death

ಟೈರ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಪೋಟ- ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ, ಫೆ. 27. ಟೈರ್​ ಫ್ಯಾಕ್ಟರಿಯಲ್ಲಿ ಬಾಯ್ಲರ್​ ಸ್ಪೋಟ ಸಂಭವಿಸಿ ಇಬ್ಬರು ದಾರುಣವಾಗಿ ಮೃತಪಟ್ಟು, ಮೂವರು ಗಂಭೀರ ಗಾಯಗೊಂಡ ಘಟನೆ ಉತ್ತರ ಪ್ರದೇಶದ ಮೀರತ್​ನಲ್ಲಿ ನಡೆದಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಟೈರ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಪೋಟ- ಇಬ್ಬರು ಮೃತ್ಯು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಈಜಲು ತೆರಳಿದ್ದ ಯುವಕರಿಬ್ಬರು ನದಿ ನೀರಿನಲ್ಲಿ ಮುಳುಗಿ ಮೃತ್ಯು..!

(ನ್ಯೂಸ್ ಕಡಬ) neskadaba.com ಉಡುಪಿ, ಪೆ. 26. ಸೋಮೇಶ್ವರದ ಸೀತಾ ನದಿಯಲ್ಲಿ ಈಜಲು ಬಂದಿದ್ದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಉಡುಪಿಯ ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ನೆಲ್ಲಿಕಟ್ಟೆ ಬಳಿ ನಡೆದಿದೆ. ಮೃತಪಟ್ಟವರನ್ನು ಕೊಪ್ಪ ಮೂಲದ ಡಾ. ದೀಪಕ್ ಮತ್ತು ಶಿವಮೊಗ್ಗ ಮೂಲದ ಶೈನು ಡೇನಿಯಲ್ ಎಂದು ಗುರುತಿಸಲಾಗಿದೆ. ಪ್ರವಾಸಕ್ಕೆಂದು ಬಂದಿದ್ದ ಮೂವರು ಗೆಳೆಯರ ತಂಡದ ಇಬ್ಬರು ಈಜು ಬಾರದೇ ಮುಳುಗಿರುವ ಸಾಧ್ಯತೆ ಇದೆ. ಹೆಬ್ರಿಗೆ ಪ್ರವಾಸಕ್ಕೆ ಬಂದು ವಾಪಾಸ್ಸಾಗುವಾಗ ನದಿಗೆ ಇಳಿದಿದ್ದರು. ಈ ವೇಳೆ

ಈಜಲು ತೆರಳಿದ್ದ ಯುವಕರಿಬ್ಬರು ನದಿ ನೀರಿನಲ್ಲಿ ಮುಳುಗಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ದುಬೈ: ರಸ್ತೆ ಅಪಘಾತ- ಮಂಗಳೂರಿನ ಯುವತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಉಳ್ಳಾಲ, ಫೆ. 23. ದುಬೈಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮಂಗಳೂರಿನ ಯುವತಿ ಮೃತಪಟ್ಟ ಘಟನೆ ನಡೆದಿದೆ. ಮೃತ ಯುವತಿಯನ್ನು ಕೋಟೆಕಾರು ಬೀರಿ ಕೆಂಪುಮಣ್ಣು ನಿವಾಸಿ ವಿದಿಶಾ (28) ಎಂದು ಗುರುತಿಸಲಾಗಿದೆ. ಮಂಗಳೂರು ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷೆ ರಾಜೀವಿ ಕೆಂಪುಮಣ್ಣು ಮತ್ತು ವಿಠಲ್ ಕುಲಾಲ್ ಕೆಂಪುಮಣ್ಣು ಅವರ ಏಕೈಕ ಪುತ್ರಿ ವಿದಿಶಾ ಸಹ್ಯಾದ್ರಿ ಕಾಲೇಜಿನಲ್ಲಿ ವ್ಯವಹಾರ ಆಡಳಿತ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದು ಒಂದು ವರ್ಷ ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಕಾರ್ಯ ನಿರ್ವಹಿಸಿದ್ದರು.

ದುಬೈ: ರಸ್ತೆ ಅಪಘಾತ- ಮಂಗಳೂರಿನ ಯುವತಿ ಮೃತ್ಯು..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ಫೆ. 23. ನಾಪತ್ತೆಯಾಗಿದ್ದ ಯುವಕನ ಮೃತದೇಹವು ನೇತ್ರಾವತಿ ನದಿಯಲ್ಲಿ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಮೃತ ಯುವಕನನ್ನು ಉಳ್ಳಾಲ ತಾಲೂಕಿನ ಸೋಮೇಶ್ವರ ಮೂಡ ಬಡಾವಣೆ ನಿವಾಸಿ ಗೌತಮ್ ಎಮ್ ಎಂದು ಗುರುತಿಸಲಾಗಿದೆ. ಫೈನಾನ್ಸ್ ಸೀಸರ್ ಆಗಿದ್ದ ಗೌತಮ್ ಸೋಮವಾರದದು ತೊಕ್ಕೊಟ್ಟಿನಲ್ಲಿ ನಡೆದಿದ್ದ ಬಬ್ಬುಸ್ವಾಮಿ ದೈವದ ಪುನರ್ ಪ್ರತಿಷ್ಟೆ ಪ್ರಯುಕ್ತ ಕಲಶಾಭಿಶೇಕದ ಹೊರೆಕಾಣಿಕೆಯಲ್ಲಿ ಭಾಗವಹಿಸಿ ಮನೆಗೆ ತೆರಳಿದ್ದನು. ಬಳಿಕ ರಾತ್ರಿ ವೇಳೆ ಮನೆಯಿಂದ ಹೊರಹೋಗಿದ್ದ ಗೌತಮ್ ಮತ್ತೆ ವಾಪಸಾಗದ ಹಿನ್ನೆಲೆ ಮರುದಿನ ಮನೆಯವರು ಉಳ್ಳಾಲ

ಮಂಗಳೂರು: ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ನಿರ್ಮಾಣ ಹಂತದ ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಬೈಂದೂರು, ಫೆ. 20. ನಿರ್ಮಾಣ ಹಂತದ ಬಾವಿಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಇಲ್ಲಿಗೆ ಸಮೀಪದ ಬಡಾಕೆರೆ ಎಂಬಲ್ಲಿ ಸೋಮವಾರದಂದು ರಾತ್ರಿ ವೇಳೆ ನಡೆದಿದೆ. ಮೃತರನ್ನು ಬಡಾಕೆರೆಯ ವಿಜಯ ಪೂಜಾರಿ(60) ಎಂದು ಗುರುತಿಸಲಾಗಿದೆ. ಇವರು ರಾತ್ರಿ ವೇಳೆ ನಿರ್ಮಾಣ ಹಂತದಲ್ಲಿದ್ದ 35 ಅಡಿ ಆಳದ ನೀರಿಲ್ಲದ ಬಾವಿಗೆ ಅಕಸ್ಮಿಕವಾಗಿ ಬಿದ್ದಿದ್ದಾರೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮಂಗಳವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದ್ದು, ಸಾಮಾಜಿಕ ಕಾರ್ಯಕರ್ತ ಸುರೇಶ್ ಖಾರ್ವಿ

ನಿರ್ಮಾಣ ಹಂತದ ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ನೆಲ್ಯಾಡಿ: ಮರದಿಂದ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಫೆ. 20. ಮರದಿಂದ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಯಾಡಿ ಹೊಸಮಜಲು ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಬಲ್ಯ ಗ್ರಾಮದ ಹೊಸಮನೆ ನಿವಾಸಿ ರಮೇಶ ಎಂದು ಗುರುತಿಸಲಾಗಿದೆ. ರಮೇಶ್ ಅವರು ಬೆಂಗಳೂರಿನಲ್ಲಿ ಲಾರಿ ಚಾಲಕರಾಗಿದ್ದು ಪತ್ನಿ ಹಾಗೂ ಮಕ್ಕಳೊಂದಿಗೆ ಹೊಸಮಜಲು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ರಜೆಯ ನಿಮಿತ್ತ ಊರಿಗೆ ಬಂದಿದ್ದ ಅವರು ಫೆ. 18ರಂದು ಸಂಜೆ ಹೊಸಮಜಲುನಲ್ಲಿ ಮನೆ ಸಮೀಪದ ಮಾವಿನ ಮರಕ್ಕೆ ಮಾವಿನ ಮಿಡಿ

ನೆಲ್ಯಾಡಿ: ಮರದಿಂದ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ

ಹೃದಯಾಘಾತ- ಖ್ಯಾತ ಕಿರುತೆರೆ ನಟ ನಿಧನ

(ನ್ಯೂಸ್ ಕಡಬ) newskadaba.com ಮುಂಬೈ, ಫೆ. 20.  ಖ್ಯಾತ ಕಿರುತೆರೆ ನಟ ರಿತುರಾಜ್ ಸಿಂಗ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು. ಪ್ಯಾಂಕ್ರಿಯಾಟಿಕ್ ಎಂಬ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಇತ್ತೀಚೆಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇವರು ಬಾಲಿವುಡ್ ಸಿನಿಮಾಗಳಾದ ಬದರಿನಾಥ್ ಕಿ ದುಲ್ಹನಿಯಾ (2017), ವಾಶ್-ಪಾಸೆಸ್ಡ್ ಬೈ ದಿ ಒಬ್ಸೆಸ್ಡ್, ಮತ್ತು ಥುನಿವು (2023) ನಂತಹ ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕಳೆದ ವರ್ಷ ಬಿಡುಗಡೆಯಾದ ಯಾರಿಯನ್ 2 ಅವರ ಕೊನೆಯ ಸಿನೆಮಾವಾಗಿತ್ತು. ರಿತುರಾಜ್ ದಿ ಟೆಸ್ಟ್ ಕೇಸ್, ಹೇ

ಹೃದಯಾಘಾತ- ಖ್ಯಾತ ಕಿರುತೆರೆ ನಟ ನಿಧನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ: ಮೂವರು ಕಾರ್ಮಿಕರು ಸಜೀವದಹನ

(ನ್ಯೂಸ್‌ ಕಡಬ)newskadaba.com ಬೆಂಗಳೂರು,ಫೆ.18: ಪರ್ಫ್ಯೂಮ್ ಫ್ಯಾಕ್ಟರಿ ಅಗ್ನಿ ಅವಘಡದಲ್ಲಿ ಮೂವರು ಕಾರ್ಮಿಕರು ದುರ್ಮರಣ ಹೊಂದಿರುವಂತಹ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ರಾಮಸಂದ್ರದಲ್ಲಿ ದುರಂತ ಸಂಭವಿಸಿದೆ. ಬೆಂಕಿಯಲ್ಲಿ ಸಿಲುಕಿ ಮೂವರು ಕಾರ್ಮಿಕರು ಸಜೀವದಹನವಾಗಿದ್ದು, ಇನ್ನೂ ಕೆಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಪರ್ಫ್ಯೂಮ್ ಕೆಮಿಕಲ್‌ ಸ್ಫೋಟಗೊಂಡ ಪರಿಣಾಮ ಆಕಸ್ಮಿಕ ಬೆಂಕಿಯಿಂದ ಪರ್ಫ್ಯೂಮ್ ಫ್ಯಾಕ್ಟರಿ ಹೊತ್ತಿ ಉರಿಯುತ್ತಿದೆ. ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸುತ್ತಿದ್ದಾರೆ. ಈ ಘಟನೆಯಲ್ಲಿ ಗಂಭೀರ ಗಾಯಗೊಂಡ ಅಲ್ಲಾಭಕ್ಷ, ಅಫ್ರೋಜ್, ರಿಯಾಜ್, ಸಾಧಿಕ್,

ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ: ಮೂವರು ಕಾರ್ಮಿಕರು ಸಜೀವದಹನ Read More »

ಕರ್ನಾಟಕ

ಕಾಲೇಜು ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಫೆ. 15. ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆತ್ಮತ್ಯೆ ಮಾಡಿಕೊಡ ವಿದ್ಯಾರ್ಥಿಯನ್ನು ಅತ್ತಾವುಲ್ಲಾ ಎಂದು ಗುರುತಿಸಲಾಗಿದೆ. ಸುಮಾರು ಒಂದೂವರೆ ತಿಂಗಳಿನಿಂದ ಕಾಲೇಜಿಗೆ ಹೋಗದೇ ಮನೆಯಲ್ಲೇ ಇದ್ದ ಅತ್ತಾವುಲ್ಲಾ ಮಾನಸಿಕ ಖಿನ್ನತೆಗೆ ಒಳಗಾದಂತೆ ವರ್ತಿಸುತ್ತಿದ್ದನು ಎನ್ನಲಾಗಿದೆ. ಬುಧವಾರ ರಾತ್ರಿ ಆತನ ತಾಯಿ ನೆರೆಮನೆಯ ಮೆಹಂದಿ ಕಾರ್ಯಕ್ರಮಕ್ಕೆ ತೆರಳಿದ್ದು, ಮರಳಿ ಮನೆಗೆ ಬಂದಾಗ ಅತ್ತಾವುಲ್ಲಾ ಮನೆಯ ಕೋಣೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು

ಕಾಲೇಜು ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಹೃದಯಾಘಾತ- ಭೂಮಾಪಕ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಫೆ. 14. ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪರವಾನಗಿ ಹೊಂದಿದ ಭೂಮಾಪಕರಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ನಿಧನರಾಗಿರುವ ಕುರಿತು ಬೆಳ್ತಂಗಡಿಯಿಂದ ವರದಿಯಾಗಿದೆ. ಮೃತಪಟ್ಟವರನ್ನು ವಿಶ್ವನಾಥ ರಾವ್ (45) ಎಂದು ಗರುತಿಸಲಾಗಿದೆ. ಮೂಲತಃ ಹಾಸನ ಜಿಲ್ಲೆಯ ಬೇಲೂರಿನವರಾದ ವಿಶ್ವನಾಥ ರಾವ್ ಅವರು, ಉಜಿರೆಯಲ್ಲಿ ವಾಸವಾಗಿದ್ದು, ಪರವಾನಗಿ ಹೊಂದಿದ ಭೂಮಾಪಕರಾಗಿ ಕಳೆದ 20 ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ರಕ್ತದೊತ್ತಡ ಏರುಪೇರಾದ ಹಿನ್ನೆಲೆ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಬಂಟ್ವಾಳದಲ್ಲಿ ಹೃದಯಾಘಾತವಾಗಿದ್ದು, ಅವರನ್ನು

ಹೃದಯಾಘಾತ- ಭೂಮಾಪಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top