death

ಖ್ಯಾತ ಸಿನಿಮಾ ಪತ್ರಕರ್ತ ಮಂಗಳೂರು ಮೂಲದ ರೌಫ್ ಅಹ್ಮದ್ ನಿಧನ

(ನ್ಯೂಸ್ ಕಡಬ) newskadaba.com ಮುಂಬೈ, ಫೆ. 07. ಚಲನಚಿತ್ರ ಪತ್ರಿಕೋದ್ಯಮದಲ್ಲಿ ತನ್ನದೇ ಛಾಪು ಮೂಡಿಸಿ ಆ ಕ್ಷೇತ್ರದಲ್ಲಿ ಹಲವು ಹೊಸ ಪ್ರಯೋಗಗಳನ್ನು ಯಶಸ್ವಿಯಾಗಿ ಜಾರಿಗೆ ತಂದ ಮಂಗಳೂರು ಮೂಲದ ಖ್ಯಾತ ಪತ್ರಕರ್ತ, ಲೇಖಕ, ರೌಫ್ ಅಹ್ಮದ್ ಮುಂಬೈನಲ್ಲಿ ನಿಧನರಾಗಿದ್ದಾರೆ. 70ರ ದಶಕದ ಮದ್ಯಭಾಗದಿಂದ ಸಂಪಾದಕರಾಗಿ, ನಿಯತಕಾಲಿಕೆಗಳ ಮೂಲಕ ಚಲನಚಿತ್ರ ಪತ್ರಿಕೋದ್ಯಮಕ್ಕೆ ಹೊಸ ದಿಕ್ಕು ತೋರಿಸಿದ ಕೀರ್ತಿ ರೌಫ್ ಅಹ್ಮದ್ ಅವರದ್ದು. ಮೃತರು ಪತ್ನಿ, ಪುತ್ರ, ಪುತ್ರಿ,ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ ಎಂದೆನ್ನಲಾಗಿದೆ.

ಖ್ಯಾತ ಸಿನಿಮಾ ಪತ್ರಕರ್ತ ಮಂಗಳೂರು ಮೂಲದ ರೌಫ್ ಅಹ್ಮದ್ ನಿಧನ Read More »

ರಾಷ್ಟ್ರೀಯ ನ್ಯೂಸ್

ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೋರ್ವನ ಮೃತದೇಹ ಪತ್ತೆ

(ನ್ಯೂಸ್ ಕಡಬ)newskadaba.com ಧಾರವಾಡ, ಫೆ.07. ನಗ್ನ  ಸ್ಥಿತಿಯಲ್ಲಿ ವಿದ್ಯಾರ್ಥಿಯೋರ್ವನ ಮೃತದೇಹ ಪತ್ತೆಯಾಗಿರೋ ಘಟನೆ ಕೃಷಿ  ವಿವಿ ಹಾಸ್ಟೇಲ್ ನಲ್ಲಿ ವರದಿಯಾಗಿದೆ. ಮೃತ ಯುವಕನನ್ನು ರೋಹಿತ್ ಎಂದು ಗುರುತಿಸಲಾಗಿದೆ. ಆತ್ಮಹತ್ಯೆ ಮಾಡಿಕೊಂಡಿರೋ ವಿದ್ಯಾರ್ಥಿಯನ್ನು ವಿಜಯನಗರ ನಿವಾಸಿ ಎಂದು ತಿಳಿದುಬಂದಿದೆ. ವಿದ್ಯಾರ್ಥಿ ರೋಹಿತ್ ನಗ್ನ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ವರದಿ ತಿಳಿಸಿದೆ.

ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೋರ್ವನ ಮೃತದೇಹ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೈಕ್‌ ಸವಾರನ ತಲೆಮೇಲೆ ಹರಿದ ಶಾಸಕನ ಕಾರು ➤ ಸವಾರ ಸ್ಥಳದಲ್ಲೇ ಮೃತ್ಯು !

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 07. ಹಿಟ್ ಆಂಡ್ ರನ್ ಗೆ ಬೈಕ್ ಸವಾರನೋರ್ವ ಬಲಿಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇಲ್ಲಿನ ನೃಪತುಂಗ ರಸ್ತೆಯ ಮ್ಯಾಜಿಸ್ಟ್ರೇಟ್ ಕೋರ್ಟ್ ಬಳಿ ಶಾಸಕ ಹರತಾಳು ಹಾಲಪ್ಪ ಅವರ ಸ್ಟಿಕ್ಕರ್‌ ಹೊಂದಿದ್ದ ಕಾರೊಂದು ಬೈಕ್‌ ಸವಾರನಿಗೆ ಢಿಕ್ಕಿಯಾಗಿದ್ದು, ಪರಿಣಾಮ ಕೆಳಕ್ಕೆ ಬಿದ್ದ ಸವಾರನ ತಲೆಮೇಲೆ ಕಾರು ಹರಿದು ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಬೈಕ್‌ ಸವಾರನ ತಲೆಮೇಲೆ ಹರಿದ ಶಾಸಕನ ಕಾರು ➤ ಸವಾರ ಸ್ಥಳದಲ್ಲೇ ಮೃತ್ಯು ! Read More »

ಕರ್ನಾಟಕ

ತೆಂಗಿನ ಕಾಯಿ ಕೀಳಲು ಮರ ಹತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.07. ತೆಂಗಿನ ಕಾಯಿ ತೆಗೆಯಲು ಮರ ಹತ್ತಿದ್ದ ವ್ಯಕ್ತಿಯೊಬ್ಬರಿಗೆ ಮರದ ಮೇಲೆಯೇ ಹೃದಯಾಘಾತವಾಗಿರುವ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಮೃತರನ್ನು ನಾರಾಯಣಪ್ಪ (60) ಎಂದು ಗುರುತಿಸಲಾಗಿದೆ.  ತೆಂಗಿನ ಕಾಯಿ ಕೀಳುವಾಗ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ  ಎಂದು ವರದಿ ತಿಳಿಸಿದೆ. ಮರದ ಮೇಲೆ ಇದ್ದ ಅವರನ್ನು ಹಲವು ಬಾರಿ ಕರೆದರೂ ಪ್ರತಿಕ್ರಿಯಿಸದ ಕಾರಣ ತಕ್ಷಣ ಅಗ್ನಿಶಾಮಕದಳ, ಪೊಲೀಸರಿಗೆ ಮಾಹಿತಿ ನೀಡಿದ್ದು, ಅವರು ಬಂದು ಮೃತದೇಹ ಕೆಳಗಿಳಿಸಿದ್ದಾರೆ.      

ತೆಂಗಿನ ಕಾಯಿ ಕೀಳಲು ಮರ ಹತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮದ್ಯಪಾನದ ನಶೆಯಲ್ಲಿ ಬಾವಿಗೆ ಹಾರಿ ಯುವಕನೋರ್ವ ಮೃತ್ಯು

(ನ್ಯೂಸ್ ಕಡಬ)newskadaba.com ಶಿರ್ವ,ಫೆ.07. ಕುಡಿದ ಮತ್ತಿನಲ್ಲಿ ಬಾವಿಗೆ ಹಾರಿದ ಯುವಕ ಮೃತಪಟ್ಟ ಘಟನೆ ವರದಿಯಾಗಿದೆ. ತೊಟ್ಲಗುರಿ ನಿವಾಸಿಯಾದ  ರಾಜು(45) ತನ್ನ ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು,ಬಾವಿಗೆ ಹಾರುವ ವೇಳೆ ಮದ್ಯಪಾನ ಮಾಡಿದ್ದರು ಎನ್ನಲಾಗಿದೆ. ಕಾಪುವಿನ ಸಮಾಜ ಸೇವಕ ಸೂರಿ ಶೆಟ್ಟಿ ಹಾಗೂ ಅಶೋಕ್ ಶೆಟ್ಟಿ ಮೃತ ದೇಹವನ್ನು ಬಾವಿಯಿಂದ ಮೇಲಕ್ಕೆತ್ತಿದ್ದು ಉಡುಪಿಯ ಜಿಲ್ಲಾಸ್ಪತ್ರೆಗೆ ಸಾಗಿಸಿದ್ದಾರೆ. ಶಿರ್ವ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.    

ಮದ್ಯಪಾನದ ನಶೆಯಲ್ಲಿ ಬಾವಿಗೆ ಹಾರಿ ಯುವಕನೋರ್ವ ಮೃತ್ಯು Read More »

ಕರಾವಳಿ

ಖ್ಯಾತ ಗಾಯಕಿ ವಾಣಿ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಸ್ಪೋಟಕ ಅಂಶ ಬಹಿರಂಗ

(ನ್ಯೂಸ್ ಕಡಬ)newskadaba.com ಚೆನ್ನೈ, ಫೆ.07. ಖ್ಯಾತ ಗಾಯಕಿ ವಾಣಿ ಜಯರಾಂ ಸಾವಿನ ಬಗ್ಗೆ ಸಾಕಷ್ಟು ಅನುಮಾನ ಉಂಟಾಗಿತ್ತು. ಈ ಕುರಿತು ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದು, ಪಾರ್ಥೀವ ಶರೀರವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಡಲಾಗಿದ್ದು, ಇದೀಗ ಮರಣೋತ್ತರ ಪರೀಕ್ಷೆಯ ವರದಿ ಬಂದಿದ್ದು ಸಂಶಯಕ್ಕೆ ತೆರೆಬಿದ್ದಿದೆ. ಅವರ ಮನೆಯ ಬಾಗಿಲು ಒಳಗಿನಿಂದ ಲಾಕ್ ಆಗಿದ್ದು, ಪೊಲೀಸರು ಆಕೆಯ ಮನೆ ಬಳಿಯಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದು, ಅನುಮಾನಾಸ್ಪದವಾಗಿ ಏನೂ ಪತ್ತೆಯಾಗಿಲ್ಲ ಎಂದು ಹೇಳಿದರು.    

ಖ್ಯಾತ ಗಾಯಕಿ ವಾಣಿ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಸ್ಪೋಟಕ ಅಂಶ ಬಹಿರಂಗ Read More »

ರಾಷ್ಟ್ರೀಯ ನ್ಯೂಸ್

ಮಹಿಳೆಯೋರ್ವರ ಅಸ್ಥಿಪಂಜರ ಪತ್ತೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.06. ಪುಷ್ಪದಾಮಿ ಎಂಬ ಮಹಿಳೆಯ ಮೇಲೆ ಹುಳಿಮಾವು ಠಾಣೆಯಲ್ಲಿ ನಾಪತ್ತೆ ಕೇಸ್ ದಾಖಲು ಮಾಡಲಾಗಿತ್ತು. ಆದರೆ, ಇದೀಗ ಮಹಿಳೆಯ ಅಸ್ತಿಪಂಜರ ಪತ್ತೆಯಾಗಿದ್ದು, ಕುಟುಂಬಸ್ಥರು ಕೊಲೆ ಎಂದು ಆರೋಪಿಸಿದ್ದಾರೆ ಎನ್ನಲಾಗಿದೆ. ಡೆತ್ ಸೀಕ್ರೆಟ್ ಭೇಧಿಸಲು ಇದೀಗ ಪೊಲೀಸರು ಬೆನ್ನತ್ತಿದ್ದಾರೆ.  

ಮಹಿಳೆಯೋರ್ವರ ಅಸ್ಥಿಪಂಜರ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಿಂತಿದ್ದ ಲಾರಿಗೆ ಬಸ್ ಢಿಕ್ಕಿ  ➤  ಚಾಲಕ ಸ್ಥಳದಲ್ಲೇ ಮೃತ್ಯು..!

(ನ್ಯೂಸ್ ಕಡಬ)newskadaba.com ಕಲಬುರಗಿ, ಫೆ.06. ರಸ್ತೆಯಲ್ಲಿ ನಿಂತಿದ್ದ ಲಾರಿಯೊಂದಕ್ಕೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್ ಢಿಕ್ಕಿ ಹೊಡೆದ ಪರಿಣಾಮ ಚಾಲಕನೋರ್ವ ಸ್ಥಳದಲ್ಲಿ ಮೃತಪಟ್ಟಿದ್ದು, ಇತರೆ 9 ಜನರಿಗೆ ಗಾಯಗಳಾದ ಘಟನೆ ಕಮಲಾಪುರ ತಾಲೂಕಿನ ಕುರಿಕೋಟ ಗ್ರಾಮದ ಬಳಿ ಸಂಭವಿಸಿದೆ. ಘಟನೆಯಲ್ಲಿ ಬಸ್‌ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಅಪಘಾತಕ್ಕೀಡಾದ ಬಸ್ ಬಳ್ಳಾರಿಯಿಂದ ಬೀದರಿಗೆ ತೆರಳುತ್ತಿತ್ತು. ಮಾರ್ಗ ಮಧ್ಯೆ ಈ ದುರಂತ ಸಂಭವಿಸಿದೆ ಎಂದು ಪೊಲೀಸ್ ಠಾಣೆ ಪಿಎಸ್‌ಐ ತಿಳಿಸಿದ್ದಾರೆ.  

ನಿಂತಿದ್ದ ಲಾರಿಗೆ ಬಸ್ ಢಿಕ್ಕಿ  ➤  ಚಾಲಕ ಸ್ಥಳದಲ್ಲೇ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಟರ್ಕಿ, ಸಿರಿಯಾದಲ್ಲಿ ಪ್ರಬಲ ಭೂಕಂಪನಕ್ಕೆ 568 ಮಂದಿ ಮೃತ್ಯು

(ನ್ಯೂಸ್ ಕಡಬ)newskadaba.com ಟರ್ಕಿ, ಫೆ.06. 7.8 ತೀವ್ರತೆಯ ಭೂಕಂಪವು ಟರ್ಕಿಯನ್ನು ಬೆಚ್ಚಿಬೀಳಿಸಿದ್ದು, ಇದರ ಬೆನ್ನಲ್ಲೇ ಮತ್ತೊಂದು ಪ್ರಬಲ ಭೂಕಂಪವು ಪ್ರದೇಶದ ಹಲವಾರು ಪ್ರಾಂತ್ಯಗಳಲ್ಲಿ ಸಂಭವಿಸಿದೆ. ಹಲವಾರು ಕಟ್ಟಡಗಳು ನೆಲಸಮವಾಗಿವೆ ಎಂದು ವರದಿಗಳು ತಿಳಿಸಿದೆ. ನೂರ್ಡಗಿ ಪಟ್ಟಣದಿಂದ ಸುಮಾರು 26 ಕಿಲೋಮೀಟರ್ (16 ಮೈಲಿ) ದೂರದಲ್ಲಿರುವ ಗಾಜಿಯಾಂಟೆಪ್‌ನಿಂದ 33 ಕಿಲೋಮೀಟರ್ (20 ಮೈಲಿ) ದೂರದಲ್ಲಿ ಭೂಕಂಪನ ಕೇಂದ್ರೀಕೃತವಾಗಿದೆ ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ ಹೇಳಿದೆ. ಎರಡು ದೇಶಗಳ ನಡುವಿನ ಗಡಿಯ ಸಮೀಪ ಆಗ್ನೇಯ ಟರ್ಕಿಯಲ್ಲಿ 7.8 ತೀವ್ರತೆಯ ಭೂಕಂಪ

ಟರ್ಕಿ, ಸಿರಿಯಾದಲ್ಲಿ ಪ್ರಬಲ ಭೂಕಂಪನಕ್ಕೆ 568 ಮಂದಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳು ಮೃತ್ಯು

(ನ್ಯೂಸ್ ಕಡಬ)newskadaba.com ವಿಜಯನಗರ, ಫೆ.06. ಕೃಷಿ ಕಾರ್ಯಕ್ಕಾಗಿ ಹಾಗೂ ನೀರಾವರಿ ಅನುಕೂಲಕ್ಕಾಗಿ ಜಮೀನಿನಲ್ಲಿ‌ ನಿರ್ಮಾಣ ಮಾಡಲಾಗಿದ್ದ ಕೃಷಿ ಹೊಂಡದಲ್ಲಿ ಕಾಲು ಜಾರಿ ಬಿದ್ದು ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿರುವ ದುರಂತ ಘಟನೆ ವಿಜಯನಗರದಲ್ಲಿ ವರದಿಯಾಗಿದೆ. ನಾಗರಾಜ ಎಂಬುವರ ಕೃಷಿ ಹೊಂಡದಲ್ಲಿ ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮೃತ ವಿದ್ಯಾರ್ಥಿಗಳನ್ನು ಅಭಿಶೇಕ್ (15), ಜಿತೇಂದ್ರ (10) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಉಪತಹಸೀಲ್ದಾರ ಶಂಕ್ರಪ್ಪ ಹಾಗೂ ಎಎಸ್ ಐ ಕರಿವೀರಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  ಕೃಷಿ ಹೊಂಡ ಬಳಿ ಚಪ್ಪಲಿಗಳು

ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top