death

ಪಿಯುಸಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಕಾರ್ಕಳ, ಜು. 19. ವಿದ್ಯಾರ್ಥಿಯೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದಲ್ಲಿ ವರದಿಯಾಗಿದೆ. ಪ್ರಥಮ ಪಿಯುಸಿ ವಿದ್ಯಾರ್ಥಿ ಕೌಶಿಕ್(17) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಕೌಶಿಕ್ ಬಜಗೋಳಿಯಲ್ಲಿ ಪ್ರಥಮ ಪಿಯುಸಿ ಕಲಿಯುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ ಎಂದು ವರದಿಯಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.  

ಪಿಯುಸಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ವಿವಾಹಿತ ಯುವತಿ ನೇಣು ಬಿಗಿದು ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಕಾಸರಗೋಡು, ಜು. 19. ವಿವಾಹಿತ ಯುವತಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬದಿಯಡ್ಕ ಠಾಣಾ ವ್ಯಾಪ್ತಿಯ ಬೇಳದಲ್ಲಿ ಸಂಭವಿಸಿದೆ. ಮೃತರನ್ನು ದಾಮೋದರ ಪುತ್ರಿ ಅಶ್ವತಿ(25) ಎಂದು ಗುರುತಿಸಲಾಗಿದೆ. ಅಶ್ವಥಿಯವರ ಮೃತದೇಹ ಮನೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಈ ಕೃತ್ಯ ನಡೆದಿದೆ. ತಾಯಿ ಸುಜಾತರವರು ಮನೆ ಸಮೀಪದ ಬೀಡಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಅವರು ಮಧ್ಯಾಹ್ನ ಮನೆಗೆ ಬಂದಾಗ ಕೃತ್ಯ ಬೆಳಕಿಗೆ ಬಂದಿದೆ. ಬಾಗಿಲು ಬಡಿದರೂ ತೆರೆಯದಿದ್ದುದರಿಂದ

ವಿವಾಹಿತ ಯುವತಿ ನೇಣು ಬಿಗಿದು ಆತ್ಮಹತ್ಯೆ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಗನ ಕಾಲೇಜು ಶುಲ್ಕದ ಆಸೆಗಾಗಿ ಪ್ರಾಣಬಿಟ್ಟ ತಾಯಿ !

(ನ್ಯೂಸ್ ಕಡಬ)newskadaba.com ಚೆನ್ನೈ, ಜು.18. ತಾನು ಸತ್ತರೆ ಮಗನ ಕಾಲೇಜು ಶುಲ್ಕವನ್ನು ಸರ್ಕಾರ ಭರಿಸುತ್ತದೆ ಎಂದು ಮಹಿಳೆಯೊಬ್ಬರು ಚಲಿಸುತ್ತಿರುವ ಬಸ್ಸಿನ ಮುಂದೆ ಹಾರಿ ಮೃತಪಟ್ಟಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಪಾಪತಿ(45) ಎಂದು ಗುರುತಿಸಲಾಗಿದೆ. ಮಹಿಳೆಯು ಕಳೆದ 15 ವರ್ಷದಿಂದ ಗಂಡನಿಂದ ದೂರವಾಗಿ ಕಷ್ಟಪಟ್ಟು ಮಗನನ್ನು ಸಾಕಿ ಬೆಳೆಸಿದ್ದು, ಸೇಲಂನ ಕಲೆಕ್ಟರ್ ಕಛೇರಿಯಲ್ಲಿ ಕಳೆದ ಕೆಲ ಸಮಯದಿಂದ ಸ್ವಚ್ಛತೆಯ ಕೆಲಸವನ್ನು ಮಾಡುತ್ತಿದ್ದರು. ಮಗನ ಕಾಲೇಜು ಶುಲ್ಕವನ್ನು ಪಾವತಿಸಲು ಸಾಧ್ಯವಾಗದ ಕಾರಣ ಪಾಪತಿ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.

ಮಗನ ಕಾಲೇಜು ಶುಲ್ಕದ ಆಸೆಗಾಗಿ ಪ್ರಾಣಬಿಟ್ಟ ತಾಯಿ ! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕ್ರಿಕೆಟ್ ಮೈದಾನದಲ್ಲಿ ಹೃದಯಾಘಾತದಿಂದ ಯುವಕ ಮೃತ್ಯು

(ನ್ಯೂಸ್ ಕಡಬ)newskadaba.com ಗುಜರಾತ್‌, ಜು.18. 20 ವರ್ಷದ ಯುವಕನೊರ್ವ ಕ್ರಿಕೆಟ್ ಮೈದಾನದಲ್ಲಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಗುಜರಾತ್ ನಲ್ಲಿ ಸಂಭವಿಸಿದೆ. ಯುವಕನೋರ್ವ ಹೃದಯ ಸ್ತಂಭನದಿಂದ ಮೃತಪಟ್ಟಿದ್ದಾನೆ ಎಂದು ವರದಿ ತಿಳಿಸಿದೆ. ಮಾಹಿತಿಯ ಪ್ರಕಾರ, ಪರ್ವ ಸೋನಿ ಅವರು ಅರವಳ್ಳಿಯ ಮೊಡಸದಲ್ಲಿರುವ ಗೋವರ್ಧನ್ ಸೊಸೈಟಿಯಲ್ಲಿರುವ ಶ್ರೈನ್ ಅಪಾರ್ಟ್‌ಮೆಂಟ್‌ ನಲ್ಲಿ ವಾಸಿಸುತ್ತಿದ್ದರು. ಕ್ರಿಕೆಟ್ ಮೈದಾನದಲ್ಲಿ ಆಡುತ್ತಿದ್ದಾಗ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾನೆ.  

ಕ್ರಿಕೆಟ್ ಮೈದಾನದಲ್ಲಿ ಹೃದಯಾಘಾತದಿಂದ ಯುವಕ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Death, deadbody, Waterfall

ಸುರತ್ಕಲ್: ಮೀನು ಹಿಡಿಯಲು ನೀರಿಗಿಳಿದ ವ್ಯಕ್ತಿ ಕೆರೆಗೆ ಬಿದ್ದು ಮೃತ್ಯು

(ನ್ಯೂಸ್ ಕಡಬ)newskadaba.com ಸುರತ್ಕಲ್, ಜು.15. ಮೀನು ಹಿಡಿಯುತ್ತಿದ್ದ ಸಂದರ್ಭದಲ್ಲಿ ನೀರಲ್ಲಿ ಮುಳುಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಸುರತ್ಕಲ್ ನಲ್ಲಿ ವರದಿಯಾಗಿದೆ. ಮೃತಪಟ್ಟವರನ್ನು ಪೋರ್ಕೊಡಿ ನಿವಾಸಿ ಪೂವಪ್ಪ(40) ಎಂದು ಗುರುತಿಸಲಾಗಿದೆ. ತೋಕೂರು ಬಳಿಯ ಜಾರಂದಾಯ ದೈವಸ್ಥಾನದ ಗುತ್ತಿನ ಮನೆಯ ಸಮೀಪದ ಕೆರೆಗೆ ಅಣ್ಣ ತಮ್ಮಂದಿರು ಮೀನು ಹಿಡಿಯಲೆಂದು ಇಳಿದಿದ್ದು, ಕೆಸರಿನಲ್ಲಿ ಹೂತು ಹೋದ ಕಾರಣ ಮೃತಪಟ್ಟಿದ್ದಾರೆ ಎನ್ನಲಾಗಿದೆ.  

ಸುರತ್ಕಲ್: ಮೀನು ಹಿಡಿಯಲು ನೀರಿಗಿಳಿದ ವ್ಯಕ್ತಿ ಕೆರೆಗೆ ಬಿದ್ದು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ಯುವಕ ಮೃತ್ಯು..!

(ನ್ಯೂಸ್ ಕಡಬ)newskadaba.com ಕಾರ್ಕಳ, ಜು.15. ಕೂಲಿ ಕಾರ್ಮಿಕ ಯುವಕನೋರ್ವ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ಕಾರ್ಕಳ ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ಸೌರವ್ ಕುಮಾರ್ (20) ಎಂದು ಗುರುತಿಸಲಾಗಿದೆ. ಕೆಲ ವರ್ಷಗಳ ಹಿಂದೆ ದಿನಗೂಲಿ ಕಾರ್ಮಿಕನಾಗಿ ನಿಟ್ಟೆಗೆ ಬಂದಿದ್ದು, ನಿಟ್ಟೆ ಕಾಲೇಜಿನ ಎದುರಿನ ಬಾಡಿಗೆ ಕೊಠಡಿಯಲ್ಲಿ ವಾಸವಾಗಿದ್ದರು. ಈತ ಹಾಗೂ ಈತನ ಸ್ನೇಹಿತರು ವಾಸಿಸುತ್ತಿದ್ದ ಕಟ್ಟಡದ ಆಸುಪಾಸಿನಲ್ಲಿ ಮಂಗಗಳ ಕಾಟ ಹೆಚ್ಚಾಗಿತ್ತು. ಕೆಲವು ವಸ್ತುಗಳು ಕಾಣಿಸುತ್ತಿರಲಿಲ್ಲ. ಹೀಗಾಗಿ, ಯುವಕರು ಕಾಣೆಯಾದ ವಸ್ತುಗಳನ್ನು ಹುಡುಕಲು ಟೆರೇಸ್

ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ ಠಾಣಾ ಹೆಡ್ ಕಾನ್ಸ್ಟೇಬಲ್ ಕೃಷ್ಣಪ್ಪ ನಾಯ್ಕ್ ನಿಧನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜು. 12. ಅನಾರೋಗ್ಯದಿಂದಾಗಿ ಉಪ್ಪಿನಂಗಡಿ ಠಾಣಾ ಹೆಡ್ ಕಾನ್ಸ್ಟೇಬಲ್ ಕೃಷ್ಣಪ್ಪ ನಾಯ್ಕ್ ಜೆ ರವರು ಬುಧವಾರದಂದು ನಿಧನರಾದರು.   ಮೂಲತಃ ಮಾಣಿ ಸಮೀಪದ ನೇರಳಕಟ್ಟೆ ನಿವಾಸಿಯಾಗಿರುವ ಕೃಷ್ಣಪ್ಪ ರವರು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿ ಸುಮಾರು 6 ವರ್ಷಗಳಿಂದ ಕರ್ತವ್ಯ ನಿರ್ವಹಿಸಿಕೊಂಡಿದ್ದರು. ಅನಾರೋಗ್ಯದಿಂದಾಗಿ ಕಳೆದ ಒಂದು ವರ್ಷದಿಂದ ರಜೆಯಲ್ಲಿದ್ದ ಅವರು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ಸುಮಾರು 26 ವರುಷಗಳ ಕಾಲ ಕರ್ತವ್ಯ ನಿರ್ವಹಿಸಿದ್ದ ಕೃಷ್ಣಪ್ಪ

ಉಪ್ಪಿನಂಗಡಿ ಠಾಣಾ ಹೆಡ್ ಕಾನ್ಸ್ಟೇಬಲ್ ಕೃಷ್ಣಪ್ಪ ನಾಯ್ಕ್ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್

ನಂಜನಗೂಡು ದೇವನೂರು ಮಠದ ಸ್ವಾಮೀಜಿ ನದಿಗೆ ಹಾರಿ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಮೈಸೂರು, ಜು. 10. ಇಲ್ಲಿನ ನಂಜನಗೂಡು ದೇವನೂರು ಮಠದ ಸ್ವಾಮೀಜಿ ಶಿಷ್ಯರಾಗಿದ್ದ ಶಿವಪ್ಪ ದೇವರು (60) ಟಿ.ನರಸೀಪುರ ತಾಲೂಕಿನ ಮೂಡುಕೊತೊರೆಯ ಬಳಿ ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ. ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಇವರು ಬಳಿಕ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ‌. ಮಠ ಹಾಗೂ ಮಠದ ಭಕ್ತರಲ್ಲಿ ಉತ್ತಮ ಹೆಸರು ಹೊಂದಿದ್ದ ಸ್ವಾಮೀಜಿ ಅವರು ಮೂಲತಃ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಕಲಿವೂರು ಗ್ರಾಮದವರು. ಕಳೆದ 45 ವರ್ಷಗಳಿಂದ ದೇವನೂರು

ನಂಜನಗೂಡು ದೇವನೂರು ಮಠದ ಸ್ವಾಮೀಜಿ ನದಿಗೆ ಹಾರಿ ಆತ್ಮಹತ್ಯೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಹೊಳೆನೀರಿಗೆ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಜು. 10. ಹೊಳೆನೀರಿಗೆ ಬಿದ್ದು ಕೃಷಿಕರೋರ್ವರು ಮೃತಪಟ್ಟ ಘಟನೆ ಕಡಬ ಸಮೀಪದ ಇಚ್ಲಂಪಾಡಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಇಚ್ಲಂಪಾಡಿ ಗ್ರಾಮದ ಕುಡಾಲ ನಿವಾಸಿ ಕೃಷ್ಣಪ್ಪ ಗೌಡ(ಕಿಟ್ಟಣ್ಣ) ಎಂದು ಗುರುತಿಸಲಾಗಿದೆ. ಇವರು ಜು. 09ರಂದು ಮಧ್ಯಾಹ್ನ ಇಚ್ಲಂಪಾಡಿಯ ಹೊಳೆಬದಿಗೆ ಹೋದವರು ಸಂಜೆಯಾದರೂ ಮನೆಗೆ ಬಂದಿರಲಿಲ್ಲ. ಮನೆಯವರು ಹೊಳೆಯಲ್ಲಿ ಹುಡುಕಾಟ ನಡೆಸಿದಾಗ ಅವರ ಚಪ್ಪಲಿ ಪತ್ತೆಯಾಗಿತ್ತು. ಈ ಹಿನ್ನೆಲೆ ರಾತ್ರಿ ತನಕ ಹೊಳೆ ಬದಿ ಹುಡುಕಾಟ ನಡೆಸಿದ್ದರೂ ಯಾವುದೇ ಸುಳಿವು ದೊರೆತಿರಲಿಲ್ಲ. ಇದೀಗ ಜು.10ರಂದು

ಕಡಬ: ಹೊಳೆನೀರಿಗೆ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಉಳ್ಳಾಲ: ನೀರಿಗೆ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಉಳ್ಳಾಲ, ಜು. 05. ಮನೆ ಸಂಪರ್ಕದ ಮೋರಿ ದಾಟುತ್ತಿದ್ದ ಸಂದರ್ಭ ಆಯತಪ್ಪಿ ನೀರಿಗೆ ಬಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಉಳ್ಳಾಲ ತಾಲೂಕಿನ ಸೋಮೇಶ್ವರ ಪುರಸಭಾ ವ್ಯಾಪ್ತಿಯ‌ ಪಿಲಾರು ಎಂಬಲ್ಲಿ ನಡೆದಿದೆ. ಮೃತರನ್ನು ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ಪಂಜಂದಾಯ ದೈವಸ್ಥಾನದ ಬಳಿಯ ಬಾಡಿಗೆ ಮನೆ ನಿವಾಸಿ ಸುರೇಶ್ ಗಟ್ಟಿ‌(52) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಪೈಂಟರ್ ಆಗಿದ್ದ ಇವರು, ಮಂಗಳವಾರದಂದು ಸಂಜೆ ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಮನೆ ಸಂಪರ್ಕದ ಮೋರಿ ದಾಟುತ್ತಿದ್ದಾಗ

ಉಳ್ಳಾಲ: ನೀರಿಗೆ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top