death

ಕಂದಕಕ್ಕೆ ಉರುಳಿ ಬಿದ್ದ ಬಸ್ ➤ 17 ಜನರು ಮೃತ್ಯು, ಹಲವರಿಗೆ ಗಾಯ 

(ನ್ಯೂಸ್ ಕಡಬ) newskadaba.com ಬಾಂಗ್ಲದೇಶ, ಮಾ. 21. ಬಸ್ ಕಂದಕಕ್ಕೆ ಬಿದ್ದ ಪರಿಣಾಮ 17 ಜನರು ಮೃತಪಟ್ಟು, 30 ಜನರು ಗಾಯಗೊಂಡಿರುವ ಘಟನೆ ಬಾಂಗ್ಲಾದೇಶದ ಮದರಿಪುರದಲ್ಲಿ ನಡೆದಿದೆ. ಢಾಕಾಗೆ ತೆರಳುತ್ತಿದ್ದ ಬಸ್ ಮದರಿಪುರದ ಎಕ್ಸ್ ಪ್ರೆಸ್ ವೇನಲ್ಲಿ ಕಮರಿಗೆ ಬಿದ್ದಿದ್ದು, ಪರಿಣಾಮ 17 ಜನರು ಮೃತಪಟ್ಟಿದ್ದಾರೆ ಮತ್ತು 30 ಜನರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಗಾಯಗೊಂಡವರನ್ನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಮದರಿಪುರ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಮಸೂದ್ ಆಲಂ ತಿಳಿಸಿದ್ದಾರೆ.

ಕಂದಕಕ್ಕೆ ಉರುಳಿ ಬಿದ್ದ ಬಸ್ ➤ 17 ಜನರು ಮೃತ್ಯು, ಹಲವರಿಗೆ ಗಾಯ  Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಾಕುವಿನಿಂದ ಇರಿದು ಪತ್ನಿಯನ್ನು ಕೊಂದ ಪಾಪಿ ಪತಿ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 21. ಅಕ್ರಮ ಸಂಬಂಧದ ಹಿನ್ನೆಲೆ ಪತಿಯೇ ಪತ್ನಿಯನ್ನು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿ ಮಗುವಿನ ಮೇಲೂ ಹಲ್ಲೆ ನಡೆಸಿರುವ ದಾರುಣ ಘಟನೆ ಹೆಣ್ಣೂರು ಠಾಣಾ ವ್ಯಾಪ್ತಿಯ ಸಾರಾಯಿ ಪಾಳ್ಯದಲ್ಲಿ ನಡೆದಿದೆ. ಕೊಲೆಯಾದವರನ್ನು ಸಾರಾಯಿ ಪಾಳ್ಯದ ಆಫ್ಜಲ್ ಲೇಔಟ್ ನ ತಬ್ಸಿಮ್ ಬೇಬಿ (32) ಎಂದು ಗುರುತಿಸಲಾಗಿದೆ. ಹಲ್ಲೆಗೊಳಗಾಗಿರುವ ಆಕೆಯ ಎರಡೂವರೆ ವರ್ಷದ ಮಗು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದೆ. ಕೃತ್ಯ ನಡೆಸಿದ ಆರೋಪಿ ಪತಿ ಕೋಲ್ಕತ್ತಾ

ಚಾಕುವಿನಿಂದ ಇರಿದು ಪತ್ನಿಯನ್ನು ಕೊಂದ ಪಾಪಿ ಪತಿ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆಸ್ತಿ ವಿಚಾರಕ್ಕೆ ಯುವಕನ ಬರ್ಬರ ಹತ್ಯೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 21. ಆಸ್ತಿ ವಿಚಾರಕ್ಕೆ ಸಂಬಂಧಿಸಿ ಚಾಕುವಿನಿಂದ ಇರಿದು ಯುವಕನೋರ್ವನ ಕೊಲೆ‌ ಮಾಡಿರುವ ಬಗ್ಗೆ ಹೊಸಕೋಟೆ ತಾಲೂಕಿನ ಮೇಡಿಮಲ್ಲಸಂದ್ರ ಗ್ರಾಮದಿಂದ ವರದಿಯಾಗಿದೆ. ಹತ್ಯೆಯಾದವರನ್ನು ಇಸ್ಮಾಯಿಲ್ ಖಾನ್(26) ಎಂದು ಗುರುತಿಸಲಾಗಿದೆ. ಕಳೆದ ಹಲವು ದಿನಗಳಿಂದ ಇವರ ಮಧ್ಯೆ ಆಸ್ತಿ ವಿಚಾರಕ್ಕೆ ಕಲಹ ನಡೆಯುತ್ತಿದ್ದು ಈ ನಡುವೆ ಮನೆ ಮುಂದೆ ಕಳೆದ ರಾತ್ರಿ ಕಾರು ನಿಲ್ಲಿಸುವ ವಿಚಾರಕ್ಕೆ ಜಗಳ ನಡೆದಿದೆ. ಬಳಿಕ ಮಾತಿನ‌ ಚಕಮಕಿ ವಿಕೋಪಕ್ಕೆ ತಿರುಗಿ ಡ್ರಾಗರ್ ನಿಂದ ಇರಿದು ಕೊಲೆ ಮಾಡಲಾಗಿದೆ.

ಆಸ್ತಿ ವಿಚಾರಕ್ಕೆ ಯುವಕನ ಬರ್ಬರ ಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ತುಳು ಚಿತ್ರ ನಟ ನವೀನ್.ಡಿ ಪಡೀಲ್ ರವರ ಮಾತೃ ವಿಯೋಗ

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.21. ಚಿತ್ರ ನಟ ಹಾಗೂ ರಂಗಕರ್ಮಿ ನವೀನ್ ಡಿ ಪಡೀಲ್ ಅವರ ತಾಯಿ ಸೇಸಮ್ಮ ಕೋಟ್ಯಾನ್ (80) ನಗರದ ಆಸ್ಪತ್ರೆಯೊಂದರಲ್ಲಿ ನಿಧನರಾದರು ಎನ್ನಲಾಗಿದೆ. ಅವರು ನವೀನ್ ಡಿ.ಪಡೀಲ್ ಅವರ ಪಡೀಲ್ನ ಮನೆಯಲ್ಲೇ ವಾಸವಿದ್ದರು. ಅವರಿಗೆ ನಾಲ್ಕು ವರ್ಷಗಳ ಹಿಂದೆ ಅಪಘಾತದಲ್ಲಿ ಮೂಳೆ ಮುರಿತಕ್ಕೆ ಒಳಗಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು ಎಂದು ತಿಳಿದುಬಂದಿದೆ.

ತುಳು ಚಿತ್ರ ನಟ ನವೀನ್.ಡಿ ಪಡೀಲ್ ರವರ ಮಾತೃ ವಿಯೋಗ Read More »

ಕರಾವಳಿ

ವಿಟ್ಲ: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com  ಕೊಣಾಜೆ, ಮಾ.21. ಯುವಕನೋರ್ವ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿ ತಿಳಿಸಿದೆ. ವಿಟ್ಲ ಕನ್ಯಾನ ನಿವಾಸಿ ಬಾಬು ಶೆಟ್ಟಿಗಾರ್ ಎಂಬವರ ಪುತ್ರ ಹರೀಶ್ (33) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಹರೀಶ್ ಮನೆಗೆ ಬರುವಾಗ ಕೈಯಲ್ಲಿ ಪೆಟ್ರೋಲ್ ನ್ನು ಕ್ಯಾನಿನಲ್ಲಿ ಹಿಡಿದುಕೊಂಡು ಬಂದಿದ್ದಾರೆ. ಮಾತುಕತೆ ಆರಂಭವಾಗುವ ಮುನ್ನವೇ ಅಂಗಳದಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ‌‌ ಎನ್ನಲಾಗಿದೆ.    

ವಿಟ್ಲ: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಯುವಕ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್
Death, deadbody, Waterfall

ಆಕಸ್ಮಿಕವಾಗಿ ರೈಲಿನಿಂದ ಬಿದ್ದು ಪ್ರಯಾಣಿಕ ಮೃತ್ಯು

(ನ್ಯೂ ಸ್ ಕಡಬ) newskadaba.com ಬೈಂದೂರು, ಮಾ. 21.  ಆಕಸ್ಮಿಕವಾಗಿ ವ್ಯಕ್ತಿಯೊಬ್ಬರು ರೈಲಿನಿಂದ ಬಿದ್ದು ಮೃತಪಟ್ಟ ಘಟನೆ ನಾವುಂದ ಗ್ರಾಮದ ಮಸ್ಕಿ ಎಂಬಲ್ಲಿ ನಡೆದಿದೆ. ಎರ್ನಾಕುಲಂಗೆ ತೆರಳುತ್ತಿದ್ದ ಮರುಸಾಗರ ರೈಲಿನಲ್ಲಿ ಅಜ್ಮೀರ್ ಜಂಕ್ಷನ್‌ನಿಂದ ಹತ್ತಿದ್ದ ವ್ಯಕ್ತಿ ರೈಲಿನಿಂದ ಆಕಸ್ಮಿಕವಾಗಿ ಬಿದ್ದಿದ್ದು, ಪರಿಣಾಮ ತೀವ್ರವಾಗಿ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಕಸ್ಮಿಕವಾಗಿ ರೈಲಿನಿಂದ ಬಿದ್ದು ಪ್ರಯಾಣಿಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಹಿರಿಯ ಪತ್ರಕರ್ತ ಪ್ರಸಾದ್ ಹೆಗಡೆ ವಿಧಿವಶ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.18. ಕನ್ನಡ ಪತ್ರಿಕೋದ್ಯಮದ ಹಿರಿಯ ಪತ್ರಕರ್ತ ಪ್ರಸಾದ್ ಹೆಗಡೆ (45)ನಿಧನರಾಗಿದ್ದಾರೆ ಎಂದು ವರದಿ ತಿಳಿಸಿದೆ. ಹಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಪ್ರಸಾದ್ ಹೆಗಡೆ ಬೆಳಗಿನ ಜಾವ 4:30ಕ್ಕೆ ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದರು ಎನ್ನಲಾಗಿದೆ.

ಹಿರಿಯ ಪತ್ರಕರ್ತ ಪ್ರಸಾದ್ ಹೆಗಡೆ ವಿಧಿವಶ Read More »

ಕರ್ನಾಟಕ

ಬೋರ್ ವೆಲ್ ಗಾಡಿ ಮತ್ತು ಆಕ್ಟೀವಾ ನಡುವೆ ಢಿಕ್ಕಿ ➤ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ವಿಟ್ಲ, ಮಾ. 18. ಬೋರ್ ವೆಲ್ ಗಾಡಿ ಮತ್ತು ಆಕ್ಟೀವಾ ನಡುವೆ ಢಿಕ್ಕಿ ಸಂಭವಿಸಿ ಓರ್ವ ದ್ವಿ ಚಕ್ರ ಸವಾರ ಮೃತಪಟ್ಟ ಘಟನೆ ವಿಟ್ಲದ ಉಕ್ಕುಡ ಅಪ್ಪೆರಿಪಾದೆ ಎಂಬಲ್ಲಿ ಸಂಭವಿಸಿದೆ.   ಮೃತಪಟ್ಟವರನ್ನು ರಂಜಿತ್ ಎಂದು ಗುರುತಿಸಲಾಗಿದ್ದು, ಪನೋಲಿಬೈಲು ಮೂಲದ ಯುವಕ ವಿಟ್ಲದ ಸಂಬಂಧಿಕರ ಮನೆಯಲ್ಲಿ ವಾಸವಿದ್ದು, ಕಲ್ಲು ಲೋಡ್ ಮಾಡಲು ಹೋಗುತ್ತಿದ್ದ ಎಂದೆನ್ನಲಾಗಿದೆ.

ಬೋರ್ ವೆಲ್ ಗಾಡಿ ಮತ್ತು ಆಕ್ಟೀವಾ ನಡುವೆ ಢಿಕ್ಕಿ ➤ ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಸಿಗ್ನಲ್ ನಲ್ಲಿ ನಿಂತಿದ್ದ ಸ್ಕೂಟರ್ ಗೆ ಲಾರಿ ಢಿಕ್ಕಿ ➤ ತಂದೆ – ಮಗಳು ದುರ್ಮರಣ

(ನ್ಯೂಸ್ ಕಡಬ) newskadaba.com ಮಂಗಳೂರು,ಮಾ. 18. ನಿಂತಿದ್ದ ಸ್ಕೂಟರ್ ಗೆ ಹಿಂದಿನಿಂದ ಬಂದ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ತಂದೆ ಮಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ನಂತೂರ್ ಸರ್ಕಲ್ ನಲ್ಲಿ ಇಂದು ಮಧ್ಯಾಹ್ನ ನಡೆದಿದೆ. ತಂದೆ ಮಗಳಿಬ್ಬರು ದ್ವಿಚಕ್ರ ವಾಹನದಲ್ಲಿ ಕುಳಿತು ಸಿಗ್ನಲ್ ಕಾಯುತ್ತಿದ್ದ ವೇಳೆ ಏಕಾಏಕಿ ಬಂದ ಲಾರಿಯು ದ್ವಿಚಕ್ರ ವಾಹನದ ಮೇಲೆ ಹರಿದಿದ್ದು, ಪರಿಣಾಮ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ತಂದೆ – ಮಗಳು ಎನ್ನಲಾಗಿದ್ದು ಮೃತರ ವಾಹನದಲ್ಲಿ ದೊರಕಿದ ಮಾಹಿತಿಯಂತೆ ಬಲ್ಮಠದ ಸ್ಯಾಮುವೆಲ್

ಸಿಗ್ನಲ್ ನಲ್ಲಿ ನಿಂತಿದ್ದ ಸ್ಕೂಟರ್ ಗೆ ಲಾರಿ ಢಿಕ್ಕಿ ➤ ತಂದೆ – ಮಗಳು ದುರ್ಮರಣ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರು ಮತ್ತು ಕಂಟೈನರ್ ನಡುವೆ ಅಪಘಾತ ➤ ಪ್ರಾಧ್ಯಾಪಕನೋರ್ವ ಮೃತ್ಯು

(ನ್ಯೂಸ್ ಕಡಬ)newskadaba.com   ಹೊನ್ನಾವರ, ಮಾ.18. ಕಾರು ಹಾಗೂ ಕಂಟೈನರ್ ನಡುವೆ ಢಿಕ್ಕಿ ಸಂಭವಿಸಿ ಬಂಟಕಲ್ಲು ಶ್ರಿ ಮಧ್ವ ವಾದಿರಾಜ ತಾಂತ್ರಿಕ ಕಾಲೇಜಿನ ಮೆಕ್ಯಾನಿಕಲ್‌ ವಿಭಾಗದ ಹಿರಿಯ ಸಹಾಯಕ ಪ್ರಾಧ್ಯಾಪಕರೊಬ್ಬರು ಮೃತಪಟ್ಟ ಘಟನೆ ಹೊನ್ನಾವರದಲ್ಲಿ ನಡೆದಿದೆ. ಹಿರಿಯ ಸಹಾಯಕ ಪ್ರಾಧ್ಯಾಪಕ ಅನಂತೇಶ ರಾವ್‌ (40) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಅನಂತೇಶ ರಾವ್ ಅವರು ಸೋದೆ ಮೂಲ ಮಠಕ್ಕೆ ಉಡುಪಿಯಿಂದ ತೆರಳುತ್ತಿದ್ದರು. ಈ ವೇಳೆ ಹೊನ್ನಾವರ ಬಳಿ ಅವರ ಕಾರು ಕಂಟೈನರ್‌ಗೆ ಢಿಕ್ಕಿಯಾಗಿದೆ. ಢಿಕ್ಕಿಯ ರಭಸಕ್ಕೆ ಗಂಭೀರ ಗಾಯಗೊಂಡ ಅವರು

ಕಾರು ಮತ್ತು ಕಂಟೈನರ್ ನಡುವೆ ಅಪಘಾತ ➤ ಪ್ರಾಧ್ಯಾಪಕನೋರ್ವ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top