death

ಜಾಫರ್ ಎಕ್ಸ್ ಪ್ರೆಸ್ ನಲ್ಲಿ ಸ್ಪೋಟ.!     ➤ ಪ್ರಯಾಣಿಕರಿಬ್ಬರು ಸ್ಥಳದಲ್ಲಿಯೇ ಮೃತ್ಯು

(ನ್ಯೂಸ್ ಕಡಬ)newskadaba.com ಪಂಜಾಬ್, ಫೆ.16. ಪಂಜಾಬ್‌ನ ಚಿಚಾವಟ್ನಿಯಲ್ಲಿ ಕ್ವೆಟ್ಟಾಗೆ ಹೋಗುವ ಜಾಫರ್ ಎಕ್ಸ್‌ಪ್ರೆಸ್‌ನಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಕನಿಷ್ಠ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ. ಕ್ವೆಟ್ಟಾಗೆ ಹೋಗುವ ಜಾಫರ್ ಎಕ್ಸ್‌ಪ್ರೆಸ್ ಚಿಚಾವಟ್ನಿ ರೈಲು ನಿಲ್ದಾಣದಿಂದ ಹಾದು ಹೋಗುತ್ತಿದ್ದಾಗ ಸ್ಫೋಟ ಸಂಭವಿಸಿದೆ ಎನ್ನಲಾಗಿದೆ. ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ ರೈಲು ಪೇಶಾವರದಿಂದ ಬರುತ್ತಿತ್ತು ಎನ್ನಲಾಗಿದೆ. ಕ್ವೆಟ್ಟಾಗೆ ಹೋಗುವ ಜಾಫರ್ ಎಕ್ಸ್‌ಪ್ರೆಸ್ ಚಿಚಾವಟ್ನಿ ರೈಲು ನಿಲ್ದಾಣದಿಂದ ಹಾದು ಹೋಗುತ್ತಿದ್ದಾಗ ನಾಲ್ಕನೇ ಬೋಗಿಯಲ್ಲಿ ಸಿಲಿಂಡರ್ […]

ಜಾಫರ್ ಎಕ್ಸ್ ಪ್ರೆಸ್ ನಲ್ಲಿ ಸ್ಪೋಟ.!     ➤ ಪ್ರಯಾಣಿಕರಿಬ್ಬರು ಸ್ಥಳದಲ್ಲಿಯೇ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಾಲ್ವರು ಬಾಲಕಿಯರು ನೀರುಪಾಲು

(ನ್ಯೂಸ್ ಕಡಬ) newskadaba.com ತಮಿಳುನಾಡು, ಫೆ.16. ಪುದುಕೊಟ್ಟೈ ಜಿಲ್ಲೆಯ ವಿರಲಿಮಲೈ ಫಿಲಿಪ್ಪೂರ್ ಸರ್ಕಾರಿ ಮಾಧ್ಯಮಿಕ ಶಾಲೆಯ ನಾಲ್ವರು ವಿದ್ಯಾರ್ಥಿನಿಯರು ಕರೂರ್ ಜಿಲ್ಲೆಯ ಮಾಯನೂರಿನ ಕಾವೇರಿ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ತಮಿಳರಸಿ,ಇನಿಯಾ,ಲಾವಣ್ಯ ಮತ್ತು ಸೋಫಿಯಾ ಮೃತ ಬಾಲಕಿಯರು.ಅವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕರೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ವರದಿಯಾಗಿದೆ. ಪುದುಕೊಟ್ಟೈ ಜಿಲ್ಲೆಯ ವಿರಲಿಮಲೈ ಫಿಲಿಪ್ಪೂರ್ ಸರ್ಕಾರಿ ಮಾಧ್ಯಮಿಕ ಶಾಲೆಯ 15ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ತಿರುಚ್ಚಿ ಜಿಲ್ಲೆಯ ಥಾನಿಯಂನಲ್ಲಿರುವ ಖಾಸಗಿ ಕಾಲೇಜಿನಲ್ಲಿ ಫುಟ್ಬಾಲ್ ಪಂದ್ಯದಲ್ಲಿ ಭಾಗವಹಿಸಲು ಹೋಗಿದ್ದರು. ಮೊದಲು

ನಾಲ್ವರು ಬಾಲಕಿಯರು ನೀರುಪಾಲು Read More »

ರಾಷ್ಟ್ರೀಯ ನ್ಯೂಸ್

ಕೊರೊನಾವೈರಸ್ ಪ್ರಕರಣ ➤‌ ಮೂರು ಮಂದಿ ಮೃತ್ಯು

(ನ್ಯೂಸ್ ಕಡಬ)newskadaba.comನವದೆಹಲಿ,ಫೆ.15. ದೇಶದಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ 102 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,823ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ. ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಉತ್ತರ ಪ್ರದೇಶದಲ್ಲಿ ಎರಡು ಮತ್ತು ಕೇರಳದಲ್ಲಿ ಒಂದು ಸೇರಿದಂತೆ ಈವರೆಗೆ ದೇಶದಲ್ಲಿ 5,30,756 ಮಂದಿ ಕೋವಿಡ್‌ನಿಂದಾಗಿ ಮೃತಪಟ್ಟಿದ್ದಾರೆ.    

ಕೊರೊನಾವೈರಸ್ ಪ್ರಕರಣ ➤‌ ಮೂರು ಮಂದಿ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ ➤  ಸ್ಥಳದಲ್ಲಿಯೇ ಮೂವರ ಮೃತ್ಯು.!

(ನ್ಯೂಸ್ ಕಡಬ)newskadaba.com  ತಮಿಳುನಾಡು, ಫೆ.15. ದ್ವಿಚಕ್ರ ವಾಹನಕ್ಕೆ ಐಷರ್ ಕ್ಯಾಂಟರ್ ವಾಹನ ಢಿಕ್ಕಿಯಾಗಿ ಮೂವರು ಹದಿಹರೆಯದ ಮಂದಿ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ತಮಿಳರಸಿ(19), ತಮಿಳುಪ್ರಿಯಾ(17) ಹಾಗೂ ಅಂಬೇಡ್ಕರ್ ವಲವನ್(14) ಮೃತಪಟ್ಟವರು. ಈ ಘಟನೆ ತಮಿಳುನಾಡಿನ ಡೆಂಕಣಿಕೋಟೆ ಡೆಂಕಣಿಕೋಟೆ ಸಮೀಪದ ಸಿಂಗಾರತೋಪು ಬಳಿ ನಡೆದಿದೆ. ಸಹೋದರಿಯರಿಬ್ಬರು ದ್ವಿಚಕ್ರ ವಾಹನದಲ್ಲಿ ಕಾಲೇಜಿಗೆ ಹೋಗುತ್ತಿದ್ದ. ಕಾಲೇಜಿನಿಂದ ಮರಳುವಾಗ ಸಂಬಂಧಿಕರ ಮಗ ಅಂಬೇಡ್ಕರ್ ವಲವನ್​ನನ್ನು ದ್ವಿಚಕ್ರ ವಾಹನದಲ್ಲಿ ಕರೆದುಕೊಂಡು ಬರುತ್ತಿದ್ದರು.  

ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ ➤  ಸ್ಥಳದಲ್ಲಿಯೇ ಮೂವರ ಮೃತ್ಯು.! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೋವಿಡ್‌ ಗಿಂತ ಡೇಂಜರಸ್ ಕಾಯಿಲೆ ಪತ್ತೆ ➤‌ ಮಾರ್ಬರ್ಗ್ ವೈರಸ್‌ನಿಂದ 9 ಮಂದಿ ಮೃತ್ಯು!

(ನ್ಯೂಸ್ ಕಡಬ) newskadaba.com ಆಫ್ರಿಕಾ, ಫೆ.15. ಆಫ್ರಿಕಾದ ಈಕ್ವಟೋರಿಯಲ್ ಗಿನಿಯಾದಲ್ಲಿ ಎಬೋಲಾ ರೀತಿಯ ಮಾರ್ಬರ್ಗ್ ವೈರಸ್ ಪತ್ತೆಯಾಗಿದ್ದು, ಏಕಾಏಕಿ 9 ಮಂದಿ ಮೃತಪಟ್ಟಿದ್ದಾರೆ ಎಂದುWHO ದೃಢಪಡಿಸಿದೆ. ಹಣ್ಣಿನ ಬಾವಲಿಗಳಿಂದ ಹರಡುವ ಮಾರ್ಬರ್ಗ್ ವೈರಸ್ ಹೆಚ್ಚು ಸಾಂಕ್ರಾಮಿಕವಾಗಿದೆ. ವಿಪರೀತ ವಾಂತಿ, ಅತಿಸಾರ, ಜ್ವರ ಮತ್ತು ಆಯಾಸದಂತಹ ತೀವ್ರ ರಕ್ತಸ್ರಾವದ ಲಕ್ಷಣಗಳೊಂದಿಗೆ ಅನಾರೋಗ್ಯವನ್ನು ಉಂಟು ಮಾಡುತ್ತದೆ. ರೋಗಲಕ್ಷಣಗಳು ಹೆಮರಾಜಿಕ್ ಜ್ವರವನ್ನು ಉಂಟು ಮಾಡುತ್ತದೆ. ಇದು ಎಬೋಲಾ ಕಾಯಿಲೆಯಂತೆಯೇ ಇದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ಹೇಳಿದೆ. ಕಳೆದ ವಾರ

ಕೋವಿಡ್‌ ಗಿಂತ ಡೇಂಜರಸ್ ಕಾಯಿಲೆ ಪತ್ತೆ ➤‌ ಮಾರ್ಬರ್ಗ್ ವೈರಸ್‌ನಿಂದ 9 ಮಂದಿ ಮೃತ್ಯು! Read More »

ಅಂತರ್ರಾಷ್ಟ್ರೀಯ ನ್ಯೂಸ್

ಹಿರಿಯ ಪತ್ರಕರ್ತ ಮಿತ್ತೂರು ಹಾಜಿ ಹಮೀದ್ ಕಂದಕ್ ನಿಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ.15. ಹಾಯ್ ಪುತ್ತೂರು ಪತ್ರಿಕೆಯ ಸಂಪಾದಕರಾದ ಹಾಜಿ ಹಮೀದ್ ಕಂದಕ್ ರವರು ಹೃದಯಾಘಾತದಿಂದ ನಿಧನರಾದ ವಾರ್ತೆಯು ಕೇಳಿ ಅತೀವ ನೋವನ್ನು ಉಂಟುಮಾಡಿದೆ. ಇವರ ನಿಧನಕ್ಕೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯು ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತದೆ. ಹಾಜಿ ಹಮೀದ್ ಕಂದಕ್ ರವರು ಮಿತ್ತೂರು ಸಿರಾಜುಲ್ ಹುದಾ ಕೇಂದ್ರ ಜುಮ್ಮಾ ಮಸೀದಿಯ ಮಾಜಿ ಅಧ್ಯಕ್ಷರು, ಪುತ್ತೂರು ರೇಂಜ್ ನ ಮದ್ರಸ ಮೇನೇಜ್ಮೆಂಟ್ ನ ಪ್ರಧಾನ ಕಾರ್ಯದರ್ಶಿ ಯಾಗಿ

ಹಿರಿಯ ಪತ್ರಕರ್ತ ಮಿತ್ತೂರು ಹಾಜಿ ಹಮೀದ್ ಕಂದಕ್ ನಿಧನ Read More »

ಕರ್ನಾಟಕ

ಮಂಗಳೂರು: ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಕಾರ್ಮಿಕ ಮೃತ್ಯು

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.15. ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಕೂಲಿ ಕಾರ್ಮಿಕ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ನಡೆದಿದೆ. ಬಿಹಾರ ಮೂಲದ ಪ್ರಸ್ತುತ ಮೇರಮಜಲು ಬಾಡಿಗೆ ಮನೆ ನಿವಾಸಿ ಬಬ್ಲು (36) ಮೃತಪಟ್ಟ ಕಾರ್ಮಿಕ ಎಂದು ಗುರುತಿಸಲಾಗಿದೆ. ಹೊರವಲಯದ ಮೇರಮಜಲು ವ್ಯಾಪ್ತಿಯಲ್ಲಿ ನಿರ್ಮಾಣವಾಗುತ್ತಿರುವ ಮನೆಯೊಂದರ ಒಂದನೇ ಮಹಡಿಯಲ್ಲಿ ಗಾರೆ ಕೆಲಸ ಮಾಡುತ್ತಿದ್ದಾಗ ಆಯತಪ್ಪಿ ಕೆಳಗೆ ಬಿದ್ದಿದ್ದರು. ಇದರಿಂದ ಗಂಭೀರ ಗಾಯಗೊಂಡ ಅವರನ್ನು ಕೂಡಲೇ ನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ

ಮಂಗಳೂರು: ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಕಾರ್ಮಿಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಬಿಸಿಎ ವಿದ್ಯಾರ್ಥಿಯೋರ್ವ ಐದನೇ ಮಹಡಿಯಿಂದ ಬಿದ್ದು ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.15. ಐದು ಅಂತಸ್ತಿನ ಕಟ್ಟಡದ ಮೇಲಿನಿಂದ ಬಿದ್ದು ಬಿಸಿಎ ಓದುತ್ತಿದ್ದ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಆಂಧ್ರಪ್ರದೇಶದ ನೆಲ್ಲೂರು ಮೂಲದ ಸುಚೀರ್ (21) ಐದನೇ ಮಹಡಿಯ ಟೆರೇಸ್‌ಗೆ ನಡೆದುಕೊಂಡು ಹೋಗಿ ಅಲ್ಲಿಂದ ಬಿದ್ದಿದ್ದಾನೆ. ಸುಚೀರ್ ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿದ್ದಾನೆಯೇ ಅಥವಾ ಜಿಗಿದಿದ್ದಾನೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ. ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ. ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.

ಬಿಸಿಎ ವಿದ್ಯಾರ್ಥಿಯೋರ್ವ ಐದನೇ ಮಹಡಿಯಿಂದ ಬಿದ್ದು ಮೃತ್ಯು Read More »

ಕರ್ನಾಟಕ

ಪುತ್ತೂರು: ನಿಯಂತ್ರಣ ಕಳೆದುಕೊಂಡು ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ           ➤ ಗ್ರಾಮ ಪಂಚಾಯತ್ ಸದಸ್ಯ ಮೃತ್ಯು

(ನ್ಯೂಸ್ ಕಡಬ)newskadaba.com ಪುತ್ತೂರು, ಫೆ.15. ಕಾರು ನಿಯಂತ್ರಣ ಕಳೆದುಕೊಂಡು ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಾರು 50 ಅಡಿ ಆಳದ ತೋಟಕ್ಕೆ ಬಿದ್ದು ಓರ್ವ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಸಂಟ್ಯಾರು ಬಳಿ ನಡೆದಿದೆ. ನಿಡ್ಪಳ್ಳಿ ಗ್ರಾ.ಪಂ.ನ ಬೆಂಬಲಿತ ಸದಸ್ಯ ಮುರಳೀಧರ್‌ ಭಟ್‌ ಮೃತರು ಎಂದು ಗುರುತಿಸಲಾಗಿದೆ. ಇವರು ಬೆಟ್ಟಂಪಾಡಿಯ ದಿಲೀಪ್‌ ಕುಮಾರ್‌ರಾವ್‌, ಶಶಿಕುಮಾರ್‌, ನವನೀತ್‌ ಜೊತೆ ಕಾರಿನಲ್ಲಿ ಬೆಟ್ಟಂಪಾಡಿ ಕಡೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಕೂಡಲೇ ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಮುರಳೀಧರ್

ಪುತ್ತೂರು: ನಿಯಂತ್ರಣ ಕಳೆದುಕೊಂಡು ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ           ➤ ಗ್ರಾಮ ಪಂಚಾಯತ್ ಸದಸ್ಯ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕುಡಿದ ಮತ್ತಿನಲ್ಲಿ ಕಟ್ಟಡದಿಂದ ಜಿಗಿದು ಯುವಕ ಮೃತ್ಯು

(ನ್ಯೂಸ್ ಕಡಬ)newskadaba.com ಬೆಳಗಾವಿ, ಫೆ.14. ಕುಡಿದ ಮತ್ತಿನಲ್ಲಿ ಯುವಕನೊಬ್ಬ ಕಟ್ಟಡದ 3ನೇ ಮಹಡಿಯಿಂದ ಜಿಗಿದು ಮೃತಪಟ್ಟ ಘಟನೆ ಬೆಳಗಾವಿ ನಗರದ ಅಂಬೇಡ್ಕರ್ ರಸ್ತೆಯ ತಮ್ಮಣ್ಣ ಆರ್ಕೆಡ್ ನಲ್ಲಿ ನಡೆದಿದೆ. ಯೋಗೇಶ್ ಶಾನಭಾಗ (28) ಮೃತ ಯುವಕ. ಈತ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಮೂಲದವರು. ಸ್ನೇಹಿತರೊಂದಿಗೆ ಬ್ರೂ 59 ಪಬ್ ಗೆ ಬಂದಿದ್ದು, ಕುಡಿದ ಮತ್ತಿನಲ್ಲಿ ಪಬ್ ನ ಕಿಟಕಿ ಬಳಿ ಬಂದ ಯುವಕ ಏಕಾಏಕಿ ಕಟ್ಟಡದಿಂದ ಕೆಳಗೆ ಜಿಗಿದಿದ್ದಾನೆ.

ಕುಡಿದ ಮತ್ತಿನಲ್ಲಿ ಕಟ್ಟಡದಿಂದ ಜಿಗಿದು ಯುವಕ ಮೃತ್ಯು Read More »

ಕರ್ನಾಟಕ
Scroll to Top