death

ಬೆಳ್ತಂಗಡಿ: ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮಾ. 17.  ಬಾವಿಗೆ ಬಿದ್ದ ಕೊಡವನ್ನು ಮೇಲಕ್ಕೆತ್ತಲು ಬಾವಿಗೆ ಇಳಿದಿದ್ದ ವ್ಯಕ್ತಿಯೋರ್ವ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ವರದಿಯಾಗಿದೆ. ಮೃತರನ್ನು ಪ್ರವೀಣ್ ಎಂದು ಗುರುತಿಸಲಾಗಿದೆ.  ಇವರು ವಸಂತಿ ಎಂಬವರ ಮನೆಯ ಬಾವಿಗೆ ಬಿದ್ದಿದ್ದ ಕೊಡವನ್ನು ಮೇಲಕ್ಕೆತ್ತಲೆಂದು ಹಗ್ಗದ ಸಹಾಯದಿಂದ ಇಳಿದು, ಬಳಿಕ ಕೊಡಪಾನವನ್ನು ಮೇಲಕ್ಕೆ ಕಳುಹಿಸಿದ್ದರು. ಬಳಿಕ ಅದೇ ಹಗ್ಗವನ್ನು ಬಳಸಿಕೊಂಡು ಅವರು ಮೇಲಕ್ಕೇರಲು ಪ್ರಯತ್ನಿಸಿದ್ದಾರೆ. ಆದರೆ, ಅರ್ಧಕ್ಕೆ ತಲುಪಿದ ವೇಳೆ ಕೈಜಾರಿ ಬಾವಿಗೆ ಬಿದ್ದಿದ್ದಾರೆ ಎನ್ನಲಾಗಿದೆ.  

ಬೆಳ್ತಂಗಡಿ: ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಉಳ್ಳಾಲ: ಮಹಿಳೆಯನ್ನು ಚೂರಿಯಿಂದ ಇರಿದು ಕೊಲೆ..!

(ನ್ಯೂಸ್ ಕಡಬ) newskadaba.com ಉಳ್ಳಾಲ, ಮಾ. 17. ಮಹಿಳೆಯನ್ನು ಚೂರಿಯಿಂದ ಇರಿದು ಹತ್ಯೆ ನಡೆಸಿರುವ ಘಟನೆ ಉಳ್ಳಾಲ ಪೊಲೀಸ್‌ ಠಾಣಾ ವ್ಯಾಪ್ತಿಯ ಉಳ್ಳಾಲ ಕೋಟೆಪುರ ಬಸ್‌ ನಿಲ್ದಾಣದ ಸಮೀಪ ನಡೆದಿದೆ. ಹತ್ಯೆಗೆ ಸಂಬಂಧಿಸಿ ಆಕೆಯೊಂದಿಗೆ ವಾಸಿಸುತ್ತಿದ್ದ ದೆಹಲಿ ಮೂಲದ ನಯೀಮ್‌ ಎಂಬಾತ ಈ ಹತ್ಯೆಯನ್ನು ಮಾಡಿ ಪರಾರಿಯಾಗಿರುವುದಾಗಿ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಎರಡು ದಿನಗಳ ಹಿಂದೆ ದೆಹಲಿಯಿಂದ ಕೋಟೆಪುರಕ್ಕೆ ಬಂದಿದ್ದ ಜೋಡಿ, ಸ್ಥಳೀಯ ಸೆಲೂನ್‌ ಮಾಲೀಕರ ಮೂಲಕ ಬಾಡಿಗೆ ಮನೆಯನ್ನು ಸಂಪರ್ಕಿಸಿ, ಹಮೀದ್‌ ಎಂಬವರ ಬಾಡಿಗೆ ಮನೆಯನ್ನು

ಉಳ್ಳಾಲ: ಮಹಿಳೆಯನ್ನು ಚೂರಿಯಿಂದ ಇರಿದು ಕೊಲೆ..! Read More »

ಕರಾವಳಿ, ಕ್ರೈಮ್ ನ್ಯೂಸ್
Death, deadbody, Waterfall

ವಿಷ ಸೇವಿಸಿ ಯುವಕ ಮೃತ್ಯು…!

(ನ್ಯೂಸ್ ಕಡಬ) newskadaba.com ಕಾರ್ಕಳ, ಮಾ. 15. ವಿಷ ಸೇವಿಸಿದ್ದ ಯುವಕನೋರ್ವ ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ಕಾರ್ಕಳದಲ್ಲಿ ಸಂಭವಿಸಿದೆ. ಮೃತ ಯುವಕನನ್ನು ಹಿರಿಯಂಗಡಿಯ ಪ್ರಜ್ವಲ್‌ ದೇವಾಡಿಗ(18) ಎಂದು ಗುರುತಿಸಲಾಗಿದೆ. ಈತನ ತಂದೆ ತಾಯಿ ಹಾಗೂ ಸಹೋದರ ಕಾರ್ಕಳ ಮಾರಿಗುಡಿಯ ಕಾರ್ಯಕ್ರಮಕ್ಕೆ ಹೋಗಿದ್ದ ವೇಳೆ, ಮನೆಯಲ್ಲಿ ಒಬ್ಬನೇ ಇದ್ದ ಪ್ರಜ್ವಲ್‌ ವಿಷ ಸೇವಿಸಿದ್ದ. ಈ ಕುರಿತು ಪ್ರಜ್ವಲ್‌ನ ಗೆಳೆಯ ಮಲ್ಲಿಕಾರ್ಜುನ ಎಂಬಾತ ಪ್ರಜ್ವಲ್ ಅಣ್ಣ ಉಜ್ವಲ್‌ಗೆ ಕರೆಮಾಡಿ ವಿಷಯ ತಿಳಿಸಿದ್ದನು. ತಕ್ಷಣವೇ ಪ್ರಜ್ವಲ್‌ ನನ್ನು ಮಣಿಪಾಲದ ಆಸ್ಪತ್ರೆಗೆ

ವಿಷ ಸೇವಿಸಿ ಯುವಕ ಮೃತ್ಯು…! Read More »

ಕರಾವಳಿ, ಕ್ರೈಮ್ ನ್ಯೂಸ್

ಇಬ್ಬರು ಮಕ್ಕಳನ್ನು ಬಾವಿಗೆಸೆದು ಆತ್ಮಹತ್ಯೆ ಮಾಡಿಕೊಂಡ ತಾಯಿ…!

(ನ್ಯೂಸ್ ಕಡಬ) newskadaba.com ತಮಿಳುನಾಡು, ಮಾ. 15. ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ಬಾವಿಗೆ ಎಸೆದು, ಬಳಿಕ ತಾನೂ ಮೋಟಾರ್ ಪಂಪ್ ರೂಮಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡರಾತ್ರಿ ತಮಿಳುನಾಡು ನಾಮಕ್ಕಲ್ ಜಿಲ್ಲೆಯ ಮೋಹನೂರಿನಲ್ಲಿ ನಡೆದಿದೆ. ಮೃತರನ್ನು ಗುಣವತಿ, ಆಕೆಯ ಮಕ್ಕಳಾದ ಪ್ರಿಯಾನ್ (5) ಸುಜಿತ್ಪ್ರಿಯನ್ (2) ಎಂದು ಗುರುತಿಸಲಾಗಿದೆ.

ಇಬ್ಬರು ಮಕ್ಕಳನ್ನು ಬಾವಿಗೆಸೆದು ಆತ್ಮಹತ್ಯೆ ಮಾಡಿಕೊಂಡ ತಾಯಿ…! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೊಳವೆ ಬಾವಿಗೆ ಬಿದ್ದು 5 ವರ್ಷದ ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಮಹಾರಾಷ್ಟ್ರ, ಮಾ. 14. ತೆರೆದ ಕೊಳವೆ ಬಾವಿಗೆ ಬಿದ್ದಿದ್ದ 5 ವರ್ಷದ ಬಾಲಕ ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಅಹಮದ್‌ನಗರ ಜಿಲ್ಲೆಯಲ್ಲಿ ನಡೆದಿದೆ. ಈತ ಜಮೀನೊಂದರಲ್ಲಿ ತೆರೆದಿಟ್ಟ ಕೊಳವೆ ಬಾವಿಗೆ ಬಿದ್ದಿದ್ದು, ಈ ವಿಚಾರ ಅಧಿಕಾರಿಗಳಿಗೆ ತಿಳಿಯುತ್ತಿದ್ದಂತೆಯೇ ಎನ್‌ ಡಿಆರ್‌ ಎಫ್‌ ರಕ್ಷಣಾ ಸಿಬ್ಬಂದಿಗಳು ತಕ್ಷಣ ಕಾರ್ಯಾಚರಣೆಗೆ ಇಳಿದಿದ್ದಾರೆ. ಆ್ಯಂಬುಲೆನ್ಸ್, ಆಕ್ಸಿಜನ್‌, ವೈದ್ಯರು ಎಲ್ಲರೂ ಘಟನಾ ಸ್ಥಳದಲ್ಲಿದ್ದು ಬಾಲಕನ ಚಲನವಲನವನ್ನು ಗಮನಿಸಿ ಆತನಿಗೆ ಕೃತಕ ಆಕ್ಸಿಜನ್‌ ನೆರವನ್ನು ನೀಡಿದ್ದಾರೆ. ಆದರೂ ದುರದೃಷ್ಟವಶಾತ್ ಬಾಲಕ

ಕೊಳವೆ ಬಾವಿಗೆ ಬಿದ್ದು 5 ವರ್ಷದ ಬಾಲಕ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಾವಿಯಲ್ಲಿ ಹತ್ತು ವರ್ಷದ ಬಾಲಕನ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಮಾ. 14. ಹತ್ತು ವರ್ಷದ ಬಾಲಕನ ಮೃತದೇಹ ಬಾವಿಯಲ್ಲಿ ಮೃತ ಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಪನತ್ತಡಿ ಸಮೀಪದ ಚಾಮುಂಡಿ ಕುನ್ನು ಎಂಬಲ್ಲಿ ನಡೆದಿದೆ. ಮೃತ ಬಾಲಕನನ್ನು ಪ್ರಭಾಕರ ಎಂಬವರ ಪುತ್ರ 5ನೇ ತರಗತಿ ವಿದ್ಯಾರ್ಥಿ ಅರ್ಜುನ್ (10) ಎಂದು ಗುರುತಿಸಲಾಗಿದೆ. ದಿಢೀರ್ ನಾಪತ್ತೆಯಾಗಿದ್ದ ಬಾಲಕನನ್ನು ಮನೆಯವರು ಹಾಗೂ ಪರಿಸರ ವಾಸಿಗಳು ಶೋಧ ನಡೆಸಿದಾಗ ಆವರಣ ಇಲ್ಲದ ಬಾವಿಯಲ್ಲಿ ಬಿದ್ದಿರುವುದು ಕಂಡು ಬಂದಿದ್ದು, ಕೂಡಲೇ ಮೇಲಕ್ಕೆತ್ತಿ ಆಸ್ಪತ್ರೆಗೆ ತಲಪಿಸಿದರೂ ಅದಾಗಲೇ ಮೃತಪಟ್ಟಿದ್ದನು

ಬಾವಿಯಲ್ಲಿ ಹತ್ತು ವರ್ಷದ ಬಾಲಕನ ಮೃತದೇಹ ಪತ್ತೆ Read More »

ಕ್ರೈಮ್ ನ್ಯೂಸ್

ಶಂಕಿತ ಡೆಂಗ್ಯೂ ಜ್ವರದಿಂದ ಪಿಯುಸಿ ವಿದ್ಯಾರ್ಥಿನಿ ಮೃತ್ಯು

(ನ್ಯೂಸ್ ಕಡಬ) newskadaba.com ಮೂಡಬಿದಿರೆ, ಮಾ. 14. ಶಂಕಿತ ಡೆಂಗ್ಯೂ ಜ್ವರದಿಂದ ಪಿಯುಸಿ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಪುರಸಭೆ ವ್ಯಾಪ್ತಿಯ ಜ್ಯೋತಿನಗರ ಎಂಬಲ್ಲಿ ವರದಿಯಾಗಿದೆ. ಮೃತ ವಿದ್ಯಾರ್ಥಿನಿಯನ್ನು ಜ್ಯೋತಿನಗರ ನಿವಾಸಿ ಮಯ್ಯದ್ದಿ ಎಂಬವರ ಪುತ್ರಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಮಿಸ್ರಿಯಾ (17) ಎಂದು ಗುರುತಿಸಲಾಗಿದೆ. ಮಿಸ್ರಿಯಾ ಅವರಿಗೆ ಬಿಳಿ ರಕ್ತ ಕಣಗಳ ಕುಸಿತ ಕಂಡುಬಂದಿರುವುದರಿಂದ ಸಾವು ಸಂಭವಿಸಿದ್ದು, ಇದು ಡೆಂಗ್ಯೂ ಪ್ರಕರಣ ಎಂದು ಶಂಕಿಸಲಾಗಿದೆ. ಈಕೆ ಕೆಲವು ದಿನಗಳಿಂದ ವಿಪರೀತ ಜ್ವರದಿಂದ ಬಳಲುತ್ತಿದ್ದು, ಬಿಳಿ ರಕ್ತ ಕಣಗಳ

ಶಂಕಿತ ಡೆಂಗ್ಯೂ ಜ್ವರದಿಂದ ಪಿಯುಸಿ ವಿದ್ಯಾರ್ಥಿನಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

➤ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಹೃದಯಾಘಾತದಿಂದ ನಿಧನ!

(ನ್ಯೂಸ್ ಕಡಬ) newskadaba.com. ಮೈಸೂರು, ಮಾ 11. ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್​ಧ್ರುವನಾರಾಯಣ(61) ಅವರು ಇಂದು ಬೆಳಗ್ಗೆ 6.40ಕ್ಕೆ ಕಾರಿನಲ್ಲಿ ತೆರಳುವಾಗ ಹೃದಯಾಘಾತವಾಗಿದ್ದು ಮೈಸೂರಿನ ಡಿಆರ್​​ಎಂಎಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಾರ್ಯಾಧ್ಯಕ್ಷ ಧ್ರುವನಾರಾಯಣ್ ನಿಧನ ಹಿನ್ನಲೆ ಕಾಂಗ್ರೆಸ್ ರಾಮನಗರ, ದಾವಣಗೆರೆ ಜಿಲ್ಲೆಯಲ್ಲಿ ನಡೆಯಬೇಕಿದ್ದ ಪ್ರಜಾಧ್ವನಿ ಯಾತ್ರೆ ರದ್ದು ಮಾಡಲಾಗಿದೆ. ಮತ್ತೊಂದೆಡೆ ಧ್ರುವನಾರಾಯಣ ಅವರ ಸಾವಿಗೆ ಸಿಎಂ ಬಸವರಾಜ ಬೊಮ್ಮಾಯಿ, ಹೆಚ್​ಡಿ ಕುಮಾರಸ್ವಾಮಿ, ಸತೀಶ್ ಜಾರಕಿಹೊಳಿ, ಶಾಸಕ ಜಿ.ಟಿ.ದೇವೇಗೌಡ ಹಾಗೂ  ಅನೇಕರು ಸಂತಾಪ ಸೂಚಿಸಿದ್ದಾರೆ. ಅವರಿಗೆ ಪೊಲೀಸ್ ಗೌರವಗಳೊಂದಿಗೆ ಅಂತ್ಯ ಕ್ರಿಯೆ ನೆರವೇರಿಸಲಾಗುವುದು

➤ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಹೃದಯಾಘಾತದಿಂದ ನಿಧನ! Read More »

ಕರ್ನಾಟಕ
Death, deadbody, Waterfall

BMTC ಬಸ್ ನಲ್ಲಿ ದಿಡೀರ್ ಕಾಣಿಸಿಕೊಂಡ ಬೆಂಕಿ ! ➤ ನಿದ್ರೆಯಲ್ಲಿದ್ದ ಕಂಡೆಕ್ಟರ್ ಸಜೀವ ದಹನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.10. ಬಿಎಂಟಿಸಿ ಬಸ್ ನಲ್ಲಿ ಅಗ್ನಿ ಅನಾಹುತ ನಡೆದು ಬಸ್ ನಲ್ಲಿ ನಿದ್ರಿಸುತ್ತಿದ್ದ ಕಂಡಕ್ಟರ್ ಸಜೀವ ದಹನವಾಗಿರುವ ಘಟನೆ ಬೆಂಗಳೂರಿನ ಲಿಂಗಧೀರನಹಳ್ಳಿ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಮುತ್ತಯ್ಯಸ್ವಾಮಿ ಮೃತದ ದುರ್ವೈವಿ(45).ಬೆಳಗಿನ ಜಾವ ಬಸ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.ಬಸ್ನಲ್ಲೇ ನಿದ್ರೆಗೆ ಜಾರಿದ್ದ ಕಂಡಕ್ಟರ್ ಸುಟ್ಟು ಕರಕಲಾಗಿದ್ದಾರೆ. ಚಾಲಕ ಪ್ರಕಾಶ್ ಎದ್ದು ಶೌಚಕ್ಕೆ ಹೋದಾಗ ಬಸ್ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ.ಶೌಚಕ್ಕೆ ಹೋಗಿದ್ದ ಬಸ್ ಚಾಲಕ ಪ್ರಕಾಶ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

BMTC ಬಸ್ ನಲ್ಲಿ ದಿಡೀರ್ ಕಾಣಿಸಿಕೊಂಡ ಬೆಂಕಿ ! ➤ ನಿದ್ರೆಯಲ್ಲಿದ್ದ ಕಂಡೆಕ್ಟರ್ ಸಜೀವ ದಹನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ರೈಲು ಢಿಕ್ಕಿ ಹೊಡೆದು ಸಿವಿಲ್ ಗುತ್ತಿಗೆದಾರ ಮೃತ್ಯು !      

(ನ್ಯೂಸ್ ಕಡಬ)newskadaba.com  ಮಂಗಳೂರು, ಮಾ.10. ರೈಲು ಢಿಕ್ಕಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಂಗಳೂರು ಸಮೀಪದಲ್ಲಿ ಗುರುವಾರ ನಡೆದಿದೆ. ಉಳ್ಳಾಲಬೈಲು ಗೇರು ಕೃಷಿ ಸಂಶೋಧನಾ ಕೇಂದ್ರ ಬಳಿಯ ನಿವಾಸಿ, ಹಿರಿಯ ಸಿವಿಲ್‌ ಗುತ್ತಿಗೆದಾರ ಜನಾರ್ದನ ಆಚಾರಿ (78) ಮೃತ ದುರ್ದೈವಿ. ಜನಾರ್ದನ ಅವರು ಗುರುವಾರ ಬೆಳಗ್ಗೆ ಮನೆಯಿಂದ ಹೊರಟು ಹೊರ ಹೋಗಿದ್ದರು. ಈ ವೇಳೆ ಮನೆ ಸಮೀಪದ ಕಾಪಿಕಾಡಿನ ರೈಲ್ವೇ ಹಳಿಯಲ್ಲಿ ರೈಲು ಢಿಕ್ಕಿ ಹೊಡೆದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸಿವಿಲ್ ಗುತ್ತಿಗೆದಾರರಾಗಿದ್ದ ಜನಾರ್ದನ ಅವರು ಹಲವು ಮಂದಿ

ಮಂಗಳೂರು: ರೈಲು ಢಿಕ್ಕಿ ಹೊಡೆದು ಸಿವಿಲ್ ಗುತ್ತಿಗೆದಾರ ಮೃತ್ಯು !       Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top