನ ಬೋರುಗುಡ್ಡೆಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ರಿಕ್ಷಾ ಪಾರ್ಕ್ ನಲ್ಲಿ ಕ್ಯೂ ನಲ್ಲಿರುವಾಗಲೇ ಇಕ್ಬಾಲ್ ರವರಿಗೆ ಎದೆನೋವು ಕಾಣಿಸಿಕೊಂಡಿದ್ದು ತಕ್ಷಣವೇ ಇತರ ರಿಕ್ಷಾ ಚಾಲಕರು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ

ಕ್ಯೂ ನಲ್ಲಿರುವಾಗಲೇ ರಿಕ್ಷಾ ಚಾಲಕ ಹೃದಯಘಾತದಿಂದ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ನದಿಗೆ ಹಾರಿದ್ದ ಯುವಕನ ಮೃತದೇಹ ಪತ್ತೆ..!

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 03.  ಇಲ್ಲಿನ ಕಾಂತಮಂಗಲ ಬಳಿ ಪಯಸ್ವಿನಿ ನದಿಗೆ ಹಾರಿದ್ದ ಯುವಕನ ಮೃತದೇಹ ಪತ್ತೆಯಾಗಿದೆ. ಮೃತ ಯುವಕನನ್ನು ಅಜ್ಜಾವರ ಗ್ರಾಮದ ಮಾವಿನಪಳ್ಳ ನಿವಾಸಿ‌ ಮಹಮ್ಮದ್ ಎಂಬವರ ಪುತ್ರ ಸಿನಾನ್ (30) ಎಂದು ಗುರುತಿಸಲಾಗಿದೆ. ಸಿನಾನ್ ಮಾನಸಿಕ ಅಸ್ವಸ್ಥನಾಗಿದ್ದ ಎನ್ನಲಾಗುತ್ತಿದ್ದು, ಈ ಹಿಂದೆಯೂ ಆತ ಆತ್ಮಹತ್ಯೆಗೆ ಪ್ರಯತ್ನಿಸಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ. ಸೋಮವಾರ ಸುಳ್ಯಕ್ಕೆ ತೆರಳಿದ್ದ ಈತ ಮನೆಗೆಮರುಳುವ ಸಂದರ್ಭದಲ್ಲಿ ಕಾಂತಮಂಗಲ ಸೇತುವೆಯಿಂದ ನದಿಗೆ ಧುಮುಕಿದ್ದಾನೆ ಎಂದು ತಿಳಿದು ಬಂದಿದೆ. ಮಾಹಿತಿ ತಿಳಿದ

ಸುಳ್ಯ: ನದಿಗೆ ಹಾರಿದ್ದ ಯುವಕನ ಮೃತದೇಹ ಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top