death

ನೆಲ್ಯಾಡಿ: ಕೆಟ್ಟುನಿಂತಿದ್ದ ಕ್ಯಾಂಟರ್ ಗೆ ಬೈಕ್ ಢಿಕ್ಕಿ – ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜು. 25. ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಗೆ ಹಿಂದಿನಿಂದಿ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸಣ್ಣಂಪಾಡಿ ಎಂಬಲ್ಲಿ ನಡೆದಿದೆ. ಮೃತ ಬೈಕ್ ಸವಾರನನ್ನು ನೆಲ್ಯಾಡಿ ಮೊರಂಕಳ ನಿವಾಸಿ ಇಕ್ಬಾಲ್ ಎಂದು ಗುರುತಿಸಲಾಗಿದೆ. ಮೃತ ಇಕ್ಬಾಲ್ ಉಪ್ಪಿನಂಗಡಿಯಿಂದ ನೆಲ್ಯಾಡಿ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಸಣ್ಣಂಪಾಡಿ ಸಮೀಪ ಕೆಟ್ಟು ನಿಂತಿದ್ದ ಪಾರ್ಸೆಲ್ ಸಾಗಾಟದ ವಾಹನಕ್ಕೆ ಹಿಂದಿನಿಂದ ಢಿಕ್ಕಿ […]

ನೆಲ್ಯಾಡಿ: ಕೆಟ್ಟುನಿಂತಿದ್ದ ಕ್ಯಾಂಟರ್ ಗೆ ಬೈಕ್ ಢಿಕ್ಕಿ – ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕೃಷಿ ಹೊಂಡದಲ್ಲಿ ಈಜಲು ಮೃತಪಟ್ಟ ಯುವತಿ

(ನ್ಯೂಸ್ ಕಡಬ)newskadaba.com ಕೇರಳ, ಜು.25. ಕೃಷಿ ಹೊಂಡದಲ್ಲಿ ಈಜಲು ಹೋಗಿ ಯುವತಿಯೊಬ್ಬಳು ದುರಂತವಾಗಿ ಮೃತಪಟ್ಟ ಘಟನೆ ಜರುಗಿದೆ. 19 ವರ್ಷದ ಸೋನಾ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಈಕೆ ಮನೆಯ ಸಮೀಪವೇ ಇರುವ ಕೃಷಿ ಉದ್ದೇಶಕ್ಕಾಗಿ ಮಣ್ಣನ್ನು ಅಗೆದು ನಿರ್ಮಾಣ ಮಾಡಿದ್ದ ಹೊಂಡದಲ್ಲಿ ಈ ಘಟನೆ ನಡೆದಿದೆ. ತಂದೆಯ ಜತೆ ಈಜುವಾಗ ಮಣ್ಣಿನಲ್ಲಿ ಸಿಲುಕಿ, ಅದರಿಂದ ಬಿಡಿಸಿಕೊಳ್ಳಲಾಗದೇ ಸೋನಾ ಕೊನೆಯುಸಿರೆಳೆದಿದ್ದಾಳೆ. ಇದಕ್ಕೂ ಮುನ್ನ ಸ್ಥಳೀಯರಿಗೆ ಈ ಮಾಹಿತಿ ತಿಳಿದು ಸೋನಾಳನ್ನು ಕಾಪಾಡಲು ಸ್ಥಳಕ್ಕೆ ದೌಡಾಯಿಸಿದರೂ ಸಹ ಆಕೆಯನ್ನು

ಕೃಷಿ ಹೊಂಡದಲ್ಲಿ ಈಜಲು ಮೃತಪಟ್ಟ ಯುವತಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಟ್ಟಿಗೆಗಾಗಿ ಗುಡ್ಡೆಗೆ ಹೋದ ವ್ಯಕ್ತಿ ಹೆಜ್ಜೇನು ಕಡಿದು ಮೃತ್ಯು

(ನ್ಯೂಸ್ ಕಡಬ)newskadaba.com  ಪುತ್ತೂರು, ಜು.25. ಕಟ್ಟಿಗೆಗಾಗಿ ಮನೆಯ ಪಕ್ಕದ ಗುಡ್ಡೆಗೆ ಹೋಗಿದ್ದ ವೇಳೆ ಹೇಜ್ಜೇನು ಕಡಿದು ಗಂಭೀರ ಗಾಯಗೊಂಡಿದ್ದ ಒಳಮೊಗ್ರು ಗ್ರಾಮದ ಕೈಕಾರ ನಿವಾಸಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೇ ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತಪಟ್ಟವರನ್ನು ಗುರುವ(55) ಎಂದು ಗುರುತಿಸಲಾಗಿದೆ. ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಕಟ್ಟಿಗೆಗಾಗಿ ಗುಡ್ಡೆಗೆ ಹೋದ ವ್ಯಕ್ತಿ ಹೆಜ್ಜೇನು ಕಡಿದು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಜಿಲ್ಲಾ ನೋಂದಣಾಧಿಕಾರಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಜು. 24. ಜಿಲ್ಲಾ ನೋಂದಾಣಿಧಿಕಾರಿಯೋರ್ವರು ವಾಸಸ್ಥಳದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವ ಕುರಿತು ಕಾಸರೋಡಿನಿಂದ ವರದಿಯಾಗಿದೆ. ಮೃತರನ್ನು ಟಿ .ಇ ಮುಹಮ್ಮದ್ ಅಶ್ರಫ್ (55) ಎಂದು ಗುರುತಿಸಲಾಗಿದೆ. ಮೂಲತಃ ಮಲಪ್ಪುರಂ ನಿವಾಸಿಯಾಗಿರುವ ಇವರು ಕಾಸರಗೋಡು ಜಿಲ್ಲಾ ನೋಂದಣಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ನಗರ ಹೊರವಲಯದ ಹೋಟೆಲ್ ವೊಂದರಲ್ಲಿ ರೂಂ ಪಡೆದು ವಾಸ್ತವ್ಯ ಹೂಡಿದ್ದರು.   ಬೆಳಗ್ಗೆ ಅಶ್ರಫ್ ರವರು ರೂಂ ನಿಂದ ಹೊರಬರದೇ ಇದ್ದುದರಿಂದ ಸಂಶಯಗೊಂಡು ಅವರ ಮೊಬೈಲ್ ಗೆ ಕರೆಮಾಡಿದಾಗ ತೆಗೆಯದೆ

ಜಿಲ್ಲಾ ನೋಂದಣಾಧಿಕಾರಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಯೂಟ್ಯೂಬ್ ವಿಡಿಯೋ ಅನುಕರಣೆಯಿಂದ ಪ್ರಾಣ ಕಳೆದುಕೊಂಡ ಬಾಲಕ

(ನ್ಯೂಸ್ ಕಡಬ)newskadaba.com ತೆಲಂಗಾಣ, ಜು.24. 11 ವರ್ಷದ ಬಾಲಕನೊಬ್ಬ ಯೂಟ್ಯೂಬ್ ವಿಡಿಯೋವನ್ನು ಅನುಕರಣೆ ಮಾಡಲು ಹೋಗಿ ಜೀವ ಕಳೆದುಕೊಂಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಮೃತ ಬಾಲಕನನ್ನು 6ನೇ ತರಗತಿಯ ವಿದ್ಯಾರ್ಥಿ ಉದಯ್ (11) ಎಂದು ಗುರುತಿಸಲಾಗಿದೆ. ರಾತ್ರಿ ಊಟ ಮುಗಿಸಿ ತನ್ನ ಕೋಣೆಗೆ ಹೋದವನು ಬಾಗಿಲು ಚಿಲಕ ಹಾಕಿಕೊಂಡು ಮೊಬೈಲ್​ ನೋಡಲು ಪ್ರಾರಂಭಿಸಿದ್ದಾನೆ. ಉದಯ್ ಪೋಷಕರು ಎಷ್ಟೇ ಕರೆದರೂ ಉತ್ತರ ನೀಡಲಿಲ್ಲ, ಕರೆ ಮಾಡಿದರೂ ಪ್ರತಿಕ್ರಿಯಿಸಲಿಲ್ಲ, ನಂತರ ಅವರು ಬಾಗಿಲು ಒಡೆದು ನೋಡಿದಾಗ ಆತ ನೇಣುಬಿಗಿದ ಸ್ಥಿತಿಯಲ್ಲಿ

ಯೂಟ್ಯೂಬ್ ವಿಡಿಯೋ ಅನುಕರಣೆಯಿಂದ ಪ್ರಾಣ ಕಳೆದುಕೊಂಡ ಬಾಲಕ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪ್ರೇಮ ವೈಫಲ್ಯಕ್ಕೆ ಮತ್ತೊಂದು ಬಲಿ – ನೇಣು ಬಿಗಿದು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.24. ಪ್ರೇಮ ವೈಫಲ್ಯದಿಂದ ಮನನೊಂದ ಯುವಕನೊಬ್ಬ ರೂಮಿನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಲ್ಲಿ ಪ್ರೇಮ ವೈಫಲ್ಯದಿಂದಾಗಿ ಮನನೊಂದ ಯುವಕನೊಬ್ಬ ರೂಮಿನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತನನ್ನು ಕೊಳ್ಳೆಗಾಲ ಮೂಲದ ನವೀನ್ (27) ಎಂದು ಗುರುತಿಸಲಾಗಿದೆ. ಘಟನಾ ಸಂಬಂಧ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಪ್ರೇಮ ವೈಫಲ್ಯಕ್ಕೆ ಮತ್ತೊಂದು ಬಲಿ – ನೇಣು ಬಿಗಿದು ಯುವಕ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ರಸ್ತೆ ಅಪಘಾತ ➤ ಯುವಕ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಪುತ್ತೂರು, ಜು.24. ನಿಯಂತ್ರಣ ತಪ್ಪಿ ಬೈಕ್ ಅಪಘಾತವಾಗಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಪುತ್ತೂರು ರಸ್ತೆಯ ಕೆಮ್ಮಾಯಿ ಪೆಟ್ರೋಲ್ ಬಂಕ್ ರಾತ್ರಿ ಸಂಭವಿಸಿದೆ. ಮೃತ ಬೈಕ್ ಸವಾರನನ್ನು ಉಪ್ಪಿನಂಗಡಿ ಸೇಡಿಯಾಪು ಬಳಿಯ ನಿವಾಸಿ ಚೈತ್ರೇಶ್ ಯಾನೆ ಚರಣ್ (19) ಎಂದು ಗುರುತಿಸಲಾಗಿದೆ. ಟರ್ನ್ ಮಾಡುವ ವೇಳೆ ನಿಯಂತ್ರಣ ತಪ್ಪಿ ಅಪಘಾತವಾಗಿದೆ ಎನ್ನಲಾಗಿದೆ. ಚೈತ್ರೇಶ್ ಬೈಕ್ ಖರೀದಿಸಿ ಕೇವಲ ಒಂದು ತಿಂಗಳಷ್ಟೇ ಆಗಿದ್ದು, ಸ್ಥಳಕ್ಕೆ ಪುತ್ತೂರು ಸಂಚಾರ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.  

ಪುತ್ತೂರು: ರಸ್ತೆ ಅಪಘಾತ ➤ ಯುವಕ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಅಪರಿಚಿತ ಕಾರು ಢಿಕ್ಕಿ – ಪಾದಚಾರಿ ಮೃತ್ಯು ➤ ಚಾಲಕ ನಾಪತ್ತೆ

(ನ್ಯೂಸ್ ಕಡಬ)newskadaba.com ಉಡುಪಿ, ಜು.24. ವಾಹನವೊಂದು ಪಾದಚಾರಿಗೆ ಢಿಕ್ಕಿ ಹೊಡೆದು ಪರಾರಿಯಾದ ಘಟನೆ ಉಡುಪಿಯಲ್ಲಿ ವರದಿಯಾಗಿದೆ. ವ್ಯಕ್ತಿಯನ್ನು ಸ್ಥಳೀಯ ನಿವಾಸಿ ರಮೇಶ್ ಪೂಜಾರಿ(60) ಎಂದು ಗುರುತಿಸಲಾಗಿದೆ. ಅಪಘಾತಕ್ಕೆ ಒಳಗಾದ ವ್ಯಕ್ತಿಯ ಹೊಟ್ಟೆ ಮತ್ತು ಕೈಗಳು ಛಿದ್ರವಾಗಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಅಪರಿಚಿತ ಕಾರು ಢಿಕ್ಕಿ – ಪಾದಚಾರಿ ಮೃತ್ಯು ➤ ಚಾಲಕ ನಾಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವೇಟ್ ಲಿಫ್ಟಿಂಗ್ ಮಾಡುತ್ತಲೇ ಪ್ರಾಣಬಿಟ್ಟ ಜನಪ್ರಿಯ ‘ಜಿಮ್ ಟ್ರೈನರ್’- ವಿಡಿಯೋ ವೈರಲ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.22. ಜಿಮ್ ಟ್ರೈನರ್, ವಿಶ್ವವಿಖ್ಯಾತ ಬಾಡಿ ಬಿಲ್ಡರ್ ಒಬ್ಬರು ವೇಟ್ ಲಿಫ್ಟಿಂಗ್ ಮಾಡುವಾಗ ಮೃತಪಟ್ಟ ಘಟನೆ ನಡೆದಿದೆ. ಇಂಡೋನೇಷಿಯಾದ ಬಾಡಿಬಿಲ್ಡರ್ ಮತ್ತು ಅಂತರಾಷ್ಟ್ರೀಯವಾಗಿ ತಿಳಿದಿರುವ ಫಿಟ್ನೆಸ್ ಪ್ರಭಾವಿ ಜಸ್ಟಿನ್ ವಿಕ್ಕಿ ಜಿಮ್ ಮಾಡುವಾಗ ನಿಧನರಾಗಿದ್ದಾರೆ. 33 ವರ್ಷ ವಯಸ್ಸಿನ ಈ ತರಬೇತುಕಾರ, ಸುಮಾರು 400 ಪೌಂಡ್ (210 ಕೆಜಿ) ತೂಕವನ್ನ ಎತ್ತುವ ಪ್ರಕ್ರಿಯೆಯಲ್ಲಿ ಆತನ ತನ್ನ ಕುತ್ತಿಗೆ ಮುರಿದು ಮೃತಪಟ್ಟಿದ್ದಾರೆ. ಈ ಘಟನೆ ಜುಲೈ 15ರಂದು ನಡೆದಿದ್ದು, ಸಧ್ಯ ಘಟನೆಯ ವಿಡಿಯೋ ವೈರಲ್

ವೇಟ್ ಲಿಫ್ಟಿಂಗ್ ಮಾಡುತ್ತಲೇ ಪ್ರಾಣಬಿಟ್ಟ ಜನಪ್ರಿಯ ‘ಜಿಮ್ ಟ್ರೈನರ್’- ವಿಡಿಯೋ ವೈರಲ್ Read More »

ಕರ್ನಾಟಕ

ಇನೋವಾ ಕಾರು ಮತ್ತು ಲಾರಿ ನಡುವೆ ಅಪಘಾತ ! ➤ ನಾಲ್ವರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಹಾಸನ, ಜು.22. ಟಿಪ್ಪರ್ ವಾಹನ ಢಿಕ್ಕಿಯಾಗಿ ಇನೋವಾ ಕಾರಿನಲ್ಲಿದ್ದ ಮೂವರ ಸ್ಥಿತಿ ಗಂಭೀರವಾಗಿದ್ದು, ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಆಲೂರು ತಾಲೂಕಿನ ಈಶ್ವರಹಳ್ಳಿ ಕೂಡಿಗೆ ಬಳಿ ನಡೆದಿದೆ. ಕುಪ್ಪಳ್ಳಿ ಗ್ರಾಮದ ಚೇತನ್, ಗುಡ್ಡೇನಹಳ್ಳಿ ಗ್ರಾಮದ ಅಶೋಕ್, ತಟ್ಟೆಕೆರೆ ಗ್ರಾಮದ ಪುರುಷೋತ್ತಮ ಹಾಗೂ ಆಲೂರು ತಾಲ್ಲೂಕಿನ ಚಿಗಳೂರು ಗ್ರಾಮದ ದಿನೇಶ್ ಮೃತರು ಎಂದು ಗುರುತಿಸಲಾಗಿದೆ. ಸದ್ಯ ಮೃತದೇಹಗಳನ್ನು ಆಲೂರಿನ ತಾಲ್ಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಇನೋವಾ ಕಾರಿನಲ್ಲಿ ಮಂಗಳೂರು ಕಡೆಗೆ ತೆರಳುತ್ತಿದ್ದಾಗ

ಇನೋವಾ ಕಾರು ಮತ್ತು ಲಾರಿ ನಡುವೆ ಅಪಘಾತ ! ➤ ನಾಲ್ವರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top