death

ಲಾಟರಿಯಲ್ಲಿ 80 ಲಕ್ಷ ಗೆದ್ದ ಮರುದಿನ ಯುವಕ ನಿಗೂಢವಾಗಿ ಮೃತ್ಯು

(ನ್ಯೂಸ್ ಕಡಬ)newskadaba.com ಪಾಂಗೋಡು, ಏ.04. ಕೇರಳ ರಾಜ್ಯ ಲಾಟರಿ ಡ್ರಾದಲ್ಲಿ 80 ಲಕ್ಷ ರೂ. ಗೆದ್ದಿದ್ದ ವ್ಯಕ್ತಿಯೋರ್ವ ಸ್ನೇಹಿತನ ಮನೆಯಲ್ಲಿ ಮದ್ಯದ ಪಾರ್ಟಿಯ ಮಧ್ಯೆ ಆಳವಾದ ಹೊಂಡಕ್ಕೆ ಬಿದ್ದು ನಿಗೂಢವಾಗಿ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ತಿರುವನಂತಪುರಂನ ಪಂಗೋಡು ಮೂಲದ ಸಜೀವ್ (35) ಎಂದು ಗುರುತಿಸಲಾಗಿದೆ. ಸಜೀವ್ ಕಳೆದ ತಿಂಗಳು ಲಾಟರಿ ಗೆದ್ದಿದ್ದರು. ಕೆಲ ದಿನಗಳ ಹಿಂದಷ್ಟೇ ಅವರ ಬ್ಯಾಂಕ್ ಖಾತೆಗೆ ಬಹುಮಾನದ ಹಣ ಜಮೆಯಾಗಿದೆ. ಇದರ ಬೆನ್ನಲ್ಲೇ ಏಪ್ರಿಲ್ 1ರಂದು ರಾತ್ರಿ 9 ಗಂಟೆ ಸುಮಾರಿಗೆ […]

ಲಾಟರಿಯಲ್ಲಿ 80 ಲಕ್ಷ ಗೆದ್ದ ಮರುದಿನ ಯುವಕ ನಿಗೂಢವಾಗಿ ಮೃತ್ಯು Read More »

ಕ್ರೈಮ್ ನ್ಯೂಸ್

ಬಂಟ್ವಾಳ: ಶಂಕಿತ ರೇಬಿಸ್ ಗೆ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಏ. 04. ಶಂಕಿತ ರೇಬಿಸ್‌ ಗೆ ಯುವಕನೋರ್ವ ಬಲಿಯಾಗಿರುವ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಮೃತ ಯುವಕನನ್ನು ಅಶೋಕ ಹೆಗ್ಡೆ ಎಂಬವರ ಪುತ್ರ ಪ್ರಶಾಂತ ಹೆಗ್ಡೆ(31) ಎಂದು ಗುರುತಿಸಲಾಗಿದೆ. ಈತನಿಗೆ ಮೂರು ತಿಂಗಳ ಹಿಂದೆ ಅವರ ಮನೆಯ ಸಾಕು ನಾಯಿ ಕಚ್ಚಿದ್ದು, ಬಳಿಕ ನಾಯಿ ಮೃತಪಟ್ಟಿತ್ತು. ಆದರೆ ಪ್ರಶಾಂತ್ ಅವರು ನಾಯಿ ಕಚ್ಚಿರುವುದಕ್ಕೆ ಸೂಕ್ತ ಚಿಕಿತ್ಸೆ ಪಡೆದಿರಲಿಲ್ಲ ಎನ್ನಲಾಗಿದೆ. ಬಳಿಕ ತೀವ್ರ ಜ್ವರದಿಂದ ಬಳಲುತ್ತಿದ್ದ ಈತ, ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗೆ

ಬಂಟ್ವಾಳ: ಶಂಕಿತ ರೇಬಿಸ್ ಗೆ ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಹಿಟ್ & ರನ್ – ರಸ್ತೆ ಬದಿ ಮಲಗಿದ್ದ ವ್ಯಕ್ತಿ ಮೃತ್ಯು ➤ ಆರೋಪಿ ವಶಕ್ಕೆ..!

(ನ್ಯೂಸ್ ಕಡಬ) newskadaba.com ಗುಂಡ್ಯ, ಏ. 04. ರಾಷ್ಟ್ರೀಯ ಹೆದ್ದಾರಿ ಬೆಂಗಳೂರು-ಮಂಗಳೂರು ಮಧ್ಯೆ ಗುಂಡ್ಯ ಎಂಬಲ್ಲಿ ರಸ್ತೆಯ ಬದಿಯಲ್ಲಿ ಮಲಗಿದ ವ್ಯಕ್ತಿಯ ಮೇಲೆ ಲಾರಿಯೊಂದು ಚಲಾಯಿಸಿ ಸಾರಿ ಸಮೇತ ಚಾಲಕ ಪರಾರಿಯಾದ ಕೆಲವೇ ಕ್ಷಣದಲ್ಲಿ ಚಾಲಕ ಹಾಗೂ ಲಾರಿಯನ್ನು ವಶಕ್ಕೆ ಪಡೆದ ಘಟನೆ ವರದಿಯಾಗಿದೆ. ಘಟನೆಯಲ್ಲಿ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೃತಪಟ್ಟ ವ್ಯಕ್ತಿಯನ್ನು ಕೇರಳದ ಪೊನ್ನಪ್ಪನ್(50) ಎಂದು ಗುರುತಿಸಲಾಗಿದೆ. ಇವರು ಕಳೆದ 15 ವರ್ಷದಿಂದ ಗುಂಡ್ಯ ಪರಿಸರದಲ್ಲಿ ಒಬ್ಬಂಟಿಯಾಗಿ ಜೀವಿಸುತ್ತಾ, ಸಣ್ಣಪುಟ್ಟ ಕೆಲಸಗಳನ್ನು ಮಾಡಿಕೊಂಡು

ಹಿಟ್ & ರನ್ – ರಸ್ತೆ ಬದಿ ಮಲಗಿದ್ದ ವ್ಯಕ್ತಿ ಮೃತ್ಯು ➤ ಆರೋಪಿ ವಶಕ್ಕೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ವಿಟ್ಲ: ಮಹಿಳೆ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ವಿಟ್ಲ, ಏ.04. ಮಹಿಳೆಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಟ್ಲ ಎಂಬಲ್ಲಿ ನಡೆದಿದೆ. ಯಮುನಾ ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಈ ಬಗ್ಗೆ ಅವರ ಪುತ್ರ ಉಮೇಶ್ ಪೂಜಾರಿ ವಿಟ್ಲ ಪೊಲೀಸರಿಗೆ ದೂರು ನೀಡಿದ್ದು, ತನ್ನ ತಾಯಿಗೆ ಸಕ್ಕರೆ ಕಾಯಿಲೆ, ರಕ್ತದ ಒತ್ತಡವಿದ್ದು, ಔಷಧ ತೆಗೆದುಕೊಂಡರೂ ಗುಣವಾಗದ ಹಿನ್ನಲೆಯಲ್ಲಿ ಜಿಗುಪ್ಸೆಗೊಂಡು ಮನೆಯ ಊಟದ ಕೋಣೆಯ ಛಾವಣಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.

ವಿಟ್ಲ: ಮಹಿಳೆ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಚಲಿಸುತ್ತಿದ್ದ ರೈಲಿನಲ್ಲಿ ಸಹ ಪ್ರಯಾಣಿಕರಿಗೆ ಬೆಂಕಿ ➤ ಮೂವರು ಮೃತ್ಯು ಹಲವರು ಗಂಭೀರ..!

(ನ್ಯೂಸ್ ಕಡಬ)newskadaba.com ಕೇರಳ, ಏ.03. ಚಲಿಸುತ್ತಿದ್ದ ಎಕ್ಸ್ ಪ್ರೆಸ್ ರೈಲಿನಲ್ಲಿ ಅಪರಿಚಿತ ವ್ಯಕ್ತಿಯೋರ್ವ ಸಹ ಪ್ರಯಾಣಿಕರಿಗೆ ಬೆಂಕಿ ಹಚ್ಚಿರುವ ಘಟನೆ ಕೇರಳದ ರೈಲು ನಿಲ್ದಾಣದ ಬಳಿ ನಡೆದಿದೆ. ತಡರಾತ್ರಿ ಕೇರಳದ ಕಣ್ಣೂರಿಗೆ ಹೊರಟಿದ್ದ ಎಕ್ಸ್ ಪ್ರೆಸ್ ರೈಲಿನಲ್ಲಿ ಈ ಘಟನೆ ನಡೆದಿದ್ದು, ಎರಡು ವರ್ಷದ ಮಗು ಸೇರಿದಂತೆ ಮೂವರು ಪ್ರಯಾಣಿಕರು ರೈಲ್ವೆ ಹಳಿಯಲ್ಲಿ ಮೃತಪಟ್ಟಿದ್ದು, ಎಂಟು ಮಂದಿಗೆ ಸುಟ್ಟ ಗಾಯಗಳಾಗಿವೆ.  

ಚಲಿಸುತ್ತಿದ್ದ ರೈಲಿನಲ್ಲಿ ಸಹ ಪ್ರಯಾಣಿಕರಿಗೆ ಬೆಂಕಿ ➤ ಮೂವರು ಮೃತ್ಯು ಹಲವರು ಗಂಭೀರ..! Read More »

ರಾಷ್ಟ್ರೀಯ ನ್ಯೂಸ್

ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತ್ಯು

(ನ್ಯೂಸ್ ಕಡಬ)newskadaba.com ಚಿಕ್ಕಬಳ್ಳಾಪುರ, ಏ.03. ಬೆಂಗಳೂರಿನ‌ ಮೂವರು ವಿದ್ಯಾರ್ಥಿಗಳು ಚಿಕ್ಕಬಳ್ಳಾಪುರ ತಾಲ್ಲೂಕಿನ ಶ್ರೀನಿವಾಸ ಸಾಗರ ಜಲಾಶಯದಲ್ಲಿ ಮುಳುಗಿ ಮೃತಪಟ್ಟ ದುರಂತ ಘಟನೆ ನಡೆದಿದೆ. ಇಮ್ರಾನ್ ಖಾನ್ (20), ರಾಧಿಕಾ(19) ಮತ್ತು ಪೂಜಾ(19)ಮೃತರು ಎಂದು ಗುರುತಿಸಲಾಗಿದೆ. ಬೆಂಗಳೂರಿನ ಕಾಲೇಜೊಂದರಲ್ಲಿ ಡಿ-ಫಾರ್ಮ್ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿಗಳು ಚಿಕ್ಕಬಳ್ಳಾಪುರ ತಾಲ್ಲೂಕಿನ ಶ್ರೀನಿವಾಸ ಸಾಗರ ಜಲಾಶಯಕ್ಕೆ ತೆರಳಿದ್ದು ಮೂವರು ಈಜಲು ಹೋಗಿದ್ದರು. ಈ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ಕುರಿತಂತೆ ಮಾಹಿತಿ ಪಡೆದುಕೊಂಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ

ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾರು ಮತ್ತು ಟ್ಯಾಂಕರ್ ನಡುವೆ ಢಿಕ್ಕಿ ➤ ನವ ದಂಪತಿ ಮೃತ್ಯು..!

(ನ್ಯೂಸ್ ಕಡಬ)newskadaba.com ಬೆಳಗಾವಿ, ಏ.03. ಕಾರು ಹಾಗೂ ಟ್ಯಾಂಕರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನವ ದಂಪತಿ ಮೃತಪಟ್ಟ ಘಟನೆ ಮೂಡಲಗಿ ತಾಲೂಕಿನ ಹಳ್ಳೂರು ಗ್ರಾಮದ ನಿಪ್ಪಾಣಿ- ಮುದೋಳ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಕಳೆದ 10 ದಿನಗಳ ಹಿಂದಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಇಂದ್ರಜಿತ್​ ಮೋಹನ್ ಡಮ್ಮಣಗಿ(27) ಹಾಗೂ ಕಲ್ಯಾಣಿ ಇಂದ್ರಜಿತ್ ಡಮ್ಮಣಗಿ(24) ಮೃತರು ಎಂದು ತಿಳಿದುಬಂದಿದೆ. ಮಹಾರಾಷ್ಟ್ರದ ಮೂಲದ ದಂಪತಿ ಬಾಗಲಕೋಟೆ ಜಿಲ್ಲೆಯ ಸುಪ್ರಸಿದ್ಧ ಬಾದಾಮಿ ಬನಶಂಕರಿ ದೇವಿ ದರ್ಶನ ಪಡೆದು ಮರಳಿ‌ ಮನೆಗೆ ತೆರಳುವಾಗ

ಕಾರು ಮತ್ತು ಟ್ಯಾಂಕರ್ ನಡುವೆ ಢಿಕ್ಕಿ ➤ ನವ ದಂಪತಿ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪಡಿತರ ವಿತರಣೆ ವೇಳೆ ತಳ್ಳಾಟ,ನೂಕಾಟ   ➤ಕಾಲ್ತುಳಿತದಿಂದ 11  ಮಂದಿ ಮೃತ್ಯು…!

(ನ್ಯೂಸ್ ಕಡಬ)Newskadaba.com ಬೆಂಗಳೂರು, ಏ.01 ಪಾಕಿಸ್ಥಾನದ ಬಂದರು ನಗರಿ ಕರಾಚಿಯಲ್ಲಿ ರಮ್ಜಾನ್‌ ಆಹಾರ ವಿತರಣ ಕೇಂದ್ರದಲ್ಲಿ ಸಂಭವಿಸಿದ ಕಾಲ್ತುಳಿತದಿಂದ ಮಹಿಳೆಯರು ಮತ್ತು ಮಕ್ಕಳು ಸಹಿತ 11 ಮಂದಿ ಬಲಿಯಾಗಿದ್ದಾರೆ. ಆಹಾರ ವಿತರಣೆ ನಡೆಯುತ್ತಿದ್ದ ಪ್ರದೇಶದಲ್ಲಿ ವಿದ್ಯುತ್‌ಪ್ರವಾಹವಿದ್ದ ತಂತಿಯೊಂದು ಬಿದ್ದಿತ್ತು.ಕೆಲವರು ಗೊತ್ತಿಲ್ಲದೇ ಅದರ ಮೇಲೆ ಕಾಲಿಟ್ಟಿದ್ದಾರೆ.ಅದು ಶಾಕ್‌ ಹೊಡೆದಾಗ ಭಯದಿಂದ ಒಬ್ಬರನ್ನೊಬ್ಬರು ನೂಕಿ ಮುಂದೆ ಓಡಲು ಆರಂಭಿಸಿದ್ದಾರೆ. ಈ ವೇಳೆ ಉಂಟಾದ ತಳ್ಳಾಟದಿಂದ ಈ ದುರಂತ ಸಂಭವಿಸಿದೆ.                

ಪಡಿತರ ವಿತರಣೆ ವೇಳೆ ತಳ್ಳಾಟ,ನೂಕಾಟ   ➤ಕಾಲ್ತುಳಿತದಿಂದ 11  ಮಂದಿ ಮೃತ್ಯು…! Read More »

ಕರ್ನಾಟಕ

ಬೈಕ್​​ ಪಾರ್ಕಿಂಗ್ ವಿಚಾರದಲ್ಲಿ ಗಲಾಟೆ…!   ➤ಸ್ನೇಹಿತನನ್ನೇ ಕೊಂದು ದುಷ್ಕರ್ಮಿಗಳು ಪರಾರಿ  

(ನ್ಯೂಸ್ ಕಡಬ)Newskadaba.com ಬೆಂಗಳೂರು, ಏ.01 ಪಶ್ಚಿಮ ಬಂಗಾಳದಿಂದ ಬೆಂಗಳೂರಿಗೆ ಕೆಲಸಕ್ಕೆ ಬಂದಿದ್ದವರಿಗೆ ಉಡುಪಿ ಮೂಲದ ಸ್ನೇಹಿತ ಕೂಡಾ ಜೊತೆಯಾಗಿದ್ದ. ಹೀಗೆ ಬೆಂಗಳೂರಲ್ಲಿ ಬದುಕು ಕಟ್ಟಿಕೊಂಡು, ಮೂವರು ಒಂದೇ ಮನೆಯಲ್ಲಿ ವಾಸ ಮಾಡುತ್ತಿದ್ದರು. ಆದರೆ ಒಟ್ಟಿಗೆ ಇದ್ದ ಮೂವರ ಮಧ್ಯೆ ಬೈಕ್ ಪಾರ್ಕಿಂಗ್  ವಿಚಾರಕ್ಕೆ ದೊಡ್ಡ ಗಲಾಟೆಯಾಗಿ ಕೊಲೆಯೇ ನಡೆದು ಹೋಗಿದೆ. ಜಗಳದಲ್ಲಿ ಉಡುಪಿ ಮೂಲದ ಜನಾರ್ದನ ಭಟ್ (29)ಎಂಬಾತನ ಕೊಲೆಯಾಗಿದ್ದಾನೆ.ಜನಾರ್ದನ ಭಟ್ ಪಶ್ಚಿಮ ಬಂಗಾಳ ಮೂಲದ ರಿಜ್ವಾನ್ ಮತ್ತು ಸುಲೇಮಾನ್ ಎಂಬ ಯುವಕರ ಜೊತೆಯಾಗಿದ್ದ. ಕಂಪನಿಯಲ್ಲಿ ಟಿವಿ

ಬೈಕ್​​ ಪಾರ್ಕಿಂಗ್ ವಿಚಾರದಲ್ಲಿ ಗಲಾಟೆ…!   ➤ಸ್ನೇಹಿತನನ್ನೇ ಕೊಂದು ದುಷ್ಕರ್ಮಿಗಳು ಪರಾರಿ   Read More »

ಕರ್ನಾಟಕ

ನದಿಯಲ್ಲಿ ಮುಳುಗಿ ಭಾರತೀಯರು ಸಹಿತ 8 ಮಂದಿ ಮೃತ್ಯು

(ನ್ಯೂಸ್ ಕಡಬ)newskadaba.com ಕೆನಡಾ, ಏ.01. ಗಡಿ ಮೂಲಕ ಕಾನೂನು ಬಾಹಿರವಾಗಿ ಅಮೆರಿಕಾಕ್ಕೆ ಪ್ರವೇಶಿಸಲು ಯತ್ನಿಸುತ್ತಿದ್ದಾಗ ಸೇಂಟ್ ಲಾರೆನ್ಸ್ ನದಿಯಲ್ಲಿ ಮುಳುಗಿದ್ದವರ ಪೈಕಿ ಇಬ್ಬರ ಮೃತದೇಹಗಳು ಪತ್ತೆಯಾಗಿದ್ದು, ಈ ಮೂಲಕ ಮೃತಪಟ್ಟವರ ಒಟ್ಟು ಸಂಖ್ಯೆ ಎಂಟಕ್ಕೇರಿದೆ ಎಂದು ವರದಿ ತಿಳಿಸಿದೆ. ಮೃತರ ಪೈಕಿ ಭಾರತೀಯ ಕುಟುಂಬವೊಂದರ ಸದಸ್ಯರೂ ಸೇರಿದ್ದಾರೆ ಎಂದು ಕೆನಡಾ ಪೊಲೀಸರು ತಿಳಿಸಿದ್ದಾರೆ. ಮೃತದೇಹಗಳು ಆಕ್ವಾಸ್ನ್ ಬಳಿಯ ನದಿ ದಂಡೆಯ ಮರಳಿನಲ್ಲಿ ಹೂತು ಹೋದ ಸ್ಥಿತಿಯಲ್ಲಿ ಪತ್ತೆಯಾಗಿದ್ದವು. ಈ ಪೈಕಿ ಮತ್ತೊಬ್ಬ ವ್ಯಕ್ತಿ ಇನ್ನೂ ಕಾಣೆಯಾಗಿದ್ದಾನೆ ಎಂದು

ನದಿಯಲ್ಲಿ ಮುಳುಗಿ ಭಾರತೀಯರು ಸಹಿತ 8 ಮಂದಿ ಮೃತ್ಯು Read More »

ರಾಷ್ಟ್ರೀಯ ನ್ಯೂಸ್
Scroll to Top