death

ರಶ್ಯಾ ಮಿಲಿಟರಿ ಕ್ಯಾಂಟಿನ್ ಮೇಲೆ ಶೆಲ್ ದಾಳಿ – ಕೇರಳದ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಮಾಸ್ಕೋ, ಆ. 19. ರಶ್ಯಾದ ಮಿಲಿಟರಿ ಶಿಬಿರವೊಂದರ ಮೇಲೆ ನಡೆದ ಶೆಲ್ ದಾಳಿಯಲ್ಲಿ ಕೇರಳ ಮೂಲದ ವ್ಯಕ್ತಿಯೊಬ್ಬರು ಮೃತಪಟ್ಟ ಕುರಿತು ವರದಿಯಾಗಿದೆ.   ಮೃತ ವ್ಯಕ್ತಿಯನ್ನು ತ್ರಿಶೂರು ಜಿಲ್ಲೆಯ ತ್ರಿಕ್ಕುರ್‌ ಪಂಚಾಯತ್‌ನ ನಾಯರಗಡಿ ನಿವಾಸಿಯಾಗಿದ್ದ ಸಂದೀಪ್‌ (36) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಇಲೆಕ್ಟ್ರಿಶಿಯನ್‌ ಆಗಿದ್ದ ಸಂದೀಪ್ ಅವರು, ಕೆಲಸ ಮಾಡುತ್ತಿದ್ದ ರಶ್ಯಾದ ರೆಸ್ಟೋರೆಂಟ್‌ ಮೇಲೆ ನಡೆದ ಶೆಲ್ ದಾಳಿಯಿಂದಾಗಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ರಶ್ಯಾ ಮಿಲಿಟರಿ ಕ್ಯಾಂಟಿನ್ ಮೇಲೆ ಶೆಲ್ ದಾಳಿ – ಕೇರಳದ ವ್ಯಕ್ತಿ ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಕೋಸ್ಟ್ ಗಾರ್ಡ್ ಮಹಾನಿರ್ದೇಶಕ ರಾಕೇಶ್ ಪಾಲ್ ಹೃದಯಾಘಾತದಿಂದ ಮೃತ್ಯು

(ನ್ಯೂಸ್ ಕಡಬ) newskadaba.c0m ಚೆನ್ನೈ, ಆ. 19.  ಭಾರತೀಯ ಕೋಸ್ಟ್ ಗಾರ್ಡ್ ಮಹಾನಿರ್ದೇಶಕ ರಾಕೇಶ್ ಪಾಲ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ತೀವ್ರ ಎದೆನೋವು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದ ರಾಕೇಶ್‌ ಪಾಲ್‌ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ರಾಕೇಶ್‌ ಪಾಲ್, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಚೆನ್ನೈಗೆ ಬಂದಿದ್ದರು. ಈ ವೇಳೆ ಅವರು ಅಸ್ವಸ್ಥರಾಗಿದ್ದಾರೆ ಎಂದು ತಿಳಿದು ಬಂದಿದೆ.

ಕೋಸ್ಟ್ ಗಾರ್ಡ್ ಮಹಾನಿರ್ದೇಶಕ ರಾಕೇಶ್ ಪಾಲ್ ಹೃದಯಾಘಾತದಿಂದ ಮೃತ್ಯು Read More »

ಕ್ರೈಮ್ ನ್ಯೂಸ್

ಹ್ಯಾಂಡ್ ಬ್ರೇಕ್ ಹಾಕದೆ ಟಿಪ್ಪರ್ ಲಾರಿ ನಿಲ್ಲಿಸಿ ಹೋಗಿದ್ದ ಚಾಲಕ..!        ಮಗು ಸೇರಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತ್ಯು..!                

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 17.  ರಾಜಧಾನಿ ಬೆಂಗಳೂರಿನಲ್ಲಿ ವರಮಹಾಲಕ್ಷ್ಮಿ ಹಬ್ಬ ಕಳೆದು ಮರುದಿನ ಇಂದು ಬೆಳ್ಳಂಬೆಳಗ್ಗೆ ಭೀಕರ ದುರಂತ  ಘಟನೆ ನಡೆದಿದ್ದು, ಟಿಪ್ಪರ್ ಹರಿದು ಮಗು ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಂಗಳೂರಿನ ಹೊಸ ಗುಡ್ಡದಹಳ್ಳಿಯಲ್ಲಿ ದುರ್ಘಟನೆ ನಡೆದಿದ್ದು, ನಡೆದುಕೊಂಡು ಹೋಗುತ್ತಿದ್ದ ವೇಳೆ ಹಿಂದಿನಿಂದ ಬಂದ ಟಿಪ್ಪರ್ ಲಾರಿ ಹರಿದ ಪರಿಣಾಮ ಮಗು ಹಾಗೂ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.                

ಹ್ಯಾಂಡ್ ಬ್ರೇಕ್ ಹಾಕದೆ ಟಿಪ್ಪರ್ ಲಾರಿ ನಿಲ್ಲಿಸಿ ಹೋಗಿದ್ದ ಚಾಲಕ..!        ಮಗು ಸೇರಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತ್ಯು..!                 Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆಟೋ ರಿಕ್ಷಾದ ಮೇಲೆ ಉರುಳಿ ಬಿದ್ದ ಮರ ಚಾಲಕ ಮೃತ್ಯು..!                             

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 17.  ಮಳೆಗೆ ವಿಜಯನಗರದ ಎಂಸಿ ಲೇಔಟ್ ಬಳಿ ಮರವೊಂದು ಆಟೋ ರಿಕ್ಷಾದ ಮೇಲೆ ಬಿದ್ದು, ಚಾಲಕ ಸಾವನ್ನಪ್ಪಿದ್ದಾರೆ. ಮೃತಪಟ್ಟವರನ್ನು ಶಿವರುದ್ರಯ್ಯ (49) ಎಂದು ಗುರುತಿಸಲಾಗಿದೆ. ಘಟನೆ ಕುರಿತು ಮಾಹಿತಿ ನೀಡಿದ ಬಿಬಿಎಂಪಿ ಅರಣ ಉಪ ಸಂರಕ್ಷಣಾಧಿಕಾರಿ ಬಿಎಲ್‌ಜಿ ಸ್ವಾಮಿ, ಮರ ಬಿದ್ದ ಪರಿಣಾಮ ಶಿವರುದ್ರಯ್ಯ ಅವರ ತಲೆ, ಕಾಲು ಹಾಗೂ ಖಾಸಗಿ ಭಾಗಗಳಿಗೆ ಗಾಯಗಳಾಗಿತ್ತು. ತಕ್ಷಣ ಸ್ಥಳಕ್ಕೆ ಧಾವಿಸಿದ ಬಿಬಿಎಂಪಿ ಅಧಿಕಾರಿಗಳು ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ, ನಂತರ ಹೆಚ್ಚಿನ

ಆಟೋ ರಿಕ್ಷಾದ ಮೇಲೆ ಉರುಳಿ ಬಿದ್ದ ಮರ ಚಾಲಕ ಮೃತ್ಯು..!                              Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸ್ಕೂಟರ್-ಕಾರ್ ಅಪಘಾತ..!              ಶಿಕ್ಷಕಿ ಮೃತ್ಯು..!                            

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 17.  ಸ್ಕೂಟಿಗೆ ಕಾರೊಂದು ಢಿಕ್ಕಿ ಹೊಡೆದ ಘಟನೆ ನಗರದ ಮೀನುಗಾರಿಕಾ ಬಂದರಿನಲ್ಲಿ ನಡೆದಿದೆ. ಮೃತಪಟ್ಟವರನ್ನು ಉಳ್ಳಾಲ ಎಎಸ್‌ಐ ಪತ್ನಿ, ಶಿಕ್ಷಕಿ ಶಾಹಿದಾ (47) ಎಂದು ಗುರುತಿಸಲಾಗಿದೆ. ಶಾಹಿದಾ ತನ್ನ ಸ್ಕೂಟಿಯಲ್ಲಿ ಶಾಲೆಯ ಕಡೆಗೆ ಹೋಗುತ್ತಿದ್ದಳು. ಈ ವೇಳೆ ಆಕೆಗೆ ಕಾರೊಂದು ಢಿಕ್ಕಿ ಹೊಡೆದಿದ್ದು, ತಕ್ಷಣ ಅವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಸ್ಕೂಟರ್-ಕಾರ್ ಅಪಘಾತ..!              ಶಿಕ್ಷಕಿ ಮೃತ್ಯು..!                             Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರಿನೊಳಗೆ ಮಲಗಿದ್ದ ಚಾಲಕ ಉಸಿರುಗಟ್ಟಿ ಮೃತ್ಯು…!

(ನ್ಯೂಸ್ ಕಡಬ) newskadaba.com ಮಣಿಪಾಲ, ಆ. 16. ಕಾರಿನ ಗ್ಲಾಸ್ ಮುಚ್ಚಿ ಮಲಗಿದ್ದ ಚಾಲಕರೊಬ್ಬರು ಉಸಿರುಗಟ್ಟಿ ಮೃತಪಟ್ಟ ಘಟನೆ ಮಣಿಪಾಲದಿಂದ ವರದಿಯಾಗಿದೆ.   ಮೃತಪಟ್ಟವರನ್ನು ಚಿಕ್ಕಮಗಳೂರಿನ ಆನಂದ(37) ಎಂದು ಗುರುತಿಸಲಾಗಿದೆ. ಆನಂದರವರು ರೋಗಿಯೊಬ್ಬರನ್ನು ಮಣಿಪಾಲ ಆಸ್ಪತ್ರೆಗೆ ಚಿಕಿತ್ಸೆಗೆಂದು ಕಾರಿನಲ್ಲಿ ಕರೆದುಕೊಂಡು ಬಂದಿದ್ದು, ರೋಗಿಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು.  ಬಳಿಕ ರಾತ್ರಿ ಉಳಿದುಕೊಳ್ಳಲು ಯಾವುದೇ ರೂಮ್ ಸಿಗದ ಕಾರಣ ಚಾಲಕ ಆನಂದರವರು ಮಣಿಪಾಲ ಆಸ್ಪತ್ರೆಯ ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ಕಾರಿನಲ್ಲಿಯೇ ಮಲಗಿದ್ದರು. ಕಾರಿನ ಗ್ಲಾಸನ್ನು ಮುಚ್ಚಿಕೊಂಡು ಮಲಗಿದ್ದ ಇವರು, ಒಳಗಡೆ

ಕಾರಿನೊಳಗೆ ಮಲಗಿದ್ದ ಚಾಲಕ ಉಸಿರುಗಟ್ಟಿ ಮೃತ್ಯು…! Read More »

ಕರಾವಳಿ, ಕ್ರೈಮ್ ನ್ಯೂಸ್

ಬ್ಯೂಟಿಷಿಯನ್ ಹತ್ಯೆ ಪ್ರಕರಣ..!           ಆರೋಪಿಗಳು ಅರೆಸ್ಟ್..!  

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 16.  ನಗರದ ಹೊರವಲಯದ ಮಾಗಡಿಯಲ್ಲಿ ಅರಣ್ಯ ಪ್ರದೇಶದಲ್ಲಿ ನಡೆದ 32 ವರ್ಷದ ಬ್ಯೂಟಿಷಿಯನ್ ಲಲಿತಾ ಅಲಿಯಾಸ್ ದಿವ್ಯಾ ಅವರ ಬರ್ಬರ ಹತ್ಯೆ ಪ್ರಕರಣಕ್ಕೆ ಕಾರಣ ತಿಳಿದು ಬಂದಿದೆ. ಆರೋಪಿಗಳನ್ನು ಶಶಾಂಕ್, ಕಿರಣ್, ರೋಹಿತ್ ಮತ್ತು ಭರತ್ ಎಂದು ಗುರುತಿಸಲಾಗಿದೆ. ಎಲ್ಲರೂ 25 ರಿಂದ 30 ವರ್ಷ ವಯಸ್ಸಿನವರಾಗಿದ್ದಾರೆ. ಆರೋಪಿಗಳೆಲ್ಲರೂ ಮಾಗಡಿ ತಾಲೂಕಿನ ಕುರುಪಾಳ್ಯ ಮತ್ತು ಇತರ ಭಾಗಗಳ ನಿವಾಸಿಗಳಾಗಿದ್ದು, ದಿನಗೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು ಎಂದು ವರದಿ ಪ್ರಕಟಣೆ ತಿಳಿಸಿದೆ.

ಬ್ಯೂಟಿಷಿಯನ್ ಹತ್ಯೆ ಪ್ರಕರಣ..!           ಆರೋಪಿಗಳು ಅರೆಸ್ಟ್..!   Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಾಷ್ಟ್ರಧ್ವಜ ಕಂಬಕ್ಕೆ ವಿದ್ಯುತ್ ಸ್ಪರ್ಶ..!           ಚರ್ಚ್ ನ ಪಾದ್ರಿ ಮೃತ್ಯು..!                

(ನ್ಯೂಸ್ ಕಡಬ) newskadaba.c0m ಕಾಸರಗೋಡು, ಆ. 16.  ಸ್ವಾತಂತ್ರ್ಯ ದಿನಾಚರಣೆಯ ಬಳಿಕ ರಾಷ್ಟ್ರಧ್ವಜವನ್ನು ಕೆಳಗಿಳಿಸುವಾಗ ಚಿಕ್ಕ ವಯಸ್ಸಿನ ಚರ್ಚ್‌ನ ಪಾದ್ರಿಯೊಬ್ಬರು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಘಟನೆ ಸಂಭವಿಸಿದೆ. ಮೃತಪಟ್ಟ ವ್ಯಕ್ತಿಯನ್ನು ಮುಳ್ಳೇರಿಯ ಇನ್‌ಫೆಂಟ್ ಜೀಸಸ್ ಚರ್ಚ್‌ನ ಧರ್ಮಗುರು ಫಾದರ್ ಮ್ಯಾಥ್ಯೂ ಕುಡಿಲಿಲ್ (29) ಎಂದು ಗುರುತಿಸಲಾಗಿದೆ. ಧ್ವಜ ಕಂಬ ಒಂದು ಬದಿಗೆ ವಾಲಿದಾಗ ಪಕ್ಕದ ವಿದ್ಯುತ್ ತಂತಿಗೆ ತಾಗಿ ವಿದ್ಯುತ್ ಸ್ಪರ್ಶಿಸಿದೆ ಎನ್ನಲಾಗಿದೆ.

ರಾಷ್ಟ್ರಧ್ವಜ ಕಂಬಕ್ಕೆ ವಿದ್ಯುತ್ ಸ್ಪರ್ಶ..!           ಚರ್ಚ್ ನ ಪಾದ್ರಿ ಮೃತ್ಯು..!                 Read More »

ಕರಾವಳಿ, ಕ್ರೈಮ್ ನ್ಯೂಸ್

ಸಾಲಭಾದೆ ತಾಳಲಾರದೆ ಆತ್ಮಹತ್ಯೆಗೆ ಶರಣು..!

(ನ್ಯೂಸ್ ಕಡಬ) newskadaba.c0m ಹಾಸನ, ಆ. 16.  ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕೆರೆಬೀದಿಯಲ್ಲಿ ಸಾಲಭಾದೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಭವಿಸಿದೆ. ಗಂಡ-ಹೆಂಡತಿ ಹಾಗೂ ಪುತ್ರಿ ಮೂವರು ಹೇಮಾವತಿ ನಾಲೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಮೃತಪಟ್ಟವರನ್ನು ಶ್ರೀನಿವಾಸ್(43), ಶ್ವೇತಾ(36) ಹಾಗೂ ಅವರ ಮಗಳು ನಾಗಶ್ರೀ(13) ಎಂದು ಗುರುತಿಸಲಾಗಿದೆ.  

ಸಾಲಭಾದೆ ತಾಳಲಾರದೆ ಆತ್ಮಹತ್ಯೆಗೆ ಶರಣು..! Read More »

ಕ್ರೈಮ್ ನ್ಯೂಸ್

‘ಅಗ್ನಿ ಕ್ಷಿಪಣಿ’ ಪಿತಾಮಹ ರಾಮ್ ನಾರಾಯಣ್ ಅಗರ್ವಾಲ್ ಮೃತ್ಯು                                                                       

(ನ್ಯೂಸ್ ಕಡಬ) newskadaba.c0m ನವದೆಹಲಿ, ಆ. 16.  ಭಾರತದ ಅಗ್ನಿ ಕ್ಷಿಪಣಿಯ ಪಿತಾಮಹ ಖ್ಯಾತ ಡಿಆರ್‌ಡಿಒ ಕ್ಷಿಪಣಿ ವಿಜ್ಞಾನಿ ಪದ್ಮಭೂಷಣ ಪುರಸ್ಕೃತ ರಾಮ್ ನಾರಾಯಣ್ ಅಗರ್ವಾಲ್ (84) ಮೃತಪಟ್ಟಿದ್ದಾರೆ. ದೇಶವನ್ನು ಪ್ರಮುಖ ಕ್ಷಿಪಣಿ ಶಕ್ತಿಯನ್ನಾಗಿ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಭಾರತದ ದೀರ್ಘ-ಶ್ರೇಣಿಯ ಬ್ಯಾಲಿಸ್ಟಿಕ್ ಕ್ಷಿಪಣಿ ಯೋಜನೆಯಲ್ಲಿ ಮುಖ್ಯ ಪಾತ್ರ ನಿರ್ವಹಿಸಿದ್ದರು. ಅಗರ್ವಾಲ್ ಕ್ಷಿಪಣಿಗಳ ಮೊದಲ ಕಾರ್ಯಕ್ರಮದ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸಿದ್ದರು.  

‘ಅಗ್ನಿ ಕ್ಷಿಪಣಿ’ ಪಿತಾಮಹ ರಾಮ್ ನಾರಾಯಣ್ ಅಗರ್ವಾಲ್ ಮೃತ್ಯು                                                                        Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top