death

ಪುತ್ತೂರು: ರಬ್ಬರ್ ಟ್ಯಾಪಿಂಗ್‌ಗೆ ತೆರಳಿದ್ದ ವೇಳೆ ಕಾಡಾನೆ ದಾಳಿ: ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಎ. 29:  ಪುತ್ತೂರು : ಇಲ್ಲಿನ ಕೊಳ್ತಿಗೆ ಗ್ರಾಮದ ಕಣಿಯಾರು ಮಲೆ ಅರ್ತಿಯಡ್ಕ ಸಿಆರ್‌ಸಿ ಕಾಲನಿ ಬಳಿ ಕಾಡಾನೆ ದಾಳಿಗೆ ತುತ್ತಾಗಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ. ಪೆರ್ಲಂಪಾಡಿ ಸಮೀಪದ ಅರ್ತಿಯಡ್ಕ ಎಂಬಲ್ಲಿನ ನಿವಾಸಿ ಮೃತಪಟ್ಟ ಮಹಿಳೆ. ಮಂಗಳವಾರ ಮುಂಜಾನೆ ಮಹಿಳೆ ಸಹಿತ ಮೂವರು ರಬ್ಬರ್‌ ಟ್ಯಾಪಿಂಗ್‌ಗೆ ಮಾಡಲು ತೆರಳಿದ್ದರು. ಈ ಸಂದರ್ಭದಲ್ಲಿ ಕಣಿಯಾರು ಮಲೆ ಎಂಬಲ್ಲಿ ಅವರನ್ನು ಆನೆ ಅಟ್ಟಿಸಿಕೊಂಡು ಬಂದಿತ್ತು. ಈ ವೇಳೆ ಉಳಿದ ಇಬ್ಬರು ಓಡಿ ತಪ್ಪಿಸಿಕೊಂಡಿದ್ದರು. […]

ಪುತ್ತೂರು: ರಬ್ಬರ್ ಟ್ಯಾಪಿಂಗ್‌ಗೆ ತೆರಳಿದ್ದ ವೇಳೆ ಕಾಡಾನೆ ದಾಳಿ: ಮಹಿಳೆ ಮೃತ್ಯು Read More »

ಕರಾವಳಿ

ಮಗುವನ್ನು ಉಳಿಸಲು ಹೋಗಿ ಮೂವರು ಮುಳುಗಿ ಸಾವು

(ನ್ಯೂಸ್ ಕಡಬ) newskadaba.com , ಏ.03 ಚಿಕ್ಕಬಳ್ಳಾಪುರ: ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಪ್ರವಾಸಕ್ಕೆಂದು ತೆರಳಿದ್ದ ಮೂವರು ನೀರುಪಾಲಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಶ್ರೀನಿವಾಸಸಾಗರ ಜಲಾಶಯದಲ್ಲಿ ನಡೆದಿದೆ. ಮೃತರನ್ನು ಚಿಕ್ಕಬಳ್ಳಾಪುರ ನಿವಾಸಿಗಳಾದ ಫರೀನಾ ಬೇಗಂ , ಬಶೀರ್ ಮತ್ತು ಬೆಂಗಳೂರಿನ ಮುನಿರೆಡ್ಡಿಪಾಳ್ಯ ನಿವಾಸಿ ಇಮ್ರಾನ್ ಎಂದು ಗುರುತಿಸಲಾಗಿದೆ. ನೀರಿಗೆ ಬಿದ್ದ ಮಗುವನ್ನು ರಕ್ಷಿಸಲು ಹೋಗಿ ಮೂವರು ಮೃತಪಟ್ಟಿದ್ದಾರೆ. ಅದೃಷ್ಟವಶಾತ್ ಮಗುವನ್ನು ರಕ್ಷಿಸಲಾಗಿದ್ದು ನೀರಿನಲ್ಲಿ ಮುಳುಗಿದ್ದ ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಫರೀನಾ

ಮಗುವನ್ನು ಉಳಿಸಲು ಹೋಗಿ ಮೂವರು ಮುಳುಗಿ ಸಾವು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೈಕ್‌ನಲ್ಲಿ ಬೆನ್ನಟ್ಟಿ ಗುಂಡಿಕ್ಕಿ ಶಿವಸೇನಾ ನಾಯಕನ ಹತ್ಯೆ

(ನ್ಯೂಸ್ ಕಡಬ) newskadaba.com ಮಾ. 14 : ಮೊಗಾದಲ್ಲಿ ಶಿವಸೇನೆಯ ಜಿಲ್ಲಾಧ್ಯಕ್ಷನನ್ನು ಬೈಕ್‌ನಲ್ಲಿ ಬೆನ್ನಟ್ಟಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ದಾಳಿಯಲ್ಲಿ ಒಬ್ಬ ಬಾಲಕ ಗಾಯಗೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಗುರುವಾರ ರಾತ್ರಿ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಮಂಗತ್ ರೈ ಮಂಗಾ ಹಾಲು ಖರೀದಿಸುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ರಾತ್ರಿ 10 ಗಂಟೆ ಸುಮಾರಿಗೆ ಮೂವರು ಅಪರಿಚಿತ ವ್ಯಕ್ತಿಗಳು ಆತನ ಮೇಲೆ ಗುಂಡು ಹಾರಿಸಿದರು ಎನ್ನಲಾಗಿದೆ, ಆದರೆ ಗುಂಡು ಮಂಗಾನ ಕೈಯಿಂದ ತಪ್ಪಿ 12 ವರ್ಷದ ಬಾಲಕನಿಗೆ

ಬೈಕ್‌ನಲ್ಲಿ ಬೆನ್ನಟ್ಟಿ ಗುಂಡಿಕ್ಕಿ ಶಿವಸೇನಾ ನಾಯಕನ ಹತ್ಯೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕೊಡಗು : 7ನೇ ತರಗತಿ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು

(ನ್ಯೂಸ್ ಕಡಬ) newskadaba.com ಮಾ. 14: ಇಲ್ಲಿನ ವಸತಿ ಶಾಲೆಯ ಏಳನೇ ತರಗತಿ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ. ಪೂರ್ವಿಕಾ (13) ಸಾವನ್ನಪ್ಪಿದ ವಿದ್ಯಾರ್ಥಿನಿ. ಕೊಡಗು ಜಿಲ್ಲೆ, ಸೋಮವಾರಪೇಟೆ ತಾಲ್ಲೂಕಿನ, ಕ್ಯಾತೆ ಗ್ರಾಮದ ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ ಏಳನೇ ತರಗತಿ ಓದುತ್ತಿದ್ದ ಪೂರ್ವಿಕಾ ನನಗೆ ಸುಸ್ತಾಗುತ್ತಿದೆ ಎಂದು ಹೇಳಿದ್ದಳು. ಕೂಡಲೇ ಶಿಕ್ಷಕರು ಆಕೆಗೆ ಕೊಡ್ಲಿಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ನಂತರ ಹಾಸನದ ಖಾಸಗಿ ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಸಾವನ್ನಪ್ಪಿದ್ದಾಳೆ.

ಕೊಡಗು : 7ನೇ ತರಗತಿ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉತ್ತರ ಪ್ರದೇಶ: ವಿಷಪೂರಿತ ಇಂಜೆಕ್ಷನ್ ನೀಡಿ ಬಿಜೆಪಿ ನಾಯಕನ ಹತ್ಯೆ

(ನ್ಯೂಸ್ ಕಡಬ) newskadaba.com ಮಾ. 12 ಸಂಭಾಲ್: ವಿಷಪೂರಿತ ಇಂಜೆಕ್ಷನ್ ನೀಡಿ ಬಿಜೆಪಿ ನಾಯಕರೊಬ್ಬರನ್ನು ಅಪರಿಚಿತ ವ್ಯಕ್ತಿಗಳು ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ  ಸಂಭಾಲ್ ನಲ್ಲಿ ನಡೆದಿದೆ. ದಫ್ತಾರಾ ಗ್ರಾಮದ ಗುಲ್ಫಾಮ್ ಸಿಂಗ್ ಯಾದವ್ (60) ಮೃತಪಟ್ಟವರು. ಯಾದವ್ ತಮ್ಮ ಜಮೀನಿನಲ್ಲಿ ಕುಳಿತಿದ್ದ ವೇಳೆ ಮೂವರು ವೇಳೆ ಮೂವರು ದುಷ್ಕರ್ಮಿಗಳು ಬೈಕ್ ನಲ್ಲಿ ಬಂದು ವಿಷಪೂರಿತ ಇಂಜೆಕ್ಷನ್ ಚುಚ್ಚಿ ಬಳಿಕ ಅಲ್ಲಿಂದ ಪರಾರಿಯಾಗಿದ್ದಾರೆ. ವಿಷ ಮೈಯಲ್ಲಿ ಹರಡಿ ತೀವ್ರ ಅಸ್ವಸ್ಥರಾಗಿದ್ದ ಯಾದವ್ ಅವರನ್ನು ಚಿಕಿತ್ಸೆಗಾಗಿ ಅಲಿಗಢ

ಉತ್ತರ ಪ್ರದೇಶ: ವಿಷಪೂರಿತ ಇಂಜೆಕ್ಷನ್ ನೀಡಿ ಬಿಜೆಪಿ ನಾಯಕನ ಹತ್ಯೆ Read More »

ಕ್ರೈಮ್ ನ್ಯೂಸ್

ಬೆಳ್ತಂಗಡಿ: ನದಿಗೆ ಬಿದ್ದು ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಫೆ. 24. ಬೆಳ್ತಂಗಡಿ: ಬಾಲಕನೋರ್ವ ಆಕಸ್ಮಿಕವಾಗಿ ಫಲ್ಗುಣಿ ನದಿಗೆ ಬಿದ್ದು ಮೃತಪಟ್ಟ ಘಟನೆ ಆರಂಬೋಡಿ ಗ್ರಾಮದಲ್ಲಿ ರವಿವಾರ ಸಂಜೆ ನಡೆದಿದೆ. ಉಪ್ಪಿನಂಗಡಿಯ ರಾಮಕುಂಜ ಸಮೀಪದ ಆತೂರು ನಿವಾಸಿ ವಸಂತ ಮತ್ತು ವಿಜಯ ದಂಪತಿಯ ಪುತ್ರ ಪವನ್ (16) ಮೃತ ಬಾಲಕ. ಈತ ಆರಂಬೋಡಿ ಗ್ರಾಮದಲ್ಲಿರುವ ಸೂರಂಟೆ ಎಂಬಲ್ಲಿ ಅಜ್ಜಿಯ ಮನೆಯಲ್ಲಿದ್ದು ಸಿದ್ಧಕಟ್ಟೆ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಬೆಳ್ತಂಗಡಿ: ನದಿಗೆ ಬಿದ್ದು ಬಾಲಕ ಮೃತ್ಯು Read More »

ಕರಾವಳಿ

ಭೀಕರ ಅಪಘಾತ: ಕುಂಭ ಮೇಳದಿಂದ ಹಿಂದಿರುಗುತ್ತಿದ್ದ ಬೆಳಗಾವಿಯ ನಾಲ್ವರು ಸೇರಿ ಆರು ಜನ ಸಾವು

(ನ್ಯೂಸ್ ಕಡಬ) newskadaba.com , ಫೆ.07. ಇಂದೋರ್: ಮಧ್ಯಪ್ರದೇಶದ ಇಂದೋರ್ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ದ್ವಿಚಕ್ರ ವಾಹನ, ಖಾಸಗಿ ಮಿನಿ ಬಸ್ ಮತ್ತು ಟ್ರೇಲರ್ ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಳಗಾವಿ ನಾಲ್ವರು ಸೇರಿದಂತೆ ಆರು ಜನ ಸಾವನ್ನಪ್ಪಿದ್ದಾರೆ ಮತ್ತು 16 ಜನ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮ್ಹೌ ತಹಸಿಲ್‌ನ ಮಾನ್ಪುರ್ ಪ್ರದೇಶದಲ್ಲಿ ಬೈಕ್ ಮತ್ತು ಮಿನಿ ಬಸ್ ಇಳಿಜಾರಿನಲ್ಲಿ ಚಲಿಸುತ್ತಿದ್ದ ಟ್ರೇಲರ್ ಟ್ರಕ್‌ಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಭೀಕರ ಅಪಘಾತ: ಕುಂಭ ಮೇಳದಿಂದ ಹಿಂದಿರುಗುತ್ತಿದ್ದ ಬೆಳಗಾವಿಯ ನಾಲ್ವರು ಸೇರಿ ಆರು ಜನ ಸಾವು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಸೌದಿಯಲ್ಲಿ ವಾಹನ ಚಲಾಯಿಸುವಾಗ ಹೃದಯಾಘಾತವಾಗಿ ಕ್ರಿಕೆಟಿಗ ಮನ್ಸೂರ್ ಮೂಲ್ಕಿ ನಿಧನ

(ನ್ಯೂಸ್ ಕಡಬ) newskadaba.com ಜ.28: ಬೆಂಗಳೂರು: ಮೂಲ್ಕಿ ಮೂಲದ ಕ್ರಿಕೆಟಿಗ ಮನ್ಸೂರ್ ಮೂಲ್ಕಿ (41) ಅವರು ವಾಹನ ಚಲಾಯಿಸುತ್ತಿದ್ದಾಗಲೇ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿರುವ ಘಟನೆ ಸೌದಿ ಅರೇಬಿಯದ ರಿಯಾದ್‌ನಲ್ಲಿ ನಡೆದಿದೆ. ಸೌದಿ ಕಾಲಮಾನ ಸಂಜೆ 4 ಗಂಟೆಗೆ ಮನ್ಸೂರ್ ಅವರು ಕೊನೆಯುಸಿರೆಳೆದಿದ್ದಾರೆ. ಅವರು ತಾಯಿ, ಪತ್ನಿ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. ಮನ್ಸೂರ್ ಮೂಲ್ಕಿ ಅವರು ಮೂಲತಃ ಮೂಲ್ಕಿ ಬಪ್ಪ ಬ್ಯಾರಿ ದೊಡ್ಡಮನೆಯ ಕುಟುಂಬದವರು. ಮೂಲ್ಕಿ ಕಾರ್ನಾಡಿನ 7-ಸ್ಟಾರ್ ಕ್ರಿಕೆಟ್ ತಂಡದ ಹಿರಿಯ ಆಟಗಾರ ಹಾಗೂ ಮಾನೀಷ್

ಮಂಗಳೂರು: ಸೌದಿಯಲ್ಲಿ ವಾಹನ ಚಲಾಯಿಸುವಾಗ ಹೃದಯಾಘಾತವಾಗಿ ಕ್ರಿಕೆಟಿಗ ಮನ್ಸೂರ್ ಮೂಲ್ಕಿ ನಿಧನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸರಿಗಮಪ ಖ್ಯಾತಿಯ ಮಂಜಮ್ಮ ವಿಧಿವಶ

(ನ್ಯೂಸ್ ಕಡಬ) newskadaba.com ಜ.28: ಸರಿಗಮಪ ಖ್ಯಾತಿಯ ಮಂಜಮ್ಮ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ.  ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಡಿವಿ ಹಳ್ಳಿ ಗ್ರಾಮದ ಮಂಜಮ್ಮ ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಮಂಜಮ್ಮ ಅವರನ್ನ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ತಡರಾತ್ರಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮಂಜಮ್ಮಳನ್ನ ಕಳೆದುಕೊಂಡ ಕುಟುಂಬಸ್ಥರು ಕಂಗಾಲಾಗಿದ್ದಾರೆ.  

ಸರಿಗಮಪ ಖ್ಯಾತಿಯ ಮಂಜಮ್ಮ ವಿಧಿವಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೈಸೂರು: ಹೃದಯಾಘಾತದಿಂದ SSLC ವಿದ್ಯಾರ್ಥಿನಿ ಸಾವು

(ನ್ಯೂಸ್ ಕಡಬ) newskadaba.com ಜ.27  ಮೈಸೂರು: ಹೃದಯಾಘಾತದಿಂದ ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನ ಕೆಲ್ಲೂರು ಗ್ರಾಮದಲ್ಲಿ ಸೋಮವಾರ ಸಂಭವಿಸಿದೆ. ನಾಗರಾಜ್, ವಸಂತ ದಂಪತಿ ಪುತ್ರಿ ದೀಪಿಕಾ (15) ಮೃತ ವಿದ್ಯಾರ್ಥಿನಿ. ರಾವಂದೂರು ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಎಸ್‌ಎಸ್ ಎಲ್‌ಸಿ ವ್ಯಾಸಂಗ ಮಾಡುತ್ತಿದ್ದ ದೀಪಿಕಾ ಭಾನುವಾರ ಇದ್ದಕ್ಕಿದ್ದಂತೆ ಅಸ್ವಸ್ಥಳಾಗಿದ್ದಳು. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಅಷ್ಟರಲ್ಲಾಗಲೇ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.

ಮೈಸೂರು: ಹೃದಯಾಘಾತದಿಂದ SSLC ವಿದ್ಯಾರ್ಥಿನಿ ಸಾವು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top