death

ಕರ್ತವ್ಯದ ವೇಳೆ ಹೃದಯಾಘಾತ – ಮಂಗಳೂರು ಗುಪ್ತಚರ ಇಲಾಖಾ ಸಿಬ್ಬಂದಿ ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 16. ಕರ್ತವ್ಯದಲ್ಲಿರುವಾಗಲೇ ಗುಪ್ತಚರ ಇಲಾಖಾ ಸಿಬ್ಬಂದಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಉರ್ವ ಗುಪ್ತಚರ ಇಲಾಖಾ ಕಚೇರಿಯಲ್ಲಿ ಶನಿವಾರದಂದು ನಡೆದಿದೆ. ಮೃತರನ್ನು ಉರ್ವ ಮಾರಿಗುಡಿ ನಿವಾಸಿ ರಾಜೇಶ್ ಬಿ.ಯು(45) ಎಂದು ಗುರುತಿಸಲಾಗಿದೆ. ಇಂದು ಮಧ್ಯಾಹ್ನದ ವೇಳೆ ಗುಪ್ತಚರ ಇಲಾಖಾ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಜೇಶ್ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ರೆಸ್ಟ್ ರೂಮಿಗೆ ತೆರಳಿ ವಿಶ್ರಾಂತಿ ಪಡೆಯುತ್ತಿದ್ದಂತೆ ಕುಸಿದುಬಿದ್ದಿದ್ದಾರೆ ಎನ್ನಲಾಗಿದೆ. 1993 ನೇ ಬ್ಯಾಚ್ ನವರಾಗಿರುವ ರಾಜೇಶ್, ಸುರತ್ಕಲ್ ಹಾಗೂ ಪಣಂಬೂರು […]

ಕರ್ತವ್ಯದ ವೇಳೆ ಹೃದಯಾಘಾತ – ಮಂಗಳೂರು ಗುಪ್ತಚರ ಇಲಾಖಾ ಸಿಬ್ಬಂದಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಭೀಕರ ಅಪಘಾತ- ತಾಯಿ ಮಗ ಮೃತ್ಯು..! ತಂದೆ- ಮಗಳು ಗಂಭೀರ

(ನ್ಯೂಸ್ ಕಡಬ) newskadaba.com ಕುಣಿಗಲ್, ಸೆ. 16. ಲಾರಿಗೆ ಹಿಂಬದಿಯಿಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ತಾಯಿ, ಮಗ ಸ್ಥಳದಲ್ಲೇ ಮೃತಪಟ್ಟು ಇಬ್ಬರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 75 ತಾಲೂಕಿನ ಹೇರೂರು ಸೇತುವೆ ಬಳಿ ಶುಕ್ರವಾರದಂದು ರಾತ್ರಿ ನಡೆದಿದೆ. ಮೃತಪಟ್ಟವರನ್ನು ನಾಗಮಂಗಲ ತಾಲೂಕು ಸೀಗೇಹಳ್ಳಿ ಗ್ರಾಮ ಹಾಲಿ ಬೆಂಗಳೂರು ಮಾದನಾಯಕಹಳ್ಳಿ ನಿವಾಸಿ ಶೋಭಾ ಮತ್ತು ಮಗ ನಿಖಿಲ್ ಗೌಡ(12) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಪತಿ ಗಂಗೇಶ್ ಹಾಗೂ ಮಗಳು ಭುವನ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಭೀಕರ ಅಪಘಾತ- ತಾಯಿ ಮಗ ಮೃತ್ಯು..! ತಂದೆ- ಮಗಳು ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾರು- ಬೈಕ್ ನಡುವೆ ಢಿಕ್ಕಿ; ಸಹಸವಾರೆ ಮೃತ್ಯು

(ನ್ಯೂಸ್ ಕಡಬ) newskadaba.com ಮುಲ್ಕಿ, ಸೆ. 16. ಕಾರು ಹಾಗೂ ಬೈಕ್ ನಡುವೆ  ಢಿಕ್ಕಿ ಸಂಭವಿಸಿದ ಪರಿಣಾಮ ಬೈಕಿನಲ್ಲಿ ಪ್ರಯಾಣಿಸುತ್ತಿದ್ದ ಸಹಸವಾರೆ ಮೃತಪಟ್ಟು, ಸವಾರ ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ವಿಜಯ ಸನ್ನಿಧಿ ಜಂಕ್ಷನ್ ಬಳಿ ನಡೆದಿದೆ. ಮೃತರನ್ನು ಕೇರಳ ರಾಜ್ಯದ ಕಾಸರಗೋಡಿನ ನಿವಾಸಿ ಪ್ರೀತಿಕಾ ಶೆಟ್ಟಿ(21) ಎಂದು ಗುರುತಿಸಲಾಗಿದ್ದು. ಗಾಯಾಳು ಬೈಕ್ ಸವಾರ ಬಂಟ್ವಾಳದ ಅರಂತೋಡಿ ಬಾಳೆಪುಣಿ ನಿವಾಸಿ ಮನ್ವಿತ್ ರಾಜ್ ಶೆಟ್ಟಿ(21) ಎಂದು ತಿಳಿದುಬಂದಿದೆ. ಉಡುಪಿ ಕಡೆಯಿಂದ ಮಂಗಳೂರು ಕಡೆಗೆ

ಕಾರು- ಬೈಕ್ ನಡುವೆ ಢಿಕ್ಕಿ; ಸಹಸವಾರೆ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಇಬ್ಬರು ಹೆಣ್ಣುಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಸೆ. 15. ಇಬ್ಬರು ಮಕ್ಕಳೊಂದಿಗೆ ತಾಯಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಹೋಬಳಿಯ ಬೊಮ್ಮನಹಳ್ಳಿ ಗ್ರಾಮದಲ್ಲಿ ಗುರುವಾರದಂದು ತಡರಾತ್ರಿ ನಡೆದಿರುವುದು ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಮೇಘಾ(24) ಹಾಗೂ ಅವರ ಮಕ್ಕಳಾದ ಪುನ್ವಿತಾ(6) ಮತ್ತು ಮನ್ವಿತಾ(3) ಎಂದು ಗುರುತಿಸಲಾಗಿದೆ. ಪತಿ ಧನಂಜಯ ಮತ್ತು ಮನೆಮಂದಿ ಮೇಘಾರಿಗೆ ಚಿತ್ರಹಿಂಸೆ, ಮಾನಸಿಕ ಕಿರುಕುಳ ನೀಡುತ್ತಿದ್ದರೆನ್ನಲಾಗಿದ್ದು, ಇದರಿಂದ ಬೇಸತ್ತ ಮೇಘಾ ತನ್ನಿಬ್ಬರು ಹೆಣ್ಣು ಮಕ್ಕಳೊಂದಿಗೆ ಆತ್ಮಹತ್ಯೆಗೈದಿದ್ದಾರೆ ಎಂದು ತೆರಕಣಾಂಬಿ

ಇಬ್ಬರು ಹೆಣ್ಣುಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ Read More »

ಕರ್ನಾಟಕ

ಗ್ರಾನೈಟ್ ಮೈಮೇಲೆ ಬಿದ್ದು ಕಾರ್ಮಿಕರಿಬ್ಬರು ದುರ್ಮರಣ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 14. ಗ್ರಾನೈಟ್ ಮೈಮೇಲೆ ಬಿದ್ದು ಕಾರ್ಮಿಕರಿಬ್ಬರು ಮೃತಪಟ್ಟ ಭೀಕರ ಘಟನೆ ಮಲ್ಪೆಯ ತೊಟ್ಟಂ ಎಂಬಲ್ಲಿ ನಡೆದಿದೆ. ಮೃತ ಕಾರ್ಮಿಕರನ್ನು ಒಡಿಶಾ ಮೂಲದ  ಬಾಬುಲ್ಲ(38) ಮತ್ತು ಭಾಸ್ಕರ್(40) ಎಂದು ಗುರುತಿಸಲಾಗಿದೆ. ಇವರಿಬ್ಬರು ಮನೆಯೊಂದಕ್ಕೆ ತಂದ ಗ್ರಾನೈಟ್ ನ್ನು ಲಾರಿಯಿಂದ ಖಾಲಿ ಮಾಡುತ್ತಿದ್ದ ಸಂದರ್ಭ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಗ್ರಾನೈಟ್ ಮೈಮೇಲೆ ಬಿದ್ದು ಕಾರ್ಮಿಕರಿಬ್ಬರು ದುರ್ಮರಣ Read More »

ಕರಾವಳಿ, ಕ್ರೈಮ್ ನ್ಯೂಸ್

‘ಬೀರಬಲ್’ ಖ್ಯಾತಿಯ ಹಿರಿಯ ನಟ ಸತೀಂದರ್ ಕುಮಾರ್ ಖೋಸ್ಲಾ ವಿಧಿವಶ

(ನ್ಯೂಸ್ ಕಡಬ) newskadaba.com ಮುಂಬೈ, ಸೆ. 13. ‘ಬೀರಬಲ್’ ಖ್ಯಾತಿಯ ಹಿರಿಯ ನಟ ಸತೀಂದರ್ ಕುಮಾರ್ ಖೋಸ್ಲಾ(84) ಅವರು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 1938ರಲ್ಲಿ ಪಂಜಾಬ್‌ನ ಗುರುದಾಸ್‌ಪುರದಲ್ಲಿ ಜನಿಸಿದ ಸತೀಂದರ್ ಕುಮಾರ್ ಖೋಸ್ಲಾ ಅವರು, 1967ರಲ್ಲಿ ಉಪ್ಕಾರ್ ಚಿತ್ರದ ಮೂಲಕ ನಟನೆಗೆ ಪಾದಾರ್ಪಣೆಗೈದು ಹಿಂದಿ ಚಿತ್ರರಂಗದ ಜೊತೆಗೆ ಪಂಜಾಬಿ, ಭೋಜ್‌ಪುರಿ ಮತ್ತು ಮರಾಠಿ ಸಿನಿಮಾ ಸೇರಿದಂತೆ ಸುಮಾರು 500 ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಹಿರಿಯ ಹಾಸ್ಯನಟನ ಸಾವಿಗೆ ಚಿತ್ರರಂಗ ಸೇರಿದಂತೆ ವಿವಿಧ ಗಣ್ಯರು ಸಂತಾಪ

‘ಬೀರಬಲ್’ ಖ್ಯಾತಿಯ ಹಿರಿಯ ನಟ ಸತೀಂದರ್ ಕುಮಾರ್ ಖೋಸ್ಲಾ ವಿಧಿವಶ Read More »

ರಾಷ್ಟ್ರೀಯ ನ್ಯೂಸ್, ಸಿನಿಮಾ

ಬೈಕ್ ಮತ್ತು ಬಸ್ ನಡುವೆ ಅಪಘಾತ – ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಪಡುಬಿದ್ರಿ, ಸೆ. 13. ಬೈಕ್‌ ಮತ್ತು ಬಸ್‌ ನಡುವೆ ಅಪಘಾತ ಸಂಭವಿಸಿದ ಪರಿಣಾಮ ದ್ವಿಚಕ್ರ‌ ವಾಹನ ಸವಾರ ಮೃತಪಟ್ಟ ಘಟನೆ ನಂದಿಕೂರು ಮುದರಂಗಡಿ ಜಂಕ್ಷನ್ ನಲ್ಲಿ ಬುಧವಾರದಂದು ಮುಂಜಾನೆ ನಡೆದಿದೆ. ಮೃತ ಸವಾರನನ್ನು ಕಾರ್ಕಳ ಅಜೆಕಾರು ನಿವಾಸಿ ಅಶ್ವಿತ್ ಶೆಟ್ಟಿ(24) ಎಂದು ಗುರುತಿಸಲಾಗಿದೆ. ಯೂಟ್ಯೂಬ್ ವ್ಲಾಗರ್ ಹಾಗೂ ಅಜೆಕಾರಿನ ಟೆಂಪೋ ಚಾಲಕ ಮಾಲಕರೂ ಆಗಿದ್ದ ಅಶ್ವಿತ್ ಶೆಟ್ಟಿ ಇಂದು ಅಜೆಕಾರಿನಿಂದ ಬೈಕ್ ಸರ್ವೀಸ್ ಗೆಂದು ಹೋಗುತ್ತಿದ್ದರು ಎನ್ನಲಾಗಿದೆ. ಅವಿವಾಹಿತರಾಗಿದ್ದ ಮೃತ ಅಶ್ವಿತ್ ತಾಯಿ,

ಬೈಕ್ ಮತ್ತು ಬಸ್ ನಡುವೆ ಅಪಘಾತ – ಸವಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಯೋಧನ ಜೀವ ಉಳಿಸಿ ಪ್ರಾಣತೆತ್ತ ಸೇನಾ ಶ್ವಾನ ‘ಕೆಂಟ್’…!

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 13. ಉಗ್ರರ ವಿರುದ್ಧದ ಕಾರ್ಯಾಚರಣೆ ವೇಳೆ ಯೋಧನನ್ನು ರಕ್ಷಣೆ ಮಾಡಿದ 6 ವರ್ಷದ ಸೇನಾ ಶ್ವಾನ ಕೆಂಟ್, ಉಗ್ರರ ಗುಂಡೇಟಿಗೆ ಸಾವನ್ನಪ್ಪಿದ ಘಟನೆ ಜಮ್ಮು-ಕಾಶ್ಮೀರದ ರಜೌರಿಯಲ್ಲಿ ಬುಧವಾರದಂದು ನಡೆದಿದೆ. ರಜೌರಿಯ ನರ್ಲಾ ಗ್ರಾಮದಲ್ಲಿ ಯೋಧರು ಮತ್ತು ಉಗ್ರರ ನಡುವಿನ ಗುಂಡಿನ ಚಕಮಕಿ ವೇಳೆ ಸೇನಾ ತುಕ್ಕಡಿಯೊಂದನ್ನು ಮುನ್ನಡೆಸುತ್ತಿದ್ದ ಕೆಂಟ್​, ಉಗ್ರರ ಗುಂಡೇಟಿಗೆ ಬಲಿಯಾಗಿದೆ ಎನ್ನಲಾಗಿದೆ. ಕೆಂಟ್​ ಎಂಬ ಲ್ಯಾಬ್ರಡಾರ್ ತಳಿಯ ಹೆಣ್ಣು ನಾಯಿಯೊಂದು 21ನೇ ಸೇನಾ ಶ್ವಾನ ಘಟಕದಲ್ಲಿ ಸೇವೆ

ಯೋಧನ ಜೀವ ಉಳಿಸಿ ಪ್ರಾಣತೆತ್ತ ಸೇನಾ ಶ್ವಾನ ‘ಕೆಂಟ್’…! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದಕ್ಷಿಣ ಕನ್ನಡ: ಡೆಂಗ್ಯೂ ಜ್ವರಕ್ಕೆ ಯುವತಿ ಬಲಿ

(ನ್ಯೂಸ್ ಕಡಬ) newskadaba.com ವಿಟ್ಲ, ಸೆ. 13. ಯುವತಿಯೊಬ್ಬಳು ಡೆಂಗ್ಯೂ ಜ್ವರದಿಂದ ಮೃತಪಟ್ಟ ಘಟನೆ ವಿಟ್ಲದ ಪೆರುವಾಯಿ ಎಂಬಲ್ಲಿ ನಡೆದಿದೆ. ಮೃತ ಯುವತಿಯನ್ನು ಪೆರುವಾಯಿ ನಿವಾಸಿ ಆಶಾ (25) ಎಂದು ಗುರುತಿಸಲಾಗಿದೆ. ಕಳೆದ ಎರಡು ದಿನಗಳಿಂದ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಆಶಾಳನ್ನು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಯುವತಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ದಕ್ಷಿಣ ಕನ್ನಡ: ಡೆಂಗ್ಯೂ ಜ್ವರಕ್ಕೆ ಯುವತಿ ಬಲಿ Read More »

ಕರಾವಳಿ, ಕ್ರೈಮ್ ನ್ಯೂಸ್

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 27. ತನ್ನ ಮೇಲೆ ವಿನಾಕಾರಣ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಆ. 22ರಂದು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದ ಕಟ್ಟತ್ತಾರು, ನಿಡ್ಯಾಣ ನಿವಾಸಿ ಅಬ್ದುಲ್ ನಾಸಿರ್ ರವರು ಚಿಕಿತ್ಸೆ ಫಲಿಸದೇ ಭಾನುವಾರದಂದು ಕೊನೆಯುಸಿರೆಳೆದಿದ್ದಾರೆ. ಆತ್ಮಹತ್ಯೆಗೆ ಯತ್ನಿಸುವ ಮುನ್ನ ‘ನಾನು ಬೆಳ್ಳಾರೆ ಸಮೀಪದ ಅದ್ರಾಮ ಎಂಬವರ ಮನೆಯಲ್ಲಿ ಕಾರು ಚಾಲಕನಾಗಿದ್ದು, ಅದ್ರಾಮ ಮತ್ತು ಕುಟುಂಬದವರು ಸೇರಿ ನನ್ನನ್ನು ಮನೆಗೆ ಕರೆದುಕೊಂಡು ಹೋಗಿ ನನಗೆ ಹೊಡೆದಿದ್ದಾರೆ’ ಎಂದು ಆರೋಪಿಸಿ ನಾಸಿರ್ ವಿಡಿಯೋ ರೆಕಾರ್ಡ್

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top