death

ಮಂಗಳೂರು ವಿಶ್ವ ವಿದ್ಯಾಲಯದ ಮಾಜಿ ಕುಲಪತಿ ಕೆ.ಬೈರಪ್ಪ ವಿಧಿವಶ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.31. ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಉಪ ಕುಲಪತಿ ಪ್ರೊ.ಕೆ.ಬೈರಪ್ಪ(69) ಅವರು ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಮಂಗಳೂರು ವಿಶ್ವ ವಿದ್ಯಾಲಯದಲ್ಲಿ 2014 ಜೂನ್ ನಿಂದ 2019 ಜೂನ್ ವರೆಗೆ ಕುಲಪತಿಗಳಾಗಿ ಕಾರ್ಯನಿರ್ವಹಿಸಿ ಬಳಿಕ ನಿವೃತ್ತಿ ಹೊಂದಿ ಆ ಬಳಿಕ ಆದಿ ಚುಂಚನ ಗಿರಿಯಲ್ಲಿ ಕುಲಪತಿಗಳಾಗಿ ಕಾರ್ಯ ನಿರ್ವ ಹಿಸುತಿದ್ದರು ಎನ್ನಲಾಗಿದೆ. ಇನ್ನು ಬೆಳಗಾವಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದಕ್ಕೆ ತೆರಳಲು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ವೇಳೆ ತೀವ್ರ ಹೃದಯಾಘಾತಗೊಂಡು ವಿಧಿವಶರಾಗಿದ್ದಾರೆ ಎನ್ನಲಾಗಿದೆ.

ಮಂಗಳೂರು ವಿಶ್ವ ವಿದ್ಯಾಲಯದ ಮಾಜಿ ಕುಲಪತಿ ಕೆ.ಬೈರಪ್ಪ ವಿಧಿವಶ Read More »

ಕರಾವಳಿ

ಭಾರತೀಯ ನೌಕಾಪಡೆಯ ನಾವಿಕನ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com ಕೊಚ್ಚಿ, ಜು.28. ಭಾರತೀಯ ನೌಕಾಪಡೆಯ 19 ವರ್ಷದ ನಾವಿಕನೊಬ್ಬನ ಮೃತದೇಹ INS ವಿಕ್ರಾಂತ್ ಹಡಗಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕೊಚ್ಚಿಯಲ್ಲಿ ನಡೆದಿದೆ. ಪ್ರಸ್ತುತ ನೌಕೆಯನ್ನು ಕೊಚ್ಚಿ ಕರಾವಳಿಯಲ್ಲಿ ನಿಲ್ಲಿಸಲಾಗಿದೆ. ಘಟನೆಯ ಕುರಿತು ತನಿಖಾ ಮಂಡಳಿಗೆ ಆದೇಶಿಸಲಾಗಿದೆ ಎಂದು ರಕ್ಷಣಾ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ಹೇಳಿದ್ದು, ನಾವಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ನಾವಿಕ ಬಿಹಾರದ ಮುಜಾಫರ್ ಪುರದ ಮೂಲದವರಾಗಿದ್ದು, ಸಾಮಾನ್ಯ ಕೇಡರ್ ಆಗಿದ್ದು, ಕೇಂದ್ರದ ಅಗ್ನಿವೀರ್ ಯೋಜನೆಯ ಮೂಲಕ ನೇಮಕಗೊಂಡಿಲ್ಲ ಎಂದು ವರದಿಯಾಗಿದೆ.

ಭಾರತೀಯ ನೌಕಾಪಡೆಯ ನಾವಿಕನ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಡಬ: ಉಪ ವಲಯ ಅರಣ್ಯಾಧಿಕಾರಿ ಸುಭಾಷ್ ಬಿ. ನಿಧನ

(ನ್ಯೂಸ್ ಕಡಬ)newskadaba.com ಕಡಬ, ಜು.28. ಕಡಬ ತಾಲೂಕಿನ ನೆಟ್ಟಣದ ಕೇಂದ್ರೀಯ ಮರಗಳ ಸಂಗ್ರಹಾಲಯದಲ್ಲಿ ಉಪ ವಲಯ ಅರಣ್ಯಾಧಿಕಾರಿಯಾಗಿದ್ದ ಮೂಲತಃ ಕಾಸರಗೋಡು ಸಮೀಪದ ಹೊಸದುರ್ಗ ನಿವಾಸಿ ರಾಮನಾಥ ಅರಳೀಕಟ್ಟೆ ಅವರ ಪುತ್ರ ಸುಭಾಷ್ ಬಿ. (55) ಅವರು ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಜು.28ರಂದು ನಿಧನ ಹೊಂದಿದರು ಎಂದು ವರದಿಯಾಗಿದೆ. ಮೃತರು ಪತ್ನಿ, ಒರ್ವ ಪುತ್ರ, ಒರ್ವ ಪುತ್ರಿಯನ್ನು ಅಗಲಿದ್ದಾರೆ. ಸುಭಾಷ್ ಅವರು 1990ರಲ್ಲಿ ಬೆಳ್ತಂಗಡಿಯಲ್ಲಿ ಅರಣ್ಯ ವೀಕ್ಷಕರಾಗಿ ಇಲಾಖಾ ಸೇವೆಗೆ ಸೇರಿದ್ದರು. ಬೆಳ್ತಂಗಡಿಯಲ್ಲಿ ಹಲವು ವರ್ಷ ಸೇವೆ ಸಲ್ಲಿಸಿ

ಕಡಬ: ಉಪ ವಲಯ ಅರಣ್ಯಾಧಿಕಾರಿ ಸುಭಾಷ್ ಬಿ. ನಿಧನ Read More »

ಕರಾವಳಿ

ಆಕಸ್ಮಿಕವಾಗಿ ಬಾವಿಗೆ ಕಾಲುಜಾರಿ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ)newskadaba.com ಕಾಸರಗೋಡು, ಜು.28. ಆವರಣ ಇಲ್ಲದ ಬಾವಿಗೆ ಬಿದ್ದು ಪಾಕತಜ್ಞರೋರ್ವರು ಮೃತಪಟ್ಟ ಘಟನೆ ಪೆರ್ಲ ಸಮೀಪದ ಕಾಟುಕುಕ್ಕೆ ಕುಡ್ತಡ್ಕದಲ್ಲಿ ನಡೆದಿದೆ. ಮೃತಪಟ್ಟವರನ್ನು ಜನಾರ್ಧನ ನಾಯಕ್(42 ) ಎಂದು ಗುರುತಿಸಲಾಗಿದೆ. ಮನೆ ಸಮೀಪದ ಬಾವಿಗೆ ಬಿದ್ದು ಈ ದುರ್ಘಟನೆ ನಡೆದಿದ್ದು, ನೀರು ಸೇದಲು ಹೋಗಿದ್ದ ಸಂದರ್ಭದಲ್ಲಿ ಕಾಲು ಜಾರಿ ಆಕಸ್ಮಿಕ ವಾಗಿ ಬಿದ್ದಿರಬಹುದೆಂದು ಶಂಕಿಸಲಾಗಿದೆ. ತವರು ಮನೆಗೆ ತೆರಳಿದ್ದ ಪತ್ನಿ ಮತ್ತು ಮಗು ಸಂಜೆ ಮನೆಗೆ ಬಂದಾಗ ಜನಾರ್ಧನ ನಾಪತ್ತೆಯಾಗಿದ್ದು, ಪರಿಸರ ವಾಸಿಗಳಿಗೆ ಮಾಹಿತಿ ನೀಡಿದ್ದರು. ಗಮನಿಸಿದಾಗ

ಆಕಸ್ಮಿಕವಾಗಿ ಬಾವಿಗೆ ಕಾಲುಜಾರಿ ಬಿದ್ದು ವ್ಯಕ್ತಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

100 ರೂಪಾಯಿಗಾಗಿ ಮಗನನ್ನೇ ಕುಡಿದ ಮತ್ತಿನಲ್ಲಿ ಕೊಂದ ಪಾಪಿ ತಂದೆ

(ನ್ಯೂಸ್ ಕಡಬ)newskadaba.com ಸಮಸ್ತಿಪುರ, ಜು.27. ಕುಡಿದ ಅಮಲಿನಲ್ಲಿ ತಂದೆಯೊಬ್ಬ ತನ್ನ ಅಮಾಯಕ ಮಗನನ್ನೇ ಕತ್ತು ಸೀಳಿ ಕೊಂದಿದ್ದಾನೆ. ಬಿಹಾರದ ಸಮಸ್ತಿಪುರ ಜಿಲ್ಲೆಯಿಂದ ಆಘಾತಕಾರಿ ಸುದ್ದಿಯೊಂದು ಹೊರಬಂದಿದೆ. ಕೃತ್ಯ ಎಸಗಿದ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಮೊಹಿಯುದ್ದೀನ್‌ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಭಾದಯ್ಯ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಭದಯ್ಯ ಗ್ರಾಮದಲ್ಲಿ ತಂದೆ ತನ್ನ ಮೂರು ವರ್ಷದ ಅಮಾಯಕ ಮಗನ ಕುತ್ತಿಗೆಗೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದಾನೆ. ಮಗು ಗಂಭೀರವಾಗಿ ಗಾಯಗೊಂಡಿದ್ದು, ಗಲಾಟೆ ನಡೆದ ನಂತರ ಸುತ್ತಮುತ್ತಲಿನ

100 ರೂಪಾಯಿಗಾಗಿ ಮಗನನ್ನೇ ಕುಡಿದ ಮತ್ತಿನಲ್ಲಿ ಕೊಂದ ಪಾಪಿ ತಂದೆ Read More »

ರಾಷ್ಟ್ರೀಯ ನ್ಯೂಸ್

3000 ಕಾರುಗಳಿದ್ದ ಹಡಗಿದ ಆಕಸ್ಮಿಕ ಬೆಂಕಿ – ಭಾರತೀಯ ನಾವಿಕ ಮೃತ್ಯು

(ನ್ಯೂಸ್ ಕಡಬ)newskadaba.com ಅಮೆಲ್ಯಾಂಡ್‌, ಜು.27. ಉತ್ತರ ಸಮುದ್ರದಲ್ಲಿ ಸುಮಾರು 3,000 ಕಾರುಗಳನ್ನು ಸಾಗಿಸುತ್ತಿದ್ದ ಸರಕು ಸಾಗಣೆ ಹಡಗೊಂದು ಬೆಂಕಿಗೆ ಆಹುತಿಯಾಗಿದ್ದು, ಭಾರತೀಯ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ವರದಿಯ ಪ್ರಕಾರ, ಬೆಂಕಿಯನ್ನು ನಂದಿಸಲು ವಿಫಲವಾದ ಕಾರಣ 23 ಸಿಬ್ಬಂದಿಯನ್ನು ಹಡಗಿನಿಂದ ಇಳಿಸಲು ದೋಣಿಗಳು ಮತ್ತು ಹೆಲಿಕಾಪ್ಟರ್‌ಗಳನ್ನು ಸೇವೆಗೆ ಗಳುಹಿಸಲಾಯಿತು. ಬೆಂಕಿಗೆ ಕಾರಣ ಇನ್ನೂ ಪತ್ತೆಯಾಗಿಲ್ಲ ಮತ್ತು ಓರ್ವ ಭಾರತೀಯ ನಾವಿಕ ಹೇಗೆ ಮೃತಪಟ್ಟಿದ್ದಾನೆ ಎಂಬುದು ಸ್ಪಷ್ಟವಾಗಿಲ್ಲ ಎಂದು ಕರಾವಳಿ ಕಾವಲು ಪಡೆ ತಿಳಿಸಿದೆ.

3000 ಕಾರುಗಳಿದ್ದ ಹಡಗಿದ ಆಕಸ್ಮಿಕ ಬೆಂಕಿ – ಭಾರತೀಯ ನಾವಿಕ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.27. ವಿವಾಹಿತ ಮಹಿಳೆಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಐಶ್ವರ್ಯ ಎಂದು ಗುರುತಿಸಲಾಗಿದೆ. ಕಬ್ಬನ್ ಪೇಟೆಯ 2ನೇ ಮುಖ್ಯರಸ್ತೆಯಲ್ಲಿರುವ ಮನೆಯಲ್ಲಿ ಘಟನೆ ನಡೆದಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾಡಿನಲ್ಲಿ ವಿಮಾನ ಪತನ – ಪೈಲಟ್ ಗಳಿಬ್ಬರು ಮೃತ್ಯು

(ನ್ಯೂಸ್ ಕಡಬ)newskadaba.com ಜು.26. ಕೆಟ್ಟ ಶಾಖದ ಅಲೆ ಗ್ರೀಸ್ ದೇಶಕ್ಕೆ ಎದುರಾಗಿದೆ. ಇದರಿಂದಾಗಿ ಕಾಡ್ಗಿಚ್ಚು ಎಲ್ಲೆಡೆ ಹಬ್ಬಿದೆ. ಈ ಕಾಡ್ಗಿಚ್ಚನ್ನು ನಂದಿಸಲು ಬಂದಿದ್ದ ಅಗ್ನಿಶಾಮಕ ವಿಮಾನವು ಮರಕ್ಕೆ ಢಿಕ್ಕಿ ಹೊಡೆದು ಪತನಗೊಂಡು ಇಬ್ಬರು ಪೈಲಟ್ಗಳು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಬೆಂಕಿ ನಂದಿಸಲು ಗ್ರೀಕ್ ವಾಟರ್ ಬಾಂಬ್ ವಿಮಾನ ಬಂದಿತ್ತು. ಇನ್ನೂ ಬೆಂಕಿಗೆ ನೀರು ಹಾಯಿಸುತ್ತಿರುವಾಗ ವಿಮಾನವು ಮರಕ್ಕೆ ಢಿಕ್ಕಿ ಹೊಡೆದು ಪತನಗೊಂಡಿದೆ ಎಂದು ವರದಿಯಾಗಿದೆ.

ಕಾಡಿನಲ್ಲಿ ವಿಮಾನ ಪತನ – ಪೈಲಟ್ ಗಳಿಬ್ಬರು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಬೋಟ್ ನಿಂದ ಕಾಲು ಜಾರಿ ಸಮುದ್ರಕ್ಕೆ ಬಿದ್ದು ಯುವಕ ಮೃತ್ಯು

(ನ್ಯೂಸ್ ಕಡಬ)newskadaba.com ಮಂಗಳೂರು, ಜು.26. ಸ್ಟೇಟ್ ಬ್ಯಾಂಕ್ ಬಳಿಯ ಮೀನುಗಾರಿಕಾ ಬಂದರಿನಲ್ಲಿ ಕೆಲಸ ಮಾಡುತ್ತಿದ್ದ ಯುವಕ ಬೋಟ್ ನಿಂದ ಆಕಸ್ಮಿಕವಾಗಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಮಂಗಳೂರಿನಲ್ಲಿ ಸಂಭವಿಸಿದೆ. ಉಳ್ಳಾಲ ನಿವಾಸಿ ಮುಝಮ್ಮಿಲ್ ( 32) ಮೃತ ಯುವಕ ಎಂದು ತಿಳಿದುಬಂದಿದೆ. ಮುಝಮ್ಮಿಲ್ ಮೀನುಗಾರಿಕಾ ಬಂದರಿನಲ್ಲಿ ನಿಂತಿದ್ದ ವೇಳೆ ಆಕಸ್ಮಿಕವಾಗಿ ಸಮುದ್ರಕ್ಕೆ ಬಿದ್ದು ಮೃತಪಟ್ಟಿದ್ದಾರೆ. ಮೃತದೇಹವನ್ನು ಮೇಲಕ್ಕೆತ್ತಿ ರವಾನೆ ಮಾಡಲಾಗಿದೆ.

ಮಂಗಳೂರು: ಬೋಟ್ ನಿಂದ ಕಾಲು ಜಾರಿ ಸಮುದ್ರಕ್ಕೆ ಬಿದ್ದು ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮಲಗಿದ್ದ ಮಗುವಿನ ಬಾಯೊಳಗೆ ಹೋದ ಹಲ್ಲಿ – ಮಗು ಮೃತ್ಯು

(ನ್ಯೂಸ್ ಕಡಬ)newskadaba.com ಕೋಬ್ರಾ, ಜು.26. ಮನೆಯಲ್ಲಿ ಹಲ್ಲಿಗಳು ಕಾಣುವುದು ಸಾಮಾನ್ಯ. ಆದರೆ ಈ ಹಲ್ಲಿ ಯಾರನ್ನಾದರೂ ಕೊಲ್ಲುತ್ತದೆ ಎಂದರೆ ನಂಬಲೂ ಸಹ ವಿಚಿತ್ರ ಎನಿಸುತ್ತದೆ. ಇಂತಹ ಘಟನೆಯೊಂದು ಛತ್ತೀಸ್‌ಗಢದ ಕೋಬ್ರಾದಲ್ಲಿ ನಡೆದಿದ್ದು, ಮಗುವಿನ ಬಾಯಿಗೆ ಹಲ್ಲಿ ನುಗ್ಗಿ 3 ವರ್ಷದ ಮಗು ಮೃತಪಟ್ಟಿರುವ ಘಟನೆ ನಡೆದಿದೆ. ರಾಜ್‌ ಕುಮಾರ್ ಚಂಡೆ ಎಂಬುವರ ಕುಟುಂಬವು ನಾಗಿನಬಂಡಾ ಪ್ರದೇಶದಲ್ಲಿ ವಾಸಿಸುತ್ತಿದ್ದು, ಇವರ ಮೂರನೇ ಮಗ ಜಗದೀಶ್ನೇ ಮೃತ ದುರ್ದೈವಿಯಾಗಿದ್ದಾನೆ. ಘಟನೆಯ ವೇಳೆ ಎರಡೂವರೆ ವರ್ಷದ ಜಗದೀಶ್ ಮಲಗಿದ್ದ ಎನ್ನಲಾಗಿದ್ದು, ಈ

ಮಲಗಿದ್ದ ಮಗುವಿನ ಬಾಯೊಳಗೆ ಹೋದ ಹಲ್ಲಿ – ಮಗು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top